ಜೆಕರ್ಯ 12 : 1 (ERVKN)
ಯೆಹೂದದ ಸುತ್ತಲಿರುವ ದೇಶಗಳ ಬಗ್ಗೆ ದರ್ಶನ ಇಸ್ರೇಲಿನ ಬಗ್ಗೆ ಯೆಹೋವನ ದುಃಖದ ಸಂದೇಶ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುತ್ತಾನೆ. ಮಾನವನಲ್ಲಿ ತನ್ನ ಆತ್ಮವನ್ನಿಟ್ಟನು. ಆ ಬಳಿಕ ಆತನು ಹೇಳಿದ್ದೇನೆಂದರೆ,
ಜೆಕರ್ಯ 12 : 2 (ERVKN)
“ನಾನು ಜೆರುಸಲೇಮಿನ ಸುತ್ತಮುತ್ತಲಿರುವ ರಾಷ್ಟ್ರಗಳಿಗೆ ಆಕೆಯನ್ನು ಒಂದು ವಿಷದ ಲೋಟವನ್ನಾಗಿ ಮಾಡುತ್ತೇನೆ. ಆ ರಾಜ್ಯಗಳು ಆ ಪಟ್ಟಣದ ಮೇಲೆ ಬೀಳುವವು. ಆಗ ಇಡೀ ಯೆಹೂದವು ಉರುಲಿನೊಳಗೆ ಬೀಳುವದು.
ಜೆಕರ್ಯ 12 : 3 (ERVKN)
ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು.
ಜೆಕರ್ಯ 12 : 4 (ERVKN)
ಆದರೆ ಆ ಸಮಯದಲ್ಲಿ ನಾನು ಅವರ ಕುದುರೆಗಳನ್ನು ಬೆಚ್ಚಿಬೀಳುವಂತೆ ಮಾಡುವೆನು. ಅದರ ಸವಾರನು ಭಯಗೊಳ್ಳುವನು. ಶತ್ರುವಿನ ಎಲ್ಲಾ ಕುದುರೆಗಳನ್ನು ನಾನು ಕುರುಡು ಮಾಡುವೆನು. ಆದರೆ ನಾನು ಕಣ್ಣು ತೆರೆದು ಯೆಹೂದ ವಂಶವನ್ನು ಸಂರಕ್ಷಿಸುವೆನು.
ಜೆಕರ್ಯ 12 : 5 (ERVKN)
ಯೆಹೂದದ ಪ್ರಧಾನರು ತಮ್ಮ ಜನರನ್ನು ಹುರಿದುಂಬಿಸುವರು. ‘ಸೇವಾಧೀಶ್ವರನಾದ ಯೆಹೋವನು ನಿಮ್ಮ ದೇವರು. ಆತನೇ ನಮಗೆ ಬಲವನ್ನು ಕೊಡುವಾತನು’ ಎಂದು ಹೇಳುವರು.
ಜೆಕರ್ಯ 12 : 6 (ERVKN)
ಆ ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ಮತ್ತೆ ನೆಮ್ಮದಿಯಿಂದ ವಾಸಿಸುವರು.”
ಜೆಕರ್ಯ 12 : 7 (ERVKN)
ಯೆಹೋವನು ಯೆಹೂದದ ಜನರನ್ನು ಮೊದಲು ರಕ್ಷಿಸುವನು. ಆಗ ಜೆರುಸಲೇಮಿನ ನಿವಾಸಿಗಳು ತಮ್ಮನ್ನು ಹೆಚ್ಚಿಸಿಕೊಳ್ಳುವದಿಲ್ಲ. ಜೆರುಸಲೇಮಿನಲ್ಲಿ ವಾಸಿಸುವ ದಾವೀದನ ಸಂತತಿಯವರೂ ಇತರರೂ ತಾವು ಯೆಹೂದ ಪ್ರಾಂತ್ಯದಲ್ಲಿ ವಾಸಿಸುವ ಜನರಿಗಿಂತ ಉತ್ತಮರು ಎಂದು ಹೆಚ್ಚಳಪಡುವದಿಲ್ಲ.
ಜೆಕರ್ಯ 12 : 8 (ERVKN)
ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಒಬ್ಬ ಬಲಹೀನ ಮನಷ್ಯನೂ ದಾವೀದನಂತೆ ಶೂರನಾಗುವನು. ಮತ್ತು ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.
ಜೆಕರ್ಯ 12 : 9 (ERVKN)
ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವ ಜನಾಂಗಗಳನ್ನು ನಾನು ನಾಶಮಾಡುವೆನು.
ಜೆಕರ್ಯ 12 : 10 (ERVKN)
ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.
ಜೆಕರ್ಯ 12 : 11 (ERVKN)
ಜೆರುಸಲೇಮಿನಲ್ಲಿ ಅತೀವ ಗೋಳಾಟದ ಮತ್ತು ದುಃಖದ ಕಾಲ ಬರುವದು. ಅದು ಮೆಗಿದ್ದೋ ತಗ್ಗಿನಲ್ಲಿ ಹದದ್ ರಿಮ್ಮೋನನು ಸತ್ತಾಗ ಜನರು ಗೋಳಾಡಿದ ಸಮಯದಂತೆ ಇರುವದು.
ಜೆಕರ್ಯ 12 : 12 (ERVKN)
ಪ್ರತಿಯೊಂದು ಕುಟುಂಬವೂ ರೋಧಿಸುವದು. ದಾವೀದನ ಕುಲದವರೂ ಗೋಳಾಡುವರು. ಅವರ ಹೆಂಡತಿಯರೂ ಗೋಳಾಡುವರು. ನಾತಾನಿನ ಕುಟುಂಬದವರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು.
ಜೆಕರ್ಯ 12 : 13 (ERVKN)
ಲೇವಿಯ ಸಂತಾನದ ಜನರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು. ಶಿಮ್ಮಿಯ ಸಂತಾನದವರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು.
ಜೆಕರ್ಯ 12 : 14 (ERVKN)
ಅದೇ ರೀತಿಯಲ್ಲಿ ಇತರ ಎಲ್ಲಾ ಕುಲದವರೂ ದುಃಖಿಸುವರು. ಗಂಡಸರೂ ಹೆಂಗಸರೂ ಗೋಳಾಡುವರು.”
❮
❯
1
2
3
4
5
6
7
8
9
10
11
12
13
14