ರೋಮಾಪುರದವರಿಗೆ 15 : 1 (ERVKN)
ಆದ್ದರಿಂದ ನಂಬಿಕೆಯಲ್ಲಿ ಬಲಹೀನವಾಗಿರುವವರ ಬಲಹೀನತೆಗಳನ್ನು ನಾವು ಸಹಿಸಿಕೊಳ್ಳಬೇಕು. ನಾವು ಕೇವಲ ನಮ್ಮ ಹಿತವನ್ನು ಮಾತ್ರ ನೋಡಿಕೊಳ್ಳಬಾರದು.
ರೋಮಾಪುರದವರಿಗೆ 15 : 2 (ERVKN)
ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಹಿತವನ್ನು ನೋಡಿಕೊಳ್ಳಬೇಕು. ನಂಬಿಕೆಯಲ್ಲಿ ಬಲಹೀನರಾಗಿರುವವರನ್ನು ಬಲಗೊಳಿಸಲು ನೆರವಾಗಿರಬೇಕು.
ರೋಮಾಪುರದವರಿಗೆ 15 : 3 (ERVKN)
ಕ್ರಿಸ್ತನು ಸಹ ತನ್ನ ಜೀವಮಾನದಲ್ಲಿ ತನ್ನ ಹಿತಕ್ಕಾಗಿ ಪ್ರಯತ್ನಿಸಲಿಲ್ಲ. “ನಿನಗೆ ಅವಮಾನ ಮಾಡಿದ ಜನರು ನನಗೂ ಅವಮಾನ ಮಾಡಿದರು” ✡ಉಲ್ಲೇಖನ: ಕೀರ್ತನೆ. 69:9. ಎಂಬುದಾಗಿ ಆತನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.
ರೋಮಾಪುರದವರಿಗೆ 15 : 4 (ERVKN)
ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ.
ರೋಮಾಪುರದವರಿಗೆ 15 : 5 (ERVKN)
ತಾಳ್ಮೆ ಮತ್ತು ಶಕ್ತಿ ದೇವರಿಂದ ಬರುತ್ತವೆ. ಕ್ರಿಸ್ತ ಯೇಸು ಬಯಸುವ ಮಾರ್ಗವನ್ನು ನೀವೆಲ್ಲರೂ ಒಟ್ಟಾಗಿ ಒಪ್ಪಿಕೊಳ್ಳಲು ದೇವರು ನಿಮಗೆ ಸಹಾಯ ಮಾಡಲೆಂದು ನಾನು ಪ್ರಾರ್ಥಿಸುತ್ತೇನೆ.
ರೋಮಾಪುರದವರಿಗೆ 15 : 6 (ERVKN)
ಹೀಗೆ ನೀವೆಲ್ಲರೂ ಒಂದೇ ಹೃದಯದಿಂದಲೂ ಒಂದೇ ಮನಸ್ಸಿನಿಂದಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
ರೋಮಾಪುರದವರಿಗೆ 15 : 7 (ERVKN)
ಕ್ರಿಸ್ತನು ನಿಮ್ಮನ್ನು ಸ್ವೀಕರಿಸಿಕೊಂಡನು. ಆದ್ದರಿಂದ ನೀವು ಒಬ್ಬರನ್ನೊಬ್ಬರು ಸ್ವೀಕರಿಸಿಕೊಳ್ಳಬೇಕು. ಇದು ದೇವರಿಗೆ ಮಹಿಮೆಯನ್ನು ಉಂಟು ಮಾಡುತ್ತದೆ.
