ಜೆಕರ್ಯ 11 : 1 (ERVKN)
ಲೆಬನೋನೇ, ನೀನು ನಿನ್ನ ದ್ವಾರಗಳನ್ನು ತೆರೆ. ಆಗ ಬೆಂಕಿಯು ಒಳಬಂದು ನಿನ್ನ ದೇವದಾರು ಮರಗಳನ್ನೆಲ್ಲಾ ಸುಟ್ಟು ಹಾಕುವದು.
ಜೆಕರ್ಯ 11 : 2 (ERVKN)
ದೇವದಾರು ಮರಗಳು ಬೀಳುವಾಗ ಓಕ್ ಮರಗಳು ರೋದಿಸುವವು. ಆ ಬಲವಾದ ಮರಗಳನ್ನು ತೆಗೆದುಕೊಂಡು ಹೋಗಲಾಗುವುದು. ಅಡವಿಯು ಕಡಿದು ಹಾಕಲ್ಪಟ್ಟಿದ್ದಕ್ಕಾಗಿ ಬಾಷಾನಿನ ಶ್ರೇಷ್ಠ ವೃಕ್ಷಗಳು ದುಃಖಿಸುವವು.
ಜೆಕರ್ಯ 11 : 3 (ERVKN)
ರೋದಿಸುವ ಕುರುಬರ ಕಡೆಗೆ ಕಿವಿಗೊಡಿರಿ. ಅವರ ನಾಯಕರುಗಳನ್ನು ತೆಗೆದುಕೊಂಡು ಹೋಗಿರುತ್ತಾರೆ. ಪ್ರಾಯದ ಸಿಂಹಗಳ ಗರ್ಜನೆಗೆ ಕಿವಿಗೊಡಿರಿ. ಯೋರ್ದನ್ ಹೊಳೆಯ ಬದಿಯಲ್ಲಿದ್ದ ದಟ್ಟವಾದ ಪೊದರುಗಳೆಲ್ಲಾ ತೆಗೆದುಕೊಂಡು ಹೋಗಲಾಗಿದೆ.
ಜೆಕರ್ಯ 11 : 4 (ERVKN)
ನನ್ನ ದೇವರಾದ ಯೆಹೋವನು ಹೇಳುವದೇನೆಂದರೆ, “ಕೊಲ್ಲುವದಕ್ಕೋಸ್ಕರವಾಗಿ ಬೆಳೆಸಿದ ಕುರಿಗಳನ್ನು ಪರಾಮರಿಸು.
ಜೆಕರ್ಯ 11 : 5 (ERVKN)
ಅವರ ನಾಯಕರುಗಳು ವರ್ತಕರಂತೆಯೂ ಧಣಿಗಳಂತೆಯೂ ಇರುವರು. ಧಣಿಗಳು ಕುರಿಗಳನ್ನು ಕೊಂದರೂ ಶಿಕ್ಷಿಸಲ್ಪಡುವುದಿಲ್ಲ. ವರ್ತಕರು ಕುರಿಗಳನ್ನು ಮಾರಿ, “ಓ, ನಾನೀಗ ಧನಿಕನಾಗಿದ್ದೇನೆ. ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಅನ್ನುವರು. ಕುರುಬರು ತಮ್ಮ ಕುರಿಗಳಿಗಾಗಿ ಚಿಂತಿಸುವುದಿಲ್ಲ.
ಜೆಕರ್ಯ 11 : 6 (ERVKN)
ಈ ದೇಶದಲ್ಲಿ ವಾಸಿಸುವ ಜನರ ಬಗ್ಗೆ ನಾನು ದುಃಖಿಸುವುದಿಲ್ಲ.” ಇದು ಯೆಹೋವನ ನುಡಿ. “ನೋಡಿರಿ, ಪ್ರತಿಯೊಬ್ಬನೂ ತನ್ನ ಅರಸನಿಂದಲೂ ನೆರೆಯವರಿಂದಲೂ ಹಾಳು ಮಾಡಲ್ಪಡುವಂತೆ ನಾನು ಮಾಡುವೆನು. ಅವರ ದೇಶವನ್ನು ಹಾಳುಮಾಡುವಂತೆ ಅವರನ್ನು ಬಿಡುವೆನು. ಅವರನ್ನು ನಿಲ್ಲಿಸುವುದಿಲ್ಲ.”
ಜೆಕರ್ಯ 11 : 7 (ERVKN)
ಕೊಲ್ಲುವದಕ್ಕಾಗಿ ಬೆಳೆಸುವ ಕುರಿಗಳನ್ನು ನಾನು ಪರಾಮರಿಸಿದೆನು. ನನಗೆ ಎರಡು ಕೋಲುಗಳು ದೊರೆತವು. ಒಂದು ಕೋಲನ್ನು ದಯೆ ಎಂದೂ ಇನ್ನೊಂದನ್ನು ಒಗ್ಗಟ್ಟು ಎಂಬ ಹೆಸರಿನಿಂದಲೂ ಕರೆದೆನು. ಆ ಬಳಿಕ ಕುರಿಗಳನ್ನು ಪರಾಮರಿಸ ತೊಡಗಿದೆನು.
ಜೆಕರ್ಯ 11 : 8 (ERVKN)
ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು.
ಜೆಕರ್ಯ 11 : 9 (ERVKN)
ಆಗ ನಾನು, “ಸರಿ, ನಾನು ನಿಮ್ಮನ್ನು ಇನ್ನು ನೋಡಿಕೊಳ್ಳುವದಿಲ್ಲ. ಹೋಗಿ ಬಿಡುತ್ತೇನೆ” ಅಂದೆನು. ಸಾಯಲು ಮನಸ್ಸುಳ್ಳವುಗಳನ್ನು ಸಾಯಲುಬಿಟ್ಟೆನು. ನಾಶವಾಗಲು ಮನಸ್ಸುಳ್ಳವುಗಳನ್ನು ನಾಶವಾಗಲು ಬಿಟ್ಟೆನು. ಅಳಿಯದೆ ಉಳಿದವುಗಳು ಪರಸ್ಪರ ನಾಶಮಾಡಿಕೊಳ್ಳುವವು.
ಜೆಕರ್ಯ 11 : 10 (ERVKN)
ಆಗ ನಾನು ದಯೆ ಹೆಸರಿನ ಕೋಲನ್ನು ತೆಗೆದುಕೊಂಡು ತುಂಡುಮಾಡಿದೆನು. ಯೆಹೋವನು ಎಲ್ಲಾ ಜನರೊಂದಿಗೆ ಮಾಡಿದ ಒಡಂಬಡಿಕೆಯು ಮುರಿಯಿತು ಎಂಬುದಾಗಿ ಅವರಿಗೆ ತೋರಿಸಿದೆನು.
ಜೆಕರ್ಯ 11 : 11 (ERVKN)
ಹೀಗೆ ಆ ದಿವಸ ಒಡಂಬಡಿಕೆಗೆ ಅಂತ್ಯವಾಯಿತು. ನನ್ನನ್ನೇ ನೋಡುತ್ತಿದ್ದ ಆ ಬಡ ಕುರಿಗಳಿಗೆ ಈ ಸಂದೇಶವು ಯೆಹೋವನಿಂದಲೇ ನನಗೆ ಬಂದಿದೆ ಎಂಬುದು ತಿಳಿದಿತ್ತು.
ಜೆಕರ್ಯ 11 : 12 (ERVKN)
ಆಗ ನಾನು ಹೀಗೆಂದೆನು, “ನನಗೆ ಸಂಬಳ ಕೊಡಲು ನಿಮಗೆ ಇಷ್ಟವಿದ್ದರೆ ಕೊಡಿರಿ. ಇಲ್ಲದಿದ್ದಲಿ ಬೇಡ.” ಆಗ ಅವರು ನನಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು.
ಜೆಕರ್ಯ 11 : 13 (ERVKN)
ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ನನ್ನ ಬೆಲೆ ಅಷ್ಟೇ ಎಂದು ಅವರು ನೆನಸುತ್ತಾರೆ. ಆ ಹಣವನ್ನು ತೆಗೆದು ಆಲಯದ ಖಜಾನೆಗೆ ಸುರಿ.” ನಾನು ಆ ಮೂವತ್ತು ಬೆಳ್ಳಿ ನಾಣ್ಯವನ್ನು ತೆಗೆದುಕೊಂಡು ಆಲಯದ ಖಜಾನೆಗೆ ಸುರಿದೆನು.
ಜೆಕರ್ಯ 11 : 14 (ERVKN)
ಆಮೇಲೆ ನಾನು ‘ಒಗ್ಗಟ್ಟು’ ಎಂಬ ಹೆಸರಿನ ಕೋಲನ್ನು ಎರಡು ತುಂಡಾಗಿ ಮುರಿದೆನು. ಇಸ್ರೇಲ್ ಮತ್ತು ಯೆಹೂದ ರಾಜ್ಯಗಳ ಒಗ್ಗಟ್ಟು ಮುರಿಯಿತು ಎಂದು ತೋರಿಸುವದಕ್ಕಾಗಿ ನಾನು ಹಾಗೆ ಮಾಡಿದೆನು.
ಜೆಕರ್ಯ 11 : 15 (ERVKN)
ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ಒಬ್ಬ ಮೂರ್ಖ ಕುರುಬನು ಉಪಯೋಗಿಸುವ ವಸ್ತುಗಳನ್ನು ತೆಗೆದುಕೊಂಡು ಬಾ.
ಜೆಕರ್ಯ 11 : 16 (ERVKN)
ನಾನು ಈ ದೇಶಕ್ಕೆ ಒಬ್ಬ ಹೊಸ ಕುರುಬನನ್ನು ನೇಮಕ ಮಾಡುವೆನೆಂದು ಆ ರೀತಿಯಾಗಿ ತೋರಿಸುವೆನು. ಆದರೆ ಈ ಮನುಷ್ಯನಿಗೆ ನಾಶಮಾಗುತ್ತಿರುವ ಕುರಿಗಳನ್ನು ಪರಾಮರಿಸಲು ಸಾಧ್ಯವಾಗುವುದಿಲ್ಲ. ಗಾಯಗೊಂಡ ಕುರಿಗಳನ್ನು ಗುಣಮಾಡಲು ಅವನಿಂದ ಸಾಧ್ಯವಾಗುವುದಿಲ್ಲ. ಸಾಯದೆ ಉಳಿದ ಕುರಿಗಳಿಗೆ ಆಹಾರ ಕೊಡಲು ಅವನಿಂದ ಸಾಧ್ಯವಾಗುವುದಿಲ್ಲ. ಪುಷ್ಟಿಕರವಾದ ಕುರಿಗಳನ್ನು ಪೂರ್ತಿಯಾಗಿ ತಿಂದು ಬಿಡಲ್ಪಡುವದು. ಅದರ ಗೊರಸುಗಳು ಮಾತ್ರವೇ ಉಳಿಯುವದು.”
ಜೆಕರ್ಯ 11 : 17 (ERVKN)
ಓ, ನನ್ನ ಕೆಲಸಕ್ಕೆ ಬಾರದ ಕುರುಬನೇ, ನೀನು ನನ್ನ ಕುರಿಗಳನ್ನು ತೊರೆದುಬಿಟ್ಟೀ, ಅವನನ್ನು ಶಿಕ್ಷಿಸಿರಿ! ಖಡ್ಗದಿಂದ ಅವನ ಬಲಗೈಯನ್ನು ಕತ್ತರಿಸಿ ಹಾಕಿರಿ. ಮತ್ತು ಬಲಗಣ್ಣನ್ನು ಕಿತ್ತಿ ಹಾಕಿರಿ. ಆಗ ಅವನ ಬಲಗೈ ಅಪ್ರಯೋಜಕವಾಗುವದು. ಬಲಗಣ್ಣು ದೃಷ್ಟಿಹೀನವಾಗುವದು.

1 2 3 4 5 6 7 8 9 10 11 12 13 14 15 16 17

BG:

Opacity:

Color:


Size:


Font: