ಕೀರ್ತನೆಗಳು 78 : 1 (ERVKN)
ನನ್ನ ಜನರೇ, ನನ್ನ ಉಪದೇಶಗಳಿಗೆ ಕಿವಿಗೊಡಿರಿ; ನನ್ನ ನುಡಿಗಳನ್ನು ಲಾಲಿಸಿರಿ.
ಕೀರ್ತನೆಗಳು 78 : 2 (ERVKN)
ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಪೂರ್ವಕಾಲದ ಗೂಡಾರ್ಥಗಳನ್ನು ಹೊರಪಡಿಸುವೆನು.
ಕೀರ್ತನೆಗಳು 78 : 3 (ERVKN)
ನಾವು ಅವುಗಳನ್ನು ಕಿವಿಯಾರೆ ಕೇಳಿದ್ದೇವೆ. ನಮ್ಮ ಪೂರ್ವಿಕರೇ ಅವುಗಳನ್ನು ನಮಗೆ ಹೇಳಿದರು.
ಕೀರ್ತನೆಗಳು 78 : 4 (ERVKN)
ನಾವು ಅವುಗಳನ್ನು ಮರೆಯುವುದೇ ಇಲ್ಲ. ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು.
ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು.
ಕೀರ್ತನೆಗಳು 78 : 5 (ERVKN)
ಆತನು ಯಾಕೋಬನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಇಸ್ರೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಆತನು ನಮ್ಮ ಪೂರ್ವಿಕರಿಗೆ ಆಜ್ಞೆಗಳನ್ನು ಕೊಟ್ಟನು. ನಿಮ್ಮ ಸಂತತಿಗಳವರಿಗೆ ಧರ್ಮಶಾಸ್ತ್ರವನ್ನು ಉಪದೇಶಿಸಿರಿ ಎಂದು ಆತನು ನಮ್ಮ ಪೂರ್ವಿಕರಿಗೆ ಹೇಳಿದನು.
ಕೀರ್ತನೆಗಳು 78 : 6 (ERVKN)
ಹೊಸ ತಲೆಮಾರುಗಳವರು ಬೆಳೆದು ದೊಡ್ಡವರಾದಾಗ ತಮ್ಮ ಮಕ್ಕಳಿಗೆ ಅವುಗಳನ್ನು ಹೇಳಿಕೊಡುವರು. ಹೀಗೆ ಜನರು ಕೊನೆಯ ತಲೆಮಾರಿನವರೆಗೂ ಧರ್ಮಶಾಸ್ತ್ರವನ್ನು ತಿಳಿದಿರುವರು.
ಕೀರ್ತನೆಗಳು 78 : 7 (ERVKN)
ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು. ದೇವರ ಮಹತ್ಕಾರ್ಯಗಳನ್ನು ಅವರು ಮರೆಯುವುದೇ ಇಲ್ಲ. ಅವರು ಜಾಗ್ರತೆಯಿಂದ ದೇವರ ಆಜ್ಞೆಗಳಿಗೆ ವಿಧೇಯರಾಗುವರು.
ಕೀರ್ತನೆಗಳು 78 : 8 (ERVKN)
ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ.
ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.
ಕೀರ್ತನೆಗಳು 78 : 9 (ERVKN)
ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸುಸಜ್ಜಿತರಾಗಿದ್ದರು. ಆದರೆ ಅವರು ಯುದ್ಧದಿಂದ ಓಡಿಹೋದರು.
ಕೀರ್ತನೆಗಳು 78 : 10 (ERVKN)
ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ. ಅವರು ಆತನ ಉಪದೇಶಗಳಿಗೆ ವಿಧೇಯರಾಗಲಿಲ್ಲ.
ಕೀರ್ತನೆಗಳು 78 : 11 (ERVKN)
ದೇವರ ಮಹತ್ಕಾರ್ಯಗಳನ್ನೂ ಆತನು ಅವರಿಗೆ ತೋರಿಸಿದ ಸೂಚಕಕಾರ್ಯಗಳನ್ನೂ ಎಫ್ರಾಯಿಮಿನ ಜನರು ಮರೆತುಬಿಟ್ಟರು.
