ಪ್ರಕಟನೆ 1 : 1 (ERVKN)
ಪೀಠಿಕೆ ಇದು ಯೇಸು ಕ್ರಿಸ್ತನ ಪ್ರಕಟನೆ. ದೇವರು ಬೇಗನೆ ಸಂಭವಿಸಲಿರುವುದನ್ನು ತನ್ನ ಸೇವಕರಿಗೆ ತೋರ್ಪಡಿಸುವುದಕ್ಕಾಗಿ ಯೇಸುವಿಗೆ ಇವುಗಳನ್ನು ಪ್ರಕಟಿಸಿದನು. ಕ್ರಿಸ್ತನು ತನ್ನ ಸೇವಕನಾದ ಯೋಹಾನನಿಗೆ ಇವುಗಳನ್ನು ತೋರಿಸಲು ತನ್ನ ದೂತನನ್ನು ಕಳುಹಿಸಿದನು.
ಪ್ರಕಟನೆ 1 : 2 (ERVKN)
ಯೋಹಾನನು ತಾನು ಕಂಡದ್ದೆಲ್ಲವನ್ನು ತಿಳಿಸಿದನು. ಇದು ಯೇಸು ಕ್ರಿಸ್ತನು ಅವನಿಗೆ ಹೇಳಿದ ಸತ್ಯ. ಇದು ದೇವರಿಂದ ಬಂದ ಸಂದೇಶ.
ಪ್ರಕಟನೆ 1 : 3 (ERVKN)
ದೇವರಿಂದ ಬಂದ ಈ ಸಂದೇಶದ ವಾಕ್ಯಗಳನ್ನು ಓದುವವರೂ ಈ ಸಂದೇಶವನ್ನು ಕೇಳಿ ಅದನ್ನು ಕೈಕೊಂಡು ನಡೆಯುವವರೂ ಭಾಗ್ಯವಂತರಾಗಿದ್ದಾರೆ. ಏಕೆಂದರೆ ನೆರವೇರುವ ಕಾಲವು ಸಮೀಪವಾಗಿದೆ.
ಪ್ರಕಟನೆ 1 : 4 (ERVKN)
ಯೋಹಾನನು ಸಭೆಗಳಿಗೆ ಬರೆದ ಯೇಸುವಿನ ಸಂದೇಶ ಏಷ್ಯಾ *ಏಷ್ಯಾ ಏಷ್ಯಾ ಮೈನರಿನ ಪಶ್ಚಿಮ ಪ್ರಾಂತ್ಯ. (ಇಂದಿನ ಟರ್ಕಿ.) ಪ್ರದೇಶದಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನೆಂದರೆ: ವರ್ತಮಾನ, ಭೂತ, ಭವಿಷ್ಯತ್ಕಾಲಗಳಲ್ಲಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು
ಪ್ರಕಟನೆ 1 : 5 (ERVKN)
ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;
ಪ್ರಕಟನೆ 1 : 6 (ERVKN)
ನಮ್ಮನ್ನು ಒಂದು ರಾಜ್ಯವನ್ನಾಗಿ ಮಾಡಿ ನಮ್ಮನ್ನು ತನ್ನ ತಂದೆಯಾದ ದೇವರ ಸೇವೆ ಮಾಡುವ ಯಾಜಕರನ್ನಾಗಿ ಮಾಡಿದನು. ಯೇಸುವಿಗೆ ಎಂದೆಂದಿಗೂ ಮಹಿಮೆ ಪ್ರಭಾವಗಳಿರಲಿ! ಆಮೆನ್.
ಪ್ರಕಟನೆ 1 : 7 (ERVKN)
ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು †ಆತನನ್ನು ಇರಿದವರು ನೋಡಿರಿ: ಯೋಹಾನ 19:34. ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.
