1 ಪೂರ್ವಕಾಲವೃತ್ತಾ 2 : 1 (IRVKN)
ಇಸ್ರಾಯೇಲನ ಮಕ್ಕಳು ಇಸ್ರಾಯೇಲನ ಮಕ್ಕಳು ಯಾರೆಂದರೆ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,
1 ಪೂರ್ವಕಾಲವೃತ್ತಾ 2 : 2 (IRVKN)
ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.
1 ಪೂರ್ವಕಾಲವೃತ್ತಾ 2 : 3 (IRVKN)
ಯೆಹೂದನಿಗೆ ಏರ್, ಓನಾನ್ ಮತ್ತು ಶೇಲಾಹ ಎಂಬ ಮೂರು ಜನರು ಮಕ್ಕಳು ಶೂನನ ಮಗಳಾದ ಕಾನಾನಳಿಂದ ಹುಟ್ಟಿದರು. ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ಚಿತ್ತಕ್ಕೆ ವಿರೋಧವಾಗಿ ನಡೆದುಕೊಂಡದ್ದರಿಂದ ಯೆಹೋವನು ಅವನನ್ನು ಕೊಂದು ಹಾಕಿದನು.
1 ಪೂರ್ವಕಾಲವೃತ್ತಾ 2 : 4 (IRVKN)
ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಚ್ ಮತ್ತು ಜೆರಹ ಎಂಬವರನ್ನು ಹೆತ್ತಳು.
1 ಪೂರ್ವಕಾಲವೃತ್ತಾ 2 : 5 (IRVKN)
ಯೆಹೂದನಿಗೆ ಐದು ಮಕ್ಕಳು. ಪೆರೆಚನ ಮಕ್ಕಳು ಹೆಚ್ರೋನ್ ಮತ್ತು ಹಮೂಲ್.
1 ಪೂರ್ವಕಾಲವೃತ್ತಾ 2 : 6 (IRVKN)
ಜೆರಹನ ಐದು ಮಕ್ಕಳು ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ.
1 ಪೂರ್ವಕಾಲವೃತ್ತಾ 2 : 7 (IRVKN)
ಯೆಹೋವನಿಗೆ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ * ಆಕಾರ ದೇವರಿಗೆ ಸಮರ್ಪಿಸಲ್ಪಟ್ಟಿದ್ದ ಕೊಳ್ಳೆಯ ವಸ್ತುಗಳನ್ನು ಕದ್ದು ಬಚ್ಚಿಡುವ ಮೂಲಕ ಇವನು ಇಸ್ರಾಯೇಲ್ಯರ ಮೇಲೆ ಕೇಡನ್ನು ಬರಮಾಡಿದನು. ಯೆಹೋಶುವ ಅಧ್ಯಾಯ 7 ನೋಡಿರಿ. ಆಕಾರನು ಕರ್ಮೀಯನ ಮಗನು.
1 ಪೂರ್ವಕಾಲವೃತ್ತಾ 2 : 8 (IRVKN)
1 ಪೂರ್ವಕಾಲವೃತ್ತಾ 2 : 9 (IRVKN)
ಹೆಚ್ರೋನನ ಮಕ್ಕಳು ಯೆರಹ್ಮೇಲನು, ರಾಮ್ ಮತ್ತು ಕೆಲೂಬಾಯ್ ಎಂಬುವರು.
1 ಪೂರ್ವಕಾಲವೃತ್ತಾ 2 : 10 (IRVKN)
ರಾಮನ ವಂಶಾವಳಿ ಮತ್ತು ದಾವೀದನ ಪೂರ್ವಜರು ರಾಮನು ಅಮ್ಮೀನಾದಾಬನನ್ನು ಪಡೆದನು; ಅಮ್ಮಿನಾದಾಬನು ಯೆಹೂದ ಕುಲದ ಪ್ರಭುವಾದ ನಹಶೋನನ್ನು ಪಡೆದನು.
1 ಪೂರ್ವಕಾಲವೃತ್ತಾ 2 : 11 (IRVKN)
ನಹಶೋನನು ಸಲ್ಮನನ್ನು ಪಡೆದನು; ಸಲ್ಮನು ಬೋವಜನನ್ನು ಪಡೆದನು.
