ಕೀರ್ತನೆಗಳು 91 : 1 (ERVKN)
ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
ಕೀರ್ತನೆಗಳು 91 : 2 (ERVKN)
ನಾನು ಯೆಹೋವನಿಗೆ, “ನೀನೇ ನನ್ನ ಆಶ್ರಯಸ್ಥಾನವೂ ನನ್ನ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ” ಎಂದು ಹೇಳುವೆನು.
ಕೀರ್ತನೆಗಳು 91 : 3 (ERVKN)
ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರವಾದ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.
ಕೀರ್ತನೆಗಳು 91 : 4 (ERVKN)
ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸಿಕೊಳ್ಳುವನು. ಆತನ ರೆಕ್ಕೆಗಳನ್ನು ನೀನು ಆಶ್ರಯಿಸಿಕೊಳ್ಳುವೆ. ಆತನ ನಂಬಿಗಸ್ತಿಕೆಯು ನಿನಗೆ ಗುರಾಣಿಯೂ ಕೋಟೆಯೂ ಆಗಿದೆ.
ಕೀರ್ತನೆಗಳು 91 : 5 (ERVKN)
ಇರುಳಲ್ಲಿ ನೀನು ಯಾವುದಕ್ಕೂ ಭಯಪಡಬೇಕಿಲ್ಲ; ಹಗಲಲ್ಲಿ ಶತ್ರುಗಳ ಬಾಣಗಳಿಗೂ ನೀನು ಹೆದರಬೇಕಿಲ್ಲ.
ಕೀರ್ತನೆಗಳು 91 : 6 (ERVKN)
ಕತ್ತಲೆಯಲ್ಲಿ ಬರುವ ರೋಗಗಳಿಗಾಗಲಿ ಮಧ್ಯಾಹ್ನದಲ್ಲಿ ಬರುವ ಭಯಂಕರ ಕಾಯಿಲೆಗಳಿಗಾಗಲಿ ನೀನು ಹೆದರಬೇಕಿಲ್ಲ.
ಕೀರ್ತನೆಗಳು 91 : 7 (ERVKN)
ನೀನು ಸಾವಿರ ವೈರಿಗಳನ್ನು ಸೋಲಿಸುವೆ. ನಿನ್ನ ಬಲಗೈ ಹತ್ತುಸಾವಿರ ಶತ್ರು ಸೈನಿಕರನ್ನು ಸೋಲಿಸುವುದು. ನಿನ್ನ ಶತ್ರುಗಳಿಗೆ ನಿನ್ನನ್ನು ಮುಟ್ಟಲೂ ಸಾಧ್ಯವಾಗದು.
ಕೀರ್ತನೆಗಳು 91 : 8 (ERVKN)
ನೀನು ಅದನ್ನು ಕಣ್ಣಾರೆ ಕಂಡು ದುಷ್ಟರಿಗೆ ದಂಡನೆಯಾಯಿತೆಂದು ತಿಳಿದುಕೊಳ್ಳುವೆ.
ಕೀರ್ತನೆಗಳು 91 : 9 (ERVKN)
ಯಾಕೆಂದರೆ ನಿನ್ನ ಭರವಸವು ಯೆಹೋವನಲ್ಲಿಯೇ. ನಿನ್ನ ಆಶ್ರಯಸ್ಥಾನವು ಮಹೋನ್ನತನಾದ ದೇವರೇ.
ಕೀರ್ತನೆಗಳು 91 : 10 (ERVKN)
ಯಾವ ಕೇಡೂ ನಿನಗೆ ಸಂಭವಿಸದು. ನಿನ್ನ ಮನೆಯಲ್ಲಿ ಯಾವ ರೋಗಗಳೂ ಇರದು.
ಕೀರ್ತನೆಗಳು 91 : 11 (ERVKN)
ನೀನು ಹೋದಲ್ಲೆಲ್ಲಾ ನಿನ್ನನ್ನು ಕಾಯಲು ಆತನು ತನ್ನ ದೂತರಿಗೆ ಆಜ್ಞಾಪಿಸುವನು.
ಕೀರ್ತನೆಗಳು 91 : 12 (ERVKN)
ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರುಗಳು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
ಕೀರ್ತನೆಗಳು 91 : 13 (ERVKN)
ಸಿಂಹಗಳ ಮೇಲೆಯೂ ಮತ್ತು ವಿಷಸರ್ಪಗಳ ಮೇಲೆಯೂ ನಡೆಯಲು ನೀನು ಶಕ್ತನಾಗಿರುವೆ.
ಕೀರ್ತನೆಗಳು 91 : 14 (ERVKN)
ಯೆಹೋವನು ಹೇಳುವುದೇನೆಂದರೆ: “ನನ್ನಲ್ಲಿ ಭರವಸವಿಡುವವನನ್ನು ರಕ್ಷಿಸುವೆನು; ನನ್ನ ಹೆಸರನ್ನು ಆರಾಧಿಸುವ ಭಕ್ತರನ್ನು ಸಂರಕ್ಷಿಸುವೆನು.
ಕೀರ್ತನೆಗಳು 91 : 15 (ERVKN)
ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.
ಕೀರ್ತನೆಗಳು 91 : 16 (ERVKN)
ನನ್ನ ಭಕ್ತರಿಗೆ ದೀರ್ಘಾಯುಷ್ಯವನ್ನು ನೀಡಿ ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸಿ ಕಾಪಾಡುವೆನು.”
❮
❯
1
2
3
4
5
6
7
8
9
10
11
12
13
14
15
16