1 ಪೂರ್ವಕಾಲವೃತ್ತಾ 13 : 1 (IRVKN)
ಮಂಜೂಷವನ್ನು ಕಿರ್ಯಾತ್ಯಾರೀಮಿನಿಂದ ತಂದದ್ದು ಮತ್ತು ಸಂಭವಿಸಿದ ಆಪತ್ತು ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ,
1 ಪೂರ್ವಕಾಲವೃತ್ತಾ 13 : 2 (IRVKN)
“ನಿಮ್ಮ ಸಮ್ಮತಿಯೂ ಮತ್ತು ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವುದಾದರೆ, ನಾವು ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಬೇಗನೆ ಕರೆಕಳುಹಿಸೋಣ.
1 ಪೂರ್ವಕಾಲವೃತ್ತಾ 13 : 3 (IRVKN)
ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ” ಎಂದು ಹೇಳಿದನು.
1 ಪೂರ್ವಕಾಲವೃತ್ತಾ 13 : 4 (IRVKN)
ಅವರೆಲ್ಲರೂ ಆ ಮಾತಿಗೆ ಒಪ್ಪಿ ಅದರಂತೆ ಮಾಡಬೇಕೆಂದು ಹೇಳಿದರು.
1 ಪೂರ್ವಕಾಲವೃತ್ತಾ 13 : 5 (IRVKN)
ಆಗ ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತರುವುದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯ ವರೆಗೂ ವಾಸಿಸುತ್ತಿದ್ದ
1 ಪೂರ್ವಕಾಲವೃತ್ತಾ 13 : 6 (IRVKN)
ಎಲ್ಲಾ ಇಸ್ರಾಯೇಲ್ಯರನ್ನು ಒಟ್ಟಿಗೆ ಸೇರಿಸಿ ಅವರೆಲ್ಲರೊಡನೆ, ಯೆಹೂದ ದೇಶದ ಬಾಳಾ ಎನ್ನಿಸಿಕೊಳ್ಳುತ್ತಿದ್ದ ಕಿರ್ಯತ್ಯಾರೀಮಿಗೆ ಹೋದನು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನನಾಗಿರುವ ಯೆಹೋವ ದೇವರ ನಾಮದಿಂದ ಪ್ರಸಿದ್ಧವಾಗಿತ್ತು.
1 ಪೂರ್ವಕಾಲವೃತ್ತಾ 13 : 7 (IRVKN)
ಅವರು ದೇವರ ಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು, ಒಂದು ಹೊಸ ಬಂಡಿಯ ಮೇಲೆ ಇಟ್ಟರು. ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಓಡಿಸಿದರು.
1 ಪೂರ್ವಕಾಲವೃತ್ತಾ 13 : 8 (IRVKN)
ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.
1 ಪೂರ್ವಕಾಲವೃತ್ತಾ 13 : 9 (IRVKN)
ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈ ಚಾಚಿ ದೇವರ ಮಂಜೂಷವನ್ನು ಹಿಡಿದನು.
1 ಪೂರ್ವಕಾಲವೃತ್ತಾ 13 : 10 (IRVKN)
ಉಜ್ಜನು ಮಂಜೂಷದ ಮೇಲೆ ಕೈಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು. ಅವನು ಅಲ್ಲೇ ದೇವರ ಸನ್ನಿಧಿಯಲ್ಲಿ ಸತ್ತನು.
1 ಪೂರ್ವಕಾಲವೃತ್ತಾ 13 : 11 (IRVKN)
ಯೆಹೋವನಿಂದ ಉಜ್ಜನು ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ.
1 ಪೂರ್ವಕಾಲವೃತ್ತಾ 13 : 12 (IRVKN)
ಆ ದಿನ ದಾವೀದನು ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ” ಎಂದುಕೊಂಡು
1 ಪೂರ್ವಕಾಲವೃತ್ತಾ 13 : 13 (IRVKN)
ಮಂಜೂಷವನ್ನು ದಾವೀದ ನಗರಕ್ಕೆ ತಾರದೇ, ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.
1 ಪೂರ್ವಕಾಲವೃತ್ತಾ 13 : 14 (IRVKN)
ದೇವರ ಮಂಜೂಷವು ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಓಬೇದೆದೋಮನ ಮನೆಯನ್ನೂ ಮತ್ತು ಅವನಿಗಿದ್ದ ಸರ್ವಸ್ವವನ್ನೂ ಆಶೀರ್ವದಿಸಿದನು.
❮
❯
1
2
3
4
5
6
7
8
9
10
11
12
13
14