1 ಪೂರ್ವಕಾಲವೃತ್ತಾ 2 : 12 (IRVKN)
ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
1 ಪೂರ್ವಕಾಲವೃತ್ತಾ 2 : 13 (IRVKN)
ಇಷಯನ ಚೊಚ್ಚಲ ಮಗನು ಎಲೀಯಾಬ್, ಎರಡನೆಯ ಮಗ ಅಬೀನಾದಾಬ್,
1 ಪೂರ್ವಕಾಲವೃತ್ತಾ 2 : 14 (IRVKN)
ಮೂರನೆಯವನು ಶಿಮ್ಮ, ನಾಲ್ಕನೆಯವನು ನೆತನೇಲ್, ಐದನೆಯವನು ರದ್ದೈ.
1 ಪೂರ್ವಕಾಲವೃತ್ತಾ 2 : 15 (IRVKN)
ಆರನೆಯವನು ಓಚೆಮ್, ಏಳನೆಯವನು ದಾವೀದ್.
1 ಪೂರ್ವಕಾಲವೃತ್ತಾ 2 : 16 (IRVKN)
ಚೆರೂಯ ಮತ್ತು ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ ಮತ್ತು ಅಸಾಹೇಲ್ ಎಂಬವರು ಚೆರೂಯಳ ಮಕ್ಕಳು.
1 ಪೂರ್ವಕಾಲವೃತ್ತಾ 2 : 17 (IRVKN)
ಅಬೀಗೈಲಳು ಅಮಾಸನ ತಾಯಿ. ಇಷ್ಮಾಯೇಲನಾದ ಯೆತೆರ್ ಎಂಬವನು ಅವನ ತಂದೆ.
1 ಪೂರ್ವಕಾಲವೃತ್ತಾ 2 : 18 (IRVKN)
ಕಾಲೇಬನ ವಂಶಾವಳಿ ಹೆಚ್ರೋನನ ಮಗ ಕಾಲೇಬ. ಇವನು ತನ್ನ ಹೆಂಡತಿ ಅಜೂಬಳಿಂದಲೂ ಮತ್ತು ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಆಕೆಯಲ್ಲಿ ಅವನಿಗೆ ಹುಟ್ಟಿದ ಮಕ್ಕಳು ಯೇಷೆರ್, ಶೋಬಾಬ್ ಮತ್ತು ಅರ್ದೋನ್ ಎಂಬವರು.
1 ಪೂರ್ವಕಾಲವೃತ್ತಾ 2 : 19 (IRVKN)
ಅಜೂಬಳು ಸತ್ತ ಮೇಲೆ ಕಾಲೇಬನು ಎಫ್ರಾತಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ಹೂರನು ಹುಟ್ಟಿದನು.
1 ಪೂರ್ವಕಾಲವೃತ್ತಾ 2 : 20 (IRVKN)
ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲನನ್ನು ಪಡೆದನು.
1 ಪೂರ್ವಕಾಲವೃತ್ತಾ 2 : 21 (IRVKN)
ಹೆಚ್ರೋನನು ಅರವತ್ತು ವರ್ಷದವನಾದಾಗ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಮಗಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಂದ ಸೆಗೂಬನನ್ನು ಪಡೆದಳು.
1 ಪೂರ್ವಕಾಲವೃತ್ತಾ 2 : 22 (IRVKN)
ಸೆಗೂಬನು ಯಾಯೀರನನ್ನು ಪಡೆದನು; ಇವನಿಗೆ ಗಿಲ್ಯಾದ್ ದೇಶದಲ್ಲಿ ಇಪ್ಪತ್ತ್ಮೂರು ಪಟ್ಟಣಗಳು ಇದ್ದವು.
1 ಪೂರ್ವಕಾಲವೃತ್ತಾ 2 : 23 (IRVKN)
ಗೆಷೂರ್ಯರು ಮತ್ತು ಅರಾಮ್ಯರು ಯಾಯೀರನ ಸಂತಾನದವರಿಂದ ಯಾಯೀರಿನ ಗ್ರಾಮಗಳನ್ನೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನು, ಒಟ್ಟು ಅರವತ್ತು ಸಂಸ್ಥಾನಗಳನ್ನು ಗೆದ್ದುಕೊಂಡರು. ಈ ಸಂಸ್ಥಾನದವರೆಲ್ಲರೂ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಗೋತ್ರದವರು.
1 ಪೂರ್ವಕಾಲವೃತ್ತಾ 2 : 24 (IRVKN)
ಹೆಚ್ರೋನನು ಕಾಲೇಬನ ಎಫ್ರಾತದಲ್ಲಿ ಮರಣಹೊಂದಿದ ನಂತರ ಅವನ ಹೆಂಡತಿಯಾದ ಅಬೀಯ ಎಂಬಾಕೆಯು ಅಷ್ಹೂರನನ್ನು ಹೆತ್ತಳು. ಇವನು ತೆಕೋವದವರ ಮೂಲಪುರುಷನು.
1 ಪೂರ್ವಕಾಲವೃತ್ತಾ 2 : 25 (IRVKN)
ಯೆರಹ್ಮೇಲನ ವಂಶಾವಳಿ ಹೆಚ್ರೋನನ ಚೊಚ್ಚಲಮಗನಾದ ಯೆರಹ್ಮೇಲನಿಗೆ ಐದು ಮಕ್ಕಳು: ರಾಮ್ ಚೊಚ್ಚಲು ಮಗನು ಹಾಗೆಯೇ ಬೂನ, ಓರೆನ್, ಓಚೆಮ್, ಅಹೀಯ ಎಂಬುವರು ಅನಂತರ ಹುಟ್ಟಿದವರು.
1 ಪೂರ್ವಕಾಲವೃತ್ತಾ 2 : 26 (IRVKN)
ಯೆರಹ್ಮೇಲನಿಗೆ ಅಟಾರ ಎಂಬ ಇನ್ನೊಬ್ಬ ಹೆಂಡತಿಯಿದ್ದಳು. ಈಕೆಯು ಓನಾಮನ ತಾಯಿ.
1 ಪೂರ್ವಕಾಲವೃತ್ತಾ 2 : 27 (IRVKN)
ಯೆರಹ್ಮೇಲನ ಚೊಚ್ಚಲ ಮಗನಾದ ರಾಮನ ಮಕ್ಕಳು ಮಾಚ್, ಯಾಮೀನ್ ಮತ್ತು ಏಕೆರ್ ಇವರೇ.
1 ಪೂರ್ವಕಾಲವೃತ್ತಾ 2 : 28 (IRVKN)
ಓನಾಮನ ಮಕ್ಕಳು ಶಮ್ಮೈ ಮತ್ತು ಯಾದ ಎಂಬುವವರು. ಶಮ್ಮೈನ ಮಕ್ಕಳು ನಾದಾಬ್ ಮತ್ತು ಅಬಿಷೂರ್.
1 ಪೂರ್ವಕಾಲವೃತ್ತಾ 2 : 29 (IRVKN)
ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ್. ಈಕೆಯಲ್ಲಿ ಅಹ್ಬಾನ್ ಮತ್ತು ಮೊಲೀದ್ ಎಂಬುವವರು ಹುಟ್ಟಿದರು.
1 ಪೂರ್ವಕಾಲವೃತ್ತಾ 2 : 30 (IRVKN)
ನಾದಾಬನ ಮಕ್ಕಳು ಸೆಲೆದ್ ಮತ್ತು ಅಪ್ಪಯಿಮ್ ಎಂಬುವವರು. ಸೇಲೆದನು ಮಕ್ಕಳಿಲ್ಲದೆ ಸತ್ತುಹೋದನು.
1 ಪೂರ್ವಕಾಲವೃತ್ತಾ 2 : 31 (IRVKN)
ಅಪ್ಪಯಿಮನ ಮಗ ಇಷ್ಷೀ. ಇಷ್ಷೀಯನ ಮಗ ಶೇಷಾನ್. ಶೇಷಾನನ ಮಗ ಅಹ್ಲೈ.
1 ಪೂರ್ವಕಾಲವೃತ್ತಾ 2 : 32 (IRVKN)
ಶಮ್ಮೈಯ ತಮ್ಮನಾದ ಯಾದನ ಮಕ್ಕಳು ಯೆತೆರ್ ಮತ್ತು ಯೋನಾತಾನ್ ಇವರೇ. ಯೆತೆರನು ಮಕ್ಕಳಿಲ್ಲದೆ ಸತ್ತನು.
1 ಪೂರ್ವಕಾಲವೃತ್ತಾ 2 : 33 (IRVKN)
ಯೋನಾತಾನನ ಮಕ್ಕಳು ಪೆಲೆತ್ ಮತ್ತು ಜಾಜ ಎಂಬುವವರು. ಇವರೆಲ್ಲರೂ ಯೆರಹ್ಮೇಲನ ಸಂತಾನದವರು.
