ರೋಮಾಪುರದವರಿಗೆ 1 : 1 (ERVKN)
ಕ್ರಿಸ್ತ ಯೇಸುವಿನ ಸೇವಕನಾದ ಪೌಲನು ಬರೆಯುವ ಪತ್ರ. ದೇವರು ನನ್ನನ್ನು ಅಪೊಸ್ತಲನಾಗುವುದಕ್ಕೆ *ಅಪೊಸ್ತಲ ವಿಶೇಷ ಸೇವೆಗಾಗಿ ಯೇಸುವಿನಿಂದ ಆರಿಸಲ್ಪಟ್ಟವನು. ಕರೆದನು. ದೇವರ ಸುವಾರ್ತೆಯನ್ನು ಎಲ್ಲಾ ಜನರಿಗೆ ತಿಳಿಸುವುದಕ್ಕಾಗಿ ನಾನು ಆರಿಸಲ್ಪಟ್ಟೆನು.
ರೋಮಾಪುರದವರಿಗೆ 1 : 2 (ERVKN)
ದೇವರು ತನ್ನ ಜನರಿಗೆ ಈ ಸುವಾರ್ತೆಯನ್ನು ಕೊಡುವುದಾಗಿ ಬಹುಕಾಲದ ಹಿಂದೆಯೇ ತನ್ನ ಪ್ರವಾದಿಗಳ ಮೂಲಕ ಪವಿತ್ರ ಗ್ರಂಥದಲ್ಲಿ ವಾಗ್ದಾನ ಮಾಡಿದ್ದನು.
ರೋಮಾಪುರದವರಿಗೆ 1 : 3 (ERVKN)
(3-4) ದೇವರ ಮಗನೂ ನಮ್ಮ ಪ್ರಭುವೂ ಆಗಿರುವ ಯೇಸು ಕ್ರಿಸ್ತನ ವಿಷಯವೇ ಆ ಸುವಾರ್ತೆ. ಮನುಷ್ಯತ್ವದ ಮಟ್ಟಿಗೆ ಆತನು ದಾವೀದನ ದಾವೀದ ಇಸ್ರೇಲಿನ ರಾಜ. ಕುಟುಂಬದಲ್ಲಿ ಹುಟ್ಟಿದನು. ಆದರೆ ಯೇಸು ಪರಿಶುದ್ಧ ಆತ್ಮನ ಮೂಲಕ ಮಹಾಶಕ್ತಿಯೊಡನೆ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದು ತಾನೇ ದೇವರ ಮಗನೆಂಬುದನ್ನು ತೋರಿಸಿಕೊಟ್ಟನು.
ರೋಮಾಪುರದವರಿಗೆ 1 : 4 (ERVKN)
ರೋಮಾಪುರದವರಿಗೆ 1 : 5 (ERVKN)
ದೇವರು ಕ್ರಿಸ್ತನ ಮೂಲಕವಾಗಿ ನನಗೆ ಅಪೊಸ್ತಲನೆಂಬ ವಿಶೇಷ ಕೆಲಸವನ್ನು ಕೊಟ್ಟನು. ದೇವರಲ್ಲಿ ನಂಬಿಕೆಯಿಡುವಂತೆಯೂ ದೇವರಿಗೆ ವಿಧೇಯರಾಗುವಂತೆಯೂ ಎಲ್ಲಾ ಜನಾಂಗಗಳ ಜನರನ್ನು ನಡೆಸಬೇಕೆಂದು ದೇವರು ನನಗೆ ಈ ಕೆಲಸವನ್ನು ಕೊಟ್ಟನು. ನಾನು ಈ ಕೆಲಸವನ್ನು ಕ್ರಿಸ್ತನಿಗಾಗಿ ಮಾಡುತ್ತೇನೆ.
ರೋಮಾಪುರದವರಿಗೆ 1 : 6 (ERVKN)
ರೋಮಿನಲ್ಲಿರುವ ನೀವು ಸಹ ಯೇಸು ಕ್ರಿಸ್ತನವರಾಗುವುದಕ್ಕಾಗಿ ಕರೆಯಲ್ಪಟ್ಟಿದ್ದೀರಿ.