ಕೀರ್ತನೆಗಳು 78 : 12 (ERVKN)
ಈಜಿಪ್ಟಿನ ಸೋನ್ ಪ್ರದೇಶದಲ್ಲಿ ಅವರ ಪೂರ್ವಿಕರಿಗೆ ದೇವರು ತನ್ನ ಮಹಾಶಕ್ತಿಯನ್ನು ತೋರಿಸಿದನು.
ಕೀರ್ತನೆಗಳು 78 : 13 (ERVKN)
ದೇವರು ಕೆಂಪು ಸಮುದ್ರವನ್ನು ಇಬ್ಭಾಗಮಾಡಿ ಅವರನ್ನು ದಾಟಿಸಿದನು. ಅವರ ಎರಡು ಕಡೆಗಳಲ್ಲಿ ನೀರು ಬಲವಾದ ಗೋಡೆಯಂತೆ ನಿಂತುಕೊಂಡಿತು.
ಕೀರ್ತನೆಗಳು 78 : 14 (ERVKN)
ಹಗಲಿನಲ್ಲಿ ಮೋಡದಿಂದಲೂ ಇರುಳಿನಲ್ಲಿ ಬೆಂಕಿಯ ಬೆಳಕಿನಿಂದಲೂ ಅವರನ್ನು ಮುನ್ನಡೆಸಿದನು.
ಕೀರ್ತನೆಗಳು 78 : 15 (ERVKN)
ದೇವರು ಅರಣ್ಯದಲ್ಲಿ ಬಂಡೆಯನ್ನು ಸೀಳಿ ಅವರಿಗೆ ಸಾಗರದಿಂದಲೋ ಎಂಬಂತೆ ನೀರನ್ನು ಸಮೃದ್ಧಿಕರವಾಗಿ ಒದಗಿಸಿದನು.
ಕೀರ್ತನೆಗಳು 78 : 16 (ERVKN)
ಆತನು ಬಂಡೆಯಿಂದ ನೀರನ್ನು ನದಿಯಂತೆ ಬರಮಾಡಿದನು.
ಕೀರ್ತನೆಗಳು 78 : 17 (ERVKN)
ಆದರೂ ಅವರು ಅರಣ್ಯದಲ್ಲಿ ಮಹೋನ್ನತನಾದ ಆತನ ವಿರೋಧವಾಗಿ ಪಾಪಮಾಡುತ್ತಾ ಬಂದರು.
ಕೀರ್ತನೆಗಳು 78 : 18 (ERVKN)
ಬಳಿಕ ಅವರು ತಮ್ಮ ಆಸೆಯನ್ನು ಈಡೇರಿಸಿಕೊಳ್ಳಲು ಇಷ್ಟಪದಾರ್ಥವನ್ನು ಕೇಳಿ ದೇವರನ್ನೇ ಪರೀಕ್ಷೆಗೊಡ್ಡಿದರು.
ಕೀರ್ತನೆಗಳು 78 : 19 (ERVKN)
ಅವರು ಆತನಿಗೆ ವಿರೋಧವಾಗಿ ಮಾತಾಡಿ, “ದೇವರು ನಮಗೆ ಅರಣ್ಯದಲ್ಲಿ ಆಹಾರವನ್ನು ಕೊಡಬಲ್ಲನೇ?
ಕೀರ್ತನೆಗಳು 78 : 20 (ERVKN)
ಆತನು ಬಂಡೆಯನ್ನು ಹೊಡೆದಾಗ ನೀರು ಪ್ರವಾಹದಂತೆ ಹೊರಬಂದದ್ದೇನೊ ನಿಜ! ಆದರೆ ಆತನು ನಮಗೆ ರೊಟ್ಟಿಯನ್ನೂ ಮಾಂಸವನ್ನೂ ಕೊಡಬಲ್ಲನೇ!” ಎಂದು ಹೇಳಿದರು.
ಕೀರ್ತನೆಗಳು 78 : 21 (ERVKN)
ಆ ಜನರು ಹೇಳಿದ್ದನ್ನು ಕೇಳಿ ಯೆಹೋವನು ಕೋಪಗೊಂಡನು.
ಆತನು ಯಾಕೋಬ್ಯರ ಮೇಲೆಯೂ ಇಸ್ರೇಲರ ಮೇಲೆಯೂ ಕೋಪಗೊಂಡನು.
ಕೀರ್ತನೆಗಳು 78 : 22 (ERVKN)
ಯಾಕೆಂದರೆ ಜನರು ಆತನಲ್ಲಿ ಭರವಸೆ ಇಡಲಿಲ್ಲ.
ದೇವರು ತಮ್ಮನ್ನು ರಕ್ಷಿಸಬಲ್ಲನೆಂದು ಅವರು ನಂಬಲಿಲ್ಲ.
ಕೀರ್ತನೆಗಳು 78 : 23 (ERVKN)
ಆಗ ಆತನು ಉನ್ನತದಲ್ಲಿರುವ ಮೇಘಗಳನ್ನು ತೆರೆದನು, ಅವರ ಆಹಾರಕ್ಕಾಗಿ ಮನ್ನವನ್ನು ಮಳೆಗರೆಸಿದನು.
ಕೀರ್ತನೆಗಳು 78 : 24 (ERVKN)
ಆಕಾಶದ ದ್ವಾರಗಳು ತೆರೆದು ಆಕಾಶದ ಉಗ್ರಾಣದಿಂದ ಧಾನ್ಯವು ಸುರಿದಂತೆ ಮನ್ನವು ಸುರಿಯಿತು.
ಕೀರ್ತನೆಗಳು 78 : 25 (ERVKN)
ಜನರು ದೇವದೂತರ ಆಹಾರವನ್ನು ತಿಂದರು. ಅವರನ್ನು ತೃಪ್ತಿಗೊಳಿಸುವುದಕ್ಕಾಗಿ ಆತನು ಆಹಾರವನ್ನು ಹೇರಳವಾಗಿ ಒದಗಿಸಿದನು.
ಕೀರ್ತನೆಗಳು 78 : 26 (ERVKN)
ಬಳಿಕ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಆಗ ಲಾವಕ್ಕಿಗಳು ಮಳೆಯಂತೆ ಅವರಿದ್ದಲ್ಲಿಗೆ ಬಂದು ಬಿದ್ದವು.
ಕೀರ್ತನೆಗಳು 78 : 27 (ERVKN)
ಆತನು ತೇಮಾನಿನಿಂದ ಗಾಳಿಬೀಸುವಂತೆ ಮಾಡಿದಾಗ ಪಕ್ಷಿಗಳು ಸಮುದ್ರದ ಮರಳಿನಷ್ಟು ಅವರಿದ್ದಲ್ಲಿ ಬಂದು ಬಿದ್ದವು.
ಕೀರ್ತನೆಗಳು 78 : 28 (ERVKN)
ಪಕ್ಷಿಗಳು ಪಾಳೆಯದ ಮಧ್ಯಭಾಗದಲ್ಲಿ, ಆ ಜನರ ಗುಡಾರಗಳ ಸುತ್ತಲೆಲ್ಲಾ ಬಿದ್ದವು.
ಕೀರ್ತನೆಗಳು 78 : 29 (ERVKN)
ಅವರಿಗೆ ತಿನ್ನಲು ಹೇರಳವಾಗಿತ್ತು. ಆದರೆ ತಮ್ಮ ಆಸೆಗಳೇ ತಮ್ಮನ್ನು ಪಾಪಕ್ಕೆ ನಡೆಸುವಂತೆ ಅವರು ಮಾಡಿದರು.
ಕೀರ್ತನೆಗಳು 78 : 30 (ERVKN)
ಅವರು ತಮ್ಮ ಆಸೆಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳಲಿಲ್ಲ. ಆ ಲಾವಕ್ಕಿಗಳ ರಕ್ತವನ್ನು ಪೂರ್ತಿಯಾಗಿ ತೆಗೆಯುವ ಮೊದಲೇ ಅವುಗಳ ಮಾಂಸವನ್ನು ತಿಂದುಬಿಟ್ಟರು.
ಕೀರ್ತನೆಗಳು 78 : 31 (ERVKN)
ಆಗ ಆತನು ಅವರ ಮೇಲೆ ಬಹು ಕೋಪಗೊಂಡು, ಅವರಲ್ಲಿ ಅನೇಕರನ್ನು ಕೊಂದುಹಾಕಿದನು. ದೃಢಕಾಯರಾಗಿದ್ದ ಅನೇಕ ಯುವಕರಿಗೆ ಆತನು ಸಾವನ್ನು ಬರಮಾಡಿದನು.
ಕೀರ್ತನೆಗಳು 78 : 32 (ERVKN)
ಆದರೂ ಅವರು ಪಾಪಮಾಡುತ್ತಾ ಬಂದರು. ಆತನ ಅದ್ಭುತಕಾರ್ಯಗಳನ್ನು ಅವರು ನಂಬದೆ ಹೋದರು.
ಕೀರ್ತನೆಗಳು 78 : 33 (ERVKN)
ಆದ್ದರಿಂದ ಆತನು ಆಪತ್ತುಗಳನ್ನು ಬರಮಾಡಿ ಅವರ ಅಯೋಗ್ಯ ಜೀವಿತಗಳನ್ನು ಉಸಿರಿನಂತೆ ಅಂತ್ಯಗೊಳಿಸಿದನು.
ಕೀರ್ತನೆಗಳು 78 : 34 (ERVKN)
ಅವರಲ್ಲಿ ಕೆಲವರನ್ನು ದೇವರು ಕೊಂದಾಗಲೆಲ್ಲಾ, ಉಳಿದವರು ಆತನ ಕಡೆಗೆ ತಿರುಗಿಕೊಂಡು ಓಡಿ ಬರುತ್ತಿದ್ದರು.
ಕೀರ್ತನೆಗಳು 78 : 35 (ERVKN)
ದೇವರೇ ತಮ್ಮ ಆಶ್ರಯಸ್ಥಾನವೆಂಬುದನ್ನೂ ಮಹೋನ್ನತನಾದ ದೇವರೇ ತಮ್ಮ ರಕ್ಷಕನೆಂಬುದನ್ನೂ ಅವರು ಜ್ಞಾಪಿಸಿಕೊಳ್ಳುತ್ತಿದ್ದರು.
ಕೀರ್ತನೆಗಳು 78 : 36 (ERVKN)
ಆದರೆ ಅವರು ಯಥಾರ್ಥವಾಗಿರದೆ ಸುಳ್ಳಾಡಿದರು.
ಕೀರ್ತನೆಗಳು 78 : 37 (ERVKN)
ಅವರ ಹೃದಯಗಳು ಆತನಲ್ಲಿ ನೆಲೆಗೊಂಡಿರಲಿಲ್ಲ. ಆತನ ಒಡಂಬಡಿಕೆಗೆ ಅವರು ನಂಬಿಗಸ್ತರಾಗಿರಲಿಲ್ಲ.
ಕೀರ್ತನೆಗಳು 78 : 38 (ERVKN)
ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ.
ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.
ಕೀರ್ತನೆಗಳು 78 : 39 (ERVKN)
ಅವರು ಕೇವಲ ಮನುಷ್ಯರೆಂಬುದನ್ನು ಆತನು ಜ್ಞಾಪಿಸಿಕೊಂಡನು. ಜನರಾದರೋ ಬೀಸಿದ ನಂತರ ಹಿಂತಿರುಗಿ ಬಾರದ ಗಾಳಿಯಂತಿದ್ದಾರೆ.
ಕೀರ್ತನೆಗಳು 78 : 40 (ERVKN)
ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕ ಸಲ ದಂಗೆಎದ್ದರು. ಆತನನ್ನು ಬಹಳವಾಗಿ ನೋಯಿಸಿದರು.
ಕೀರ್ತನೆಗಳು 78 : 41 (ERVKN)
ಪದೇಪದೇ ಅವರು ಆತನ ತಾಳ್ಮೆಯನ್ನು ಪರೀಕ್ಷಿಸಿದರು. ಅವರು ಇಸ್ರೇಲರ ಪರಿಶುದ್ಧನನ್ನು ಬಹಳವಾಗಿ ನೋಯಿಸಿದರು.
ಕೀರ್ತನೆಗಳು 78 : 42 (ERVKN)
ಅವರು ಆತನ ಶಕ್ತಿಯನ್ನು ಮರೆತುಬಿಟ್ಟರು. ಅನೇಕ ಸಲ ಆತನು ತಮ್ಮನ್ನು ಶತ್ರುಗಳಿಂದ ರಕ್ಷಿಸಿದ್ದನ್ನು ಅವರು ಮರೆತುಬಿಟ್ಟರು.
