1 ಪೂರ್ವಕಾಲವೃತ್ತಾ 18 : 1 (IRVKN)
ದಾವೀದನು ಸಾಧಿಸಿದ ದಿಗ್ವಿಜಯಗಳು ದಾವೀದನು ಫಿಲಿಷ್ಟಿಯರನ್ನು ಮುತ್ತಿಗೆಹಾಕಿ, ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಮತ್ತು ಅದರ ಗ್ರಾಮಗಳನ್ನೂ ತೆಗೆದುಕೊಂಡನು.
1 ಪೂರ್ವಕಾಲವೃತ್ತಾ 18 : 2 (IRVKN)
ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು.
1 ಪೂರ್ವಕಾಲವೃತ್ತಾ 18 : 3 (IRVKN)
ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.
1 ಪೂರ್ವಕಾಲವೃತ್ತಾ 18 : 4 (IRVKN)
ದಾವೀದನು ಅವನ ಸಾವಿರ ರಥಗಳನ್ನೂ, ಏಳುಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು, ಉಳಿದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿ ಬಿಟ್ಟನು.
1 ಪೂರ್ವಕಾಲವೃತ್ತಾ 18 : 5 (IRVKN)
ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ, ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.
1 ಪೂರ್ವಕಾಲವೃತ್ತಾ 18 : 6 (IRVKN)
ಇದಲ್ಲದೆ ಅವನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ವಿಜಯ ದೊರಕಿತು.
1 ಪೂರ್ವಕಾಲವೃತ್ತಾ 18 : 7 (IRVKN)
ದಾವೀದನು ಹದರೆಜರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.
1 ಪೂರ್ವಕಾಲವೃತ್ತಾ 18 : 8 (IRVKN)
ಇದಲ್ಲದೆ ದಾವೀದನು ಹದರೆಜರನ ಟಿಭತ್ ಮತ್ತು ಕೂನ್ ಎಂಬ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಕಂಚಿನ ಕಡಲೆಂಬ ಪಾತ್ರೆಯನ್ನೂ, ಕಂಬಗಳನ್ನೂ ಮತ್ತು ಬೇರೆ ಸಾಮಾನುಗಳನ್ನು ಇದೇ ತಾಮ್ರದಿಂದ ಮಾಡಿಸಿದನು.
1 ಪೂರ್ವಕಾಲವೃತ್ತಾ 18 : 9 (IRVKN)
ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
1 ಪೂರ್ವಕಾಲವೃತ್ತಾ 18 : 10 (IRVKN)
ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು.
1 ಪೂರ್ವಕಾಲವೃತ್ತಾ 18 : 11 (IRVKN)
ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.
1 ಪೂರ್ವಕಾಲವೃತ್ತಾ 18 : 12 (IRVKN)
ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಸೈನಿಕರನ್ನು ಸೋಲಿಸಿದನು.
1 ಪೂರ್ವಕಾಲವೃತ್ತಾ 18 : 13 (IRVKN)
ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.
1 ಪೂರ್ವಕಾಲವೃತ್ತಾ 18 : 14 (IRVKN)
ದಾವೀದನ ಸರದಾರರು ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನೀತಿ ಮತ್ತು ನ್ಯಾಯದಿಂದ ಕಾರ್ಯ ನಿರ್ವಹಿಸುತ್ತಿದ್ದನು.
1 ಪೂರ್ವಕಾಲವೃತ್ತಾ 18 : 15 (IRVKN)
ಚೆರೂಯಳ ಮಗನಾದ ಯೋವಾಬನು ಅವನ ಸೇನಾಧಿಪತಿಯೂ, ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.
1 ಪೂರ್ವಕಾಲವೃತ್ತಾ 18 : 16 (IRVKN)
ಅಹೀಟೂಬನ ಮಗನಾದ ಚಾದೋಕನೂ ಮತ್ತು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು. ಶವ್ಷನು ಲೇಖಕನು.
1 ಪೂರ್ವಕಾಲವೃತ್ತಾ 18 : 17 (IRVKN)
ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ * ಅಥವಾ ಯಾಜಕರಾಗಿದ್ದರು. ಪ್ರಧಾನರಾಗಿದ್ದರು.
❮
❯
1
2
3
4
5
6
7
8
9
10
11
12
13
14
15
16
17