1 ಪೂರ್ವಕಾಲವೃತ್ತಾ 2 : 34 (IRVKN)
ಶೇಷಾನನಿಗೆ ಹೆಣ್ಣು ಮಕ್ಕಳಿದ್ದರೇ ಹೊರತು ಗಂಡು ಮಕ್ಕಳಿರಲಿಲ್ಲ. ಇದಲ್ಲದೆ ಅವನಿಗೆ ಯರ್ಹನೆಂಬ ಒಬ್ಬ ಐಗುಪ್ತ ಸೇವಕನಿದ್ದನು.
1 ಪೂರ್ವಕಾಲವೃತ್ತಾ 2 : 35 (IRVKN)
ಶೇಷಾನನು ತನ್ನ ಮಗಳನ್ನು ಸೇವಕನಾದ ಯರ್ಹನಿಗೆ ಮದುವೆಮಾಡಿಕೊಟ್ಟನು. ಆಕೆಯು ಅವನಿಂದ ಅತ್ತೈಯನ್ನು ಹೆತ್ತಳು.
1 ಪೂರ್ವಕಾಲವೃತ್ತಾ 2 : 36 (IRVKN)
ಅತ್ತೈ ನಾತಾನನನ್ನು ಪಡೆದನು; ನಾತಾನನು ಜಾಬಾದನನ್ನು ಪಡೆದನು.
1 ಪೂರ್ವಕಾಲವೃತ್ತಾ 2 : 37 (IRVKN)
ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾಲನು ಓಬೇದನನ್ನು ಪಡೆದನು.
1 ಪೂರ್ವಕಾಲವೃತ್ತಾ 2 : 38 (IRVKN)
ಓಬೇದನು ಯೇಹೂವನ್ನು ಪಡೆದನು; ಯೇಹೂವು ಅಜರ್ಯನನ್ನು ಪಡೆದನು.
1 ಪೂರ್ವಕಾಲವೃತ್ತಾ 2 : 39 (IRVKN)
ಅಜರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸನನ್ನು ಪಡೆದನು.
1 ಪೂರ್ವಕಾಲವೃತ್ತಾ 2 : 40 (IRVKN)
ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು.
1 ಪೂರ್ವಕಾಲವೃತ್ತಾ 2 : 41 (IRVKN)
ಶಲ್ಲೂಮನು ಯೆಕಮ್ಯಾಹನನ್ನು ಪಡೆದನು; ಯೆಕಮ್ಯಾಹನನು ಎಲೀಷಾಮನನ್ನು ಪಡೆದನು.
1 ಪೂರ್ವಕಾಲವೃತ್ತಾ 2 : 42 (IRVKN)
ಕಾಲೇಬನ ಗೋತ್ರಗಳು ಯೆರಹೇಲ್ಮನ ಸಹೋದರನಾದ ಕಾಲೇಬನ ಸಂತಾನದವರು: ಚೊಚ್ಚಲನು ಜೀಫ್ಯರ ಮೂಲಪುರುಷನಾದ ಮೇಷನು, ಎರಡನೆಯವನು ಮಾರೇಷನು.
1 ಪೂರ್ವಕಾಲವೃತ್ತಾ 2 : 43 (IRVKN)
ಮಾರೇಷನು ಹೆಬ್ರೋನ್ಯರ ಮೂಲಪುರುಷನು. ಹೆಬ್ರೋನ್ಯರ ಮಕ್ಕಳು ಕೋರಹ, ತಪ್ಪೂಹ, ರೆಕೆಮ್ ಮತ್ತು ಶೆಮ.
1 ಪೂರ್ವಕಾಲವೃತ್ತಾ 2 : 44 (IRVKN)
ಶೆಮ್ಯರಿಂದ ರಹಮ್ಯರು, ರಹಮ್ಯರಿಂದ ಯೊರ್ಕೆಯಾಮ್ಯರು ಹುಟ್ಟಿದರು.
1 ಪೂರ್ವಕಾಲವೃತ್ತಾ 2 : 45 (IRVKN)
ರೆಕೆಮನು ಶಮ್ಮೈನನ್ನು ಪಡೆದನು. ಶಮ್ಮೈನಿಂದ ಮವೋನ್ಯರು, ಮವೋನ್ಯರಿಂದ ಬೇತ್ಚೂರಿನವರು ಹುಟ್ಟಿದರು.
1 ಪೂರ್ವಕಾಲವೃತ್ತಾ 2 : 46 (IRVKN)
ಕಾಲೇಬನ ಉಪಪತ್ನಿಯಾದ ಏಫಳಲ್ಲಿ ಹಾರಾನ್, ಮೋಚ ಮತ್ತು ಗಾಜೇಜ್ ಎಂಬುವವರು ಹುಟ್ಟಿದರು.
1 ಪೂರ್ವಕಾಲವೃತ್ತಾ 2 : 47 (IRVKN)
ಹಾರಾನನು ಗಾಜೇಜನನ್ನು ಪಡೆದನು. ಯಾದೈಯಳಲ್ಲಿ ರೆಗೆಮ್, ಯೋತಾಮ್, ಗೇಷಾನ್, ಪೆಲೆಟ್, ಏಫ ಮತ್ತು ಶಾಫ್ ಎಂಬುವವರು ಹುಟ್ಟಿದರು.
1 ಪೂರ್ವಕಾಲವೃತ್ತಾ 2 : 48 (IRVKN)
ಕಾಲೇಬನ ಉಪಪತ್ನಿಯಾದ ಮಾಕಳಲ್ಲಿ ಶೆಬೆರ್ ಮತ್ತು ತಿರ್ಹನ್ ಎಂಬುವವರು ಹುಟ್ಟಿದರು.
1 ಪೂರ್ವಕಾಲವೃತ್ತಾ 2 : 49 (IRVKN)
ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್; ಮಕ್ಬೇನಾ ಮತ್ತು ಗಿಬ್ಯ ಪಟ್ಟಣದವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಷಾ.
1 ಪೂರ್ವಕಾಲವೃತ್ತಾ 2 : 50 (IRVKN)
ಕಾಲೇಬನ ಹೆಂಡತಿಯಾದ ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಕ್ಕಳು ಕಿರ್ಯತ್ಯಾರೀಮರ ಮೂಲಪುರುಷನಾದ ಶೋಬಾಲ್,
1 ಪೂರ್ವಕಾಲವೃತ್ತಾ 2 : 51 (IRVKN)
ಬೇತ್ಲೆಹೇಮ್ಯರ ಮೂಲಪುರುಷನಾದ ಸಲ್ಮ ಮತ್ತು ಬೇತ್ಗಾದೇರಿನ ಮೂಲಪುರುಷನಾದ ಹಾರೇಫ್.
1 ಪೂರ್ವಕಾಲವೃತ್ತಾ 2 : 52 (IRVKN)
ಕಿರ್ಯತ್ಯಾರೀಮಿನ ಮೂಲಪುರುಷನಾದ ಶೋಬಾಲನ ಸಂತಾನದವರು ಹಾರೋಯೆ, ಮಾನಹತಿಯರ ಅರ್ಧ ಜನರು,
1 ಪೂರ್ವಕಾಲವೃತ್ತಾ 2 : 53 (IRVKN)
ಕಿರ್ಯತ್ಯಾರೀಮ್ ಕುಟುಂಬಗಳವರು, ಯೆತೆರಿನವರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು ಇವರೇ. ಇವರಿಂದ ಹುಟ್ಟಿದ ಜನಾಂಗ ಚೊರ್ರಾತ್ಯರೂ ಮತ್ತು ಎಷ್ಟಾವೋಲ್ಯರೂ.
1 ಪೂರ್ವಕಾಲವೃತ್ತಾ 2 : 54 (IRVKN)
ಸಲ್ಮನಿಂದ ಬೇತ್ಲೆಹೇಮ್, ನೆಟೋಫಾ, ಅಟರೋತ್, ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಹುಟ್ಟಿದರು.
1 ಪೂರ್ವಕಾಲವೃತ್ತಾ 2 : 55 (IRVKN)
ಯಾಬೇಚಿನಲ್ಲಿ ವಾಸಿಸುವ ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ಬರೆಯುವುದರಲ್ಲೂ ಮತ್ತು ಪ್ರತಿಗಳನ್ನು ಮಾಡುವುದರಲ್ಲೂ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು ಮತ್ತು ಸೂಕಾತ್ಯರು, ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮತನಿಂದ ಹುಟ್ಟಿದ ಕೇನ್ಯರು.
❮
❯