ಕೀರ್ತನೆಗಳು 8 : 1 (ERVKN)
ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು. ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು.
ಕೀರ್ತನೆಗಳು 8 : 2 (ERVKN)
ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.
ಕೀರ್ತನೆಗಳು 8 : 3 (ERVKN)
ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು.
ಕೀರ್ತನೆಗಳು 8 : 4 (ERVKN)
ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು?
ಮನುಷ್ಯರು ಎಷ್ಟರವರು? ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?
ಕೀರ್ತನೆಗಳು 8 : 5 (ERVKN)
ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.
ಕೀರ್ತನೆಗಳು 8 : 6 (ERVKN)
ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ.
ಕೀರ್ತನೆಗಳು 8 : 7 (ERVKN)
ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು.
ಕೀರ್ತನೆಗಳು 8 : 8 (ERVKN)
ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ ದೊರೆತನ ಮಾಡುವರು.
ಕೀರ್ತನೆಗಳು 8 : 9 (ERVKN)
ನಮ್ಮ ದೇವರಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಎಷ್ಟೋ ಅತಿಶಯವಾಗಿದೆ.

1 2 3 4 5 6 7 8 9