ಕೀರ್ತನೆಗಳು 78 : 43 (ERVKN)
ಈಜಿಪ್ಟಿನಲ್ಲಿಯೂ ಸೋನ್ ಬಯಲುಗಳಲ್ಲಿಯೂ ಮಾಡಿದ ಅದ್ಭುತಕಾರ್ಯಗಳನ್ನು ಅವರು ಮರೆತುಬಿಟ್ಟರು.
ಕೀರ್ತನೆಗಳು 78 : 44 (ERVKN)
ಆತನು ನದಿಗಳನ್ನು ರಕ್ತವನ್ನಾಗಿ ಪರಿವರ್ತಿಸಿದನು! ಈಜಿಪ್ಟಿನವರಿಗೆ ನೀರನ್ನು ಕುಡಿಯಲಾಗಲಿಲ್ಲ.
ಕೀರ್ತನೆಗಳು 78 : 45 (ERVKN)
ಆತನು ಹಿಂಡುಹಿಂಡು ಹುಳಗಳನ್ನು ಕಳುಹಿಸಿದನು; ಅವು ಈಜಿಪ್ಟಿನ ಜನರನ್ನು ಕಚ್ಚಿದವು.
ಆತನು ಕಪ್ಪೆಗಳನ್ನು ಕಳುಹಿಸಿದನು; ಅವು ಈಜಿಪ್ಟಿನವರ ಜೀವಿತಗಳನ್ನು ಹಾಳುಮಾಡಿದವು.
ಕೀರ್ತನೆಗಳು 78 : 46 (ERVKN)
ಆತನು ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಇತರ ಗಿಡಗಳನ್ನು ಮಿಡತೆಗಳಿಗೂ ಕೊಟ್ಟನು.
ಕೀರ್ತನೆಗಳು 78 : 47 (ERVKN)
ಈಜಿಪ್ಟ್ ಜನರ ದ್ರಾಕ್ಷಾಲತೆಗಳನ್ನು ನಾಶಮಾಡಲು ಆತನು ಆಲಿಕಲ್ಲು ಮಳೆ ಸುರಿಸಿದನು; ಅವರ ಮರಗಳನ್ನು ನಾಶಮಾಡಲು ಮಂಜುಮಳೆಯನ್ನು ಸುರಿಸಿದನು.
ಕೀರ್ತನೆಗಳು 78 : 48 (ERVKN)
ಆತನು ಅವರ ದನಕರುಗಳನ್ನು ಆಲಿಕಲ್ಲಿನಿಂದಲೂ ಅವರ ಕುರಿಹಿಂಡುಗಳನ್ನು ಸಿಡಿಲಿನಿಂದಲೂ ಕೊಂದುಹಾಕಿದನು.
ಕೀರ್ತನೆಗಳು 78 : 49 (ERVKN)
ಆತನು ಈಜಿಪ್ಟ್ ಜನರಿಗೆ ತನ್ನ ಭಯಂಕರವಾದ ಕೋಪವನ್ನು ತೋರಿದನು. ಆತನು ತನ್ನ ಸಂಹಾರ ದೂತರನ್ನು ಅವರಿಗೆ ವಿರೋಧವಾಗಿ ಕಳುಹಿಸಿದನು.
ಕೀರ್ತನೆಗಳು 78 : 50 (ERVKN)
ಆತನು ತನ್ನ ಕೋಪವನ್ನು ತೋರಿಸಿದನು. ಅವರಲ್ಲಿ ಯಾರೂ ಬದುಕದಂತೆ ಆತನು ಮಾಡಿದನು. ಮರಣಕರವಾದ ರೋಗದಿಂದ ಅವರಿಗೆ ಸಾವನ್ನು ಬರಮಾಡಿದನು.
ಕೀರ್ತನೆಗಳು 78 : 51 (ERVKN)
ಈಜಿಪ್ಟಿನವರ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಆತನು ಕೊಂದುಹಾಕಿದನು. ಹಾಮನ ಕುಲಕ್ಕೆ ಸೇರಿದ ಪ್ರತಿಯೊಬ್ಬ ಚೊಚ್ಚಲ ಮಗನನ್ನು ಆತನು ಕೊಂದುಹಾಕಿದನು.
ಕೀರ್ತನೆಗಳು 78 : 52 (ERVKN)
ಬಳಿಕ ಆತನು ಕುರುಬನಂತೆ ಇಸ್ರೇಲನ್ನು ನಡೆಸಿದನು. ಆತನು ತನ್ನ ಜನರನ್ನು ಕುರಿಗಳಂತೆ ಅರಣ್ಯದಲ್ಲಿ ನಡೆಸಿದನು.
ಕೀರ್ತನೆಗಳು 78 : 53 (ERVKN)
ಆತನು ಅವರಿಗೆ ಮಾರ್ಗದರ್ಶನ ಮಾಡುತ್ತಾ ಸುರಕ್ಷಿತವಾಗಿ ಮುನ್ನಡೆಸಿದನು.
ಆತನ ಜನರು ಯಾವುದಕ್ಕೂ ಭಯಪಡುವ ಅಗತ್ಯವಿರಲಿಲ್ಲ. ಅವರ ಶತ್ರುಗಳನ್ನು ಆತನು ಕೆಂಪು ಸಮುದ್ರದಲ್ಲಿ ಮುಳುಗಿಸಿದನು.
ಕೀರ್ತನೆಗಳು 78 : 54 (ERVKN)
ಆತನು ತನ್ನ ಜನರನ್ನು ತನ್ನ ಪವಿತ್ರನಾಡಿಗೂ ತನ್ನ ಭುಜಬಲದಿಂದ ತೆಗೆದುಕೊಂಡ ಪರ್ವತಕ್ಕೂ ನಡೆಸಿದನು.
ಕೀರ್ತನೆಗಳು 78 : 55 (ERVKN)
ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು; ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು.
ಕೀರ್ತನೆಗಳು 78 : 56 (ERVKN)
ಆದರೆ ಇಸ್ರೇಲರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ಆತನನ್ನು ಬಹಳವಾಗಿ ನೋಯಿಸಿದರು. ಅವರು ಆತನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ.
ಕೀರ್ತನೆಗಳು 78 : 57 (ERVKN)
ಇಸ್ರೇಲರು ಆತನಿಗೆ ವಿಮುಖರಾದರು; ತಮ್ಮ ಪೂರ್ವಿಕರಂತೆಯೇ ಆತನಿಗೆ ವಿರೋಧವಾಗಿ ತಿರುಗಿದರು. ತಿರುಗುಬಾಣದಂತೆ ತಮ್ಮ ದಿಕ್ಕನ್ನು ಬದಲಾಯಿಸಿಕೊಂಡರು.
ಕೀರ್ತನೆಗಳು 78 : 58 (ERVKN)
ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು.
ಕೀರ್ತನೆಗಳು 78 : 59 (ERVKN)
ದೇವರು ಇದನ್ನು ತಿಳಿದು ಬಹು ಕೋಪಗೊಂಡನು, ಆತನು ಇಸ್ರೇಲರನ್ನು ಸಂಪೂರ್ಣವಾಗಿ ತಿರಸ್ಕರಿಸಿದನು!
ಕೀರ್ತನೆಗಳು 78 : 60 (ERVKN)
ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು. ಅವರ ಮಧ್ಯದಲ್ಲಿ ಆತನು ವಾಸಮಾಡಿದ್ದು ಆ ಗುಡಾರದಲ್ಲಿಯೇ.
ಕೀರ್ತನೆಗಳು 78 : 61 (ERVKN)
ಆತನು ತನ್ನ ಜನರನ್ನು ಇತರ ಜನಾಂಗಗಳ ವಶಕ್ಕೆ ಕೊಟ್ಟನು. ಶತ್ರುಗಳು ಆತನ “ಸುಂದರವಾದ ಆಭರಣವನ್ನು” ತೆಗೆದುಕೊಂಡರು.
ಕೀರ್ತನೆಗಳು 78 : 62 (ERVKN)
ಆತನು ತನ್ನ ಜನರಿಗೆ ವಿರೋಧವಾಗಿ ತನ್ನ ಕೋಪವನ್ನು ತೋರಿದನು. ಯುದ್ಧದಲ್ಲಿ ಅವರಿಗೆ ಮರಣವಾಗುವಂತೆ ಮಾಡಿದನು.
