ಪರಮ ಗೀತ 4 : 1 (ERVKN)
ಪ್ರಿಯಕರನು ಪ್ರಿಯತಮೆಗೆ ನನ್ನ ಪ್ರಿಯಳೇ, ನೀನು ಬಹಳ ಸುಂದರಿ! ನೀನು ರೂಪವತಿ!
ಮುಸುಕಿನೊಳಗಿರುವ ನಿನ್ನ ಕಣ್ಣುಗಳು ಕೋಮಲವಾದ ಪಾರಿವಾಳಗಳಂತಿವೆ.
ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಇಳಿಜಾರುಗಳಲ್ಲಿ ನೃತ್ಯವಾಡುತ್ತಿರುವ ಆಡುಮಂದೆಯಂತೆ ಬಳಕುತ್ತಿದೆ.
ಪರಮ ಗೀತ 4 : 2 (ERVKN)
ನಿನ್ನ ಹಲ್ಲುಗಳು ಉಣ್ಣೆ ಕತ್ತರಿಸಿದ ನಂತರ ಸ್ನಾನ ಮಾಡಿಕೊಂಡು
ತಮ್ಮ ಜೋಡಿಗಳನ್ನು ಕಳೆದುಕೊಳ್ಳದೆ ಜೊತೆಜೊತೆಯಾಗಿ ಬರುವ ಕುರಿಮಂದೆಯಂತಿವೆ.
ಪರಮ ಗೀತ 4 : 3 (ERVKN)
ನಿನ್ನ ತುಟಿಗಳು ರೇಷ್ಮೆಯ ಕೆಂಪುದಾರದಂತಿವೆ. ನಿನ್ನ ಬಾಯಿ ಸುಂದರವಾಗಿದೆ.
ಮುಸುಕಿನೊಳಗಿರುವ ನಿನ್ನ ಕೆನ್ನೆಗಳು ದಾಳಿಂಬೆ ಹಣ್ಣಿನ ಎರಡು ಹೋಳುಗಳಂತಿವೆ.
ಪರಮ ಗೀತ 4 : 4 (ERVKN)
ನಿನ್ನ ಕೊರಳು ದಾವೀದನ ಗೋಪುರದಂತೆ ಉದ್ದವಾಗಿದೆ ಮತ್ತು ತೆಳುವಾಗಿದೆ.
ಆ ಗೋಪುರದ ಗೋಡೆಗಳು ಸಾವಿರ ಗುರಾಣಿಗಳಿಂದಲೂ ಬಲಿಷ್ಠ ಸೈನಿಕರ ಗುರಾಣಿಗಳಿಂದಲೂ ಅಲಂಕೃತವಾಗಿವೆ. *ನಿನ್ನ ಕೊರಳು … ಅಲಂಕೃತವಾಗಿವೆ ಅಥವಾ “ನಿನ್ನ ಕೊರಳು ಕಲ್ಲುಗಳ ಸಾಲುಗಳಿಂದ ಕಟ್ಟಲ್ಪಟ್ಟಿರುವ ದಾವೀದನ ಗೋಪುರದಂತಿದೆ.” ಇದರರ್ಥವೇನೆಂದರೆ, ಆಕೆ ಅನೇಕ ಕಂಠಹಾರಗಳನ್ನು ಒಂದರ ಮೇಲೊಂದು ಧರಿಸಿಕೊಂಡಿದ್ದರಿಂದ ಅವು ಗೋಪುರದ ಕಲ್ಲಿನ ಸಾಲುಗಳಂತೆ ಕಾಣಿಸಿತು.
ಪರಮ ಗೀತ 4 : 5 (ERVKN)
ನಿನ್ನ ಎರಡು ಸ್ತನಗಳು ಅವಳಿಜವಳಿ ಜಿಂಕೆಮರಿಗಳಂತೆಯೂ ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿಜವಳಿ ಸಾರಂಗಗಳಂತೆಯೂ ಇವೆ.
ಪರಮ ಗೀತ 4 : 6 (ERVKN)
ಹಗಲು ತನ್ನ ಕೊನೆ ಉಸಿರೆಳೆಯುವವರೆಗೆ ಮತ್ತು ನೆರಳುಗಳೆಲ್ಲಾ ಓಡಿಹೋಗುವವರೆಗೆ
ನಾನು ಗೋಲರಸದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ಹೋಗುವೆನು.
ಪರಮ ಗೀತ 4 : 7 (ERVKN)
ನನ್ನ ಪ್ರಿಯೆ, ನೀನು ಸರ್ವಾಂಗಸುಂದರಿ. ನಿನಗೆ ಎಲ್ಲಿಯೂ ಕಲೆಗಳಿಲ್ಲ!
ಪರಮ ಗೀತ 4 : 8 (ERVKN)
ನನ್ನ ವಧುವೇ, ಲೆಬನೋನಿನಿಂದ ನನ್ನೊಂದಿಗೆ ಬಾ! ಲೆಬನೋನಿನಿಂದ ನನ್ನೊಂದಿಗೆ ಬಾ!
