ಕೀರ್ತನೆಗಳು 90 : 1 (ERVKN)
ಯೆಹೋವನೇ, ತಲತಲಾಂತರಗಳಿಂದಲೂ ನೀನೇ ನಮ್ಮ ವಾಸಸ್ಥಾನ.
ಕೀರ್ತನೆಗಳು 90 : 2 (ERVKN)
ಬೆಟ್ಟಗಳು ಹುಟ್ಟುವುದಕ್ಕಿಂತ ಮೊದಲಿಂದಲೂ ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲಿನಿಂದಲೂ ನೀನೇ ದೇವರು. ಯಾವಾಗಲೂ ದೇವರಾಗಿದ್ದಾತನು ನೀನೇ! ಯಾವಾಗಲೂ ದೇವರಾಗಿರುವಾತನೂ ನೀನೇ!
ಕೀರ್ತನೆಗಳು 90 : 3 (ERVKN)
ಜನರಿಗೆ ಜನ್ಮ ನೀಡುವಾತನೂ ನೀನೇ; ಅವರನ್ನು ಮತ್ತೆ ಧೂಳನ್ನಾಗಿ ಮಾಡುವಾತನೂ ನೀನೇ.
ಕೀರ್ತನೆಗಳು 90 : 4 (ERVKN)
ಸಾವಿರ ವರುಷಗಳು ನಿನಗೆ ಗತಿಸಿಹೋದ ನಿನ್ನೆಯಂತೆಯೂ ರಾತ್ರಿಯ ಜಾವದಂತೆಯೂ ಇವೆ.
ಕೀರ್ತನೆಗಳು 90 : 5 (ERVKN)
ನೀನು ನಮ್ಮನ್ನು ಗುಡಿಸಿಹಾಕುವೆ. ನಮ್ಮ ಜೀವನವು ಕನಸಿನಂತಿದೆ; ಹೊತ್ತಾರೆಯಲ್ಲಿ ನಾವು ಇಲ್ಲವಾಗುತ್ತೇವೆ. ನಾವು ಹುಲ್ಲಿನಂತಿದ್ದೇವೆ.
ಕೀರ್ತನೆಗಳು 90 : 6 (ERVKN)
ಹೊತ್ತಾರೆಯಲ್ಲಿ ಹುಲ್ಲು ಚಿಗುರತೊಡಗಿದರೂ ಸಾಯಂಕಾಲದೊಳಗೆ ಒಣಗಿಹೋಗುತ್ತದೆ.
ಕೀರ್ತನೆಗಳು 90 : 7 (ERVKN)
ದೇವರೇ, ನಿನ್ನ ಕೋಪದಿಂದ ನಾವು ನಾಶವಾದೆವು. ನಿನ್ನ ರೌದ್ರವು ನಮ್ಮನ್ನು ತಲ್ಲಣಗೊಳಿಸಿದೆ.
ಕೀರ್ತನೆಗಳು 90 : 8 (ERVKN)
ನಮ್ಮ ಪಾಪಗಳೆಲ್ಲಾ ನಿನಗೆ ತಿಳಿದಿವೆ. ದೇವರೇ, ನಮ್ಮ ರಹಸ್ಯಪಾಪಗಳೆಲ್ಲಾ ನಿನ್ನ ಮುಂದೆ ಬಟ್ಟಬಯಲಾಗಿವೆ.
ಕೀರ್ತನೆಗಳು 90 : 9 (ERVKN)
ನಿನ್ನ ಕೋಪವು ನಮ್ಮ ಜೀವನವನ್ನು ಕೊನೆಗೊಳಿಸಬಲ್ಲದು. ನಮ್ಮ ಜೀವಿತಗಳು ಪಿಸುಮಾತಿನಂತೆ ತೀರಿಹೋದವು.
ಕೀರ್ತನೆಗಳು 90 : 10 (ERVKN)
ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ; ಬಲಹೆಚ್ಚಿದರೆ ಎಂಭತ್ತು ವರ್ಷ. ಕಷ್ಟಸಂಕಟಗಳೇ ಅದರ ಆಡಂಬರ. ಬಹುಬೇಗನೆ ನಮ್ಮ ಜೀವಿತಗಳು ಕೊನೆಗೊಳ್ಳುತ್ತವೆ! ನಾವು ಹಾರಿಹೋಗುತ್ತೇವೆ.
ಕೀರ್ತನೆಗಳು 90 : 11 (ERVKN)
ದೇವರೇ, ನಿನ್ನ ಕೋಪದ ಪೂರ್ಣ ಬಲವನ್ನು ಯಾರೂ ತಿಳಿಯರು. ನಿನ್ನಲ್ಲಿ ನಮಗಿರುವ ಭಯಭಕ್ತಿಯು ನಿನ್ನ ಕೋಪದಷ್ಟೇ ದೊಡ್ಡದಾಗಿವೆ.
ಕೀರ್ತನೆಗಳು 90 : 12 (ERVKN)
ನಮ್ಮ ಜೀವಿತಗಳು ಕೊಂಚವೇ ಎಂಬುದನ್ನು ನಮಗೆ ಕಲಿಸು. ಆಗ ನಾವು ವಿವೇಕಿಗಳಾಗುವೆವು.
ಕೀರ್ತನೆಗಳು 90 : 13 (ERVKN)
ಯೆಹೋವನೇ, ನಮ್ಮ ಬಳಿಗೆ ಹಿಂತಿರುಗಿ ಬಾ. ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.
ಕೀರ್ತನೆಗಳು 90 : 14 (ERVKN)
ಪ್ರತಿ ಮುಂಜಾನೆ ನಿನ್ನ ಪ್ರೀತಿಯಿಂದ ನಮ್ಮನ್ನು ತುಂಬಿಸು. ಆಗ ಜೀವಮಾನವೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
ಕೀರ್ತನೆಗಳು 90 : 15 (ERVKN)
ನೀನು ನಮಗೆ ಬಹು ದುಃಖವನ್ನೂ ಕಷ್ಟಗಳನ್ನೂ ಬರಮಾಡಿದೆ. ಈಗ ನಮ್ಮನ್ನು ಸಂತೋಷಗೊಳಿಸು.
ಕೀರ್ತನೆಗಳು 90 : 16 (ERVKN)
ನೀನು ನಿನ್ನ ಸೇವಕರುಗಳಿಗಾಗಿ ಮಾಡಬಲ್ಲ ಅದ್ಭುತಕಾರ್ಯಗಳನ್ನು ನಾವು ನೋಡುವಂತಾಗಲಿ.
ಕೀರ್ತನೆಗಳು 90 : 17 (ERVKN)
ನಮ್ಮ ದೇವರಾದ ಯೆಹೋವನೇ, ನಮಗೆ ಕರುಣೆತೋರು. ನಮ್ಮ ಕೆಲಸಕಾರ್ಯಗಳು ನಮಗೆ ಫಲ ನೀಡಲಿ; ನಮ್ಮ ಕಾರ್ಯಗಳನ್ನು ಆತನು ಸಫಲಪಡಿಸಲಿ.

1 2 3 4 5 6 7 8 9 10 11 12 13 14 15 16 17

BG:

Opacity:

Color:


Size:


Font: