ಕೀರ್ತನೆಗಳು 93 : 1 (ERVKN)
ಯೆಹೋವನೇ ರಾಜನು. [QBR2] ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. [QBR] ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. [QBR2] ಅದು ಕದಲುವುದೇ ಇಲ್ಲ. [QBR]
ಕೀರ್ತನೆಗಳು 93 : 2 (ERVKN)
ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ. [QBR2] ಆದಿಯಿಂದಲೂ ಇರುವಾತನು ನೀನೊಬ್ಬನೇ! [QBR]
ಕೀರ್ತನೆಗಳು 93 : 3 (ERVKN)
ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ. [QBR2] ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ. [QBR]
ಕೀರ್ತನೆಗಳು 93 : 4 (ERVKN)
ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ. [QBR2] ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ. [QBR]
ಕೀರ್ತನೆಗಳು 93 : 5 (ERVKN)
ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. [QBR2] ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ. [PE]

1 2 3 4 5

BG:

Opacity:

Color:


Size:


Font: