ಕೀರ್ತನೆಗಳು 94 : 1 (ERVKN)
ಯೆಹೋವನೇ, ನೀನು ಸೇಡು ತೀರಿಸಿಕೊಳ್ಳುವ ದೇವರು! [QBR2] ಸೇಡು ತೀರಿಸಿಕೊಳ್ಳುವ ದೇವರೇ ಪ್ರತ್ಯಕ್ಷನಾಗು! [QBR]
ಕೀರ್ತನೆಗಳು 94 : 2 (ERVKN)
ಇಡೀಲೋಕದ ನ್ಯಾಯಾಧಿಪತಿ ನೀನೇ. [QBR2] ಅಹಂಕಾರಿಗಳಿಗೆ ತಕ್ಕ ದಂಡನೆಯನ್ನು ಕೊಡು. [QBR]
ಕೀರ್ತನೆಗಳು 94 : 3 (ERVKN)
ಯೆಹೋವನೇ, ದುಷ್ಟಜನರು ಎಷ್ಟರವರೆಗೆ ಪರಿಹಾಸ್ಯ ಮಾಡುವರು? [QBR2] ಇನ್ನೆಷ್ಟರವರೆಗೆ ಪರಿಹಾಸ್ಯ ಮಾಡುವರು? [QBR]
ಕೀರ್ತನೆಗಳು 94 : 4 (ERVKN)
ಆ ಅಪರಾಧಿಗಳು ತಮ್ಮ ದುಷ್ಕೃತ್ಯಗಳ ಬಗ್ಗೆ [QBR2] ಇನ್ನೆಷ್ಟರವರೆಗೆ ಜಂಬ ಕೊಚ್ಚಿಕೊಳ್ಳುವರು? [QBR]
ಕೀರ್ತನೆಗಳು 94 : 5 (ERVKN)
ಯೆಹೋವನೇ, ಅವರು ನಿನ್ನ ಜನರಿಗೆ ಕೇಡುಮಾಡಿದ್ದಾರೆ. [QBR2] ಅವರು ನಿನ್ನ ಜನರನ್ನು ಹಿಂಸೆಪಡಿಸಿದ್ದಾರೆ. [QBR]
ಕೀರ್ತನೆಗಳು 94 : 6 (ERVKN)
ನಮ್ಮ ದೇಶದಲ್ಲಿ ವಾಸವಾಗಿರುವ ವಿಧವೆಯರನ್ನೂ ವಿದೇಶಿಯರನ್ನೂ ಆ ದುಷ್ಟರು ಕೊಲ್ಲುತ್ತಾರೆ. [QBR2] ಅವರು ಅನಾಥ ಮಕ್ಕಳನ್ನೂ ಕೊಲೆ ಮಾಡುವರು. [QBR]
ಕೀರ್ತನೆಗಳು 94 : 7 (ERVKN)
ಆ ದುಷ್ಕೃತ್ಯಗಳು ಯೆಹೋವನಿಗೆ ಕಾಣದೆಂದು ಅವರು ಹೇಳಿಕೊಳ್ಳುತ್ತಾರೆ. [QBR2] ಅವುಗಳು ಇಸ್ರೇಲಿನ ದೇವರಿಗೆ ತಿಳಿಯದೆಂದು ಅವರು ಹೇಳುತ್ತಾರೆ.
ಕೀರ್ತನೆಗಳು 94 : 8 (ERVKN)
ದುಷ್ಟರೇ, ನೀವು ಮೂಢರಾಗಿದ್ದೀರಿ! [QBR2] ನೀವು ಪಾಠವನ್ನು ಕಲಿತುಕೊಳ್ಳುವುದು ಯಾವಾಗ? [QBR] ದುಷ್ಟರೇ, ನೀವು ಬಹು ದಡ್ಡರಾಗಿದ್ದೀರಿ! [QBR2] ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು. [QBR]
ಕೀರ್ತನೆಗಳು 94 : 9 (ERVKN)
ಕಿವಿಗಳನ್ನು ಸೃಷ್ಟಿಸಿದಾತನಿಗೆ, ಕೇಳುವುದಿಲ್ಲವೇ? [QBR2] ಕಣ್ಣುಗಳನ್ನು ಸೃಷ್ಟಿಸಿದಾತನಿಗೆ ಕಾಣುವುದಿಲ್ಲವೇ? [QBR]
ಕೀರ್ತನೆಗಳು 94 : 10 (ERVKN)
ಜನಾಂಗಗಳನ್ನು ಶಿಕ್ಷಿಸುವಾತನು ದೇವರೇ. [QBR2] ಜನರಿಗೆ ಉಪದೇಶಿಸುವವನೂ ಆತನೇ. [QBR]
ಕೀರ್ತನೆಗಳು 94 : 11 (ERVKN)
ಮನುಷ್ಯರ ಆಲೋಚನೆಗಳೆಲ್ಲಾ ಆತನಿಗೆ ತಿಳಿದಿದೆ. [QBR2] ಮನುಷ್ಯರು ಕೇವಲ ಉಸಿರೆಂಬುದು ಆತನಿಗೆ ತಿಳಿದಿದೆ.
ಕೀರ್ತನೆಗಳು 94 : 12 (ERVKN)
ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. [QBR2] ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು. [QBR]
ಕೀರ್ತನೆಗಳು 94 : 13 (ERVKN)
ಆಪತ್ತಿನಲ್ಲಿಯೂ ಸಮಾಧಾನದಿಂದಿರಲು ನೀನು ಅವನಿಗೆ ಸಹಾಯಮಾಡುವೆ. [QBR2] ದುಷ್ಟರು ಸಮಾಧಿಗಳಿಗೆ ಸೇರುವವರೆಗೆ ಸಮಾಧಾನದಿಂದಿರಲು ನೀನು ಅವನಿಗೆ ನೆರವು ನೀಡುವೆ. [QBR]
ಕೀರ್ತನೆಗಳು 94 : 14 (ERVKN)
ಯೆಹೋವನು ತನ್ನ ಜನರನ್ನು ತೊರೆದುಬಿಡುವುದಿಲ್ಲ. [QBR2] ಆತನು ತನ್ನ ಜನರನ್ನು ನಿಸ್ಸಹಾಯಕರನ್ನಾಗಿ ಮಾಡುವುದಿಲ್ಲ. [QBR]
ಕೀರ್ತನೆಗಳು 94 : 15 (ERVKN)
ನ್ಯಾಯವು ನೀತಿಯೊಂದಿಗೆ ಮರಳಿ ಬರುವುದು. [QBR2] ಆಗ ಜನರು ಒಳ್ಳೆಯವರೂ ಯಥಾರ್ಥವಂತರೂ ಆಗುವರು.
ಕೀರ್ತನೆಗಳು 94 : 16 (ERVKN)
ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ. [QBR2] ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ. [QBR]
ಕೀರ್ತನೆಗಳು 94 : 17 (ERVKN)
ಯೆಹೋವನು ನನಗೆ ಸಹಾಯಮಾಡಿಲ್ಲದಿದ್ದರೆ, [QBR2] ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು. [QBR]
ಕೀರ್ತನೆಗಳು 94 : 18 (ERVKN)
ಯೆಹೋವನೇ, ಜಾರಿಹೋಗುತ್ತಿರುವೆ ಎಂದು ಮೊರೆಯಿಟ್ಟಾಗ [QBR2] ಆತನು ನನಗೆ ಆಧಾರ ನೀಡಿದನು. [QBR]
ಕೀರ್ತನೆಗಳು 94 : 19 (ERVKN)
ನಾನು ಚಿಂತೆಗಳಿಂದ ಗಲಿಬಿಲಿಗೊಂಡಿದ್ದಾಗ [QBR2] ನೀನು ನನ್ನನ್ನು ಸಂತೈಸಿ ಸಂತೋಷಪಡಿಸಿದೆ.
ಕೀರ್ತನೆಗಳು 94 : 20 (ERVKN)
ದೇವರೇ, ಮೋಸಗಾರರಾದ ನ್ಯಾಯಾಧೀಶರಿಗೆ ಸಹಾಯಮಾಡಬೇಡ. [QBR2] ಅವರು ಕಾನೂನನ್ನು ಡೊಂಕು ಮಾಡಿ ಜನರನ್ನು ಹಿಂಸಿಸುವರು. [QBR]
ಕೀರ್ತನೆಗಳು 94 : 21 (ERVKN)
ಅವರು ನೀತಿವಂತರಿಗೆ ಎದುರಾಗಿ [QBR2] ನಿರಪರಾಧಿಗಳಿಗೆ ಮರಣದಂಡನೆ ವಿಧಿಸುವರು. [QBR]
ಕೀರ್ತನೆಗಳು 94 : 22 (ERVKN)
ನನಗಾದರೋ ಯೆಹೋವನು ಪರ್ವತದ ಮೇಲಿರುವ ಆಶ್ರಯಸ್ಥಾನವಾಗಿದ್ದಾನೆ. [QBR2] ನನ್ನ ಬಂಡೆಯಾಗಿರುವ ದೇವರು ನನಗೆ ಆಶ್ರಯಗಿರಿಯಾಗಿದ್ದಾನೆ! [QBR]
ಕೀರ್ತನೆಗಳು 94 : 23 (ERVKN)
ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು. [QBR2] ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. [QBR2] ನಮ್ಮ ದೇವರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶಮಾಡುವನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23

BG:

Opacity:

Color:


Size:


Font: