ರೋಮಾಪುರದವರಿಗೆ 16 : 1 (ERVKN)
ಪೌಲನ ಕೊನೆ ಮಾತುಗಳು ಕ್ರಿಸ್ತನಲ್ಲಿ ನಮ್ಮ ಸಹೋದರಿಯಾದ ಪೊಯಿಬೆಯನ್ನು ನಾನು ನಿಮಗೆ ಶಿಫಾರಸು ಮಾಡಲಿಚ್ಛಿಸುತ್ತೇನೆ. ಈಕೆಯು ಕೆಂಕ್ರೆಯ ಪಟ್ಟಣದ ಸಭೆಯಲ್ಲಿ ವಿಶೇಷ ಸಹಾಯಕಳಾಗಿದ್ದಾಳೆ.
ರೋಮಾಪುರದವರಿಗೆ 16 : 2 (ERVKN)
ನೀವು ಆಕೆಯನ್ನು ಪ್ರಭುವಿನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ದೇವಜನರಿಗೆ ತಕ್ಕಂತೆ ಈಕೆಯನ್ನು ಸ್ವೀಕರಿಸಿಕೊಳ್ಳಿರಿ. ಆಕೆಗೆ ಬೇಕಾದ ಸಹಾಯಗಳನ್ನೆಲ್ಲಾ ಮಾಡಿರಿ. ಆಕೆಯು ನನಗೆ ಬಹಳವಾಗಿ ಸಹಾಯ ಮಾಡಿದ್ದಾಳೆ. ಅಲ್ಲದೆ ಇತರ ಅನೇಕ ಜನರಿಗೂ ಆಕೆ ಸಹಾಯ ಮಾಡಿದ್ದಾಳೆ.
ರೋಮಾಪುರದವರಿಗೆ 16 : 3 (ERVKN)
ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆ ತಿಳಿಸಿರಿ. ಅವರು ಕ್ರಿಸ್ತ ಯೇಸುವಿನಲ್ಲಿ ನನ್ನೊಂದಿಗೆ ಸೇವೆ ಮಾಡುತ್ತಿದ್ದಾರೆ.
ರೋಮಾಪುರದವರಿಗೆ 16 : 4 (ERVKN)
ಅವರು ನನ್ನ ಪ್ರಾಣವನ್ನು ಉಳಿಸುವುದಕ್ಕಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡುಮಾಡಿದರು. ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಯೆಹೂದ್ಯರಲ್ಲದ ಸಭೆಗಳವರೆಲ್ಲರೂ ಅವರಿಗೆ ಕೃತಜ್ಞರಾಗಿದ್ದಾರೆ.
ರೋಮಾಪುರದವರಿಗೆ 16 : 5 (ERVKN)
ಅಲ್ಲದೆ ಅವರ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನ ಪ್ರಿಯ ಸ್ನೇಹಿತನಾದ ಎಪೈನೆತನಿಗೆ ನನ್ನ ವಂದನೆ ತಿಳಿಸಿರಿ. ಏಷ್ಯಾದಲ್ಲಿ ಕ್ರಿಸ್ತನನ್ನು ಹಿಂಬಾಲಿಸಿದವರಲ್ಲಿ ಅವನೇ ಮೊಟ್ಟಮೊದಲನೆಯವನಾಗಿದ್ದಾನೆ.
ರೋಮಾಪುರದವರಿಗೆ 16 : 6 (ERVKN)
ಮರಿಯಳಿಗೆ ನನ್ನ ವಂದನೆ ತಿಳಿಸಿರಿ. ಆಕೆ ನಿಮಗೋಸ್ಕರ ಬಹು ಕಷ್ಟಪಟ್ಟು ಕೆಲಸ ಮಾಡಿದಳು.
ರೋಮಾಪುರದವರಿಗೆ 16 : 7 (ERVKN)
ಆಂದ್ರೋನಿಕನಿಗೆ ಮತ್ತು ಯೂನ್ಯನಿಗೆ ನನ್ನ ವಂದನೆ ತಿಳಿಸಿರಿ. ಅವರು ನನ್ನ ಸಂಬಂಧಿಕರಾಗಿದ್ದಾರೆ. ಅಲ್ಲದೆ ಅವರು ನನ್ನೊಂದಿಗೆ ಸೆರೆಮನೆಯಲ್ಲಿದ್ದರು. ದೇವರ ಅತ್ಯಂತ ಮುಖ್ಯಸೇವಕರುಗಳಲ್ಲಿ *ಅತ್ಯಂತ ಮುಖ್ಯಸೇವಕರು ಅಕ್ಷರಶಃ, “ಅಪೊಸ್ತಲರಲ್ಲಿ ಪ್ರಮುಖರಾದವರು.” ಅವರೂ ಸೇರಿದ್ದಾರೆ. ಅವರು ನನಗಿಂತ ಮೊದಲೇ ಕ್ರಿಸ್ತನ ವಿಶ್ವಾಸಿಗಳಾಗಿದ್ದಾರೆ.
ರೋಮಾಪುರದವರಿಗೆ 16 : 8 (ERVKN)
ಪ್ರಭುವಿನಲ್ಲಿ ನನ್ನ ಪ್ರಿಯ ಸ್ನೇಹಿತನಾದ ಅಂಪ್ಲಿಯಾತನಿಗೆ ನನ್ನ ವಂದನೆ ತಿಳಿಸಿರಿ.
ರೋಮಾಪುರದವರಿಗೆ 16 : 9 (ERVKN)
ಉರ್ಬಾನನಿಗೆ ನನ್ನ ವಂದನೆ ತಿಳಿಸಿರಿ. ಅವನು ಕ್ರಿಸ್ತನಿಗೋಸ್ಕರ ನನ್ನ ಸಹೋದ್ಯೋಗಿಯಾಗಿದ್ದಾನೆ. ನನ್ನ ಪ್ರಿಯ ಗೆಳೆಯನಾದ ಸ್ತಾಖುನಿಗೆ ನನ್ನ ವಂದನೆ ತಿಳಿಸಿರಿ.
ರೋಮಾಪುರದವರಿಗೆ 16 : 10 (ERVKN)
ಅಪೆಲ್ಲನಿಗೆ ನನ್ನ ವಂದನೆ ತಿಳಿಸಿರಿ. ಅವನು ಕ್ರಿಸ್ತನನ್ನು ನಿಜವಾಗಿಯೂ ಪ್ರೀತಿಸುತ್ತಾನೆಂಬುದನ್ನು ಪರೀಕ್ಷಿಸಿ ನಿರೂಪಿಸಲಾಗಿದೆ. ಅರಿಸ್ತೊಬೂಲನ ಕುಟುಂಬದಲ್ಲಿ ಇರುವವರಿಗೆಲ್ಲ ನನ್ನ ವಂದನೆ ತಿಳಿಸಿರಿ.
ರೋಮಾಪುರದವರಿಗೆ 16 : 11 (ERVKN)
ನನ್ನ ಸಂಬಂಧಿಕರಾದ ಹೆರೋಡಿಯೊನನಿಗೂ ಪ್ರಭುವಿಗೆ ಸೇರಿದವನಾದ ನಾರ್ಕಿಸ್ಸನ ಕುಟುಂಬದಲ್ಲಿರುವವರೆಲ್ಲರಿಗೂ ನನ್ನ ವಂದನೆ ತಿಳಿಸಿರಿ.
ರೋಮಾಪುರದವರಿಗೆ 16 : 12 (ERVKN)
ತ್ರುಫೈನಳಿಗೂ ತ್ರುಫೋಸಳಿಗೂ ನನ್ನ ವಂದನೆ ತಿಳಿಸಿರಿ. ಅವರು ಪ್ರಭುವಿಗಾಗಿ ಬಹು ಕಷ್ಟಪಟ್ಟು ಸೇವೆ ಮಾಡುತ್ತಿದ್ದಾರೆ. ನನ್ನ ಪ್ರಿಯ ಸಹೋದರಿಯಾದ ಪೆರ್ಸೀಸಳಿಗೂ ನನ್ನ ವಂದನೆ ತಿಳಿಸಿರಿ. ಆಕೆಯು ಸಹ ಪ್ರಭುವಿಗೋಸ್ಕರ ಬಹು ಕಷ್ಟಪಟ್ಟು ಸೇವೆ ಮಾಡಿದಳು.
ರೋಮಾಪುರದವರಿಗೆ 16 : 13 (ERVKN)
ರೂಫನಿಗೆ ನನ್ನ ವಂದನೆ ತಿಳಿಸಿರಿ. ಅವನು ಪ್ರಭುವಿನಲ್ಲಿ ವಿಶೇಷವಾದ ವ್ಯಕ್ತಿ. ಅವನ ತಾಯಿಗೂ ನನ್ನ ವಂದನೆ ತಿಳಿಸಿರಿ. ಆಕೆ ನನ್ನನ್ನು ಸ್ವಂತ ಮಗನಂತೆ ನೋಡಿಕೊಂಡಳು.
ರೋಮಾಪುರದವರಿಗೆ 16 : 14 (ERVKN)
ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಮತ್ತು ಅವರೊಂದಿಗಿರುವ ಎಲ್ಲಾ ಕ್ರೈಸ್ತ ಸಹೋದರರಿಗೂ
ರೋಮಾಪುರದವರಿಗೆ 16 : 15 (ERVKN)
ಫಿಲೊಲೋಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರಿಗೂ ಮತ್ತು ಒಲುಂಪನಿಗೂ ಮತ್ತು ಅವರೊಂದಿಗಿರುವ ಎಲ್ಲಾ ಭಕ್ತರಿಗೆ ನನ್ನ ವಂದನೆ ತಿಳಿಸಿರಿ.
ರೋಮಾಪುರದವರಿಗೆ 16 : 16 (ERVKN)
ನೀವು ಪರಸ್ಪರ ಸಂಧಿಸುವಾಗ ಪವಿತ್ರವಾದ ಮುದ್ದನ್ನಿಟ್ಟು ವಂದಿಸಿರಿ. ಕ್ರಿಸ್ತನ ಸಭೆಗಳವರೆಲ್ಲಾ ನಿಮಗೆ ವಂದನೆ ತಿಳಿಸುತ್ತಾರೆ.
ರೋಮಾಪುರದವರಿಗೆ 16 : 17 (ERVKN)
ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಡಕುಗಳನ್ನು ಉಂಟುಮಾಡುವ ಜನರ ವಿಷಯದಲ್ಲಿ ನೀವು ಬಹು ಜಾಗ್ರತೆಯಿಂದ ಇರಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇತರರ ನಂಬಿಕೆಯನ್ನು ಕೆಡಿಸುವಂಥವರ ಬಗ್ಗೆ ಬಹು ಎಚ್ಚರದಿಂದಿರಿ. ನೀವು ಕಲಿತಿರುವ ಉಪದೇಶಕ್ಕೆ ಅವರು ವಿರುದ್ಧವಾಗಿದ್ದಾರೆ. ನೀವು ಅವರಿಂದ ದೂರವಿರಿ.
ರೋಮಾಪುರದವರಿಗೆ 16 : 18 (ERVKN)
ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.
ರೋಮಾಪುರದವರಿಗೆ 16 : 19 (ERVKN)
ನಿಮ್ಮ ವಿಧೇಯತ್ವವು ಎಲ್ಲಾ ವಿಶ್ವಾಸಿಗಳಿಗೆ ತಿಳಿದಿದೆ. ಆದ್ದರಿಂದ ನಿಮ್ಮ ವಿಷಯದಲ್ಲಿ ನಾನು ಬಹು ಸಂತೋಷಪಡುತ್ತೇನೆ. ಆದರೆ ಒಳ್ಳೆಯ ಸಂಗತಿಗಳ ಬಗ್ಗೆ ನೀವು ವಿವೇಕಿಗಳಾಗಿರಬೇಕೆಂದು ಮತ್ತು ಕೆಟ್ಟಸಂಗತಿಗಳ ಬಗ್ಗೆ ಏನೂ ತಿಳಿದಿಲ್ಲದವರಾಗಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
ರೋಮಾಪುರದವರಿಗೆ 16 : 20 (ERVKN)
ಶಾಂತಿಯನ್ನು ಕೊಡುವ ದೇವರು ಬೇಗನೆ ಸೈತಾನನನ್ನು ಸೋಲಿಸಿ, ಅವನ ಮೇಲೆ ನಿಮಗೆ ಅಧಿಕಾರವನ್ನು ಕೊಡುವನು. ನಮ್ಮ ಪ್ರಭುವಾದ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.
ರೋಮಾಪುರದವರಿಗೆ 16 : 21 (ERVKN)
ನನ್ನ ಸಹೋದ್ಯೋಗಿಯಾದ ತಿಮೊಥೆಯನು ಮತ್ತು ನನ್ನ ಸಂಬಂಧಿಕರಾದ ಲೂಕ್ಯ, ಯಾಸೋನ ಮತ್ತು ಸೋಸಿಪತ್ರ ನಿಮಗೆ ವಂದನೆ ತಿಳಿಸಿದ್ದಾರೆ.
ರೋಮಾಪುರದವರಿಗೆ 16 : 22 (ERVKN)
ಪೌಲನು ಹೇಳುತ್ತಿರುವ ಸಂಗತಿಗಳನ್ನು ಬರೆಯುತ್ತಿರುವ ತೆರ್ತ್ಯೆನೆಂಬ ನಾನು ನಿಮ್ಮನ್ನು ಪ್ರಭುವಿನಲ್ಲಿ ವಂದಿಸುತ್ತೇನೆ.
ರೋಮಾಪುರದವರಿಗೆ 16 : 23 (ERVKN)
ಗಾಯನು ನನಗೆ ಅತಿಥಿಸತ್ಕಾರ ಮಾಡುತ್ತಿದ್ದಾನೆ. ಅಲ್ಲದೆ ಸಭಾಕೂಟಕ್ಕಾಗಿ ಅವನ ಮನೆಯನ್ನೇ ಉಪಯೋಗಿಸಲಾಗುತ್ತಿದೆ. ಅವನು ಸಹ ನಿಮಗೆ ವಂದನೆ ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾದ ಎರಸ್ತನು ಮತ್ತು ಸಹೋದರನಾದ ಕ್ವರ್ತನು ನಿಮಗೆ ವಂದನೆಯನ್ನು ತಿಳಿಸುತ್ತಾರೆ.
ರೋಮಾಪುರದವರಿಗೆ 16 : 24 (ERVKN)
ಕೆಲವು ಗ್ರೀಕ್ ಪ್ರತಿಗಳಲ್ಲಿ 24 ನೇ ವಚನವನ್ನು ಸೇರಿಸಲಾಗಿದೆ: “ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.”
ರೋಮಾಪುರದವರಿಗೆ 16 : 25 (ERVKN)
ದೇವರಿಗೆ ಮಹಿಮೆಯಾಗಲಿ. ನಿಮ್ಮನ್ನು ನಂಬಿಕೆಯಲ್ಲಿ ಬಲಗೊಳಿಸಬಲ್ಲಾತನು ದೇವರೊಬ್ಬನೇ. ನಾನು ಉಪದೇಶಿಸುವ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಬಲಗೊಳಿಸಬಲ್ಲನು. ನಾನು ಯೇಸು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುತ್ತಿರುವುದೇ ಆ ಸುವಾರ್ತೆ. ದೇವರು ತಿಳಿಯಪಡಿಸಿದ ಆ ಸುವಾರ್ತೆಯು ರಹಸ್ಯವಾದ ಸತ್ಯವಾಗಿತ್ತು ಮತ್ತು ಆರಂಭದಿಂದಲೂ ಮರೆಯಾಗಿತ್ತು.
ರೋಮಾಪುರದವರಿಗೆ 16 : 26 (ERVKN)
ಆದರೆ ರಹಸ್ಯವಾದ ಆ ಸತ್ಯವನ್ನು ಈಗ ನಮಗೆ ತೋರಿಸಲಾಗಿದೆ. ಮತ್ತು ಆ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಆಜ್ಞಾಪಿಸಿರುವುದು ಇದನ್ನೇ. ಎಲ್ಲಾ ಜನರು ನಂಬಿಕೊಂಡು ದೇವರಿಗೆ ವಿಧೇಯರಾಗಲೆಂದು ರಹಸ್ಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಸದಾಕಾಲ ಜೀವಿಸುತ್ತಾನೆ.
ರೋಮಾಪುರದವರಿಗೆ 16 : 27 (ERVKN)
ಒಬ್ಬನೇ ಜ್ಞಾನಿಯಾದ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27