1 ಪೂರ್ವಕಾಲವೃತ್ತಾ 11 : 1 (IRVKN)
ದಾವೀದನ ರಾಜಾಭಿಷೇಕ ಅನಂತರ ಇಸ್ರಾಯೇಲರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನಗೆ ರಕ್ತಸಂಬಂಧಿಗಳಾಗಿದ್ದೇವೆ.
1 ಪೂರ್ವಕಾಲವೃತ್ತಾ 11 : 2 (IRVKN)
ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.
1 ಪೂರ್ವಕಾಲವೃತ್ತಾ 11 : 3 (IRVKN)
ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.
1 ಪೂರ್ವಕಾಲವೃತ್ತಾ 11 : 4 (IRVKN)
ದಾವೀದನು ಯೆರೂಸಲೇಮನ್ನು ಸ್ವಾಧೀನಮಾಡಿಕೊಂಡದ್ದೂ ದಾವೀದನು ಇಸ್ರಾಯೇಲರನ್ನು ಕರೆದುಕೊಂಡು ಅಂದಿನಕಾಲದಲ್ಲಿ ಯೆಬೂಸೆನಿಸಿಕೊಂಡಿದ್ದ ಯೆರೂಸಲೇಮಿಗೆ ಮುತ್ತಿಗೆ ಹಾಕಲು ಹೊರಟನು. ಆ ಪ್ರಾಂತ್ಯದ ಮೂಲನಿವಾಸಿಗಳು ಯೆಬೂಸಿಯರು.
1 ಪೂರ್ವಕಾಲವೃತ್ತಾ 11 : 5 (IRVKN)
ಯೆಬೂಸಿಯರು ದಾವೀದನಿಗೆ, “ನೀನು ಒಳಗೆ ಬರಲು ಸಾಧ್ಯವಿಲ್ಲ” ಎಂದು ಹೇಳಿದರು. ಆದರೂ ಅವನು ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಮಾಡಿಕೊಂಡನು.
1 ಪೂರ್ವಕಾಲವೃತ್ತಾ 11 : 6 (IRVKN)
ಆ ದಿನ ದಾವೀದನು ತನ್ನೊಂದಿಗೆ ಬಂದಿದ್ದ ಇಸ್ರಾಯೇಲರನ್ನು ಕುರಿತು “ಯಾರು ಯೆಬೂಸಿಯರನ್ನು ಮೊದಲು ಸೋಲಿಸುವನೋ ಅವನು ದಳಾಧಿಪತಿ ಆಗುವನು” ಎಂದು ಹೇಳಿದನು. ಚೆರೂಯಳ ಮಗನಾದ ಯೋವಾಬನು ಮೊದಲು ದಾಳಿ ಮಾಡಿದ್ದರಿಂದ ಅವನೇ ದಳಾಧಿಪತಿ ಆದನು.
1 ಪೂರ್ವಕಾಲವೃತ್ತಾ 11 : 7 (IRVKN)
ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಅದಕ್ಕೆ ದಾವೀದನಗರ ಎಂದು ಹೆಸರಾಯಿತು.
1 ಪೂರ್ವಕಾಲವೃತ್ತಾ 11 : 8 (IRVKN)
ಅವನು ಮಿಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಭದ್ರಪಡಿಸಿದನು.
1 ಪೂರ್ವಕಾಲವೃತ್ತಾ 11 : 9 (IRVKN)
ಸೇನಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದುದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು.
1 ಪೂರ್ವಕಾಲವೃತ್ತಾ 11 : 10 (IRVKN)
ದಾವೀದನ ರಣವೀರರು ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.
1 ಪೂರ್ವಕಾಲವೃತ್ತಾ 11 : 11 (IRVKN)
ದಾವೀದನ ಯುದ್ಧವೀರರ ಪಟ್ಟಿ: ಹಕ್ಮೋನಿಯನಾದ ಯಾಷೊಬ್ಬಾಮನು ಮೂವತ್ತು ಶೂರರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಒಂದೇ ಸಾರಿ ಮುನ್ನೂರು ಜನರನ್ನು ಕೊಂದನು.
1 ಪೂರ್ವಕಾಲವೃತ್ತಾ 11 : 12 (IRVKN)
ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಇವನೂ ಆ ಮೂವರು ಶೂರರಲ್ಲಿ ಒಬ್ಬನು.
1 ಪೂರ್ವಕಾಲವೃತ್ತಾ 11 : 13 (IRVKN)
ಫಿಲಿಷ್ಟಿಯರು ಪಸ್ದಮ್ಮೀಮಿನಲ್ಲಿ ಯುದ್ಧಕ್ಕೆ ಬಂದಾಗ ಇವನು ದಾವೀದನ ಜೊತೆಯಲ್ಲಿದ್ದನು. ಅಲ್ಲಿ ಒಂದು ಜವೆಗೋದಿಯ ಹೊಲವಿತ್ತು. ಇಸ್ರಾಯೇಲರು ಫಿಲಿಷ್ಟಿಯರಿಗೆ ಹೆದರಿ ಓಡಿಹೋಗಲು ಪ್ರಯತ್ನಿಸಿದಾಗ,
1 ಪೂರ್ವಕಾಲವೃತ್ತಾ 11 : 14 (IRVKN)
ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು.
1 ಪೂರ್ವಕಾಲವೃತ್ತಾ 11 : 15 (IRVKN)
ದಾವೀದನು ಅದುಲ್ಲಾಮ್ ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಜನ ಪ್ರಸಿದ್ಧಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿರುವುದನ್ನು ಕಂಡರು.
1 ಪೂರ್ವಕಾಲವೃತ್ತಾ 11 : 16 (IRVKN)
ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಒಂದು ಕಾವಲು ದಂಡನ್ನು ಇಟ್ಟಿದ್ದರು. ಆಗ ದಾವೀದನು ದುರ್ಗದಲ್ಲಿದ್ದನು.
1 ಪೂರ್ವಕಾಲವೃತ್ತಾ 11 : 17 (IRVKN)
ದಾವೀದನು ಲವಲವಿಕೆಯಿಂದ, “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದು ಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಹೇಳಿದನು.
1 ಪೂರ್ವಕಾಲವೃತ್ತಾ 11 : 18 (IRVKN)
ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೇತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.
1 ಪೂರ್ವಕಾಲವೃತ್ತಾ 11 : 19 (IRVKN)
ಆದರೆ ದಾವೀದನು “ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು. ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ” ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.
1 ಪೂರ್ವಕಾಲವೃತ್ತಾ 11 : 20 (IRVKN)
ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.
1 ಪೂರ್ವಕಾಲವೃತ್ತಾ 11 : 21 (IRVKN)
ಉಳಿದ ಇಬ್ಬರಿಗಿಂತ ಇವನೇ ಘನತೆಯುಳ್ಳವನಾಗಿದ್ದು ಅವರ ನಾಯಕನಾದನು. ಆದರೂ ಇವನು ಮೊದಲಿನ ಮೂರು ಜನರಿಗೆ ಸಮಾನನಾಗಿರಲಿಲ್ಲ.
1 ಪೂರ್ವಕಾಲವೃತ್ತಾ 11 : 22 (IRVKN)
ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲನವನಾದ ಪರಾಕ್ರಮಶಾಲಿಯ ಮೊಮ್ಮಗನೂ, ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇನ್ನೂರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು, ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.
1 ಪೂರ್ವಕಾಲವೃತ್ತಾ 11 : 23 (IRVKN)
ಮತ್ತೊಮ್ಮೆ ಏಳುವರೆ ಅಡಿ ಎತ್ತರದ ಅತಿ ಬಲವಾದ ಈಟಿಯನ್ನು ಹೊಂದಿದ್ದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿದ್ದ ಈಟಿಯು ನೇಕಾರರ ಕುಂಟೆಯಂತಿತ್ತು. ಆದರೆ ಇವನ ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.
1 ಪೂರ್ವಕಾಲವೃತ್ತಾ 11 : 24 (IRVKN)
ಈ ಪರಾಕ್ರಮ ಕೃತ್ಯದಿಂದ ಯೆಹೋಯಾದನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.
1 ಪೂರ್ವಕಾಲವೃತ್ತಾ 11 : 25 (IRVKN)
ಮೂವತ್ತು ಜನರಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.
1 ಪೂರ್ವಕಾಲವೃತ್ತಾ 11 : 26 (IRVKN)
ಯುದ್ಧವೀರರ ಇನ್ನೊಂದು ಪಟ್ಟಿ: ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಖಾನಾನ್,
1 ಪೂರ್ವಕಾಲವೃತ್ತಾ 11 : 27 (IRVKN)
ಹರೋರಿನವನಾದ ಶಮ್ಮೋತ್, ಪೆಲೋನ್ಯನಾದ ಹೆಲೆಚ್,
1 ಪೂರ್ವಕಾಲವೃತ್ತಾ 11 : 28 (IRVKN)
ತೆಕೋವದ ಇಕ್ಕೇಷನ ಮಗನಾದ ಈರ, ಅನತೋತಿನವನಾದ ಅಬೀಯೆಜೆರ,
1 ಪೂರ್ವಕಾಲವೃತ್ತಾ 11 : 29 (IRVKN)
ಹುಷ ಊರಿನವನಾದ ಸಿಬ್ಬೆಕೈ, ಅಹೋಹಿನವನಾದ ಈಲೈ,
1 ಪೂರ್ವಕಾಲವೃತ್ತಾ 11 : 30 (IRVKN)
ನೆಟೋಫದವನಾದ ಮಹರೈ ಮತ್ತು ಬಾಣನ ಮಗನಾದ ಹೇಲೆದ್,
1 ಪೂರ್ವಕಾಲವೃತ್ತಾ 11 : 31 (IRVKN)
ಬೆನ್ಯಾಮೀನ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಈತೈ. ಪಿರಾತೋನ್ಯನಾದ ಬೆನಾಯ,
1 ಪೂರ್ವಕಾಲವೃತ್ತಾ 11 : 32 (IRVKN)
ಹಲೇಗಾಷಿನವನಾದ ಹೂರೈ, ಅರಾಬಾ ತಗ್ಗಿನವನಾದ ಅಬೀಯೇಲ್,
1 ಪೂರ್ವಕಾಲವೃತ್ತಾ 11 : 33 (IRVKN)
ಬಹರೂಮ್ಯನಾದ ಅಜ್ಮಾವೆತ್, ಶಾಲ್ಬೋನ್ಯನಾದ ಎಲೆಯಖ್ಬ.
1 ಪೂರ್ವಕಾಲವೃತ್ತಾ 11 : 34 (IRVKN)
ಗೀಜೋನ್ಯನಾದ ಹಾಷೇಮನ ಮಕ್ಕಳು, ಹರಾರ್ಯನಾದ ಶಾಗೇಯನ ಮಗ, ಯೋನಾತಾನ,
1 ಪೂರ್ವಕಾಲವೃತ್ತಾ 11 : 35 (IRVKN)
ಹರಾರ್ಯನಾದ ಶಾಕಾರನ ಮಗ ಅಹೀಯಾಮ್, ಊರನ ಮಗನಾದ ಎಲೀಫಲ್,
1 ಪೂರ್ವಕಾಲವೃತ್ತಾ 11 : 36 (IRVKN)
ಮೆಕೆರಾತ್ಯನಾದ ಹೇಫೆರ್, ಪೆಲೋನ್ಯನಾದ ಅಹೀಯ,
1 ಪೂರ್ವಕಾಲವೃತ್ತಾ 11 : 37 (IRVKN)
ಕರ್ಮೆಲ್ಯನಾದ ಹಚ್ರೋ, ಎಜ್ಬೈಯ ಮಗನಾದ ನಾರೈ,
1 ಪೂರ್ವಕಾಲವೃತ್ತಾ 11 : 38 (IRVKN)
ನಾತಾನನ ತಮ್ಮನಾದ ಯೋವೇಲ್, ಹಗ್ರೀಯನ ಮಗನಾದ ಮಿಬ್ಹಾರ,
1 ಪೂರ್ವಕಾಲವೃತ್ತಾ 11 : 39 (IRVKN)
ಅಮ್ಮೋನಿಯನಾದ ಚೆಲೆಕ್ ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನೂ ಆಯುಧ ಹೊರುವವನು ಆಗಿದ್ದ ನಹರೈ,
1 ಪೂರ್ವಕಾಲವೃತ್ತಾ 11 : 40 (IRVKN)
ಇತ್ರೀಯರಾದ ಈರ, ಗಾರೇಬರು,
1 ಪೂರ್ವಕಾಲವೃತ್ತಾ 11 : 41 (IRVKN)
ಹಿತ್ತಿಯನಾದ ಊರೀಯ, ಅಹ್ಲೈಯ ಮಗನಾದ ಜಾಬಾದ್,
1 ಪೂರ್ವಕಾಲವೃತ್ತಾ 11 : 42 (IRVKN)
ರೂಬೇನ್ಯನೂ ತನ್ನ ಜೊತೆಯಲ್ಲಿ ಬಂದ ಮೂವತ್ತು ಜನರು. ರೂಬೇನ್ಯರ ಮುಖ್ಯಸ್ಥನೂ ಶೀಜನ ಮಗನೂ ಆದ ಅದೀನ
1 ಪೂರ್ವಕಾಲವೃತ್ತಾ 11 : 43 (IRVKN)
ಮಾಕನ ಮಗನಾದ ಹಾನಾನ್, ಮೆತೆನ ಊರಿನವನಾದ ಯೋಷಾಫಾಟ್,
1 ಪೂರ್ವಕಾಲವೃತ್ತಾ 11 : 44 (IRVKN)
ಅಷ್ಟೆರಾತ್ಯನಾದ ಉಜ್ಜೀಯ, ಅರೋಯೇರಿನ ಹೋತಾಮನ ಮಕ್ಕಳಾದ ಶಾಮಾ ಯೆಗೀಯೇಲರು,
1 ಪೂರ್ವಕಾಲವೃತ್ತಾ 11 : 45 (IRVKN)
ಶಿಮ್ರಿಯ ಮಗನಾದ ಎದೀಗಯೇಲ್, ಎದೀಗೇಲನ ತಮ್ಮನೂ ತೀಚೀಯನೂ ಆದ ಯೋಹ,
1 ಪೂರ್ವಕಾಲವೃತ್ತಾ 11 : 46 (IRVKN)
ಎಲ್ನಾಮನ ಮಕ್ಕಳಾದ ಮಹವೀಯನಾದ ಎಲೀಯೇಲ್, ಯೆರೀಬೈ ಮತ್ತು ಯೋಷವ್ಯರು. ಮೋವಾಬ್ಯನಾದ ಇತ್ಮ,
1 ಪೂರ್ವಕಾಲವೃತ್ತಾ 11 : 47 (IRVKN)
ಎಲೀಯೇಲ್ ಓಬೇದರು, ಮೆಚೋಬಾಯದವನಾದ ಯಾಸೀಯೇಲನು ಇವರೇ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47