ಕೀರ್ತನೆಗಳು 77 : 1 (ERVKN)
ನಾನು ಸ್ವರವೆತ್ತಿ ದೇವರಿಗೆ ಮೊರೆಯಿಡುವೆನು. ದೇವರೇ, ಸ್ವರವೆತ್ತಿ ಮೊರೆಯಿಡುವೆನು, ನನಗೆ ಕಿವಿಗೊಡು.
ಕೀರ್ತನೆಗಳು 77 : 2 (ERVKN)
ನನ್ನ ಯೆಹೋವನೇ, ಇಕ್ಕಟ್ಟಿನಲ್ಲಿ ನಿನ್ನನ್ನು ಕರೆದೆನು; ರಾತ್ರಿಯೆಲ್ಲಾ ನಿನಗಾಗಿ ಕೈಚಾಚಿಕೊಂಡಿದ್ದೆನು. ಆದರೆ ನನ್ನ ಮನಸ್ಸು ಸಮಾಧಾನಗೊಳ್ಳಲಿಲ್ಲ.
ಕೀರ್ತನೆಗಳು 77 : 3 (ERVKN)
ನಾನು ದೇವರನ್ನೇ ಧ್ಯಾನಿಸುತ್ತಾ ನನ್ನ ವ್ಯಥೆಯನ್ನು ಹೇಳಿಕೊಳ್ಳಬಯಸಿದೆ. ಆದರೂ ನನ್ನಿಂದಾಗಲಿಲ್ಲ.
ಕೀರ್ತನೆಗಳು 77 : 4 (ERVKN)
ನೀನು ನನಗೆ ನಿದ್ರೆಮಾಡಗೊಡಿಸಲಿಲ್ಲ. ನಾನು ಬಹು ಗಲಿಬಿಲಿಗೊಂಡಿದ್ದರಿಂದ ನಿನ್ನೊಂದಿಗೆ ಮಾತಾಡಲಾಗಲಿಲ್ಲ.
ಕೀರ್ತನೆಗಳು 77 : 5 (ERVKN)
ಹಿಂದಿನಕಾಲದ ಬಗ್ಗೆ ಯೋಚಿಸತೊಡಗಿದೆನು. ಬಹುಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ಯೋಚಿಸತೊಡಗಿದೆನು.
ಕೀರ್ತನೆಗಳು 77 : 6 (ERVKN)
ರಾತ್ರಿಯಲ್ಲಿ, ನಾನು ಮಾಡುತ್ತಿದ್ದ ಗಾನವನ್ನು ನೆನಸಿಕೊಳ್ಳುವೆನು; ಆಂತರ್ಯದಲ್ಲಿ ಮಾತಾಡುತ್ತಾ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವೆನು.
ಕೀರ್ತನೆಗಳು 77 : 7 (ERVKN)
ನಾನು ಆಶ್ಚರ್ಯದಿಂದ ಹೀಗೆಂದುಕೊಳ್ಳುವೆನು: “ನಮ್ಮ ಯೆಹೋವನು ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವನೇ? ಆತನು ನಮ್ಮನ್ನು ಮತ್ತೆಂದಾದರೂ ಅಪೇಕ್ಷಿಸುವನೇ?
ಕೀರ್ತನೆಗಳು 77 : 8 (ERVKN)
ದೇವರ ಕೃಪಾವಾತ್ಸಲ್ಯವು ಎಂದೆಂದಿಗೂ ನಿಂತುಹೋಯಿತೇ? ಆತನು ನಮ್ಮೊಂದಿಗೆ ಮತ್ತೆಂದೂ ಮಾತಾಡುವುದಿಲ್ಲವೇ?
ಕೀರ್ತನೆಗಳು 77 : 9 (ERVKN)
ದೇವರು ಕರುಣೆಯನ್ನು ಮರೆತುಬಿಟ್ಟಿರುವನೇ? ಆತನ ಕನಿಕರವು ಬದಲಾವಣೆ ಹೊಂದಿ ಕೋಪವಾಗಿರುವುದೇ?”
ಕೀರ್ತನೆಗಳು 77 : 10 (ERVKN)
ಬಳಿಕ ನಾನು ಹೀಗೆ ಆಲೋಚಿಸಿಕೊಂಡೆ: “ಮಹೋನ್ನತವಾದ ದೇವರು ತನ್ನ ಶಕ್ತಿಯನ್ನು ಕಳೆದುಕೊಂಡನೇ?” ಎಂಬುದೇ ನನ್ನನ್ನು ಕಾಡಿಸುವ ಪ್ರಶ್ನೆ.
ಕೀರ್ತನೆಗಳು 77 : 11 (ERVKN)
ಯೆಹೋವನೇ, ನಿನ್ನ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು. ಬಹುಕಾಲದ ಹಿಂದೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು.
ಕೀರ್ತನೆಗಳು 77 : 12 (ERVKN)
ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಕಾರ್ಯಗಳ ಕುರಿತಾಗಿ ಆಲೋಚಿಸುವೆನು.
ಕೀರ್ತನೆಗಳು 77 : 13 (ERVKN)
ದೇವರೇ, ನಿನ್ನ ಮಾರ್ಗಗಳು ಪರಿಶುದ್ಧವಾಗಿವೆ. ದೇವರೇ, ನಿನ್ನಂತೆ ಮಹತ್ವವುಳ್ಳವರು ಬೇರೆ ಯಾರೂ ಇಲ್ಲ.
ಕೀರ್ತನೆಗಳು 77 : 14 (ERVKN)
ಅದ್ಭುತಕಾರ್ಯಗಳನ್ನು ಮಾಡಿದ ದೇವರು ನೀನೇ. ನೀನು ಜನರಿಗೆ ನಿನ್ನ ಮಹಾಶಕ್ತಿಯನ್ನು ತೋರಿಸಿದೆ.
ಕೀರ್ತನೆಗಳು 77 : 15 (ERVKN)
ನೀನು ನಿನ್ನ ಶಕ್ತಿಯಿಂದ ನಿನ್ನ ಜನರನ್ನು ರಕ್ಷಿಸಿದೆ. ಯಾಕೋಬನ ಮತ್ತು ಯೋಸೇಫನ ಸಂತತಿಯವರನ್ನು ನೀನು ರಕ್ಷಿಸಿದೆ.
ಕೀರ್ತನೆಗಳು 77 : 16 (ERVKN)
ದೇವರೇ, ನಿನ್ನನ್ನು ಕಂಡು ಜಲರಾಶಿಗಳು ಭಯಗೊಂಡವು. ಆಳವಾದ ಜಲರಾಶಿಗಳು ಭಯದಿಂದ ನಡುಗಿದವು.
ಕೀರ್ತನೆಗಳು 77 : 17 (ERVKN)
ದಟ್ಟವಾದ ಕಪ್ಪುಮೋಡಗಳು ಮಳೆಗರೆದವು. ಜನರಿಗೆ ಮೇಘಮಂಡಲದಿಂದ ಗುಡುಗು ಕೇಳಿಸಿತು. ನಿನ್ನ ಮಿಂಚಿನ ಬಾಣಗಳು ಆ ಮೋಡಗಳಲ್ಲಿ ಹಾರಿದವು.
ಕೀರ್ತನೆಗಳು 77 : 18 (ERVKN)
ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು. ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು. ಭೂಮಿಯು ಅಲ್ಲಾಡಿ ಕಂಪಿಸಿತು.
ಕೀರ್ತನೆಗಳು 77 : 19 (ERVKN)
ನೀನು ಸಮುದ್ರದಲ್ಲಿ ಮಾರ್ಗಮಾಡಿದೆ; ಆಳವಾದ ಜಲರಾಶಿಗಳನ್ನು ದಾಟಿದೆ. ಆದರೆ ನಿನ್ನ ಹೆಜ್ಜೆಯ ಗುರುತು ಕಾಣಲೇ ಇಲ್ಲ.
ಕೀರ್ತನೆಗಳು 77 : 20 (ERVKN)
ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ ನಿನ್ನ ಜನರನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ.
❮
❯
1
2
3
4
5
6
7
8
9
10
11
12
13
14
15
16
17
18
19
20