ಪ್ರಕಟನೆ 5 : 1 (ERVKN)
ಸಿಂಹಾಸನದ ಮೇಲೆ ಕುಳಿತಿರುವಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ನೋಡಿದೆನು. ಅದರ ಎರಡು ಕಡೆಗಳಲ್ಲಿಯೂ ಬರಹವಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
ಪ್ರಕಟನೆ 5 : 2 (ERVKN)
ಬಲಿಷ್ಠನಾದ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ಈ ಸುರುಳಿಯ ಮುದ್ರೆಗಳನ್ನು ತೆಗೆಯುವುದಕ್ಕೆ ಯೋಗ್ಯನಾದವನು ಯಾರು?” ಎಂದು ಪ್ರಕಟಿಸಿದನು.
ಪ್ರಕಟನೆ 5 : 3 (ERVKN)
ಆದರೆ ಪರಲೋಕದಲ್ಲಾಗಲಿ ಭೂಮಂಡಲದಲ್ಲಾಗಲಿ ಪಾತಾಳದಲ್ಲಾಗಲಿ ಈ ಸುರುಳಿಯನ್ನು ಬಿಚ್ಚಿ ನೋಡುವವರು ಯಾರೂ ಇರಲಿಲ್ಲವಾದ್ದರಿಂದ
ಪ್ರಕಟನೆ 5 : 4 (ERVKN)
ನಾನು ಮತ್ತೆಮತ್ತೆ ಗೋಳಾಡಿದೆನು.
ಪ್ರಕಟನೆ 5 : 5 (ERVKN)
ಆದರೆ ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ಯೂದ ಕುಲದ ಸಿಂಹವಾಗಿರುವಾತನು (ಕ್ರಿಸ್ತ) ಜಯಗಳಿಸಿದನು. ಆತನು ದಾವೀದನ ಸಂತತಿಯವನು. ಆತನು ಸುರುಳಿಯನ್ನು ಮತ್ತು ಅದರ ಏಳು ಮುದ್ರೆಗಳನ್ನು ತೆರೆಯಲು ಸಮರ್ಥನಾಗಿದ್ದಾನೆ” ಎಂದು ಹೇಳಿದನು.
ಪ್ರಕಟನೆ 5 : 6 (ERVKN)
ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಆ ಕುರಿಮರಿಯ ಸುತ್ತಲೂ ಇದ್ದರು. ಆ ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಈ ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು.
ಪ್ರಕಟನೆ 5 : 7 (ERVKN)
ಆ ಕುರಿಮರಿಯು ಬಂದು ಸಿಂಹಾಸನದ ಮೇಲೆ ಕುಳಿತಿರುವಾತನ ಬಲಗೈಯಿಂದ ಸುರುಳಿಯನ್ನು ತೆಗೆದುಕೊಂಡಿತು.
ಪ್ರಕಟನೆ 5 : 8 (ERVKN)
ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.
ಪ್ರಕಟನೆ 5 : 9 (ERVKN)
ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು,
ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.
ಪ್ರಕಟನೆ 5 : 10 (ERVKN)
ಅವರನ್ನು ಒಂದು ರಾಜ್ಯವನ್ನಾಗಿ ಮಾಡಿದೆ; ನಮ್ಮ ದೇವರಿಗೋಸ್ಕರ ಯಾಜಕರನ್ನಾಗಿ ಮಾಡಿದೆ; ಅವರು ಲೋಕದಲ್ಲಿ ಆಳುವರು.”
ಪ್ರಕಟನೆ 5 : 11 (ERVKN)
ನಂತರ ನಾನು ನೋಡಿದಾಗ, ಅನೇಕ ದೇವದೂತರ ಧ್ವನಿಗಳನ್ನು ಕೇಳಿದೆನು. ಈ ದೇವದೂತರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸುತ್ತಲೂ ಇದ್ದರು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನು ಕೋಟಿಯಾಗಿಯೂ ಇತ್ತು.
ಪ್ರಕಟನೆ 5 : 12 (ERVKN)
ಈ ದೇವದೂತರು ಗಟ್ಟಿಯಾದ ಧ್ವನಿಯಿಂದ ಇಂತೆಂದರು: “ವಧಿತನಾದ ಕುರಿಮರಿಯು ಅಧಿಕಾರವನ್ನು, ಸಂಪತ್ತನ್ನು, ಜ್ಞಾನವನ್ನು, ಬಲವನ್ನು, ಗೌರವವನ್ನು, ಪ್ರಭಾವವನ್ನು, ಸ್ತೋತ್ರವನ್ನು ಪಡೆಯಲು ಯೋಗ್ಯನಾಗಿದ್ದಾನೆ!”
ಪ್ರಕಟನೆ 5 : 13 (ERVKN)
ಇದಲ್ಲದೆ ಆಕಾಶದಲ್ಲಿಯೂ ಭೂಮಿಯಲ್ಲಿಯೂ ಭೂಮಿಯ ಕೆಳಭಾಗದಲ್ಲೂ ಸಮುದ್ರದಲ್ಲೂ ಇರುವ ಪ್ರತಿಯೊಂದು ಜೀವಿಗಳು ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಪ್ರಭಾವ, ಅಧಿಕಾರಗಳು ಯುಗಯುಗಾಂತರಗಳಲ್ಲಿಯೂ ಇರಲಿ!”
ಪ್ರಕಟನೆ 5 : 14 (ERVKN)
ಆ ನಾಲ್ಕು ಜೀವಿಗಳು “ಆಮೆನ್!” ಎಂದು ಹೇಳಿದವು. ಹಿರಿಯರು ಮೊಣಕಾಲೂರಿ ಆರಾಧಿಸಿದರು.

1 2 3 4 5 6 7 8 9 10 11 12 13 14