ಪ್ರಕಟನೆ 22 : 1 (ERVKN)
ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,
ಪ್ರಕಟನೆ 22 : 2 (ERVKN)
ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಆ ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ಆ ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ. [PE][PS]
ಪ್ರಕಟನೆ 22 : 3 (ERVKN)
ದೇವರಿಂದ ಶಾಪ ಹೊಂದಿದ ಯಾವುದೂ ಆ ಪಟ್ಟಣದಲ್ಲಿರುವುದಿಲ್ಲ. ದೇವರ ಮತ್ತು ಕುರಿಮರಿಯಾದಾತನ (ಯೇಸು) ಸಿಂಹಾಸನವು ಆ ನಗರದಲ್ಲಿರುತ್ತದೆ. ದೇವರ ಸೇವಕರು ಆತನನ್ನು ಆರಾಧಿಸುತ್ತಾರೆ.
ಪ್ರಕಟನೆ 22 : 4 (ERVKN)
ಅವರು ಆತನ ಮುಖವನ್ನು ನೋಡುತ್ತಾರೆ. ದೇವರ ಹೆಸರನ್ನು ಅವರ ಹಣೆಗಳ ಮೇಲೆ ಬರೆಯಲಾಗುತ್ತದೆ.
ಪ್ರಕಟನೆ 22 : 5 (ERVKN)
ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ. [PE][PS]
ಪ್ರಕಟನೆ 22 : 6 (ERVKN)
ಆ ದೇವದೂತನು ನನಗೆ, “ಈ ವಾಕ್ಯಗಳು ಸತ್ಯವಾದವುಗಳೂ ನಂಬತಕ್ಕವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳಿಗೆ ಪ್ರಭುವೇ ದೇವರಾಗಿದ್ದಾನೆ. ಬೇಗನೆ ಸಂಭವಿಸಲಿರುವ ಸಂಗತಿಗಳನ್ನು ತನ್ನ ಸೇವಕರಿಗೆ ತೋರಿಸಲು ದೇವರು ತನ್ನ ದೂತನನ್ನು ಕಳುಹಿಸಿದ್ದಾನೆ:
ಪ್ರಕಟನೆ 22 : 7 (ERVKN)
‘ಕೇಳಿರಿ, ನಾನು ಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳಿಗೆ ವಿಧೇಯತೆಯಿಂದಿರುವವನು ಧನ್ಯನಾಗುತ್ತಾನೆ’ ” ಎಂದು ಹೇಳಿದನು. [PE][PS]
ಪ್ರಕಟನೆ 22 : 8 (ERVKN)
ನಾನೇ ಯೋಹಾನನು. ನಾನು ಇವುಗಳನ್ನೆಲ್ಲ ಕೇಳಿದೆನು ಮತ್ತು ನೋಡಿದೆನು. ನಾನು ಇವುಗಳನ್ನು ಕೇಳಿ, ಕಂಡಾಗ, ನನಗೆ ಇವುಗಳನ್ನೆಲ್ಲ ತೋರಿಸಿದ ದೇವದೂತನನ್ನು ಆರಾಧಿಸುವುದಕ್ಕಾಗಿ ಅವನ ಪಾದಗಳಿಗೆ ಅಡ್ಡಬಿದ್ದೆನು.
ಪ್ರಕಟನೆ 22 : 9 (ERVKN)
ಆದರೆ ಆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ನಾನು ನಿನ್ನಂತೆ, ಈ ಪುಸ್ತಕದಲ್ಲಿರುವ ವಾಕ್ಯಗಳಿಗೆ ವಿಧೇಯರಾಗಿರುವ ಎಲ್ಲ ಜನರಂತೆ ಮತ್ತು ನಿನ್ನ ಸಹೋದರರಾದ ಪ್ರವಾದಿಗಳಂತೆ ಒಬ್ಬ ಸೇವಕನು. ನೀನು ದೇವರನ್ನು ಆರಾಧಿಸಬೇಕು!” ಎಂದು ಹೇಳಿದನು. [PE][PS]
ಪ್ರಕಟನೆ 22 : 10 (ERVKN)
ಬಳಿಕ ದೇವದೂತನು ನನಗೆ, “ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ರಹಸ್ಯವಾಗಿಡಬೇಡ. ಇವುಗಳೆಲ್ಲವೂ ಸಂಭವಿಸುವ ಕಾಲ ಸಮೀಪಿಸಿದೆ.
ಪ್ರಕಟನೆ 22 : 11 (ERVKN)
ತಪ್ಪು ಮಾಡುತ್ತಿರುವವನು ತಪ್ಪುಮಾಡುತ್ತಲೇ ಮುಂದುವರಿಯಲು ಬಿಡು. ಅಶುದ್ಧನಾದವನು ಅಶುದ್ಧತೆಯಲ್ಲೇ ಮುಂದುವರಿಯಲು ಬಿಡು. ಯೋಗ್ಯವಾದುದನ್ನು ಮಾಡುವವನು ಯೋಗ್ಯವಾದುದನ್ನೇ ಮಾಡಲಿ. ಪರಿಶುದ್ಧನಾಗಿರುವವನು ಪರಿಶುದ್ಧನಾಗಿಯೇ ಇರಲಿ” ಎಂದು ಹೇಳಿದನು. [PE][PS]
ಪ್ರಕಟನೆ 22 : 12 (ERVKN)
“ಕೇಳು! ನಾನು ಬೇಗನೆ ಬರುತ್ತೇನೆ! ನನ್ನೊಂದಿಗೆ ಪ್ರತಿಫಲವನ್ನು ತರುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದುದಕ್ಕೆ ತಕ್ಕ ಪ್ರತಿಫಲವನ್ನು ಕೊಡುತ್ತೇನೆ.
ಪ್ರಕಟನೆ 22 : 13 (ERVKN)
ನಾನೇ ಆದಿಯೂ ಅಂತ್ಯವೂ ಮೊದಲನೆಯವನೂ ಕಡೆಯವನೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. [PE][PS]
ಪ್ರಕಟನೆ 22 : 14 (ERVKN)
“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.
ಪ್ರಕಟನೆ 22 : 15 (ERVKN)
ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ. [PE][PS]
ಪ್ರಕಟನೆ 22 : 16 (ERVKN)
“ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.” [PE][PS]
ಪ್ರಕಟನೆ 22 : 17 (ERVKN)
ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ. [PE][PS]
ಪ್ರಕಟನೆ 22 : 18 (ERVKN)
ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ಕೇಳಿದ ಪ್ರತಿಯೊಬ್ಬರಿಗೂ ನಾನು ಎಚ್ಚರಿಕೆ ನೀಡುತ್ತೇನೆ: ಈ ವಾಕ್ಯಗಳಿಗೆ ಯಾರಾದರೂ ಏನನ್ನಾದರೂ ಸೇರಿಸಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಅವನಿಗೆ ಕೊಡುತ್ತಾನೆ.
ಪ್ರಕಟನೆ 22 : 19 (ERVKN)
ಈ ಪ್ರವಾದನೆಯ ಪುಸ್ತಕದಿಂದ ಯಾರಾದರೂ ಏನನ್ನಾದರೂ ತೆಗೆದುಹಾಕಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಪವಿತ್ರಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ತೆಗೆದುಹಾಕುತ್ತಾನೆ. [PE][PS]
ಪ್ರಕಟನೆ 22 : 20 (ERVKN)
ಇವುಗಳೆಲ್ಲಾ ನಿಜವೆಂದು ಹೇಳುವಾತನು ಯೇಸುವೇ. ಈಗ ಆತನು, “ಹೌದು, ನಾನು ಬೇಗನೆ ಬರುತ್ತೇನೆ” ಎಂದು ಹೇಳುತ್ತಾನೆ. [PE][PS] ಆಮೆನ್! ಪ್ರಭು ಯೇಸುವೇ, ಬಾ! [PE][PS]
ಪ್ರಕಟನೆ 22 : 21 (ERVKN)
ಪ್ರಭು ಯೇಸುವಿನ ಕೃಪೆಯು ಎಲ್ಲಾ ಜನರೊಂದಿಗಿರಲಿ. [PE]

1 2 3 4 5 6 7 8 9 10 11 12 13 14 15 16 17 18 19 20 21

BG:

Opacity:

Color:


Size:


Font: