ಪ್ರಕಟನೆ 11 : 1 (ERVKN)
ಇಬ್ಬರು ಸಾಕ್ಷಿಗಳು ತರುವಾಯ ದಂಡದಂತಿರುವ ಒಂದು ಅಳತೆಯ ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು: “ಹೋಗು, ದೇವರ ಆಲಯವನ್ನೂ ಯಜ್ಞವೇದಿಕೆಯನ್ನೂ ಅಳತೆಮಾಡು; ಮತ್ತು ಅಲ್ಲಿ ಆರಾಧಿಸುವ ಜನರನ್ನು ಲೆಕ್ಕಹಾಕು.
ಪ್ರಕಟನೆ 11 : 2 (ERVKN)
ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು.
ಪ್ರಕಟನೆ 11 : 3 (ERVKN)
ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”
ಪ್ರಕಟನೆ 11 : 4 (ERVKN)
ಭೂಲೋಕದ ಪ್ರಭುವಿನ ಸನ್ನಿಧಿಯಲ್ಲಿ ನಿಂತಿರುವ ಎರಡು ಆಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳೇ ಈ ಇಬ್ಬರು ಸಾಕ್ಷಿಗಳು.
ಪ್ರಕಟನೆ 11 : 5 (ERVKN)
ಈ ಸಾಕ್ಷಿಗಳಿಗೆ ಯಾರಾದರೂ ಕೇಡು ಮಾಡಲು ಪ್ರಯತ್ನಿಸಿದರೆ, ಸಾಕ್ಷಿಗಳ ಬಾಯಿಂದ ಬೆಂಕಿಯು ಹೊರಬಂದು ಅವರ ಶತ್ರುವನ್ನು ಅಂದರೆ ಅವರಿಗೆ ತೊಂದರೆ ಮಾಡಲು ಪ್ರಯತ್ನಿಸಿದ್ದವರನ್ನೆಲ್ಲ ಸಾಯಿಸುತ್ತದೆ.
ಪ್ರಕಟನೆ 11 : 6 (ERVKN)
ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.
ಪ್ರಕಟನೆ 11 : 7 (ERVKN)
ಈ ಇಬ್ಬರು ಸಾಕ್ಷಿಗಳು ತಮ್ಮ ಸಂದೇಶವನ್ನು ಹೇಳಿ ಮುಗಿಸಿದ ನಂತರ, ತಳವಿಲ್ಲದ ಕೂಪದಿಂದ ಮೇಲಕ್ಕೆ ಬರುವ ಮೃಗವು ಅವರ ವಿರುದ್ಧ ಹೋರಾಟ ಮಾಡುತ್ತದೆ. ಈ ಮೃಗವು ಅವರನ್ನು ಸೋಲಿಸಿ, ಕೊಂದು ಹಾಕುತ್ತದೆ.
ಪ್ರಕಟನೆ 11 : 8 (ERVKN)
ಈ ಸಾಕ್ಷಿಗಳ ಎರಡು ಶವಗಳು ಮಹಾನಗರದ ಬೀದಿಯಲ್ಲಿ ಬಿದ್ದಿರುತ್ತವೆ. ಈ ನಗರಕ್ಕೆ ಸೊದೋಮ್ *ಸೊದೋಮ್ ಕೆಟ್ಟ ಜನರು ವಾಸಮಾಡಿದ ಸ್ಥಳ. ದೇವರು ಅವರ ನಗರವನ್ನು ನಾಶಪಡಿಸುವುದರ ಮೂಲಕ ಅವರನ್ನು ದಂಡಿಸಿದನು. ಮತ್ತು ಈಜಿಪ್ಟ್ ಎಂದು ಹೆಸರಾಗುತ್ತದೆ. ಆ ನಗರದ ಹೆಸರುಗಳಿಗೆ ವಿಶೇಷ ಅರ್ಥವಿದೆ. ಪ್ರಭುವು ಈ ನಗರದಲ್ಲಿಯೇ ಶಿಲುಬೆಗೇರಿಸಲ್ಪಟ್ಟನು.
ಪ್ರಕಟನೆ 11 : 9 (ERVKN)
ಸಕಲ ಪ್ರಜೆ, ಕುಲ, ಭಾಷೆ, ಜನಾಂಗದವರು ಮೂರುವರೆ ದಿನಗಳ ಕಾಲ ಈ ಸಾಕ್ಷಿಗಳ ಶವಗಳನ್ನು ನೋಡುತ್ತಾ ಇರುತ್ತಾರೆ. ಅವರನ್ನು ಸಮಾಧಿ ಮಾಡಲು ಜನರು ಒಪ್ಪುವುದಿಲ್ಲ.
ಪ್ರಕಟನೆ 11 : 10 (ERVKN)
ಈ ಇಬ್ಬರು ಸತ್ತದ್ದಕ್ಕಾಗಿ ಭೂಮಿಯ ಮೇಲಿನ ಜನರು ಸಂತೋಷಗೊಳ್ಳುವರು. ಅವರು ಸಮಾರಂಭಗಳನ್ನು ನಡೆಸಿ, ಒಬ್ಬರಿಗೊಬ್ಬರು ಉಡುಗೊರೆಗಳನ್ನು ನೀಡುತ್ತಾರೆ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸಿಸುತ್ತಿರುವ ಜನರಿಗೆ ಹೆಚ್ಚು ಸಂಕಟವನ್ನು ಉಂಟುಮಾಡಿದ್ದರಿಂದ ಆ ಜನರು ಹೀಗೆ ಮಾಡುತ್ತಾರೆ.
