ಕೀರ್ತನೆಗಳು 99 : 1 (ERVKN)
ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ.
ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.
ಕೀರ್ತನೆಗಳು 99 : 2 (ERVKN)
ಚೀಯೋನಿನ ಯೆಹೋವನು ದೊಡ್ಡವನು! ಆತನು ಜನಾಂಗಗಳಿಗೆಲ್ಲಾ ಮಹಾನಾಯಕನಾಗಿದ್ದಾನೆ.
ಕೀರ್ತನೆಗಳು 99 : 3 (ERVKN)
ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ. ಆತನೇ ಪರಿಶುದ್ಧನು.
ಕೀರ್ತನೆಗಳು 99 : 4 (ERVKN)
ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.
ಕೀರ್ತನೆಗಳು 99 : 5 (ERVKN)
ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ, ಆತನ ಪವಿತ್ರ ಪಾದಪೀಠಕ್ಕೆ *ಪಾದಪೀಠ ಬಹುಶಃ, ಇದು ದೇವಾಲಯವನ್ನು ಸೂಚಿಸುತ್ತದೆ. ಅಡ್ಡಬೀಳಿರಿ.
ಕೀರ್ತನೆಗಳು 99 : 6 (ERVKN)
ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು.
ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.
ಕೀರ್ತನೆಗಳು 99 : 7 (ERVKN)
ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. ಅವರು ಆಜ್ಞೆಗಳಿಗೆ ವಿಧೇಯರಾದರು. ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.
ಕೀರ್ತನೆಗಳು 99 : 8 (ERVKN)
ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. ನೀನು ಕ್ಷಮಿಸುವ ದೇವರೆಂದೂ ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ.
ಕೀರ್ತನೆಗಳು 99 : 9 (ERVKN)
ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನ ಪವಿತ್ರ ಪರ್ವತದ ಕಡೆಗೆ ಅಡ್ಡಬಿದ್ದು ಆತನನ್ನು ಆರಾಧಿಸಿರಿ. ನಮ್ಮ ದೇವರಾದ ಯೆಹೋವನೇ ಪರಿಶುದ್ಧನು!
❮
❯