ರೋಮಾಪುರದವರಿಗೆ 15 : 8 (ERVKN)
ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳು ಸತ್ಯವಾದುವುಗಳೆಂದು ತೋರಿಸುವುದಕ್ಕಾಗಿಯೂ ದೇವರು ಆ ವಾಗ್ದಾನಗಳನ್ನು ನೆರವೇರಿಸುತ್ತಾನೆ ಎಂಬುದನ್ನು ನಿರೂಪಿಸುವುದಕ್ಕಾಗಿಯೂ
ರೋಮಾಪುರದವರಿಗೆ 15 : 9 (ERVKN)
ದೇವರು ತಮಗೆ ತೋರುವ ಕರುಣೆಗಾಗಿ ಯೆಹೂದ್ಯರಲ್ಲದವರು ಆತನನ್ನು ಮಹಿಮೆಪಡಿಸಲೆಂದು ಕ್ರಿಸ್ತನು ಯೆಹೂದ್ಯರ ಸೇವಕನಾದನು. ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ಆದ್ದರಿಂದ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ನಾನು ನಿನ್ನನ್ನು ಸ್ತುತಿಸುವೆನು: ನಾನು ನಿನ್ನ ಹೆಸರನ್ನು ಸಂಕೀರ್ತಿಸುವೆನು.” ಕೀರ್ತನೆ. 18:49]
ರೋಮಾಪುರದವರಿಗೆ 15 : 10 (ERVKN)
ಇದಲ್ಲದೆ ಪವಿತ್ರ ಗ್ರಂಥವು ಹೀಗೆನ್ನುತ್ತದೆ: “ಯೆಹೂದ್ಯರಲ್ಲದ ನೀವು ದೇವರ ಸ್ವಂತ ಜನರೊಂದಿಗೆ ಸೇರಿ ಸಂತೋಷದಿಂದಿರಬೇಕು.” ಧರ್ಮೋಪದೇಶ. 32:43
ರೋಮಾಪುರದವರಿಗೆ 15 : 11 (ERVKN)
ಮತ್ತೊಂದು ಕಡೆ ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಯೆಹೂದ್ಯರಲ್ಲದ ನೀವೆಲ್ಲರೂ ಪ್ರಭುವನ್ನು ಸ್ತುತಿಸಿರಿ. ಎಲ್ಲಾ ಜನರು ಪ್ರಭುವಿಗೆ ಸ್ತೋತ್ರ ಮಾಡಲಿ.” ಕೀರ್ತನೆ. 117:1]
ರೋಮಾಪುರದವರಿಗೆ 15 : 12 (ERVKN)
ಯೆಶಾಯನು ಹೀಗೆ ಹೇಳಿದ್ದಾನೆ: “ಇಷಯನ ಕುಟುಂಬದಿಂದ ಒಬ್ಬ ವ್ಯಕ್ತಿಯು ಬರುವನು. ಆತನು ಯೆಹೂದ್ಯರಲ್ಲದವರನ್ನು ಆಳುವುದಕ್ಕಾಗಿ ಬರುವನು. ಯೆಹೂದ್ಯರಲ್ಲದ ಜನರು ಆತನಲ್ಲಿ ನಿರೀಕ್ಷೆಯನ್ನು ಹೊಂದಿಕೊಳ್ಳುವರು.” ಯೆಶಾಯ 11:10]
ರೋಮಾಪುರದವರಿಗೆ 15 : 13 (ERVKN)
ನಿರೀಕ್ಷೆಯನ್ನು ಕೊಡುವ ದೇವರು ನಂಬಿಕೆಯಿಂದ ಉಂಟಾಗುವ ಆನಂದವನ್ನೂ ಸಮಾಧಾನವನ್ನೂ ನಿಮಗೆ ಸಂಪೂರ್ಣವಾಗಿ ದಯಪಾಲಿಸಲೆಂದು ನಾನು ಪ್ರಾರ್ಥಿಸುತ್ತೇನೆ. ಆಗ ಪವಿತ್ರಾತ್ಮನ ಶಕ್ತಿಯ ಮೂಲಕ ನಿರೀಕ್ಷೆಯು ನಿಮ್ಮಲ್ಲಿ ತುಂಬಿ ಹೊರಸೂಸುವುದು.
ರೋಮಾಪುರದವರಿಗೆ 15 : 14 (ERVKN)
ತನ್ನ ಸೇವೆಯ ಬಗ್ಗೆ ಪೌಲನ ವಿವರಣೆ ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಳ್ಳೆಯತನವು ತುಂಬಿದೆಯೆಂದು ನನಗೆ ನಿಶ್ಚಯವಾಗಿ ಗೊತ್ತಿದೆ. ಅಗತ್ಯವಾದ ಸಕಲ ಜ್ಞಾನವು ನಿಮಗಿದೆಯೆಂದು ಮತ್ತು ಒಬ್ಬರಿಗೊಬ್ಬರು ಸಲಹೆ ನೀಡಬಲ್ಲಿರೆಂದು ನನಗೆ ಗೊತ್ತಿದೆ.
ರೋಮಾಪುರದವರಿಗೆ 15 : 15 (ERVKN)
ನೀವು ಜ್ಞಾಪಕದಲ್ಲಿ ಇಟ್ಟುಕೊಳ್ಳಬೇಕೆಂದು ನಾನು ಅಪೇಕ್ಷಿಸಿದ ಕೆಲವು ಸಂಗತಿಗಳನ್ನು ನಾನು ನಿಮಗೆ ಧೈರ್ಯವಾಗಿ ಬರೆದಿರುವೆ. ಕ್ರಿಸ್ತ ಯೇಸುವಿನ ಸೇವಕ ಎಂಬ ವಿಶೇಷವಾದ ವರವನ್ನು ದೇವರು ನನಗೆ ಕೊಟ್ಟಿರುವುದರಿಂದ ನಾನು ಹೀಗೆ ಬರೆದಿದ್ದೇನೆ.
ರೋಮಾಪುರದವರಿಗೆ 15 : 16 (ERVKN)
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
ರೋಮಾಪುರದವರಿಗೆ 15 : 17 (ERVKN)
ಆದ್ದರಿಂದ ಕ್ರಿಸ್ತ ಯೇಸುವಿನಲ್ಲಿ ನಾನು ದೇವರಿಗೋಸ್ಕರ ಮಾಡುವ ಕಾರ್ಯಗಳ ಬಗ್ಗೆ ಹೆಮ್ಮೆಪಡುತ್ತೇನೆ.
ರೋಮಾಪುರದವರಿಗೆ 15 : 18 (ERVKN)
ನಾನು ನನ್ನ ಸ್ವಕಾರ್ಯಗಳ ಬಗ್ಗೆಯೂ ಮಾತಾಡುವುದಿಲ್ಲ. ಯೆಹೂದ್ಯರಲ್ಲದ ಜನರನ್ನು ತನಗೆ ವಿಧೇಯರನ್ನಾಗಿ ಮಾಡಿಕೊಳ್ಳಲು ಕ್ರಿಸ್ತನು ನನ್ನ ಮೂಲಕ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಮಾಡಿದ ಕಾರ್ಯಗಳನ್ನು ಹೇಳಿಕೊಳ್ಳುತ್ತೇನೆ.
ರೋಮಾಪುರದವರಿಗೆ 15 : 19 (ERVKN)
ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ.
ರೋಮಾಪುರದವರಿಗೆ 15 : 20 (ERVKN)
ಕ್ರಿಸ್ತನ ಬಗ್ಗೆ ಜನರು ಎಂದೂ ಕೇಳಿಲ್ಲದ ಸ್ಥಳಗಳಲ್ಲಿ ಸುವಾರ್ತೆಯನ್ನು ಬೋಧಿಸಲು ನಾನು ಯಾವಾಗಲೂ ಅಪೇಕ್ಷಿಸುತ್ತೇನೆ; ಏಕೆಂದರೆ ಮತ್ತೊಬ್ಬನು ಆಗಲೇ ಆರಂಭಿಸಿರುವ ಕೆಲಸದ ಮೇಲೆ ಕಟ್ಟಲು ನನಗೆ ಇಷ್ಟವಿಲ್ಲ.
ರೋಮಾಪುರದವರಿಗೆ 15 : 21 (ERVKN)
ಆದರೆ ಇದು ಸಹ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ: “ಆತನ ಬಗ್ಗೆ ತಿಳಿಯದ ಜನರು ಆತನನ್ನು (ಕ್ರಿಸ್ತನನ್ನು) ನೋಡುವರು. ಆತನ ಬಗ್ಗೆ ಕೇಳಿಲ್ಲದ ಜನರು ಆತನನ್ನು ಅರ್ಥಮಾಡಿಕೊಳ್ಳುವರು.” ಯೆಶಾಯ 52:15]
ರೋಮಾಪುರದವರಿಗೆ 15 : 22 (ERVKN)
ರೋಮಿಗೆ ಹೋಗಲು ಪೌಲನ ಯೋಜನೆ ಈ ಕಾರಣದಿಂದಲೇ, ನಿಮ್ಮ ಬಳಿಗೆ ಬಾರದಂತೆ ನನಗೆ ಅನೇಕ ಸಲ ಅಡಚಣೆ ಆಯಿತು.
ರೋಮಾಪುರದವರಿಗೆ 15 : 23 (ERVKN)
ಆದರೆ ಈಗ ಈ ಪ್ರಾಂತ್ಯಗಳಲ್ಲಿ ನಾನು ಮಾಡಬೇಕಾಗಿದ್ದ ಸೇವೆಯನ್ನು ಮಾಡಿ ಮುಗಿಸಿದ್ದೇನೆ. ಅನೇಕ ವರ್ಷಗಳಿಂದ ನಾನು ನಿಮ್ಮ ಬಳಿಗೆ ಬರಬೇಕೆಂದಿದ್ದೆ.
ರೋಮಾಪುರದವರಿಗೆ 15 : 24 (ERVKN)
ಆದ್ದರಿಂದ ನಾನು ಸ್ಪೇನಿಗೆ ಹೋಗುವಾಗ ನಿಮ್ಮನ್ನು ಸಂದರ್ಶಿಸುತ್ತೇನೆ. ಹೌದು, ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ ನಿಮ್ಮನ್ನು ಸಂದರ್ಶಿಸಿ, ಸ್ವಲ್ಪಕಾಲ ನಿಮ್ಮೊಂದಿಗೆ ಸಂತೋಷವಾಗಿ ತಂಗಿರುತ್ತೇನೆಂಬ ನಿರೀಕ್ಷೆ ನನಗಿದೆ. ಬಳಿಕ ನೀವು ನನ್ನ ಪ್ರಯಾಣಕ್ಕೆ ಸಹಾಯ ಮಾಡಬಹದು.
