ಕೀರ್ತನೆಗಳು 9 : 1 (ERVKN)
ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
ಕೀರ್ತನೆಗಳು 9 : 2 (ERVKN)
ದೇವರೇ, ನಿನ್ನಲ್ಲಿ ನಾನು ಸಂತೋಷಿಸುತ್ತಾ ಉಲ್ಲಾಸಪಡುವೆನು. ಮಹೋನ್ನತನೇ, ನಿನ್ನ ಹೆಸರನ್ನೇ ಸಂಕೀರ್ತಿಸುವೆನು.
ಕೀರ್ತನೆಗಳು 9 : 3 (ERVKN)
ನನ್ನ ವೈರಿಗಳು ನಿನ್ನ ಎದುರಿನಿಂದ ಹಿಂತಿರುಗಿ ಓಡಿಹೋದರು. ಆದರೆ ಅವರು ಬಿದ್ದು ನಾಶವಾದರು.
ಕೀರ್ತನೆಗಳು 9 : 4 (ERVKN)
ನೀನು ನೀತಿವಂತನಾದ ನ್ಯಾಯಾಧಿಪತಿ. ಸಿಂಹಾಸನದ ಮೇಲೆ ಕುಳಿತು ನೀನು ನ್ಯಾಯತೀರಿಸುವೆ. ನೀನು ನನ್ನ ಮೊಕದ್ದಮೆಯನ್ನು ಕೇಳಿ ನನ್ನ ವಿಷಯದಲ್ಲಿ ತೀರ್ಪು ಮಾಡಿರುವೆ.
ಕೀರ್ತನೆಗಳು 9 : 5 (ERVKN)
ನೀನು ಜನಾಂಗಗಳನ್ನು ಟೀಕಿಸಿ ಆ ದುಷ್ಟರನ್ನು ನಾಶಮಾಡಿದೆ. ನೀನು ಅವರ ಹೆಸರುಗಳನ್ನು ಜೀವಿತರ ಪಟ್ಟಿಯಿಂದ ಶಾಶ್ವತವಾಗಿ ಅಳಿಸಿಹಾಕಿರುವೆ.
ಕೀರ್ತನೆಗಳು 9 : 6 (ERVKN)
ವೈರಿಗಳು ಇಲ್ಲವಾದರು. ನೀನು ಅವರ ನಗರಗಳನ್ನು ನಾಶಮಾಡಿದೆ! ಈಗ ಹಾಳಾದ ಕಟ್ಟಡಗಳು ಮಾತ್ರ ಉಳಿದಿವೆ; ದುಷ್ಟರನ್ನು ಜ್ಞಾಪಕಕ್ಕೆ ತರುವ ಯಾವುದೂ ಉಳಿದಿಲ್ಲ.
ಕೀರ್ತನೆಗಳು 9 : 7 (ERVKN)
ಯೆಹೋವನಾದರೋ ಶಾಶ್ವತವಾಗಿ ಆಳುವನು. ಆತನು ಭೂಲೋಕಕ್ಕೆ ನ್ಯಾಯದೊರಕಿಸುವುದಕ್ಕಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ್ದಾನೆ.
ಕೀರ್ತನೆಗಳು 9 : 8 (ERVKN)
ಆತನು ಭೂನಿವಾಸಿಗಳಿಗೆಲ್ಲಾ ನ್ಯಾಯವಾಗಿ ತೀರ್ಪುಮಾಡುವನು. ಆತನು ಜನಾಂಗಗಳಿಗೆಲ್ಲಾ ಯಥಾರ್ಥವಾಗಿ ತೀರ್ಪುಮಾಡುವನು.
ಕೀರ್ತನೆಗಳು 9 : 9 (ERVKN)
ಯೆಹೋವನು ಕುಗ್ಗಿಹೋದವರಿಗೆ ಆಶ್ರಯಸ್ಥಾನವೂ ಇಕ್ಕಟ್ಟಿನಲ್ಲಿರುವವರಿಗೆ ಆಶ್ರಯದುರ್ಗವೂ ಆಗಿದ್ದಾನೆ.
ಕೀರ್ತನೆಗಳು 9 : 10 (ERVKN)
ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ.
ಕೀರ್ತನೆಗಳು 9 : 11 (ERVKN)
ಚೀಯೋನಿನ ನಿವಾಸಿಗಳೇ, ಯೆಹೋವನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.
ಕೀರ್ತನೆಗಳು 9 : 12 (ERVKN)
ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.
ಕೀರ್ತನೆಗಳು 9 : 13 (ERVKN)
“ಯೆಹೋವನೇ, ನನ್ನನ್ನು ಕನಿಕರಿಸು. ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ. ‘ಮರಣ ದ್ವಾರ’ದಿಂದ ತಪ್ಪಿಸಿ ಕಾಪಾಡು.”
ಕೀರ್ತನೆಗಳು 9 : 14 (ERVKN)
ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು.
ಕೀರ್ತನೆಗಳು 9 : 15 (ERVKN)
ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು; ತಾವು ಹಾಸಿದ ಬಲೆಗಳಲ್ಲಿ ತಾವೇ ಸಿಕ್ಕಿಬೀಳುವರು.
ಕೀರ್ತನೆಗಳು 9 : 16 (ERVKN)
ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.
ಕೀರ್ತನೆಗಳು 9 : 17 (ERVKN)
ದೇವರನ್ನು ಅಲಕ್ಷ್ಯ ಮಾಡುವ ಜನರೆಲ್ಲ ಕೆಟ್ಟವರು. ಅವರು ಮರಣದ ಸ್ಥಳಕ್ಕೆ ಹೋಗುವರು.
ಕೀರ್ತನೆಗಳು 9 : 18 (ERVKN)
ಕೆಲವೊಮ್ಮೆ, ಇಕ್ಕಟ್ಟಿನಲ್ಲಿರುವವರನ್ನು ದೇವರು ಮರೆತಿರುವಂತೆ ಕಾಣುತ್ತದೆ; ಕುಗ್ಗಿಹೋದ ಅವರಿಗೆ ನಿರೀಕ್ಷೆಯೇ ಇಲ್ಲದಂತೆ ಕಂಡರೂ ದೇವರು ಅವರನ್ನು ಮರೆತುಬಿಡುವುದಿಲ್ಲ.
ಕೀರ್ತನೆಗಳು 9 : 19 (ERVKN)
ಯೆಹೋವನೇ, ಎದ್ದೇಳು! ಜನಾಂಗಗಳಿಗೆ ನ್ಯಾಯತೀರಿಸು. ಅವರು ಬಲಿಷ್ಠರಾಗಕೂಡದು.
ಕೀರ್ತನೆಗಳು 9 : 20 (ERVKN)
ಯೆಹೋವನೇ, ಅವರಿಗೆ ಭಯಹುಟ್ಟಿಸು; ತಾವು ಕೇವಲ ಮನುಷ್ಯರೆಂಬುದನ್ನು ಅವರು ಗ್ರಹಿಸಿಕೊಳ್ಳಲಿ.

1 2 3 4 5 6 7 8 9 10 11 12 13 14 15 16 17 18 19 20