1 ಪೂರ್ವಕಾಲವೃತ್ತಾ 15 : 1 (IRVKN)
ಯೆಹೋವನ ಮಂಜೂಷವನ್ನು ಯೆರೂಸಲೇಮಿಗೆ ತಂದದ್ದು ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವರ ಮಂಜೂಷಕ್ಕಾಗಿಯೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು.
1 ಪೂರ್ವಕಾಲವೃತ್ತಾ 15 : 2 (IRVKN)
ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.
1 ಪೂರ್ವಕಾಲವೃತ್ತಾ 15 : 3 (IRVKN)
ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.
1 ಪೂರ್ವಕಾಲವೃತ್ತಾ 15 : 4 (IRVKN)
ದಾವೀದನು ಕರೆಯಿಸಿದ ಆರೋನನ ವಂಶದವರು, ಲೇವಿಯರು,
1 ಪೂರ್ವಕಾಲವೃತ್ತಾ 15 : 5 (IRVKN)
ಕೆಹಾತ್ಯರಲ್ಲಿ ಊರೀಯೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರಿಪ್ಪತ್ತು ಜನರು,
1 ಪೂರ್ವಕಾಲವೃತ್ತಾ 15 : 6 (IRVKN)
ಮೆರಾರೀಯರಲ್ಲಿ ಅಸಾಯನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಇನ್ನೂರಿಪ್ಪತ್ತು ಜನರು,
1 ಪೂರ್ವಕಾಲವೃತ್ತಾ 15 : 7 (IRVKN)
ಗೇರ್ಷೋಮ್ಯರಲ್ಲಿ ಯೋವೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರಮೂವತ್ತು ಜನರು,
1 ಪೂರ್ವಕಾಲವೃತ್ತಾ 15 : 8 (IRVKN)
ಎಲೀಚಾಫಾನ್ಯರಲ್ಲಿ ಶೆಮಾಯನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಇನ್ನೂರು ಜನರು,
1 ಪೂರ್ವಕಾಲವೃತ್ತಾ 15 : 9 (IRVKN)
ಹೆಬ್ರೋನ್ಯರಲ್ಲಿ ಎಲೀಯೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಎಂಭತ್ತು ಜನರು
1 ಪೂರ್ವಕಾಲವೃತ್ತಾ 15 : 10 (IRVKN)
ಉಜ್ಜೀಯೇಲ್ಯರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರ ಹನ್ನೆರಡು ಜನರೊಂದಿಗೆ ಬಂದನು.
1 ಪೂರ್ವಕಾಲವೃತ್ತಾ 15 : 11 (IRVKN)
ಆ ಮೇಲೆ ದಾವೀದನು ಚಾದೋಕ್, ಎಬ್ಯಾತಾರ್ ಎಂಬ ಯಾಜಕರನ್ನೂ, ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್ ಎಂಬ ಲೇವಿಯರನ್ನು ಕರೆದು ಅವರಿಗೆ, “ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವು,
1 ಪೂರ್ವಕಾಲವೃತ್ತಾ 15 : 12 (IRVKN)
ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.
1 ಪೂರ್ವಕಾಲವೃತ್ತಾ 15 : 13 (IRVKN)
ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು” ಎಂದು ಹೇಳಿದನು.
1 ಪೂರ್ವಕಾಲವೃತ್ತಾ 15 : 14 (IRVKN)
ಆಗ ಯಾಜಕರೂ ಮತ್ತು ಲೇವಿಯರೂ ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ತರುವುದಕ್ಕೋಸ್ಕರ ತಮ್ಮನ್ನು ಶುದ್ಧಪಡಿಸಿಕೊಂಡರು.
1 ಪೂರ್ವಕಾಲವೃತ್ತಾ 15 : 15 (IRVKN)
ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವರ ಮಂಜೂಷವನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದರು.
1 ಪೂರ್ವಕಾಲವೃತ್ತಾ 15 : 16 (IRVKN)
ಆಗ ದಾವೀದನು ಲೇವಿಯರ ಪ್ರಧಾನರಿಗೆ, “ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ” ಎಂದು ಆಜ್ಞಾಪಿಸಿದನು.
1 ಪೂರ್ವಕಾಲವೃತ್ತಾ 15 : 17 (IRVKN)
ಆಗ ಅವರು ಯೋವೇಲನ ಮಗನಾದ ಹೇಮಾನ್, ಅವನ ಗೋತ್ರಬಂಧುವೂ ಬೆರೆಕ್ಯನ ಮಗನೂ ಆದ ಆಸಾಫ್, ತಮ್ಮ ಸಹೋದರರಾದ ಮೆರಾರೀಯರ ಕುಟುಂಬಕ್ಕೆ ಸೇರಿದ ಕೂಷಾಯನ ಮಗನಾದ ಏತಾನ್ ಎಂಬುವರನ್ನಲ್ಲದೆ,
1 ಪೂರ್ವಕಾಲವೃತ್ತಾ 15 : 18 (IRVKN)
ತಮ್ಮ ಸಹೋದರರೊಳಗೆ ಎರಡನೆಯ ದರ್ಜೆಯವರಾದ ಜೆಕರ್ಯ, ಬೇನ್, ಯಾಜೀಯೇಲ್ ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ ಎಲೀಫೆಲೇಹು, ಮಿಕ್ನೇಯ ದ್ವಾರಪಾಲಕರಾದ ಓಬೇದೆದೋಮ ಮತ್ತು ಯೆಗೀಯೇಲ್ ಇವರನ್ನು ನೇಮಿಸಿದನು.
1 ಪೂರ್ವಕಾಲವೃತ್ತಾ 15 : 19 (IRVKN)
ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಬಾರಿಸಿವವರು.
1 ಪೂರ್ವಕಾಲವೃತ್ತಾ 15 : 20 (IRVKN)
ಜೆಕರ್ಯ, ಅಜೀಯೇಲ್, ಶೆಮೀರಾಮೋತ್, ಯೆಹೀಯೇಲ್,, ಉನ್ನೀ, ಎಲೀಯಾಬ್, ಮಾಸೇಯ ಮತ್ತು ಬೆನಾಯ ಎಂಬುವವರು ತಾರಕಸ್ಥಾಯಿಯ ಸ್ವರಮಂಡಲಗಳನ್ನು ಬಾರಿಸುವವರು.
1 ಪೂರ್ವಕಾಲವೃತ್ತಾ 15 : 21 (IRVKN)
ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ದ್ವಾರಪಾಲಕರಾದ ಓಬೇದೆದೋಮ ಯೆಗೀಯೇಲರು ಅಹಜ್ಯ ಎಂಬವರು ಗಾಯಕ ನಾಯಕರಾಗಿದ್ದು ಮಂದರಸ್ಥಾಯಿಯ ಕಿನ್ನರಿಗಳನ್ನು ನುಡಿಸುವವರನ್ನು ನೆಮಿಸಿಕೊಂಡನು.
1 ಪೂರ್ವಕಾಲವೃತ್ತಾ 15 : 22 (IRVKN)
ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಲೇವಿಯರಲ್ಲಿ ನಾಯಕನೂ ಆಗಿದ್ದ ಕೆನನ್ಯನು ಮಂಜೂಷ ಹೊತ್ತವರಿಗೆ ಮೇಲ್ವಿಚಾರಕನಾಗಿದ್ದನು.
1 ಪೂರ್ವಕಾಲವೃತ್ತಾ 15 : 23 (IRVKN)
ಬೆರೆಕ್ಯ ಮತ್ತು ಎಲ್ಕಾನ ಇವರು ಮಂಜೂಷದ ದ್ವಾರಪಾಲಕರಾಗಿದ್ದರು.
1 ಪೂರ್ವಕಾಲವೃತ್ತಾ 15 : 24 (IRVKN)
ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಎಂಬ ಯಾಜಕರು ತುತ್ತೂರಿಗಳನ್ನು ಊದುತ್ತಾ ದೇವ ಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್ ಮತ್ತು ಯೆಹೀಯ ಎಂಬುವವರು ಮಂಜೂಷದ ದ್ವಾರಪಾಲಕರಾಗಿದ್ದರು.
1 ಪೂರ್ವಕಾಲವೃತ್ತಾ 15 : 25 (IRVKN)
ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಮತ್ತು ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ಒಡಂಬಡಿಕೆ ಮಂಜೂಷವನ್ನು ಉತ್ಸಾಹದಿಂದ ತರುತ್ತಿರುವಾಗ,
1 ಪೂರ್ವಕಾಲವೃತ್ತಾ 15 : 26 (IRVKN)
ಯೆಹೋವನ ಒಡಂಬಡಿಕೆ ಮಂಜೂಷವನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದ್ದರಿಂದ ಏಳು ಹೋರಿಗಳನ್ನೂ ಮತ್ತು ಏಳು ಟಗರುಗಳನ್ನೂ ಯಜ್ಞಮಾಡಿದರು.
1 ಪೂರ್ವಕಾಲವೃತ್ತಾ 15 : 27 (IRVKN)
ದಾವೀದನೂ ಮಂಜೂಷವನ್ನು ಹೊತ್ತ ಮತ್ತು ವಾದ್ಯನುಡಿಸುವ ಎಲ್ಲಾ ಲೇವಿಯರೂ, ಹೊರುವವರ ಮುಖ್ಯಸ್ಥನಾದ ಕೆನನ್ಯನೂ ನೂಲಿನ ನಿಲುವಂಗಿಗಳನ್ನು ಧರಿಸಿಕೊಂಡಿದ್ದನು. ದಾವೀದನು ಇದರ ಹೊರತಾಗಿ ನಾರಿನ ಏಫೋದನ್ನೂ ಧರಿಸಿಕೊಂಡಿದ್ದನು.
1 ಪೂರ್ವಕಾಲವೃತ್ತಾ 15 : 28 (IRVKN)
ಹೀಗೆ ಎಲ್ಲಾ ಇಸ್ರಾಯೇಲರು ಆನಂದ ಘೋಷಣೆಗಳಿಂದಲೂ, ಕೊಂಬು ಮತ್ತು ತುತ್ತೂರಿಗಳನ್ನು, ತಾಳ, ತಂತಿ ವಾದ್ಯಗಳ ಸಂಗೀತದಿಂದ ತಾಳಹಾಕುತ್ತಾ ಕಿನ್ನರಿ ಸ್ವರಮಂಡಲಗಳನ್ನು ನುಡಿಸುತ್ತಾ, ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತಂದರು.
1 ಪೂರ್ವಕಾಲವೃತ್ತಾ 15 : 29 (IRVKN)
ಯೆಹೋವನ ಒಡಂಬಡಿಕೆ ಮಂಜೂಷವು ದಾವೀದನ ನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿನೋಡಿ ದಾವೀದನು ಜಿಗಿಯುತ್ತಾ, ಕುಣಿಯುತ್ತಾ, ನೃತ್ಯಮಾಡುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.
❮
❯