ರೋಮಾಪುರದವರಿಗೆ 1 : 7 (ERVKN)
ರೋಮಿನಲ್ಲಿರುವವರೂ ದೇವರ ಪವಿತ್ರ ಜನರಾಗಿರುವುದಕ್ಕಾಗಿ ದೇವರಿಂದಲೇ ಕರೆಯಲ್ಪಟ್ಟವರೂ ಆಗಿರುವ ನಿಮ್ಮೆಲ್ಲರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರಿಗೆ ಪ್ರಿಯರಾದ ಜನರಾಗಿದ್ದೀರಿ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ರೋಮಾಪುರದವರಿಗೆ 1 : 8 (ERVKN)
ಕೃತಜ್ಞತಾ ಪ್ರಾರ್ಥನೆ ಮೊದಲನೆಯದಾಗಿ, ನಾನು ನಿಮ್ಮೆಲ್ಲರ ವಿಷಯದಲ್ಲಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಏಕೆಂದರೆ ನಿಮ್ಮ ನಂಬಿಕೆಯು ಲೋಕದಲೆಲ್ಲಾ ಪ್ರಖ್ಯಾತವಾಗಿದೆ.
ರೋಮಾಪುರದವರಿಗೆ 1 : 9 (ERVKN)
(9-10) ನಾನು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಖಂಡಿತವಾಗಿ ಜ್ಞಾಪಿಸಿಕೊಳ್ಳುತ್ತೇನೆ. ಇದು ಸತ್ಯವೆಂದು ದೇವರಿಗೆ ಗೊತ್ತಿದೆ. ದೇವರ ಮಗನ ವಿಷಯವಾದ ಸುವಾರ್ತೆಯನ್ನು ಜನರಿಗೆ ಸಾರುವುದರ ಮೂಲಕ ನಾನು ದೇವರನ್ನು ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ. ದೇವರ ಚಿತ್ತದಿಂದ, ನಿಮ್ಮ ಬಳಿಗೆ ಬರಲು ಅವಕಾಶವಾಗಬೇಕೆಂದು ಪ್ರಾರ್ಥಿಸುತ್ತೇನೆ.
ರೋಮಾಪುರದವರಿಗೆ 1 : 10 (ERVKN)
ರೋಮಾಪುರದವರಿಗೆ 1 : 11 (ERVKN)
ನಾನು ನಿಮ್ಮನ್ನು ನೋಡಲು, ನಿಮ್ಮನ್ನು ಬಲಗೊಳಿಸಲು, ನಿಮಗೆ ಆತ್ಮಿಕ ಉಡುಗೊರೆಯನ್ನು ಕೊಡಲು ಅತ್ಯಾಸಕ್ತಿ ಉಳ್ಳವನಾಗಿದ್ದೇನೆ.
ರೋಮಾಪುರದವರಿಗೆ 1 : 12 (ERVKN)
ಅಂದರೆ ನಾವು ಹೊಂದಿರುವ ನಂಬಿಕೆಯಿಂದ ನಾವು ಒಬ್ಬರಿಗೊಬ್ಬರು ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆ. ನಿಮ್ಮ ನಂಬಿಕೆ ನನಗೆ ಸಹಾಯ ಮಾಡುತ್ತದೆ ಮತ್ತು ನನ್ನ ನಂಬಿಕೆ ನಿಮಗೆ ಸಹಾಯ ಮಾಡುತ್ತದೆ.
ರೋಮಾಪುರದವರಿಗೆ 1 : 13 (ERVKN)
ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.
ರೋಮಾಪುರದವರಿಗೆ 1 : 14 (ERVKN)
ನಾನು ಎಲ್ಲಾ ಜನರ ಅಂದರೆ ಗ್ರೀಕರ ಮತ್ತು ಗ್ರೀಕರಲ್ಲದವರ, ಹಾಗೂ ಜ್ಞಾನಿಗಳ ಮತ್ತು ಮೂಢರ ಸೇವೆ ಮಾಡಲೇಬೇಕು.
ರೋಮಾಪುರದವರಿಗೆ 1 : 15 (ERVKN)
ಆದಕಾರಣ ರೋಮಿನಲ್ಲಿರುವ ನಿಮಗೆ ಸುವಾರ್ತೆಯನ್ನು ತಿಳಿಸಲು ಬಹಳವಾಗಿ ಆಶಿಸುತ್ತೇನೆ.
ರೋಮಾಪುರದವರಿಗೆ 1 : 16 (ERVKN)
ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.
ರೋಮಾಪುರದವರಿಗೆ 1 : 17 (ERVKN)
ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.” ಉಲ್ಲೇಖನ: ಹಬಕ್ಕೂಕ 2:4.
ರೋಮಾಪುರದವರಿಗೆ 1 : 18 (ERVKN)
ಎಲ್ಲಾ ಜನರು ತಪ್ಪು ಮಾಡಿದ್ದಾರೆ ದೇವರ ಕೋಪವು ಪರಲೋಕದಿಂದ ತೋರಿಬಂದಿದೆ. ಜನರು ದೇವರಿಗೆ ವಿರೋಧವಾಗಿ ಮಾಡುವ ಎಲ್ಲಾ ಕೆಟ್ಟ ಮತ್ತು ದುಷ್ಕೃತ್ಯಗಳ ಬಗ್ಗೆ ದೇವರು ಕೋಪ ಉಳ್ಳವನಾಗಿದ್ದಾನೆ. ಅವರಿಗೆ ಸತ್ಯವು ತಿಳಿದಿದೆ, ಆದರೆ ಅವರು ತಮ್ಮ ದುಷ್ಟಜೀವಿತಗಳಿಂದ ಸತ್ಯವನ್ನು ಅಡಗಿಸುತ್ತಾರೆ.
ರೋಮಾಪುರದವರಿಗೆ 1 : 19 (ERVKN)
ದೇವರು ತನ್ನ ಕೋಪವನ್ನು ತೋರಿಸುತ್ತಾನೆ, ಏಕೆಂದರೆ ದೇವರ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ಅವರಿಗೆ ಸ್ಪಷ್ಟಪಡಿಸಲಾಗಿದೆ. ಹೌದು, ತನ್ನ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ದೇವರು ಜನರಿಗೆ ಸ್ಪಷ್ಟವಾಗಿ ತೋರಿಸಿದ್ದಾನೆ.
ರೋಮಾಪುರದವರಿಗೆ 1 : 20 (ERVKN)
ಜನರು ದೇವರ ನಿತ್ಯಶಕ್ತಿಯನ್ನಾಗಲಿ ಆತನ ದೈವತ್ವಗಳನ್ನಾಗಲಿ ಕಾಣಲಾರರು. ಆದರೆ ಲೋಕದ ಆರಂಭದಿಂದಲೂ ಆ ಸಂಗತಿಗಳು ಜನರಿಗೆ ಸುಲಭವಾಗಿ ಅರ್ಥವಾಗುತ್ತವೆ. ದೇವರು ಮಾಡಿದ ಸೃಷ್ಟಿಗಳಲ್ಲಿ ಆ ಸಂಗತಿಗಳು ಸ್ಪಷ್ಟವಾಗಿವೆ. ಆದ್ದರಿಂದ ಜನರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ನೆವ ಹೇಳಲು ಸಾಧ್ಯವಿಲ್ಲ.
ರೋಮಾಪುರದವರಿಗೆ 1 : 21 (ERVKN)
ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.
ರೋಮಾಪುರದವರಿಗೆ 1 : 22 (ERVKN)
ಜನರು ತಮ್ಮನ್ನು ಜ್ಞಾನಿಗಳೆಂದು ಹೇಳಿಕೊಂಡು ಮೂರ್ಖರಾದರು.
ರೋಮಾಪುರದವರಿಗೆ 1 : 23 (ERVKN)
ಸದಾಕಾಲ ಜೀವಿಸುವ ದೇವರ ಮಹಿಮೆಯನ್ನು ಅವರು ಬಿಟ್ಟುಕೊಟ್ಟು ಮನುಷ್ಯರಂತಿರುವ, ಪಕ್ಷಿಗಳಂತಿರುವ, ಪ್ರಾಣಿಗಳಂತಿರುವ ಮತ್ತು ಹಾವುಗಳಂತಿರುವ ವಿಗ್ರಹಗಳನ್ನು ಮಾಡಿಕೊಂಡು ಅವುಗಳನ್ನು ಆರಾಧಿಸತೊಡಗಿದರು.
ರೋಮಾಪುರದವರಿಗೆ 1 : 24 (ERVKN)
ಪಾಪಗಳಿಂದ ತುಂಬಿಹೋಗಿದ್ದ ಅವರು ದುಷ್ಕೃತ್ಯಗಳನ್ನೇ ಮಾಡಬಯಸಿದರು. ಆದ್ದರಿಂದ ಪಾಪಮಾರ್ಗದಲ್ಲೇ ಹೋಗಲೆಂದು ದೇವರು ಅವರನ್ನು ಬಿಟ್ಟುಬಿಟ್ಟನು. ಅದರಿಂದಾಗಿ ಅವರು ತಮ್ಮತಮ್ಮಲ್ಲೇ ತಮ್ಮ ದೇಹಗಳಿಂದ ಲೈಂಗಿಕ ಪಾಪಗಳನ್ನು ಮಾಡಿದರು.
