ಪ್ರಕಟನೆ 20 : 1 (ERVKN)
ಒಂದುಸಾವಿರ ವರ್ಷಗಳು ಆಗ ಒಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಆ ದೇವದೂತನು ತಳವಿಲ್ಲದ ಕೂಪದ ಬೀಗದ ಕೈಯನ್ನು ಹೊಂದಿದ್ದನು ಮತ್ತು ಒಂದು ದೊಡ್ಡ ಸರಪಣಿಯನ್ನೂ ತನ್ನ ಕೈಯಲ್ಲಿ ಹಿಡಿದಿದ್ದನು.
ಪ್ರಕಟನೆ 20 : 2 (ERVKN)
ಆ ದೇವದೂತನು ಪುರಾತನ ಘಟಸರ್ಪವನ್ನು ಹಿಡಿದನು. ಆ ಘಟಸರ್ಪವೇ ಸೈತಾನ. ದೇವದೂತನು ಅವನನ್ನು ಸರಪಣಿಗಳಿಂದ ಕಟ್ಟಿ ಒಂದುಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.
ಪ್ರಕಟನೆ 20 : 3 (ERVKN)
ಆ ದೇವದೂತನು ಘಟಸರ್ಪವನ್ನು ತಳವಿಲ್ಲದ ಕೂಪಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿ ಬೀಗಹಾಕಿದನು, ಆ ಘಟಸರ್ಪವು ಒಂದುಸಾವಿರ ವರ್ಷಗಳ ಕಾಲ ಮುಗಿಯುವ ತನಕ ಲೋಕದ ಜನರನ್ನು ಮರುಳು ಮಾಡದಿರಲೆಂದು ಆ ದೇವದೂತನು ಹೀಗೆ ಮಾಡಿದನು. ಒಂದುಸಾವಿರ ವರ್ಷಗಳ ತರುವಾಯ ಆ ಘಟಸರ್ಪಕ್ಕೆ ಸ್ವಲ್ಪಕಾಲ ಬಿಡುಗಡೆ ಮಾಡಲಾಗುವುದು.
ಪ್ರಕಟನೆ 20 : 4 (ERVKN)
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.
ಪ್ರಕಟನೆ 20 : 5 (ERVKN)
(ಸತ್ತುಹೋಗಿದ್ದ ಇತರ ಜನರು ಒಂದುಸಾವಿರ ವರ್ಷಗಳು ಮುಗಿಯುವ ತನಕ ಜೀವಂತರಾಗಲೇ ಇಲ್ಲ.) ಇದೇ ಪ್ರಥಮ ಪುನರುತ್ಥಾನ.
ಪ್ರಕಟನೆ 20 : 6 (ERVKN)
ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಪವಿತ್ರರೂ ಧನ್ಯರೂ ಆಗಿದ್ದಾರೆ. ಈ ಜನರ ಮೇಲೆ ಎರಡನೆ ಮರಣಕ್ಕೆ ಅಧಿಕಾರವಿಲ್ಲ. ಆ ಜನರು ದೇವರಿಗೆ ಮತ್ತು ಕ್ರಿಸ್ತನಿಗೆ ಯಾಜಕರಾಗಿರುತ್ತಾರೆ. ಅವರು ಆತನೊಂದಿಗೆ ಒಂದು ಸಾವಿರ ವರ್ಷ ಆಳುತ್ತಾರೆ.
ಪ್ರಕಟನೆ 20 : 7 (ERVKN)
ಸೈತಾನನಿಗೆ ಸೋಲು ಒಂದುಸಾವಿರ ವರ್ಷಗಳು ಮುಗಿದ ನಂತರ, ಸೈತಾನನನ್ನು ಅವನ ಸೆರೆಯಿಂದ ಬಿಡುಗಡೆ ಮಾಡಲಾಗುತ್ತದೆ.
ಪ್ರಕಟನೆ 20 : 8 (ERVKN)
ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಆ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.
ಪ್ರಕಟನೆ 20 : 9 (ERVKN)
ಸೈತಾನನ ಸೈನ್ಯವು ಭೂಮಿಯಲ್ಲೆಲ್ಲಾ ಶಿಸ್ತಿನಿಂದ ನಡೆದಾಡಿ ದೇವಜನರ ಶಿಬಿರದ ಸುತ್ತಲೂ ದೇವರ ಪ್ರಿಯ ನಗರದ ಸುತ್ತಲೂ ಒಟ್ಟುಗೂಡಿದರು. ಆದರೆ ಪರಲೋಕದಿಂದ ಇಳಿದು ಬಂದ ಬೆಂಕಿಯು ಸೈತಾನನ ಸೈನ್ಯವನ್ನು ನಾಶಗೊಳಿಸಿತು.
ಪ್ರಕಟನೆ 20 : 10 (ERVKN)
ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.
ಪ್ರಕಟನೆ 20 : 11 (ERVKN)
ಲೋಕದ ಜನರಿಗಾಗುವ ತೀರ್ಪು ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.
ಪ್ರಕಟನೆ 20 : 12 (ERVKN)
ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.
ಪ್ರಕಟನೆ 20 : 13 (ERVKN)
ಸಮುದ್ರವು ತನ್ನಲ್ಲಿ ಸತ್ತಿದ್ದ ಜನರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತನ್ನಲ್ಲಿದ್ದ ಸತ್ತ ಜನರನ್ನು ಒಪ್ಪಿಸಿದವು. ಪ್ರತಿಯೊಬ್ಬ ವ್ಯಕ್ತಿಗೂ ಅವನ ಕಾರ್ಯಗಳಿಗನುಸಾರವಾಗಿ ತೀರ್ಪು ನೀಡಲಾಯಿತು.
ಪ್ರಕಟನೆ 20 : 14 (ERVKN)
ಆಮೇಲೆ ಮೃತ್ಯುವನ್ನೂ ಪಾತಾಳವನ್ನೂ ಬೆಂಕಿಯ ಕೆರೆಗೆ ಎಸೆಯಲಾಯಿತು. ಈ ಬೆಂಕಿಯ ಕೆರೆಯು ಎರಡನೆಯ ಮರಣ.
ಪ್ರಕಟನೆ 20 : 15 (ERVKN)
ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ಆ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು.
❮
❯
1
2
3
4
5
6
7
8
9
10
11
12
13
14
15