ಕೀರ್ತನೆಗಳು 89 : 1 (ERVKN)
ಯೆಹೋವನೇ, ನಿನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ಸದಾಕಾಲ ಹಾಡಿ ಕೊಂಡಾಡುವೆನು!
ಕೀರ್ತನೆಗಳು 89 : 2 (ERVKN)
ನಿನ್ನ ಶಾಶ್ವತ ಪ್ರೀತಿಯಲ್ಲಿ ನನಗೆ ದೃಢವಾದ ನಂಬಿಕೆಯಿದೆ. ನಿನ್ನ ನಂಬಿಗಸ್ತಿಕೆಯು ಆಕಾಶಗಳಂತೆ ಶಾಶ್ವತವಾಗಿದೆ.
ಕೀರ್ತನೆಗಳು 89 : 3 (ERVKN)
ಆತನು ಹೇಳಿದ್ದೇನೆಂದರೆ: “ನಾನು ಆರಿಸಿಕೊಂಡ ರಾಜನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ನನ್ನ ಸೇವಕನಾದ ದಾವೀದನಿಗೆ ಒಂದು ವಾಗ್ದಾನವನ್ನು ಮಾಡಿದೆನು; ಅದೇನೆಂದರೆ,
ಕೀರ್ತನೆಗಳು 89 : 4 (ERVKN)
‘ದಾವೀದನೇ, ನಿನ್ನ ಕುಟುಂಬವನ್ನು ಶಾಶ್ವಾತಗೊಳಿಸುವೆನು, ನಿನ್ನ ರಾಜ್ಯವನ್ನೂ ಶಾಶ್ವತಗೊಳಿಸುವೆನು.’ ”
ಕೀರ್ತನೆಗಳು 89 : 5 (ERVKN)
ಯೆಹೋವನೇ, ನಿನ್ನ ಮಹತ್ಕಾರ್ಯಗಳ ಕುರಿತು ಆಕಾಶಮಂಡಲವು ಸ್ತುತಿಸುತ್ತಿದೆ. ಪರಿಶುದ್ಧರ ಸಭೆಯು ಅವುಗಳ ಕುರಿತು ಹಾಡಿಕೊಂಡಾಡುವುದು.
ಕೀರ್ತನೆಗಳು 89 : 6 (ERVKN)
ಪರಲೋಕದಲ್ಲಿ ಯಾವನೂ ಯೆಹೋವನಿಗೆ ಸಮಾನನಲ್ಲ. ಯಾವ ದೇವರುಗಳನ್ನೂ ಯೆಹೋವನಿಗೆ ಹೋಲಿಸಲಾಗದು.
ಕೀರ್ತನೆಗಳು 89 : 7 (ERVKN)
ದೇವರು ಪರಿಶುದ್ಧರ ಸಭೆ ಸೇರಿಸುವನು. ಆ ದೇವದೂತರೆಲ್ಲಾ ಆತನ ಸುತ್ತಲೂ ಸೇರಿಬರುವರು. ಅವರು ದೇವರಲ್ಲಿ ಭಯಭಕ್ತಿಯಿಂದಿರುವರು. ಆತನಿಗೆ ಭಯಪಡುತ್ತಾ ಆತನ ಸನ್ನಿಧಿಯಲ್ಲಿ ನಿಂತುಕೊಳ್ಳುವರು.
ಕೀರ್ತನೆಗಳು 89 : 8 (ERVKN)
ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನಂತೆ ಬೇರೆ ಯಾರೂ ಇಲ್ಲ. ನೀನು ನಮ್ಮ ಸಂಪೂರ್ಣಭರವಸೆಗೆ ಯೋಗ್ಯನಾಗಿರುವೆ.
ಕೀರ್ತನೆಗಳು 89 : 9 (ERVKN)
ಸಮುದ್ರವು ನಿನ್ನ ಅಧೀನದಲ್ಲಿದೆ. ಅದರ ರೋಷದ ಅಲೆಗಳನ್ನು ನೀನು ಶಾಂತಗೊಳಿಸುವೆ.
ಕೀರ್ತನೆಗಳು 89 : 10 (ERVKN)
ರಹಾಬನನ್ನು ಸೋಲಿಸಿದಾತನು ನೀನೇ. ನಿನ್ನ ಭುಜಬಲದಿಂದ ನೀನು ಶತ್ರುಗಳನ್ನು ಚದರಿಸಿಬಿಟ್ಟಿ.
