ಕೀರ್ತನೆಗಳು 81 : 1 (ERVKN)
ನಮಗೆ ಬಲಪ್ರದನಾಗಿರುವ ದೇವರಿಗೆ ಸಂತಸದಿಂದ ಹಾಡಿರಿ. ಇಸ್ರೇಲಿನ ದೇವರಿಗೆ ಆನಂದಘೋಷ ಮಾಡಿರಿ.
ಕೀರ್ತನೆಗಳು 81 : 2 (ERVKN)
ವಾದ್ಯವನ್ನು ನುಡಿಸಲಾರಂಭಿಸಿರಿ; ದಮ್ಮಡಿಯನ್ನು ಬಡಿಯಿರಿ. ಇಂಪಾದ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನು ಬಾರಿಸಿರಿ.
ಕೀರ್ತನೆಗಳು 81 : 3 (ERVKN)
ಅಮಾವಾಸ್ಯೆಯಲ್ಲಿಯೂ ನಮ್ಮ ರಜಾಕಾಲವಾದ ಪೂರ್ಣಿಮೆಯಲ್ಲಿಯೂ ತುತ್ತೂರಿಯನ್ನು ಊದಿರಿ.
ಕೀರ್ತನೆಗಳು 81 : 4 (ERVKN)
ಇದು ಇಸ್ರೇಲರಿಗೆ ಕಟ್ಟಳೆಯಾಗಿದೆ. ಯಾಕೋಬ್ಯರ ದೇವರು ಈ ಆಜ್ಞೆಯನ್ನು ಕೊಟ್ಟನು.
ಕೀರ್ತನೆಗಳು 81 : 5 (ERVKN)
ಆತನು ಯೋಸೇಫನನ್ನು *ಯೋಸೇಫ್ ಇಲ್ಲಿ ಇದರ ಅರ್ಥ: ಯೋಸೇಫನ ಕುಟುಂಬ, ಇಸ್ರೇಲಿನ ಜನರು. ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಾಗ ಅವನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡನು.
ಈಜಿಪ್ಟಿನಲ್ಲಿ ನಾವು ಕೇಳಿದ್ದು ನಮಗೆ ಅರ್ಥವಾಗದ ಭಾಷೆಯನ್ನೇ!
ಕೀರ್ತನೆಗಳು 81 : 6 (ERVKN)
ಆತನು ಹೀಗೆನ್ನುತ್ತಾನೆ: “ನಿಮ್ಮ ಹೆಗಲಿನಿಂದ ಹೊರೆಯನ್ನು ತೆಗೆದುಹಾಕಿದೆನು. ಕೆಲಸಗಾರರ ಬುಟ್ಟಿಯನ್ನು ನೀವು ಬಿಸಾಕುವಂತೆ ಮಾಡಿದೆನು.
ಕೀರ್ತನೆಗಳು 81 : 7 (ERVKN)
ನೀವು ಆಪತ್ತಿನಲ್ಲಿದ್ದಾಗ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆಗ ನಾನು ನಿಮ್ಮನ್ನು ಬಿಡಿಸಿದೆನು. ನಾನು ಕಾರ್ಮೋಡದಲ್ಲಿ ಮರೆಯಾಗಿದ್ದರೂ ನಿಮಗೆ ಉತ್ತರಿಸಿದೆನು. ನಾನು ನಿಮ್ಮನ್ನು ಮೆರೀಬಾದ ನೀರಿನಿಂದ ಪರೀಕ್ಷಿಸಿದೆನು.”
ಕೀರ್ತನೆಗಳು 81 : 8 (ERVKN)
“ನನ್ನ ಜನರೇ, ನನಗೆ ಕಿವಿಗೊಡಿರಿ, ನಾನು ನಿಮಗೆ ಒಡಂಬಡಿಕೆಯನ್ನು ಕೊಡುತ್ತಿರುವೆ. ಇಸ್ರೇಲೇ, ದಯವಿಟ್ಟು ಕಿವಿಗೊಡು!
ಕೀರ್ತನೆಗಳು 81 : 9 (ERVKN)
ಪರದೇಶದವರು ಆರಾಧಿಸುವ ಯಾವ ಸುಳ್ಳು ದೇವರುಗಳನ್ನೂ ಪೂಜಿಸಬೇಡ.
ಕೀರ್ತನೆಗಳು 81 : 10 (ERVKN)
ಯೆಹೋವನಾದ ನಾನೇ ನಿನ್ನ ದೇವರು. ನಿನ್ನನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ನಾನೇ.
ಇಸ್ರೇಲೇ, ನಿನ್ನ ಬಾಯನ್ನು ತೆರೆ, ಆಗ ನಾನು ನಿನಗೆ ತಿನ್ನಿಸುವೆನು.
ಕೀರ್ತನೆಗಳು 81 : 11 (ERVKN)
“ಆದರೆ ನನ್ನ ಜನರು ನನಗೆ ಕಿವಿಗೊಡಲಿಲ್ಲ. ಇಸ್ರೇಲರು ನನಗೆ ವಿಧೇಯರಾಗಲಿಲ್ಲ.
ಕೀರ್ತನೆಗಳು 81 : 12 (ERVKN)
ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ. ಇಸ್ರೇಲ್ ತನ್ನ ಇಷ್ಟಾನುಸಾರ ಮಾಡಿತು.
ಕೀರ್ತನೆಗಳು 81 : 13 (ERVKN)
ನನ್ನ ಜನರು ನನಗೆ ಕಿವಿಗೊಟ್ಟು ನನ್ನ ಚಿತ್ತಾನುಸಾರವಾಗಿ ಜೀವಿಸಿದರೆ,
ಕೀರ್ತನೆಗಳು 81 : 14 (ERVKN)
ಅವರ ಶತ್ರುಗಳನ್ನು ಸೋಲಿಸುವೆನು; ಇಸ್ರೇಲಿಗೆ ಕೇಡುಮಾಡುವವರನ್ನು ದಂಡಿಸುವೆನು.
ಕೀರ್ತನೆಗಳು 81 : 15 (ERVKN)
ಯೆಹೋವನ ಶತ್ರುಗಳು ಭಯದಿಂದ ನಡುಗುವರು. ಅವರು ಶಾಶ್ವತವಾಗಿ ದಂಡಿಸಲ್ಪಡುವರು.
ಕೀರ್ತನೆಗಳು 81 : 16 (ERVKN)
ದೇವರು ತನ್ನ ಜನರಿಗೆ ಉತ್ತಮವಾದ ಗೋಧಿಯನ್ನು ಒದಗಿಸುವನು. ಬಂಡೆಯಾಗಿರುವ ಆತನು ತನ್ನ ಜನರಿಗೆ ಜೇನುತುಪ್ಪವನ್ನು ಸಂತೃಪ್ತಿಯಾಗುವ ತನಕ ಕೊಡುವನು.”
❮
❯
1
2
3
4
5
6
7
8
9
10
11
12
13
14
15
16