ಪ್ರಕಟನೆ 11 : 11 (ERVKN)
ಆದರೆ ಮೂರುವರೆ ದಿನಗಳ ನಂತರ ದೇವರು ಆ ಇಬ್ಬರು ಪ್ರವಾದಿಗಳೊಳಗೆ ಮತ್ತೆ ಜೀವ ಪ್ರವೇಶಿಸುವಂತೆ ಮಾಡಿದನು. ಆಗ ಅವರು ತಮ್ಮ ಕಾಲೂರಿ ನಿಂತುಕೊಂಡರು. ಅವರನ್ನು ನೋಡಿದ ಜನರೆಲ್ಲರೂ ಭಯಗ್ರಸ್ತರಾದರು.
ಪ್ರಕಟನೆ 11 : 12 (ERVKN)
ಅನಂತರ “ಮೇಲೇರಿ ಬನ್ನಿ!” ಎಂದು ಪರಲೋಕದಿಂದ ಮಹಾವಾಣಿಯು ಆ ಪ್ರವಾದಿಗಳಿಗೆ ತಿಳಿಸಿತು. ಆಗ ಆ ಇಬ್ಬರು ಪ್ರವಾದಿಗಳು ಮೋಡದೊಂದಿಗೆ ಪರಲೋಕಕ್ಕೆ ಏರಿಹೋದರು. ಅವರು ಹೋಗುವುದನ್ನು ಅವರ ಶತ್ರುಗಳು ನೋಡುತ್ತಾ ಇದ್ದರು.
ಪ್ರಕಟನೆ 11 : 13 (ERVKN)
ಆ ಸಮಯದಲ್ಲಿ ಮಹಾಭೂಕಂಪವಾಯಿತು. ಆ ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಭೂಕಂಪದಲ್ಲಿ ಏಳು ಸಾವಿರ ಜನರು ನಾಶವಾದರು. ಸಾಯದೆ ಉಳಿದಿದ್ದ ಜನರು ಬಹು ಭಯಗೊಂಡು ಪರಲೋಕದ ದೇವರನ್ನು ಘನಪಡಿಸಿದರು.
ಪ್ರಕಟನೆ 11 : 14 (ERVKN)
ಎರಡನೆಯ ಮಹಾವಿಪತ್ತು ಮುಗಿಯಿತು. ಮೂರನೆಯ ಮಹಾವಿಪತ್ತು ಬೇಗನೆ ಬರಲಿದೆ.
ಪ್ರಕಟನೆ 11 : 15 (ERVKN)
ಏಳನೆಯ ತುತೂರಿ ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”
ಪ್ರಕಟನೆ 11 : 16 (ERVKN)
ನಂತರ ಇಪ್ಪತ್ನಾಲ್ಕು ಮಂದಿ ಹಿರಿಯರು ಮೊಣಕಾಲೂರಿ ದೇವರನ್ನು ಆರಾಧಿಸಿದರು. ದೇವರ ಸನ್ನಿಧಿಯಲ್ಲಿ ತಮ್ಮ ಸಿಂಹಾಸನಗಳ ಮೇಲೆ ಕುಳಿತಿರುವ ಹಿರಿಯರೇ ಇವರು.
ಪ್ರಕಟನೆ 11 : 17 (ERVKN)
ಆ ಹಿರಿಯರು ಹೀಗೆ ಹೇಳಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ಭೂತಕಾಲದಲ್ಲಿ ಇದ್ದಾತನೇ, ವರ್ತಮಾನ ಕಾಲದಲ್ಲಿ ಇರುವಾತನೇ, ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
ನೀನು ನಿನ್ನ ಮಹಾ ಅಧಿಕಾರವನ್ನು ಉಪಯೋಗಿಸಿ ನಿನ್ನ ಆಡಳಿತವನ್ನು ಆರಂಭಿಸಿದ್ದರಿಂದ ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
ಪ್ರಕಟನೆ 11 : 18 (ERVKN)
ಲೋಕದ ಜನರು ಕೋಪಗೊಂಡಿದ್ದರು. ಆದರೆ ಇದು ನಿನ್ನ ಕೋಪದ ಸಮಯ.
ಸತ್ತವರಿಗೆ ತೀರ್ಪು ನೀಡುವ ಸಮಯವಿದು. ನಿನ್ನ ಸೇವಕರಾದ ಪ್ರವಾದಿಗಳಿಗೂ
ನಿನ್ನ ಪರಿಶುದ್ಧ ಜನರಿಗೂ ನಿನ್ನನ್ನು ಗೌರವಿಸುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲ ನೀಡುವ ಸಮಯವಿದು.
ಲೋಕನಾಶಕರನ್ನು ನಾಶಪಡಿಸುವ ಸಮಯವಿದು.”
ಪ್ರಕಟನೆ 11 : 19 (ERVKN)
ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.

1 2 3 4 5 6 7 8 9 10 11 12 13 14 15 16 17 18 19