ರೋಮಾಪುರದವರಿಗೆ 15 : 25 (ERVKN)
ಈಗ ನಾನು ದೇವಜನರಿಗೆ ಸಹಾಯ ಮಾಡುವುಕ್ಕಾಗಿ ಜೆರುಸಲೇಮಿಗೆ ಹೋಗುತ್ತಿದ್ದೇನೆ.
ರೋಮಾಪುರದವರಿಗೆ 15 : 26 (ERVKN)
ಅಲ್ಲಿನ ದೇವಜನರಲ್ಲಿ ಕೆಲವರು ಬಡವರಾಗಿದ್ದಾರೆ. ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಅಲ್ಲಿನ ಬಡಜನರಿಗಾಗಿ ಸಂತೋಷದಿಂದ ಧನಸಹಾಯ ಮಾಡಿದ್ದಾರೆ.
ರೋಮಾಪುರದವರಿಗೆ 15 : 27 (ERVKN)
ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಸ್ವಂತ ಇಷ್ಟದಿಂದಲೇ ಈ ಕಾರ್ಯವನ್ನು ಮಾಡಿದ್ದಾರೆ. ಅದು ಅವರ ಕರ್ತವ್ಯವೂ ಹೌದು. ಯೆಹೂದ್ಯರಲ್ಲದ ಅವರು ಯೆಹೂದ್ಯರ ಆತ್ಮಿಕ ಅಶೀರ್ವಾದಗಳಲ್ಲಿ ಪಾಲು ಹೊಂದಿರುವುದರಿಂದ ಅವರು ತಮ್ಮಲ್ಲಿರುವಂಥವುಗಳ ಮೂಲಕ ಅವರಿಗೆ ನೆರವು ನೀಡುವುದು ಅವರ ಹೊಣೆಯಾಗಿದೆ.
ರೋಮಾಪುರದವರಿಗೆ 15 : 28 (ERVKN)
ಜೆರುಸಲೇಮಿನ ಬಡಜನರಿಗೋಸ್ಕರ ಕೊಟ್ಟಿರುವ ಈ ಹಣವನ್ನೆಲ್ಲಾ ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನಾನು ಸ್ಪೇನಿಗೆ ಹೊರಡುವೆನು. ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ (ರೋಮಿನಲ್ಲಿ) ಇಳಿದು ನಿಮ್ಮನ್ನು ಸಂದರ್ಶಿಸುವೆನು.
ರೋಮಾಪುರದವರಿಗೆ 15 : 29 (ERVKN)
ನಾನು ನಿಮ್ಮ ಬಳಿಗೆ ಬರುವಾಗ ಕ್ರಿಸ್ತನ ಆಶೀರ್ವಾದವನ್ನು ಹೇರಳವಾಗಿ ತರುತ್ತೇನೆಂದು ಬಲ್ಲೆನು.
ರೋಮಾಪುರದವರಿಗೆ 15 : 30 (ERVKN)
ಸಹೋದರ ಸಹೋದರಿಯರೇ, ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸುವುದರ ಮೂಲಕ ನನ್ನ ಸೇವೆಗೆ ಸಹಾಯ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಪ್ರಭುವಾದ ಯೇಸುವಿನ ನಿಮಿತ್ತವಾಗಿಯೂ ಪವಿತ್ರಾತ್ಮನು ನಮಗೆ ಕೊಡುವ ಪ್ರೀತಿಯ ನಿಮಿತ್ತವಾಗಿಯೂ ನೀವು ಪ್ರಾರ್ಥಿಸಿರಿ.
ರೋಮಾಪುರದವರಿಗೆ 15 : 31 (ERVKN)
ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ. ನಾನು ಜೆರುಸಲೇಮಿಗೆ ತೆಗೆದುಕೊಂಡು ಹೋಗುತ್ತಿರುವ ಈ ಸಹಾಯಧನವು ಅಲ್ಲಿರುವ ದೇವಮಕ್ಕಳಿಗೆ ಮೆಚ್ಚಿಕೆಯಾಗುವಂತೆ ಪ್ರಾರ್ಥಿಸಿರಿ.
ರೋಮಾಪುರದವರಿಗೆ 15 : 32 (ERVKN)
ಅನಂತರ, ದೇವರು ಬಯಸುವುದಾದರೆ ನಾನು ನಿಮ್ಮ ಬಳಿಗೆ ಬರುತ್ತೇನೆ. ನಾನು ಸಂತೋಷದಿಂದ ಬಂದು ನಿಮ್ಮ ಸಂಗಡವಿದ್ದು ವಿಶ್ರಾಂತಿಯನ್ನು ಪಡೆಯುತ್ತೇನೆ.
ರೋಮಾಪುರದವರಿಗೆ 15 : 33 (ERVKN)
ಶಾಂತಿಯನ್ನು ಕೊಡುವ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
❮
❯