ಪ್ರಕಟನೆ 1 : 8 (ERVKN)
ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ‡ಆದಿಯೂ ಅಂತ್ಯವೂ ಇದು ಗ್ರೀಕ್ ಅಕ್ಷರಮಾಲೆಯ ಪ್ರಥಮ ಮತ್ತು ಕೊನೆಯ ಅಕ್ಷರವಾಗಿದೆ. ಈ ವಿಧದಲ್ಲಿ ದೇವರು ಪ್ರಾರಂಭಿಕನೂ ಮತ್ತು ಮುಕ್ತಾಯಗಾರನೂ ಆಗಿದ್ದಾನೆ. ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”
ಪ್ರಕಟನೆ 1 : 9 (ERVKN)
ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.
ಪ್ರಕಟನೆ 1 : 10 (ERVKN)
ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.
ಪ್ರಕಟನೆ 1 : 11 (ERVKN)
ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.
ಪ್ರಕಟನೆ 1 : 12 (ERVKN)
ನನ್ನ ಜೊತೆಯಲ್ಲಿ ಯಾರು ಮಾತನಾಡುತ್ತಿದ್ದಾರೆಂದು ನೋಡಲು ನಾನು ಹಿಂದಕ್ಕೆ ತಿರುಗಿದಾಗ, ಏಳು ಬಂಗಾರದ ದೀಪಸ್ತಂಭಗಳನ್ನು ಕಂಡೆನು.
ಪ್ರಕಟನೆ 1 : 13 (ERVKN)
ಆ ದೀಪಸ್ತಂಭಗಳ ಮಧ್ಯದಲ್ಲಿ “ಮನುಷ್ಯಕುಮಾರ”ನಂತೆ §ಮನುಷ್ಯಕುಮಾರ ಇದು ಯೇಸುವಿನ ಹೆಸರು. ನೋಡಿರಿ: ದಾನಿಯೇಲನು 7:13. ಇರುವಾತನನ್ನು ನಾನು ನೋಡಿದೆನು. ಆತನು ಉದ್ದನೆಯ ನಿಲುವಂಗಿಯನ್ನು ಧರಿಸಿದ್ದನು; ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
ಪ್ರಕಟನೆ 1 : 14 (ERVKN)
ಆತನ ತಲೆಕೂದಲು ಮಂಜಿನಂತೆಯೂ ಉಣ್ಣೆಯಂತೆಯೂ ಬೆಳ್ಳಗಿದ್ದವು; ಕಣ್ಣುಗಳು ಬೆಂಕಿಯ ಜ್ವಾಲೆಯಂತಿದ್ದವು;
ಪ್ರಕಟನೆ 1 : 15 (ERVKN)
ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತಿದ್ದವು; ಧ್ವನಿಯು ಹರಿಯುವ ನೀರಿನ ಘೋಷದಂತಿತ್ತು.
ಪ್ರಕಟನೆ 1 : 16 (ERVKN)
ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.
ಪ್ರಕಟನೆ 1 : 17 (ERVKN)
ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.
ಪ್ರಕಟನೆ 1 : 18 (ERVKN)
ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.
ಪ್ರಕಟನೆ 1 : 19 (ERVKN)
ಆದ್ದರಿಂದ ನೀನು ನೋಡಿದ ಸಂಗತಿಗಳನ್ನು ಬರೆ. ಈಗ ಸಂಭವಿಸುವ ಸಂಗತಿಗಳನ್ನು ಮತ್ತು ಮುಂದೆ ಸಂಭವಿಸಬೇಕಾದ ಸಂಗತಿಗಳನ್ನು ಬರೆ.
ಪ್ರಕಟನೆ 1 : 20 (ERVKN)
ನನ್ನ ಬಲಗೈಯಲ್ಲಿ ನೀನು ನೋಡಿದ ಏಳು ನಕ್ಷತ್ರಗಳ ಮತ್ತು ನೀನು ಕಂಡ ಏಳು ಬಂಗಾರದ ದೀಪಸ್ತಂಭಗಳ ಗೂಢಾರ್ಥವು ಹೀಗಿದೆ: ಏಳು ನಕ್ಷತ್ರಗಳೆಂದರೆ ಏಳು ಸಭೆಗಳ ದೂತರು. ಏಳು ದೀಪಸ್ತಂಭಗಳೆಂದರೆ ಏಳು ಸಭೆಗಳು.” ಎಂದು ಹೇಳಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20