ರೋಮಾಪುರದವರಿಗೆ 1 : 25 (ERVKN)
ಅವರು ದೇವರ ಸತ್ಯವನ್ನು ತೊರೆದು ಸುಳ್ಳನ್ನು ಹಿಡಿದುಕೊಂಡರು; ಸೃಷ್ಟಿಸಲ್ಪಟ್ಟ ವಸ್ತುಗಳನ್ನು ಆರಾಧಿಸಿದರು; ಅವುಗಳ ಸೇವೆ ಮಾಡಿದರು. ಆದರೆ ಆ ವಸ್ತುಗಳನ್ನು ಸೃಷ್ಟಿಸಿದ ದೇವರನ್ನು ಅವರು ಆರಾಧಿಸಲಿಲ್ಲ; ಆತನ ಸೇವೆ ಮಾಡಲಿಲ್ಲ. ದೇವರಿಗೇ ನಿರಂತರ ಸ್ತುತಿಸ್ತೋತ್ರ ಸಲ್ಲಬೇಕು. ಆಮೆನ್.
ರೋಮಾಪುರದವರಿಗೆ 1 : 26 (ERVKN)
ಅವರು ಆ ರೀತಿ ವರ್ತಿಸಿದ್ದರಿಂದಲೇ, ದೇವರು ಅವರನ್ನು ನಾಚಿಕೆಕರವಾದ ಕಾಮಾಭಿಲಾಷೆಗೆ ಬಿಟ್ಟುಕೊಟ್ಟನು. ಅವರ ಸ್ತ್ರೀಯರು ಪುರಷರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ, ಸಲಿಂಗಕಾಮಿಗಳಾದರು.
ರೋಮಾಪುರದವರಿಗೆ 1 : 27 (ERVKN)
ಅದೇರೀತಿಯಲ್ಲಿ, ಪುರುಷರು ಸ್ತ್ರೀಯರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ ಉದ್ರೇಕಗೊಂಡ ಸಲಿಂಗಕಾಮಿಗಳಾದರು. ಅವರು ತಮ್ಮ ದುರ್ನಡತೆಗೆ ತಕ್ಕ ದಂಡನೆಯನ್ನು ತಮ್ಮ ದೇಹಗಳಿಗೆ ಬರಮಾಡಿಕೊಂಡರು.
ರೋಮಾಪುರದವರಿಗೆ 1 : 28 (ERVKN)
ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.
ರೋಮಾಪುರದವರಿಗೆ 1 : 29 (ERVKN)
ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ;
ರೋಮಾಪುರದವರಿಗೆ 1 : 30 (ERVKN)
ಒಬ್ಬರ ಮೇಲೊಬ್ಬರು ಚಾಡಿ ಹೇಳುತ್ತಾರೆ; ದೇವರನ್ನು ದ್ವೇಷಿಸುತ್ತಾರೆ. ಅವರು ಸೊಕ್ಕಿನವರೂ ಅಹಂಕಾರಿಗಳೂ ಮತ್ತು ತಮ್ಮ ಬಗ್ಗೆ ಬಡಾಯಿಕೊಚ್ಚಿಕೊಳ್ಳುವವರೂ ಆಗಿದ್ದಾರೆ. ಅವರು ಕೇಡಿನ ಮಾರ್ಗಗಳನ್ನು ಹುಡುಕುವವರೂ ತಂದೆತಾಯಿಗಳಿಗೆ ಅವಿಧೇಯರೂ ಮೂರ್ಖರೂ ಆಗಿದ್ದಾರೆ.
ರೋಮಾಪುರದವರಿಗೆ 1 : 31 (ERVKN)
ಅವರು ತಾವು ಕೊಟ್ಟ ಮಾತನ್ನು ನೆರವೇರಿಸದವರೂ ಬೇರೆಯವರಿಗೆ ಮಮತೆಯನ್ನಾಗಲಿ ಕರುಣೆಯನ್ನಾಗಲಿ ತೋರದವರೂ ಆಗಿದ್ದಾರೆ.
ರೋಮಾಪುರದವರಿಗೆ 1 : 32 (ERVKN)
ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32