ಕೀರ್ತನೆಗಳು 89 : 11 (ERVKN)
ದೇವರೇ, ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಪ್ರಪಂಚವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ.
ಕೀರ್ತನೆಗಳು 89 : 12 (ERVKN)
ಉತ್ತರ, ದಕ್ಷಿಣ ದಿಕ್ಕುಗಳನ್ನೂ ಪ್ರತಿಯೊಂದನ್ನೂ ಸೃಷ್ಟಿಸಿದಾತನು ನೀನೇ. ತಾಬೋರ್ ಮತ್ತು ಹೆರ್ಮೋನ್ ಬೆಟ್ಟಗಳು ನಿನ್ನ ಹೆಸರನ್ನು ಸಂಕೀರ್ತಿಸುತ್ತವೆ.
ಕೀರ್ತನೆಗಳು 89 : 13 (ERVKN)
ದೇವರೇ, ಬಲವು ನಿನ್ನಲ್ಲೇ ಇದೆ. ನಿನ್ನ ಬಲವು ಮಹಾ ಬಲವೇ ಸರಿ! ಜಯವಂತೂ ನಿನ್ನದೇ!
ಕೀರ್ತನೆಗಳು 89 : 14 (ERVKN)
ನಿನ್ನ ರಾಜ್ಯವು ಸತ್ಯದ ಮೇಲೆಯೂ ನ್ಯಾಯದ ಮೇಲೆಯೂ ಕಟ್ಟಲ್ಪಟ್ಟಿದೆ. ನಿನ್ನ ಸಿಂಹಾಸನದ ಮುಂದೆ ಪ್ರೀತಿಯೂ ನಂಬಿಗಸ್ತಿಕೆಯೂ ಸೇವಕರುಗಳಾಗಿವೆ.
ಕೀರ್ತನೆಗಳು 89 : 15 (ERVKN)
ಯೆಹೋವನೇ, ನಿನ್ನ ಸದ್ಭಕ್ತರು ನಿಜವಾಗಿಯೂ ಸಂತೋಷವಾಗಿದ್ದಾರೆ. ಅವರು ನಿನ್ನ ಕರುಣೆಯ ಬೆಳಕಿನಲ್ಲಿ ವಾಸಿಸುತ್ತಿದ್ದಾರೆ.
ಕೀರ್ತನೆಗಳು 89 : 16 (ERVKN)
ನಿನ್ನ ಹೆಸರು ಅವರನ್ನು ಯಾವಾಗಲೂ ಸಂತೋಷಗೊಳಿಸುತ್ತದೆ. ಅವರು ನಿನ್ನ ನೀತಿಯನ್ನು ಸ್ತುತಿಸುವರು.
ಕೀರ್ತನೆಗಳು 89 : 17 (ERVKN)
ನೀನೇ ಅವರ ಅದ್ಭುತ ಶಕ್ತಿಯಾಗಿರುವೆ. ಅವರ ಶಕ್ತಿಯು ನಿನ್ನಿಂದಲೇ ಬರುತ್ತದೆ.
ಕೀರ್ತನೆಗಳು 89 : 18 (ERVKN)
ಯೆಹೋವನೇ, ನೀನೇ ನಮ್ಮ ಸಂರಕ್ಷಕನು. ಇಸ್ರೇಲಿನ ಪರಿಶುದ್ಧನೇ ನಮ್ಮ ರಾಜನು.
ಕೀರ್ತನೆಗಳು 89 : 19 (ERVKN)
ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ: “ಯುದ್ಧವೀರನೊಬ್ಬನಿಗೆ ಬಲವನ್ನು ಅನುಗ್ರಹಿಸಿದೆ.
ಜನಸಮೂಹದಿಂದ ಒಬ್ಬ ಯೌವನಸ್ಥನನ್ನು ಆರಿಸಿಕೊಂಡು ಗಣ್ಯವ್ಯಕ್ತಿಯನ್ನಾಗಿ ಮಾಡಿದೆ.
ಕೀರ್ತನೆಗಳು 89 : 20 (ERVKN)
ನನ್ನ ಸೇವಕನಾದ ದಾವೀದನನ್ನು ಕಂಡುಕೊಂಡೆ. ನನ್ನ ವಿಶೇಷವಾದ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದೆ.
ಕೀರ್ತನೆಗಳು 89 : 21 (ERVKN)
ನನ್ನ ಬಲಗೈಯಿಂದ ದಾವೀದನಿಗೆ ಬೆಂಬಲ ನೀಡಿದೆ, ನನ್ನ ಶಕ್ತಿಯಿಂದ ಅವನನ್ನು ಬಲಗೊಳಿಸಿದೆ.
ಕೀರ್ತನೆಗಳು 89 : 22 (ERVKN)
ನಾನು ಆರಿಸಿಕೊಂಡ ರಾಜನನ್ನು ಸೋಲಿಸಲು ಶತ್ರುವಿಗೆ ಆಗಲಿಲ್ಲ. ಅವನನ್ನು ಸೋಲಿಸಲು ದುಷ್ಟಜನರಿಗೆ ಆಗಲಿಲ್ಲ.
ಕೀರ್ತನೆಗಳು 89 : 23 (ERVKN)
ನಾನು ಅವನ ಶತ್ರುಗಳನ್ನು ಮುಗಿಸಿದೆನು. ನಾನು ಆರಿಸಿಕೊಂಡ ರಾಜನ ಮೇಲೆ ದ್ವೇಷಕಾರಿದ ಜನರನ್ನು ಸೋಲಿಸಿದೆನು.
ಕೀರ್ತನೆಗಳು 89 : 24 (ERVKN)
ನಾನು ಆರಿಸಿಕೊಂಡ ರಾಜನನ್ನು ಯಾವಾಗಲೂ ಪ್ರೀತಿಸುವೆನು; ಅವನಿಗೆ ಬೆಂಬಲ ನೀಡುವೆನು. ನಾನು ಅವನನ್ನು ಯಾವಾಗಲೂ ಬಲಗೊಳಿಸುವೆನು.
ಕೀರ್ತನೆಗಳು 89 : 25 (ERVKN)
ನಾನು ಆರಿಸಿಕೊಂಡ ರಾಜನನ್ನು ಸಮುದ್ರದ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ಅವನು ನದಿಗಳನ್ನು ಹತೋಟಿಯಲ್ಲಿಡುವನು.
ಕೀರ್ತನೆಗಳು 89 : 26 (ERVKN)
ಅವನು ನನಗೆ, ‘ನೀನೇ ನನ್ನ ತಂದೆ; ನೀನೇ ನನ್ನ ದೇವರು. ನೀನೇ ನನ್ನ ಬಂಡೆ; ನೀನೇ ನನ್ನ ರಕ್ಷಕ’ ಎಂದು ಹೇಳುವನು.
ಕೀರ್ತನೆಗಳು 89 : 27 (ERVKN)
ನಾನು ಅವನನ್ನು ನನ್ನ ಚೊಚ್ಚಲು ಮಗನನ್ನಾಗಿ ಮಾಡುವೆನು. ಅವನು ಭೂಲೋಕದಲ್ಲಿ ಮಹಾರಾಜನಾಗಿರುವನು.
ಕೀರ್ತನೆಗಳು 89 : 28 (ERVKN)
ನಾನು ಆರಿಸಿಕೊಂಡ ರಾಜನನ್ನು ನನ್ನ ಪ್ರೀತಿಯು ಸದಾಕಾಲ ಸಂರಕ್ಷಿಸುವುದು. ನಾನು ಅವನೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯು ಎಂದಿಗೂ ಕೊನೆಯಾಗದು.
ಕೀರ್ತನೆಗಳು 89 : 29 (ERVKN)
ಅವನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಆಕಾಶಗಳಿರುವವರೆಗೂ ಇರುವುದು.
ಕೀರ್ತನೆಗಳು 89 : 30 (ERVKN)
ಅವನ ಸಂತತಿಯವರು ನನ್ನ ಧರ್ಮಶಾಸ್ತ್ರವನ್ನು ತೊರೆದುಬಿಟ್ಟು ನನ್ನ ಆಜ್ಞೆಗಳಿಗೆ ಅವಿಧೇಯರಾದರೆ ಅವರನ್ನು ಶಿಕ್ಷಿಸುವೆನು.
ಕೀರ್ತನೆಗಳು 89 : 31 (ERVKN)
ನಾನು ಆರಿಸಿಕೊಂಡ ರಾಜನ ಸಂತತಿಯವರು ನನ್ನ ಕಟ್ಟಳೆಗಳನ್ನು ಉಲ್ಲಂಘಿಸಿ ನನ್ನ ಆಜ್ಞೆಗಳನ್ನು ಅಲಕ್ಷಿಸಿದರೆ,
ಕೀರ್ತನೆಗಳು 89 : 32 (ERVKN)
ನಾನು ಅವರನ್ನು ಅವರ ದ್ರೋಹಕ್ಕಾಗಿ ಬಹು ಕಠಿಣವಾಗಿ ಶಿಕ್ಷಿಸುವೆನು. ಅವರ ಅಪರಾಧಕ್ಕಾಗಿ ಬೆತ್ತದಿಂದ ಹೊಡೆಯುವೆನು.
ಕೀರ್ತನೆಗಳು 89 : 33 (ERVKN)
ಆದರೆ ಅವರ ಮೇಲೆ ನನಗಿರುವ ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ನಾನು ಅವರಿಗೆ ಯಾವಾಗಲೂ ನಂಬಿಗಸ್ತನಾಗಿರುವೆನು.
ಕೀರ್ತನೆಗಳು 89 : 34 (ERVKN)
ನಾನು ದಾವೀದನೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಹಾಕುವುದೂ ಇಲ್ಲ, ಬದಲಾಯಿಸುವುದೂ ಇಲ್ಲ.
ಕೀರ್ತನೆಗಳು 89 : 35 (ERVKN)
ನನ್ನ ಪವಿತ್ರತ್ವದ ಮೇಲೆ ಆಣೆಯಿಟ್ಟು ದಾವೀದನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದೆನು. ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.
ಕೀರ್ತನೆಗಳು 89 : 36 (ERVKN)
ದಾವೀದನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಸೂರ್ಯನು ಇರುವವರೆಗೂ ಇರುವುದು.
ಕೀರ್ತನೆಗಳು 89 : 37 (ERVKN)
ಅದು ಚಂದ್ರನಂತೆ ಶಾಶ್ವತವಾಗಿರುವುದು.
ಈ ಒಪ್ಪಂದಕ್ಕೆ ಆಕಾಶವೇ ಸಾಕ್ಷಿ. ಈ ಒಪ್ಪಂದವು ನಂಬಿಕೆಗೆ ಯೋಗ್ಯವಾಗಿದೆ.”
ಕೀರ್ತನೆಗಳು 89 : 38 (ERVKN)
ಆದರೆ ನೀನು ಅಭಿಷೇಕಿಸಿದ ರಾಜನ ಮೇಲೆ ನೀನು ಕೋಪಗೊಂಡಿದ್ದರಿಂದಲೇ ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಟ್ಟೆ.
ಕೀರ್ತನೆಗಳು 89 : 39 (ERVKN)
ನೀನು ನಿನ್ನ ಒಡಂಬಡಿಕೆಯನ್ನು ತಿರಸ್ಕರಿಸಿ ಅವನ ಕಿರೀಟವನ್ನು ನೆಲದ ಮೇಲೆ ಎಸೆದುಬಿಟ್ಟೆ.
ಕೀರ್ತನೆಗಳು 89 : 40 (ERVKN)
ಅವನ ಪಟ್ಟಣದ ಗೋಡೆಗಳನ್ನು ಕೆಡವಿಹಾಕಿದೆ; ಅವನ ರಕ್ಷಣಾದುರ್ಗಗಳನ್ನೆಲ್ಲಾ ನಾಶಮಾಡಿದೆ.
ಕೀರ್ತನೆಗಳು 89 : 41 (ERVKN)
ಅವನ ನೆರೆಹೊರೆಯವರು ಅವನನ್ನು ನೋಡಿ ನಗುವರು. ದಾರಿಯಲ್ಲಿ ಹಾದುಹೋಗುವವರು ಅವನಿಂದ ವಸ್ತುಗಳನ್ನು ಕದ್ದುಕೊಳ್ಳುವರು.
ಕೀರ್ತನೆಗಳು 89 : 42 (ERVKN)
ಅವನ ಶತ್ರುಗಳಿಗೆಲ್ಲಾ ನೀನು ಸಂತೋಷವನ್ನುಂಟು ಮಾಡಿರುವೆ. ಅವನ ಶತ್ರುಗಳಿಗೆ ಯುದ್ಧದಲ್ಲಿ ಜಯವಾಗುವಂತೆ ಮಾಡಿರುವೆ.
