ಪರಮ ಗೀತ 5 : 1 (ERVKN)
ಪ್ರಿಯಕರ ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ.
ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ! ಪ್ರಿಯತಮೆ
ಪರಮ ಗೀತ 5 : 2 (ERVKN)
ಪ್ರಿಯತಮೆಯು ಸ್ನೇಹಿತರಿಗೆ ನಾನು ನಿದ್ರೆಮಾಡುತ್ತಿರುವಾಗಲೂ ಹೃದಯ ಎಚ್ಚರವಾಗಿರುವುದು.
ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. “ನನ್ನ ಪ್ರಿಯಳೇ, ನನ್ನ ಕಾಂತಳೇ,
ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ;
ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತೇವವಾಗಿದೆ.”
ಪರಮ ಗೀತ 5 : 3 (ERVKN)
“ನಾನು ನನ್ನ ಮೇಲಂಗಿಯನ್ನು ತೆಗೆದಿದ್ದೇನೆ; ಅದನ್ನು ಮತ್ತೆ ಹಾಕಿಕೊಳ್ಳಲು ನನಗೆ ಇಷ್ಟವಿಲ್ಲ.
ನಾನು ನನ್ನ ಪಾದಗಳನ್ನು ತೊಳೆದಿದ್ದೇನೆ. ಅವುಗಳನ್ನು ಮತ್ತೆ ಕೊಳೆಮಾಡಲು ನನಗೆ ಇಷ್ಟವಿಲ್ಲ.”
ಪರಮ ಗೀತ 5 : 4 (ERVKN)
ನನ್ನ ಪ್ರಿಯನು ಬಾಗಿಲ ಚಿಲಕದ ರಂಧ್ರದಲ್ಲಿ ಕೈ ನೀಡಿದಾಗ ಅವನ ಮೇಲೆ ನನಗೆ ಮರುಕವಾಯಿತು.
ಪರಮ ಗೀತ 5 : 5 (ERVKN)
ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ನಾನು ಎದ್ದಾಗ ಅಗುಳಿಯ ಹಿಡಿಗಳ ಮೇಲೆ ನನ್ನ ಕೈಗಳಿಂದ ಗೋಲರಸವೂ
ನನ್ನ ಬೆರಳುಗಳಿಂದ ಸುವಾಸನೆಯ ಗೋಲರಸವೂ ತೊಟ್ಟಿಕ್ಕಿದವು.
ಪರಮ ಗೀತ 5 : 6 (ERVKN)
ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ ನನ್ನ ಪ್ರಿಯನು ಹೊರಟುಹೋಗಿದ್ದನು!
ಅವನು ಇಲ್ಲದಿರುವುದನ್ನು ಕಂಡು ನನ್ನ ಹೃದಯವು ಕುಸಿದುಹೋಯಿತು.
ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ.
ಪರಮ ಗೀತ 5 : 7 (ERVKN)
ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರು ನನ್ನನ್ನು ಕಂಡು ಹೊಡೆದು ಗಾಯಮಾಡಿದರು.
ಕೋಟೆಯ ಕಾವಲುಗಾರರು ನನ್ನ ಮೇಲ್ಹೋದಿಕೆಯನ್ನು ತೆಗೆದುಕೊಂಡರು.
ಪರಮ ಗೀತ 5 : 8 (ERVKN)
ಜೆರುಸಲೇಮಿನ ಸ್ತ್ರೀಯರೇ, ನೀವು ನನ್ನ ಪ್ರಿಯನನ್ನು ಕಂಡರೆ, ಅವನಿಗೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ತಿಳಿಸಿರಿ.
ಪರಮ ಗೀತ 5 : 9 (ERVKN)
ಜೆರುಸಲೇಮಿನ ಸ್ತ್ರೀಯರು ಪ್ರಿಯತಮೆಗೆ ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿಯೇ, ನಿನ್ನ ಪ್ರಿಯನ ಅತಿಶಯವೇನು?
ನೀನು ಹೀಗೆ ನಮ್ಮಿಂದ ಪ್ರಮಾಣ ಮಾಡಿಸಲು ನಿನ್ನ ಪ್ರಿಯನ ಅತಿಶಯವೇನು?
ಪರಮ ಗೀತ 5 : 10 (ERVKN)
ಪ್ರಿಯತಮೆಯು ಜೆರುಸಲೇಮಿನ ಸ್ತ್ರೀಯರಿಗೆ ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ.
ಪರಮ ಗೀತ 5 : 11 (ERVKN)
ಅವನ ತಲೆಯು ಚೊಕ್ಕ ಬಂಗಾರದಂತಿದೆ; ಅವನ ಗುಂಗುರು ಕೂದಲು ಕಾಗೆಯಷ್ಟೇ ಕಪ್ಪಾಗಿದೆ.
ಪರಮ ಗೀತ 5 : 12 (ERVKN)
ಅವನ ಕಣ್ಣುಗಳು ಹಾಲಿನಲ್ಲಿ ಸ್ನಾನಮಾಡಿದ ಪಾರಿವಾಳಗಳಂತೆಯೂ ಆಭರಣದಲ್ಲಿ ಜೋಡಿಸಿರುವ ಮುತ್ತಿನಂತೆಯೂ ಇವೆ.
ಪರಮ ಗೀತ 5 : 13 (ERVKN)
ಅವನ ಕೆನ್ನೆಗಳು ಸುಗಂಧಸಸ್ಯಗಳ ದಿಬ್ಬಗಳಂತೆಯೂ ಸುವಾಸನೆಯುಳ್ಳ ಹೂವುಗಳಂತೆಯೂ ಇವೆ.
ಅವನ ತುಟಿಗಳು ಕೆಂದಾವರೆಗಳಂತಿವೆ; ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ.
ಪರಮ ಗೀತ 5 : 14 (ERVKN)
ಅವನ ಕೈಗಳು ಪೀತರತ್ನದಿಂದ ಕೂಡಿದ ಬಂಗಾರದ ಸಲಾಕೆಯಂತಿವೆ;
ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ ನಯವಾದ ದಂತದಂತಿದೆ.
ಪರಮ ಗೀತ 5 : 15 (ERVKN)
ಅವನ ಕಾಲುಗಳು ಬಂಗಾರದ ಪಾದಗಳುಳ್ಳ ಅಮೃತ ಶಿಲೆಯ ಕಂಬಗಳಂತಿವೆ.
ಅವನು ಲೆಬನೋನಿನ ದೇವದಾರು ವೃಕ್ಷದಂತೆ ಎತ್ತರವಾಗಿದ್ದಾನೆ.
ಪರಮ ಗೀತ 5 : 16 (ERVKN)
ಹೌದು, ಜೆರುಸಲೇಮಿನ ಸ್ತ್ರೀಯರೇ, ನನ್ನ ಪ್ರಿಯನು ಅತ್ಯಂತ ಮನೋಹರನು;
ಅವನ ನುಡಿ ಬಹು ಇಂಪು. ಅವನೇ ನನ್ನ ಪ್ರಿಯನು; ಅವನೇ ನನ್ನ ಕಾಂತನು.
❮
❯
1
2
3
4
5
6
7
8
9
10
11
12
13
14
15
16