ಕೀರ್ತನೆಗಳು 78 : 63 (ERVKN)
ಯುವಕರು ಬೆಂಕಿಯ ಪಾಲಾದರು. ಅವರಿಗೆ ನಿಶ್ಚಿತಾರ್ಥವಾಗಿದ್ದ ಕನ್ಯೆಯರು ವಿವಾಹಗೀತೆಯನ್ನು ಹಾಡಲಿಲ್ಲ.
ಕೀರ್ತನೆಗಳು 78 : 64 (ERVKN)
ಯಾಜಕರು ಕತ್ತಿಯಿಂದ ಕೊಲ್ಲಲ್ಪಟ್ಟರು, ಆದರೆ ವಿಧವೆಯರು ಅವರಿಗಾಗಿ ಗೋಳಾಡಲಿಲ್ಲ.
ಕೀರ್ತನೆಗಳು 78 : 65 (ERVKN)
ಕೊನೆಗೆ, ನಿದ್ದೆಯಿಂದ ಎಚ್ಚರಗೊಳ್ಳುತ್ತಿರುವ ಮನುಷ್ಯನಂತೆಯೂ ಅಮಲಿಳಿದು ಎಚ್ಚರಗೊಳ್ಳುತ್ತಿರುವ ಸೈನಿಕನಂತೆಯೂ ನಮ್ಮ ಯೆಹೋವನು ಎದ್ದನು.
ಕೀರ್ತನೆಗಳು 78 : 66 (ERVKN)
ಆತನು ತನ್ನ ಶತ್ರುಗಳನ್ನು ಸದೆಬಡಿದು ಸೋಲಿಸಿದನು. ಆತನು ತನ್ನ ಶತ್ರುಗಳನ್ನು ಸೋಲಿಸಿ ಅವರನ್ನು ನಿತ್ಯನಿಂದೆಗೆ ಗುರಿಮಾಡಿದನು.
ಕೀರ್ತನೆಗಳು 78 : 67 (ERVKN)
ಆದರೆ ಆತನು ಯೋಸೇಫನ ಕುಲವನ್ನು ತಿರಸ್ಕರಿಸಿದನು. ಎಫ್ರಾಯೀಮನ ಕುಲವನ್ನೂ ಆತನು ಆರಿಸಿಕೊಳ್ಳಲಿಲ್ಲ.
ಕೀರ್ತನೆಗಳು 78 : 68 (ERVKN)
ಆತನು ಯೆಹೂದಕುಲವನ್ನೇ ಆರಿಸಿಕೊಂಡನು. ಆತನು ತನ್ನ ಪ್ರಿಯ ಚೀಯೋನ್ ಪರ್ವತವನ್ನೇ ಆರಿಸಿಕೊಂಡನು.
ಕೀರ್ತನೆಗಳು 78 : 69 (ERVKN)
ಆತನು ತನ್ನ ಪವಿತ್ರಾಲಯವನ್ನು ಆ ಪರ್ವತದ ಮೇಲೆ ಕಟ್ಟಿ ಅದನ್ನು ಭೂಮಿಯಂತೆ ಶಾಶ್ವತಗೊಳಿಸಿದನು.
ಕೀರ್ತನೆಗಳು 78 : 70 (ERVKN)
ಆತನು ದಾವೀದನನ್ನು ತನ್ನ ವಿಶೇಷ ಸೇವಕನನ್ನಾಗಿ ಆರಿಸಿಕೊಂಡನು. ದಾವೀದನು ಕುರಿಹಟ್ಟಿಗಳನ್ನು ಕಾಯುತ್ತಿದ್ದನು.
ಕೀರ್ತನೆಗಳು 78 : 71 (ERVKN)
ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು.
ಕೀರ್ತನೆಗಳು 78 : 72 (ERVKN)
ದಾವೀದನು ಯಥಾರ್ಥಹೃದಯದಿಂದಲೂ ಬಹು ವಿವೇಕದಿಂದಲೂ ಇಸ್ರೇಲರನ್ನು ನಡೆಸಿದನು.
❮
❯