ಕೀರ್ತನೆಗಳು 75 : 1 (ERVKN)
ದೇವರೇ, ನಿನ್ನನ್ನು ಕೊಂಡಾಡುವೆವು! [QBR2] ನಿನ್ನ ಹೆಸರನ್ನು ಸ್ತ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; [QBR2] ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ.
ಕೀರ್ತನೆಗಳು 75 : 2 (ERVKN)
ದೇವರು ಹೀಗೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; [QBR2] ನಾನು ನೀತಿಯಿಂದಲೇ ತೀರ್ಪುಕೊಡುವೆ. [QBR]
ಕೀರ್ತನೆಗಳು 75 : 3 (ERVKN)
ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ [QBR2] ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.
ಕೀರ್ತನೆಗಳು 75 : 4 (ERVKN)
(4-5) “ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ! [QBR2] ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ’ ” ಎಂದು ಹೇಳುವೆನು.
ಕೀರ್ತನೆಗಳು 75 : 5 (ERVKN)
ಕೀರ್ತನೆಗಳು 75 : 6 (ERVKN)
ಭೂಲೋಕದ ಯಾವ ಶಕ್ತಿಯೂ [QBR2] ಮನುಷ್ಯನನ್ನು ಉದ್ಧಾರ ಮಾಡಲಾರದು. [QBR]
ಕೀರ್ತನೆಗಳು 75 : 7 (ERVKN)
ನ್ಯಾಯಾಧಿಪತಿಯು ದೇವರೇ. [QBR2] ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. [QBR2] ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು. [QBR]
ಕೀರ್ತನೆಗಳು 75 : 8 (ERVKN)
ಯೆಹೋವನ ಕೈಯಲ್ಲಿ ಪಾತ್ರೆಯಿದೆ. [QBR2] ಆ ಪಾತ್ರೆಯು ವಿಷದ್ರಾಕ್ಷಾರಸದಿಂದ ತುಂಬಿದೆ. [QBR] ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; [QBR2] ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು! [QBR]
ಕೀರ್ತನೆಗಳು 75 : 9 (ERVKN)
ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; [QBR2] ಇಸ್ರೇಲರ ದೇವರನ್ನು ಸಂಕೀರ್ತಿಸುವೆನು. [QBR]
ಕೀರ್ತನೆಗಳು 75 : 10 (ERVKN)
ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು [QBR2] ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು. [PE]

1 2 3 4 5 6 7 8 9 10

BG:

Opacity:

Color:


Size:


Font: