ರೋಮಾಪುರದವರಿಗೆ 9 : 1 (ERVKN)
ದೇವರು ಮತ್ತು ಯೆಹೂದ್ಯರು ನಾನು ಕ್ರಿಸ್ತನಲ್ಲಿದ್ದೇನೆ ಮತ್ತು ನಿಮಗೆ ಸತ್ಯವನ್ನೇ ಹೇಳುತ್ತಿದ್ದೇನೆ. ನಾನು ಸುಳ್ಳಾಡುವುದಿಲ್ಲ. ನನ್ನ ಆಲೋಚನೆಗಳು ಪವಿತ್ರಾತ್ಮನ ಆಳ್ವಿಕೆಗೆ ಒಳಪಟ್ಟಿವೆ. ನನ್ನ ಮನಸ್ಸೇ ಇದಕ್ಕೆ ಸಾಕ್ಷಿ.
ರೋಮಾಪುರದವರಿಗೆ 9 : 2 (ERVKN)
ಯೆಹೂದ್ಯರ ವಿಷಯದಲ್ಲಿ ನನಗೆ ಅತೀವ ದುಃಖವಿದೆ; ನಿರಂತರ ಮನೋವೇದನೆಯಿದೆ.
ರೋಮಾಪುರದವರಿಗೆ 9 : 3 (ERVKN)
ಅವರು ನನ್ನ ಸಹೋದರ ಸಹೋದರಿಯರಾಗಿದ್ದಾರೆ; ಇಹಲೋಕದ ಕುಟುಂಬದವರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವುದಕ್ಕೂ ಸಿದ್ಧನಾಗಿದ್ದೇನೆ.
ರೋಮಾಪುರದವರಿಗೆ 9 : 4 (ERVKN)
ಅವರು ಇಸ್ರೇಲಿನ ಜನರು. ಅವರು ದೇವರಿಂದ ಆರಿಸಲ್ಪಟ್ಟ ಮಕ್ಕಳು. ಅವರು ದೇವರ ಮಹಿಮೆಯನ್ನು ಮತ್ತು ದೇವರು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ಹೊಂದಿದ್ದಾರೆ. ದೇವರು ಅವರಿಗೆ ಮೋಶೆಯ ಧರ್ಮಶಾಸ್ತ್ರವನ್ನೂ ಸರಿಯಾದ ಆರಾಧನೆಯ ಕ್ರಮವನ್ನೂ ತನ್ನ ವಾಗ್ದಾನಗಳನ್ನೂ ಕೊಟ್ಟನು.
ರೋಮಾಪುರದವರಿಗೆ 9 : 5 (ERVKN)
ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್.
ರೋಮಾಪುರದವರಿಗೆ 9 : 6 (ERVKN)
ಹೌದು, ನಾನು ಯೆಹೂದ್ಯರ ವಿಷಯದಲ್ಲಿ ದುಃಖಿಸುತ್ತೇನೆ. ದೇವರು ತನ್ನ ವಾಗ್ದಾನವನ್ನು ನೆರವೇರಿಸುವುದರಲ್ಲಿ ವಿಫಲನಾದನೆಂದು ನಾನು ಹೇಳುತ್ತಿಲ್ಲ. ಏಕೆಂದರೆ ಇಸ್ರೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ.
ರೋಮಾಪುರದವರಿಗೆ 9 : 7 (ERVKN)
ಅಬ್ರಹಾಮನ ಸಂತತಿಗಳವರಲ್ಲಿ ಕೆಲವರು ಮಾತ್ರ ಅಬ್ರಹಾಮನ ನಿಜವಾದ ಮಕ್ಕಳಾಗಿದ್ದಾರೆ. ದೇವರು ಅವನಿಗೆ, “ಇಸಾಕನು ಮಾತ್ರ ನಿಮಗೆ ನ್ಯಾಯಬದ್ಧವಾದ ಮಗನು” ✡ಉಲ್ಲೇಖನ: ಆದಿಕಾಂಡ 21:12. ಎಂದು ಹೇಳಿದನು.
ರೋಮಾಪುರದವರಿಗೆ 9 : 8 (ERVKN)
ಇದರರ್ಥವೇನೆಂದರೆ, ಶರೀರ ಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ದೇವರ (ನಿಜ) ಮಕ್ಕಳಾಗಿದ್ದಾರೆ.
ರೋಮಾಪುರದವರಿಗೆ 9 : 9 (ERVKN)
ದೇವರು ಅವನಿಗೆ, “ನೇಮಿತ ಕಾಲದಲ್ಲಿ ನಾನು ಹಿಂತಿರುಗಿಬರುವೆನು, ಆಗ ಸಾರಳಿಗೆ ಒಬ್ಬ ಮಗನಿರುವನು” ✡ಉಲ್ಲೇಖನ: ಆದಿಕಾಂಡ 18:10, 14. ಎಂಬ ವಾಗ್ದಾನ ಮಾಡಿದ್ದನು.
ರೋಮಾಪುರದವರಿಗೆ 9 : 10 (ERVKN)
ಅದಷ್ಟೇ ಅಲ್ಲ, ರೆಬೆಕ್ಕಳಿಗೂ ಇಬ್ಬರು ಗಂಡುಮಕ್ಕಳಿದ್ದರು. ಅವರಿಬ್ಬರಿಗೂ ಒಬ್ಬನೇ ತಂದೆ. ಅವನೇ ನಮ್ಮ ಪಿತೃವಾದ ಇಸಾಕನು.
ರೋಮಾಪುರದವರಿಗೆ 9 : 11 (ERVKN)
(11-12) ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” ✡ಉಲ್ಲೇಖನ: ಆದಿಕಾಂಡ 25:23. ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ.
ರೋಮಾಪುರದವರಿಗೆ 9 : 12 (ERVKN)
ರೋಮಾಪುರದವರಿಗೆ 9 : 13 (ERVKN)
ಅಂತೆಯೇ, “ನಾನು ಯಾಕೋಬನನ್ನು ಪ್ರೀತಿಸಿದೆನು, ಆದರೆ ಏಸಾವನನ್ನು ದ್ವೇಷಿಸಿದೆನು” ✡ಉಲ್ಲೇಖನ: ಮಲಾಕಿ 1:2-3. ಎಂದು ಪವಿತ್ರ ಗ್ರಂಥವು ಹೇಳುತ್ತದೆ.
ರೋಮಾಪುರದವರಿಗೆ 9 : 14 (ERVKN)
ಹಾಗಾದರೆ, ಇದರ ಬಗ್ಗೆ ಏನು ಹೇಳೋಣ? ದೇವರು ಅನ್ಯಾಯಗಾರನೇ? ಎಂದಿಗೂ, ಇಲ್ಲ.
ರೋಮಾಪುರದವರಿಗೆ 9 : 15 (ERVKN)
ದೇವರು ಮೋಶೆಗೆ, “ನಾನು ಯಾರಿಗೆ ಕರುಣೆ ತೋರಬಯಸುತ್ತೇನೋ ಅವನಿಗೆ ಕರುಣೆ ತೋರುವೆನು. ನಾನು ಯಾರಿಗೆ ಕನಿಕರ ತೋರಬಯಸುತ್ತೇನೋ ಅವರಿಗೆ ಕನಿಕರ ತೋರುವೆನು” ✡ಉಲ್ಲೇಖನ: ವಿಮೋಚನ. 33:19. ಎಂದು ಹೇಳಿದ್ದಾನೆ.
ರೋಮಾಪುರದವರಿಗೆ 9 : 16 (ERVKN)
ಆದ್ದರಿಂದ ದೇವರು ತಾನು ಯಾರಿಗೆ ಕರುಣೆ ತೋರಬಯಸುತ್ತಾನೊ ಅವನನ್ನೇ ಆರಿಸಿಕೊಳ್ಳುತ್ತಾನೆ. ಆತನ ಆಯ್ಕೆಯು ಜನರು ಏನು ಮಾಡಬಯಸುತ್ತಾರೆ ಅಥವಾ ಏನು ಮಾಡಲು ಪ್ರಯತ್ನಿಸುತ್ತಾರೆಂಬುದರ ಮೇಲೆ ಆಧಾರಗೊಂಡಿಲ್ಲ.
ರೋಮಾಪುರದವರಿಗೆ 9 : 17 (ERVKN)
ಪವಿತ್ರ ಗ್ರಂಥದಲ್ಲಿ ದೇವರು ಫರೋಹನಿಗೆ, “ನಾನು ನಿನಗೆ ನನ್ನ ಶಕ್ತಿಯನ್ನು ತೋರಿಸಬೇಕೆಂತಲೂ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಿಪಡಿಸಬೇಕೆಂತಲೂ ನಿನ್ನನ್ನು ರಾಜನನ್ನಾಗಿ ಮಾಡಿದೆನು” ✡ಉಲ್ಲೇಖನ: ವಿಮೋಚನ. 9:16. ಎಂದು ಹೇಳಿದ್ದಾನೆ.
ರೋಮಾಪುರದವರಿಗೆ 9 : 18 (ERVKN)
ಆದ್ದರಿಂದ ದೇವರು ತಾನು ಯಾರಿಗೆ ಕರುಣೆಯನ್ನು ತೋರಬಯಸುತ್ತಾನೋ ಅವರಿಗೆ ಕರುಣೆಯನ್ನು ತೋರಿಸುತ್ತಾನೆ. ದೇವರು ಯಾರನ್ನು ಮೊಂಡರನ್ನಾಗಿ ಮಾಡಬಯಸುತ್ತಾನೋ ಅವರನ್ನು ಮೊಂಡರನ್ನಾಗಿ ಮಾಡುತ್ತಾನೆ.
ರೋಮಾಪುರದವರಿಗೆ 9 : 19 (ERVKN)
“ನಾವು ಮಾಡುವ ಕಾರ್ಯಗಳು ದೇವರ ಹಿಡಿತಕ್ಕೆ ಒಳಗಾಗಿರುವುದಾದರೆ, ನಮ್ಮ ಪಾಪಗಳ ನಿಮಿತ್ತ ದೇವರು ನಮ್ಮನ್ನು ದೂಷಿಸುವುದೇಕೆ?” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು.
ರೋಮಾಪುರದವರಿಗೆ 9 : 20 (ERVKN)
ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?
ರೋಮಾಪುರದವರಿಗೆ 9 : 21 (ERVKN)
ಕುಂಬಾರನು ತನಗೆ ಇಷ್ಟಬಂದಂತೆ ಒಂದೇ ಮಣ್ಣಿನಿಂದ ವಿವಿಧ ವಸ್ತುಗಳನ್ನು ತಯಾರಿಸುವುದಿಲ್ಲವೇ? ಅವನು ಒಂದನ್ನು ವಿಶೇಷವಾದ ಬಳಕೆಗಾಗಿಯೂ ಮತ್ತೊಂದನ್ನು ದೈನಂದಿನ ಬಳಕೆಗಾಗಿಯೂ ತಯಾರಿಸುವನು.
ರೋಮಾಪುರದವರಿಗೆ 9 : 22 (ERVKN)
ದೇವರು ಮಾಡಿರುವುದು ಸಹ ಹೀಗೆಯೇ. ಆತನು ತನ್ನ ಕೋಪವನ್ನು ತೋರಿಸಿ, ತನ್ನ ಶಕ್ತಿಯನ್ನು ಜನರಿಗೆ ಪ್ರಸಿದ್ಧಿಪಡಿಸಬೇಕೆಂದಿದ್ದನು. ಆದರೂ ಆತನು ತನ್ನ ಕೋಪಕ್ಕೆ ಗುರಿಯಾಗಿ ನಾಶವಾಗಲಿದ್ದ ಜನರನ್ನು ಬಹು ಸಹನೆಯಿಂದ ಸಹಿಸಿಕೊಂಡನು.
ರೋಮಾಪುರದವರಿಗೆ 9 : 23 (ERVKN)
ದೇವರು ತನ್ನ ಅತಿಶಯವಾದ ಮಹಿಮೆಯನ್ನು ತೋರ್ಪಡಿಸಬೇಕೆಂದು ತಾಳ್ಮೆಯಿಂದ ಕಾದುಕೊಂಡಿದ್ದನು. ತನ್ನ ಕರುಣೆಯನ್ನು ಹೊಂದಿಕೊಳ್ಳುವ ಜನರಿಗೆ ದೇವರು ಆ ಮಹಿಮೆಯನ್ನು ಕೊಡಬೇಕೆಂದಿದ್ದನು. ತನ್ನ ಮಹಿಮೆಯನ್ನು ಹೊಂದಿಕೊಳ್ಳಲೆಂದು ದೇವರು ಆ ಜನರನ್ನು ಸಿದ್ಧಪಡಿಸಿದನು.
ರೋಮಾಪುರದವರಿಗೆ 9 : 24 (ERVKN)
ನಾವೇ ಆ ಜನರು. ದೇವರಿಂದ ಕರೆಯಲ್ಪಟ್ಟ ಜನರು ನಾವೇ. ದೇವರು ನಮ್ಮನ್ನು ಯೆಹೂದ್ಯರೊಳಗಿಂದ ಮತ್ತು ಯೆಹೂದ್ಯರಲ್ಲದವರೊಳಗಿಂದ ಕರೆದನು.
ರೋಮಾಪುರದವರಿಗೆ 9 : 25 (ERVKN)
ಪವಿತ್ರ ಗ್ರಂಥದ ಹೋಶೇಯನ ಪುಸ್ತಕದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ನನ್ನವರಲ್ಲದ ಜನರನ್ನು ನನ್ನ ಜನರೆಂದು ಹೇಳುವೆನು.
ನನಗೆ ಪ್ರಿಯರಲ್ಲದವರನ್ನು ನನಗೆ ಪ್ರಿಯರೆಂದು ಹೇಳುವೆನು.” ಹೋಶೇಯ 2:23
ರೋಮಾಪುರದವರಿಗೆ 9 : 26 (ERVKN)
ಮತ್ತು “ಯಾವ ಸ್ಥಳದಲ್ಲಿ ದೇವರು, ‘ನೀವು ನನ್ನ ಜನರಲ್ಲ’ ಎಂದು ಹೇಳಿದ್ದನೋ ಅದೇ ಸ್ಥಳದಲ್ಲಿ ಅವರನ್ನು ಜೀವವುಳ್ಳ ದೇವರ ಮಕ್ಕಳೆಂದು ಕರೆಯಲಾಗುವುದು.” ಹೋಶೇಯ 1:10
ರೋಮಾಪುರದವರಿಗೆ 9 : 27 (ERVKN)
ಇದಲ್ಲದೆ ಯೆಶಾಯನು ಇಸ್ರೇಲಿನ ಬಗ್ಗೆ ಕೂಗಿ ಹೇಳಿದ್ದಾನೆ: “ಸಮುದ್ರ ತೀರದ ಮರಳಿನಂತೆ ಇಸ್ರೇಲರು ಅಸಂಖ್ಯಾತವಾಗಿರುವರು. ಆದರೆ ಆ ಜನರಲ್ಲಿ ಕೆಲವರು ಮಾತ್ರ ರಕ್ಷಣೆ ಹೊಂದುವರು.
ರೋಮಾಪುರದವರಿಗೆ 9 : 28 (ERVKN)
ಹೌದು, ಪ್ರಭುವು ಭೂಮಿಯ ಮೇಲಿನ ಜನರಿಗೆ ಬಹುಬೇಗನೆ ತೀರ್ಪನ್ನು ಪೂರ್ಣವಾಗಿ ತೀರಿಸುವನು.” ಯೆಶಾಯ 10:22-23]
ರೋಮಾಪುರದವರಿಗೆ 9 : 29 (ERVKN)
ಯೆಶಾಯನು ಹೇಳಿರುವುದೇನೆಂದರೆ: “ಪ್ರಭುವು ಸರ್ವಶಕ್ತನಾಗಿದ್ದಾನೆ. ಪ್ರಭುವು ತನ್ನ ಜನರಲ್ಲಿ ಕೆಲವರನ್ನು ನಮಗೋಸ್ಕರವಾಗಿ ರಕ್ಷಿಸಿದ್ದಾನೆ.
ಆತನು ಹೀಗೆ ಮಾಡಿಲ್ಲದಿದ್ದರೆ, ಈಗ ನಾವು ಸೊದೋಮಿನಂತೆಯೂ ಗೊಮೋರದಂತೆಯೂ ಇರುತ್ತಿದ್ದೆವು.” ಯೆಶಾಯ 1:9]
ರೋಮಾಪುರದವರಿಗೆ 9 : 30 (ERVKN)
ಇದರರ್ಥವೇನೆಂದರೆ, ಯೆಹೂದ್ಯರಲ್ಲದವರು ನೀತಿವಂತರಾಗಲು ಪ್ರಯತ್ನಿಸುತ್ತಿರಲಿಲ್ಲ. ಆದರೆ ಅವರನ್ನು ನೀತಿವಂತರನ್ನಾಗಿ ಮಾಡಲಾಯಿತು. ಅವರು ನಂಬಿಕೆಯಿಂದಲೇ ನೀತಿವಂತರಾದರು.
ರೋಮಾಪುರದವರಿಗೆ 9 : 31 (ERVKN)
ಇಸ್ರೇಲಿನ ಜನರಾದರೋ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಪ್ರಯತ್ನಿಸಿ ವಿಫಲರಾದರು.
ರೋಮಾಪುರದವರಿಗೆ 9 : 32 (ERVKN)
ಏಕೆಂದರೆ ಕ್ರಿಯೆಗಳ ಮೂಲಕ ನೀತಿವಂತರಾಗಲು ಅವರು ಪ್ರಯತ್ನಿಸಿದರೇ ಹೊರತು ನಂಬಿಕೆಯನ್ನು ಆಧಾರ ಮಾಡಿಕೊಳ್ಳಲಿಲ್ಲ. ಜನರನ್ನು ಬೀಳಿಸುವ ಕಲ್ಲಿನ ಮೇಲೆ ಅವರು ಬಿದ್ದರು.
ರೋಮಾಪುರದವರಿಗೆ 9 : 33 (ERVKN)
ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ *ಸಿಯೋನ್ ದೇವಮಕ್ಕಳ ಪಟ್ಟಣವಾದ ಜೆರುಸಲೇಮಿನ ಮತ್ತೊಂದು ಹೆಸರು. ಜನರನ್ನು ಎಡವಿಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಈ ಬಂಡೆಯಿಂದಾಗಿ ಜನರು ಎಡವಿಬೀಳುತ್ತಾರೆ.
ಆದರೆ ಆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.” ಯೆಶಾಯ 8:14] ; 28:16]
❮
❯