ಪ್ರಕಟನೆ 10 : 1 (ERVKN)
ದೇವದೂತನು ಮತ್ತು ಚಿಕ್ಕ ಸುರುಳಿ ನಂತರ ಮತ್ತೊಬ್ಬ ಬಲಿಷ್ಠನಾದ ದೇವದೂತನೊಬ್ಬನು ಪರಲೋಕದಿಂದ ಇಳಿದುಬರುವುದನ್ನು ನಾನು ನೋಡಿದೆನು. ಆ ದೇವದೂತನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಸುತ್ತಲೂ ಕಾಮನಬಿಲ್ಲಿತ್ತು. ಆ ದೇವದೂತನ ಮುಖವು ಸೂರ್ಯನಂತೆಯೂ ಅವನ ಕಾಲುಗಳು ಬೆಂಕಿಯ ಕಂಬಗಳಂತೆಯೂ ಇದ್ದವು.
ಪ್ರಕಟನೆ 10 : 2 (ERVKN)
ಆ ದೇವದೂತನು ಒಂದು ಚಿಕ್ಕ ಸುರುಳಿಯನ್ನು ಹಿಡಿದಿದ್ದನು. ಅವನ ಕೈಯಲ್ಲಿದ್ದ ಸುರುಳಿಯು ಬಿಚ್ಚಿತ್ತು. ಅವನು ತನ್ನ ಬಲಪಾದವನ್ನು ಸಮುದ್ರದ ಮೇಲೆಯೂ, ತನ್ನ ಎಡಪಾದವನ್ನು ಭೂಮಿಯ ಮೇಲೆಯೂ ಇಟ್ಟು,
ಪ್ರಕಟನೆ 10 : 3 (ERVKN)
ಸಿಂಹ ಗರ್ಜಿಸುವಂತೆ ಗಟ್ಟಿಯಾಗಿ ಆರ್ಭಟಿಸಿದನು. ಆ ಬಳಿಕ ಏಳು ಗುಡುಗುಗಳ ಧ್ವನಿಯು ಮಾತನಾಡಿತು.
ಪ್ರಕಟನೆ 10 : 4 (ERVKN)
ಅದನ್ನು ನಾನು ಬರೆಯಬೇಕೆಂದಿದ್ದಾಗ ಪರಲೋಕದಿಂದ ಬಂದ ಒಂದು ಧ್ವನಿಯು ನನಗೆ, “ಏಳು ಗುಡುಗುಗಳು ಹೇಳಿದ್ದನ್ನು ನೀನು ಬರೆಯಬೇಡ. ಅವುಗಳನ್ನು ರಹಸ್ಯವಾಗಿಟ್ಟಿರು” ಎಂದು ಹೇಳಿತು.
ಪ್ರಕಟನೆ 10 : 5 (ERVKN)
ಅನಂತರ ಭೂಮಿಯ ಮೇಲೆ ಮತ್ತು ಸಮುದ್ರದ ಮೇಲೆ ನಿಂತಿದ್ದ ಒಬ್ಬ ದೇವದೂತನನ್ನು ಕಂಡೆನು. ಅವನು ತನ್ನ ಬಲಗೈಯನ್ನು ಪರಲೋಕದತ್ತ ಚಾಚಿದನು.
ಪ್ರಕಟನೆ 10 : 6 (ERVKN)
ಆ ದೇವದೂತನು ಯುಗ ಯುಗಾಂತರಗಳಲ್ಲಿಯೂ ನೆಲೆಸಿರುವಾತನ ಮತ್ತು ಆಕಾಶವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಭೂಮಿಯನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಸಮುದ್ರವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು ಸೃಷ್ಟಿಸ್ಟಿದಾತನ ಶಕ್ತಿಯಿಂದ ಹೀಗೆ ವಾಗ್ದಾನವನ್ನು ಮಾಡಿದನು: “ಇನ್ನು ಕಾಯುವ ಅಗತ್ಯವಿಲ್ಲ;
ಪ್ರಕಟನೆ 10 : 7 (ERVKN)
ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಲು ಸಿದ್ಧನಾಗುವ ದಿನಗಳಲ್ಲಿ ದೇವರ ರಹಸ್ಯವಾದ ಯೋಜನೆಯು ನೆರವೇರುವುದು. ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿದ ಸುವಾರ್ತೆಯೇ ಈ ಯೋಜನೆ.”
ಪ್ರಕಟನೆ 10 : 8 (ERVKN)
ಬಳಿಕ ಪರಲೋಕದಿಂದ ಮತ್ತೆ ಅದೇ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು ನನಗೆ, “ಹೋಗು, ದೇವದೂತನ ಕೈಯಲ್ಲಿರುವ ಬಿಚ್ಚಿದ ಸುರುಳಿಯನ್ನು ತೆಗೆದುಕೊ. ಆ ದೇವದೂತನು ಸಮುದ್ರದ ಮೇಲೆ ಮತ್ತು ಭೂಮಿಯ ಮೇಲೆ ನಿಂತಿದ್ದಾನೆ” ಎಂದು ಹೇಳಿತು.
ಪ್ರಕಟನೆ 10 : 9 (ERVKN)
ಆದ್ದರಿಂದ ನಾನು ಆ ದೇವದೂತನ ಬಳಿಗೆ ಹೋಗಿ, ಆ ಚಿಕ್ಕ ಸುರುಳಿಯನ್ನು ಕೊಡುವಂತೆ ಕೇಳಿದೆನು. ಆ ದೇವದೂತನು ನನಗೆ, “ಸುರುಳಿಯನ್ನು ತೆಗೆದುಕೊಂಡು ಅದನ್ನು ತಿಂದುಬಿಡು. ಅದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿರುವುದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು.
ಪ್ರಕಟನೆ 10 : 10 (ERVKN)
ಆ ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ನಾನು ತೆಗೆದುಕೊಂಡು ತಿಂದೆನು. ನನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಬಳಿಕ, ಅದು ನನ್ನ ಹೊಟ್ಟೆಯಲ್ಲಿ ಕಹಿಯಾಯಿತು.
ಪ್ರಕಟನೆ 10 : 11 (ERVKN)
ಆಗ ಅವನು ನನಗೆ, “ನೀನು ಮತ್ತೆ ಅನೇಕ ಜನಾಂಗಗಳ, ಪ್ರಜೆಗಳ, ಭಾಷೆಗಳ ಮತ್ತು ರಾಜರುಗಳ ವಿಷಯದಲ್ಲಿ ಪ್ರವಾದನೆ ಮಾಡಬೇಕು” ಎಂದು ತಿಳಿಸಿದನು.
❮
❯
1
2
3
4
5
6
7
8
9
10
11