ರೋಮಾಪುರದವರಿಗೆ 13 : 1 (ERVKN)
ಸರ್ಕಾರದ ಅಧಿಕಾರಿಗಳಿಗೆ ವಿಧೇಯರಾಗಿರಿ ನೀವೆಲ್ಲರೂ ಸರ್ಕಾರದ ಅಧಿಕಾರಿಗಳಿಗೆ ವಿಧೇಯರಾಗಿರಬೇಕು. ಪ್ರತಿಯೊಬ್ಬ ಅಧಿಕಾರಿಗೆ ಅಧಿಕಾರವನ್ನು ಕೊಟ್ಟಿರುವವನು ದೇವರೇ. ಈಗಿರುವ ಎಲ್ಲಾ ಅಧಿಕಾರಿಗಳಿಗೆ ದೇವರೇ ಅಧಿಕಾರವನ್ನು ಕೊಟ್ಟಿದ್ದಾನೆ.
ರೋಮಾಪುರದವರಿಗೆ 13 : 2 (ERVKN)
ಆದ್ದರಿಂದ ಸರ್ಕಾರಕ್ಕೆ ವಿರೋಧವಾಗಿರುವ ವ್ಯಕ್ತಿಯು ನಿಜವಾಗಿಯೂ ದೇವರ ಆಜ್ಞೆಗೇ ವಿರೋಧವಾಗಿದ್ದಾನೆ. ಸರ್ಕಾರಕ್ಕೆ ವಿರೋಧವಾಗಿರುವ ಜನರು ತಮ್ಮ ಮೇಲೆ ತಾವೇ ದಂಡನೆಯನ್ನು ಬರಮಾಡಿಕೊಳ್ಳುತ್ತಾರೆ.
ರೋಮಾಪುರದವರಿಗೆ 13 : 3 (ERVKN)
ಸರಿಯಾದದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುವುದಿಲ್ಲ. ಆದರೆ ಕೆಟ್ಟದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುತ್ತದೆ. ನೀವು ಅಧಿಕಾರಿಗಳಿಗೆ ಭಯಪಡದವರಾಗಿರಬೇಕೆಂದು ಅಪೇಕ್ಷಿಸುತ್ತೀರೋ? ಹಾಗಾದರೆ ನೀವು ಸರಿಯಾದದ್ದನ್ನೇ ಮಾಡಿರಿ. ಆಗ ಅಧಿಕಾರಿಗಳು ನಿಮ್ಮನ್ನು ಹೊಗಳುವರು.
ರೋಮಾಪುರದವರಿಗೆ 13 : 4 (ERVKN)
ಅಧಿಕಾರಿಯು ನಿಮ್ಮ ಒಳ್ಳೆಯದಕ್ಕಾಗಿ ನೇಮಕಗೊಂಡಿರುವ ದೇವರ ಸೇವಕನಾಗಿದ್ದಾನೆ. ಆದರೆ ನೀವು ಕೆಟ್ಟದ್ದನ್ನು ಮಾಡಿದರೆ ಭಯಪಡಲೇಬೇಕು. ನಿಮ್ಮನ್ನು ದಂಡಿಸಲು ಅವನಿಗೆ ಅಧಿಕಾರವಿದೆ. ಅವನು ಆ ಅಧಿಕಾರವನ್ನು ಉಪಯೋಗಿಸುವನು. ಅಧಿಕಾರಿಯು ಕೆಟ್ಟದ್ದನ್ನು ಮಾಡುವ ಜನರನ್ನು ದಂಡಿಸುವುದಕ್ಕಾಗಿ ನೇಮಕಗೊಂಡಿರುವ ದೇವರ ಸೇವಕನಾಗಿದ್ದಾನೆ.
ರೋಮಾಪುರದವರಿಗೆ 13 : 5 (ERVKN)
ಆದ್ದರಿಂದ ನೀವು ಸರ್ಕಾರಕ್ಕೆ ವಿಧೇಯರಾಗಬೇಕು. ನೀವು ದಂಡನೆಗೆ ಗುರಿಯಾಗಬಹುದೆಂಬ ಕಾರಣದಿಂದ ಮಾತ್ರವಲ್ಲದೆ, ನಿಮ್ಮ ಮನಸ್ಸಾಕ್ಷಿಯ ದೆಸೆಯಿಂದಲೂ ನೀವು ಅವರಿಗೆ ವಿಧೇಯರಾಗಬೇಕು.
ರೋಮಾಪುರದವರಿಗೆ 13 : 6 (ERVKN)
ಈ ಕಾರಣದಿಂದಲೇ ನೀವು ತೆರಿಗೆಯನ್ನು ಸಹ ಕೊಡುತ್ತೀರಿ. ಆ ಅಧಿಕಾರಿಗಳು ದೇವರಿಗೋಸ್ಕರ ಕೆಲಸ ಮಾಡುವವರಾಗಿದ್ದಾರೆ; ತಮ್ಮ ಸಮಯವನ್ನೆಲ್ಲಾ ಆಡಳಿತ ಮಾಡಲು ಉಪಯೋಗಿಸುವವರಾಗಿದ್ದಾರೆ.
ರೋಮಾಪುರದವರಿಗೆ 13 : 7 (ERVKN)
ನೀವು ಯಾರ್ಯಾರಿಗೆ ಏನೇನು ಕೊಡಬೇಕೋ ಅದನ್ನೆಲ್ಲಾ ಅವರಿಗೆ ಕೊಡಿರಿ. ಯಾವ ತೆರಿಗೆಯನ್ನಾದರೂ ಕೊಡಬೇಕಿದ್ದರೆ ಅದನ್ನು ಕೊಟ್ಟುಬಿಡಿರಿ. ಯಾರಿಗೆ ಗೌರವ ಕೊಡಬೇಕೋ ಅವರಿಗೆ ಗೌರವ ಕೊಡಿರಿ. ಯಾರಿಗೆ ಮರ್ಯಾದೆ ತೋರಿಸಬೇಕೊ ಅವರಿಗೆ ಮರ್ಯಾದೆಯನ್ನು ತೋರಿಸಿರಿ.
ರೋಮಾಪುರದವರಿಗೆ 13 : 8 (ERVKN)
ಇತರ ಜನರನ್ನು ಪ್ರೀತಿಸಬೇಕೆಂಬ ಒಂದೇ ಆಜ್ಞೆ ಜನರಿಗೆ ಯಾವ ವಿಷಯದಲ್ಲಿಯೂ ಸಾಲಗಾರರಾಗಿರಬೇಡಿ. ಆದರೆ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ವಿಷಯದಲ್ಲಿ ಮಾತ್ರ ಯಾವಾಗಲೂ ಸಾಲಗಾರರಾಗಿದ್ದೀರಿ. ಇತರ ಜನರನ್ನು ಪ್ರೀತಿಸುವ ವ್ಯಕ್ತಿಯು ಇಡೀ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದಾನೆ.
ರೋಮಾಪುರದವರಿಗೆ 13 : 9 (ERVKN)
ಏಕೆಂದರೆ, “ವ್ಯಭಿಚಾರ ಮಾಡಕೂಡದು; ಕೊಲೆ ಮಾಡಕೂಡದು; ಕದಿಯಕೂಡದು; ಇತರರಿಗೆ ಸೇರಿದ ವಸ್ತುಗಳನ್ನು ಅಪೇಕ್ಷಿಸಕೂಡದು” ✡ಉಲ್ಲೇಖನ: ವಿಮೋಚನ. 20:13-15, 17. ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಈ ಆಜ್ಞೆಗಳನ್ನು ಮೊದಲುಗೊಂಡು ಉಳಿದೆಲ್ಲಾ ಆಜ್ಞೆಗಳು, “ನೀನು ನಿನ್ನನ್ನು ಪ್ರೀತಿಸುವಂತೆ ಇತರ ಜನರನ್ನೂ ಪ್ರೀತಿಸು” ✡ಉಲ್ಲೇಖನ: ಯಾಜಕ. 19:18. ಎಂಬ ಒಂದೇ ಆಜ್ಞೆಯಲ್ಲಿ ಅಡಕವಾಗಿದೆ.
ರೋಮಾಪುರದವರಿಗೆ 13 : 10 (ERVKN)
ಪ್ರೀತಿಯು ಬೇರೆಯವರಿಗೆ ಕೇಡುಮಾಡುವುದಿಲ್ಲ. ಆದ್ದರಿಂದ ಪ್ರೀತಿಸುವುದಕ್ಕೂ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗುವುದಕ್ಕೂ ವ್ಯತ್ಯಾಸವೇನೂ ಇಲ್ಲ.
ರೋಮಾಪುರದವರಿಗೆ 13 : 11 (ERVKN)
ನಾವು ಪ್ರಾಮುಖ್ಯವಾದ ಸಮಯದಲ್ಲಿ ಜೀವಿಸುತ್ತಿರುವುದರಿಂದ ಈ ವಿಷಯಗಳನ್ನು ಹೇಳುತ್ತಿದ್ದೇನೆ ಎಂಬುದು ನಿಮಗೆ ಗೊತ್ತೇ ಇದೆ. ಹೌದು, ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಕಾಲ ಇದಾಗಿದೆ. ನಾವು ವಿಶ್ವಾಸಿಗಳಾದ ಕಾಲಕ್ಕಿಂತ ಈಗ ನಮ್ಮ ರಕ್ಷಣೆಯು ಸಮೀಪವಾಗಿದೆ.
ರೋಮಾಪುರದವರಿಗೆ 13 : 12 (ERVKN)
“ರಾತ್ರಿ”ಯು ಬಹುಮಟ್ಟಿಗೆ ಮುಗಿದುಹೋಗಿದೆ. “ಹಗಲು” ಬಹುಮಟ್ಟಿಗೆ ಬಂದಿದೆ. ಆದ್ದರಿಂದ ಕತ್ತಲೆಗೆ ಸೇರಿದ ಕಾರ್ಯಗಳನ್ನು ಇನ್ನು ಮೇಲೆ ಮಾಡದೆ ಬೆಳಕಿಗೆ ಸೇರಿದ ಕಾರ್ಯಗಳನ್ನು ಮಾಡಲು ನಮ್ಮನ್ನು ಸಿದ್ಧಪಡಿಸಿಕೊಳ್ಳಬೇಕು.
ರೋಮಾಪುರದವರಿಗೆ 13 : 13 (ERVKN)
ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚುಪಡಬಾರದು.
ರೋಮಾಪುರದವರಿಗೆ 13 : 14 (ERVKN)
ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.
❮
❯
1
2
3
4
5
6
7
8
9
10
11
12
13
14