ಅಮಾನದ ತುದಿಯಿಂದಲೂ ಶೆನೀರಿನ ತುದಿಯಿಂದಲೂ ಹೆರ್ಮೋನಿನ ತುದಿಯಿಂದಲೂ ಸಿಂಹದ ಗವಿಗಳಿಂದಲೂ ಚಿರತೆಗಳ ಬೆಟ್ಟಗಳಿಂದಲೂ ಬಾ!
ಪರಮ ಗೀತ 4 : 9 (ERVKN)
ನನ್ನ ಪ್ರಿಯಳೇ, ನನ್ನ ವಧುವೇ, ನೀನು ನನ್ನ ಹೃದಯವನ್ನು ಅಪಹರಿಸಿರುವೆ. ನಿನ್ನ ನೋಟದಿಂದಲೂ ನಿನ್ನ ಮುತ್ತಿನಹಾರದಿಂದಲೂ ನನ್ನ ಹೃದಯವನ್ನು ವಶಪಡಿಸಿಕೊಂಡಿದ್ದಿ.
ಪರಮ ಗೀತ 4 : 10 (ERVKN)
ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಎಷ್ಟೋ ಉತ್ತಮ!
ನಿನ್ನ ತೈಲದ ಪರಿಮಳವು ಸಕಲ ಬಗೆಯ ಸುಗಂಧ ದ್ರವ್ಯಗಳಿಗಿಂತಲೂ ಉತ್ತಮ!
ಪರಮ ಗೀತ 4 : 11 (ERVKN)
ನನ್ನ ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯೊಳಗಿವೆ.
ನಿನ್ನ ಬಟ್ಟೆಗಳು ಪರಿಮಳದ್ರವ್ಯದಂತೆ ಪರಿಮಳದ್ರವ್ಯ ಅಥವಾ “ಲೆಬನೋನ್.” ಸುವಾಸನೆಭರಿತವಾಗಿವೆ.
ಪರಮ ಗೀತ 4 : 12 (ERVKN)
ನನ್ನ ಪ್ರಿಯಳೇ, ನನ್ನ ವಧುವೇ, ನೀನು ಕದಹಾಕಿದ ತೋಟದಂತಿರುವೆ;
ಬೇಲಿಯೊಳಗಿರುವ ಬುಗ್ಗೆಯಂತಿರುವೆ; ಮುಚ್ಚಿ ಮುದ್ರಿಸಿದ ಚಿಲುಮೆಯಂತಿರುವೆ.
ಪರಮ ಗೀತ 4 : 13 (ERVKN)
ನಿನ್ನ ಅಂಗಾಂಗಗಳು ದಾಳಿಂಬೆ ಮರಗಳಿಂದಲೂ ರುಚಿಕರವಾದ ಹಣ್ಣಿನ ಮರಗಳಿಂದಲೂ ಗೋರಂಟಿ,
ಪರಮ ಗೀತ 4 : 14 (ERVKN)
ನಾರ್ಡ್, ಜಟಾಮಾಂಸಿ, ಕೇಸರಿ, ಬಜೆ, ಲವಂಗಚಕ್ಕೆ, ರಕ್ತಬೋಳ, ಅಗುರು, ಸಾಂಬ್ರಾಣಿ ಗಿಡ ಮತ್ತು ದಾಲ್ಚಿನ್ನಿ ಎಂಬ ಸುಗಂಧದ ಸಸ್ಯಗಳಿಂದಲೂ ಕೂಡಿರುವ ತೋಟಗಳಂತಿವೆ.
ಪರಮ ಗೀತ 4 : 15 (ERVKN)
ನೀನು ತೋಟದ ಬುಗ್ಗೆಯಂತಿರುವೆ; ಹೊಸ ನೀರಿನ ಬಾವಿಯಂತಿರುವೆ; ಲೆಬನೋನಿನ ಬೆಟ್ಟಗಳಿಂದ ಹರಿದುಬರುತ್ತಿರುವ ನೀರಿನಂತಿರುವೆ.
ಪರಮ ಗೀತ 4 : 16 (ERVKN)
ಪ್ರಿಯತಮೆ ಉತ್ತರದ ಗಾಳಿಯೇ, ಎಚ್ಚರವಾಗು! ದಕ್ಷಿಣದ ಗಾಳಿಯೇ, ಬಾ!
ನನ್ನ ತೋಟದ ಮೇಲೆ ಬೀಸು. ಅದರ ಸುವಾಸನೆಯು ಹರಡಿಕೊಳ್ಳಲಿ.
ನನ್ನ ಪ್ರಿಯನು ನನ್ನ ತೋಟವನ್ನು ಪ್ರವೇಶಿಸಲಿ. ಅವನು ಅದರ ರುಚಿಕರವಾದ ಹಣ್ಣನ್ನು ತಿನ್ನಲಿ.

1 2 3 4 5 6 7 8 9 10 11 12 13 14 15 16