ಕೀರ್ತನೆಗಳು 89 : 43 (ERVKN)
ತಮ್ಮನ್ನು ರಕ್ಷಿಸಿಕೊಳ್ಳಲು ನೀನು ಅವರಿಗೆ ಸಹಾಯ ಮಾಡಿದೆ. ನಿನ್ನ ರಾಜನಿಗಾದರೋ ಯುದ್ಧದಲ್ಲಿ ಗೆಲ್ಲಲು ಸಹಾಯಮಾಡಲಿಲ್ಲ.
ಕೀರ್ತನೆಗಳು 89 : 44 (ERVKN)
ನೀನು ಅವನ ತೇಜಸ್ಸನ್ನು ತಡೆದುಬಿಟ್ಟಿದ್ದಿ; ನೀನು ಅವನ ಸಿಂಹಾಸನವನ್ನು ನೆಲಕ್ಕೆ ಉರುಳಿಸಿಬಿಟ್ಟೆ.
ಕೀರ್ತನೆಗಳು 89 : 45 (ERVKN)
ನೀನು ಅವನ ಜೀವಿತವನ್ನು ಮೊಟಕುಗೊಳಿಸಿ ಅವನಿಗೆ ಅವಮಾನ ಮಾಡಿದೆ.
ಕೀರ್ತನೆಗಳು 89 : 46 (ERVKN)
ಯೆಹೋವನೇ, ಇನ್ನೆಷ್ಟರವರೆಗೆ ನೀನು ನಮಗೆ ಮರೆಯಾಗಿರುವೆ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಶಾಶ್ವತವಾಗಿ ಉರಿಯುವುದೋ?
ಕೀರ್ತನೆಗಳು 89 : 47 (ERVKN)
ನಮ್ಮ ಜೀವಿತಕಾಲ ಸ್ವಲ್ಪವೆಂಬುದನ್ನು ಜ್ಞಾಪಿಸಿಕೊ. ನಾವು ಸ್ವಲ್ಪಕಾಲ ಬದುಕಿ ಸಾಯುವುದಕ್ಕಾಗಿಯೇ ನೀನು ನಮ್ಮನ್ನು ಸೃಷ್ಟಿಸಿದೆ.
ಕೀರ್ತನೆಗಳು 89 : 48 (ERVKN)
ಮರಣ ಹೊಂದದೆ ಚಿರಂಜೀವಿಯಾಗಿರುವವನು ಯಾರೂ ಇಲ್ಲ. ಯಾವ ವ್ಯಕ್ತಿಯೂ ಸಮಾಧಿಯಿಂದ ತಪ್ಪಿಸಿಕೊಳ್ಳಲಾರನು.
ಕೀರ್ತನೆಗಳು 89 : 49 (ERVKN)
ಯೆಹೋವನೇ, ಹಿಂದಿನಕಾಲದಲ್ಲಿ ನೀನು ತೋರಿದ ಪ್ರೀತಿ ಎಲ್ಲಿ ಹೋಯಿತು? ದಾವೀದ ಕುಟುಂಬಕ್ಕೆ ನಂಬಿಗಸ್ತನಾಗಿರುತ್ತೇನೆಂದು ನೀನು ವಾಗ್ದಾನ ಮಾಡಿದೆಯಲ್ಲಾ!
ಕೀರ್ತನೆಗಳು 89 : 50 (ERVKN)
(50-51) ಯೆಹೋವನೇ ನಿನ್ನ ಸೇವಕನಿಗೆ ಜನರು ಮಾಡಿದ ಅವಮಾನವನ್ನು ದಯವಿಟ್ಟು ಜ್ಞಾಪಿಸಿಕೊ.
ಯೆಹೋವನೇ, ನಿನ್ನ ಶತ್ರುಗಳಿಂದ ಅವಮಾನಕರವಾದ ಮಾತುಗಳನ್ನು ನಾನು ಕೇಳಬೇಕಾಯಿತು. ನೀನು ಅಭಿಷೇಕಿಸಿದ ರಾಜನನ್ನು ಅವರು ಅವಮಾನ ಮಾಡಿದರು!
ಕೀರ್ತನೆಗಳು 89 : 51 (ERVKN)
ಕೀರ್ತನೆಗಳು 89 : 52 (ERVKN)
ಯೆಹೋವನನ್ನು ಎಂದೆಂದಿಗೂ ಕೊಂಡಾಡಿರಿ!
ಆಮೆನ್, ಆಮೆನ್!
❮
❯