1 ಪೂರ್ವಕಾಲವೃತ್ತಾ 21 : 1 (IRVKN)
ದಾವೀದನು ಮಾಡಿಸಿದ ಜನಗಣತಿ ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.
1 ಪೂರ್ವಕಾಲವೃತ್ತಾ 21 : 2 (IRVKN)
ದಾವೀದನು ಯೋವಾಬನನ್ನೂ ಮತ್ತು ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ, ಇಸ್ರಾಯೇಲರನ್ನು ಲೆಕ್ಕ ಮಾಡಿಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.
1 ಪೂರ್ವಕಾಲವೃತ್ತಾ 21 : 3 (IRVKN)
ಆಗ ಯೋವಾಬನು, “ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ” ಎಂದನು.
1 ಪೂರ್ವಕಾಲವೃತ್ತಾ 21 : 4 (IRVKN)
ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ನಡೆಸಿದ್ದರಿಂದ ಅವನು ಹೊರಟುಹೋಗಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿದನು.
1 ಪೂರ್ವಕಾಲವೃತ್ತಾ 21 : 5 (IRVKN)
ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಸಂಖ್ಯೆಯು ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ ಮತ್ತು ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.
1 ಪೂರ್ವಕಾಲವೃತ್ತಾ 21 : 6 (IRVKN)
ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದುದರಿಂದ ಅವನು ಲೇವಿ ಮತ್ತು ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.
1 ಪೂರ್ವಕಾಲವೃತ್ತಾ 21 : 7 (IRVKN)
ದಾವೀದನ ಪಾಪಕ್ಕೆ ಶಿಕ್ಷೆ ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು.
1 ಪೂರ್ವಕಾಲವೃತ್ತಾ 21 : 8 (IRVKN)
ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ದೇವರನ್ನು ಪ್ರಾರ್ಥಿಸಿದನು.
1 ಪೂರ್ವಕಾಲವೃತ್ತಾ 21 : 9 (IRVKN)
ಯೆಹೋವನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನೆಂದರೆ,
1 ಪೂರ್ವಕಾಲವೃತ್ತಾ 21 : 10 (IRVKN)
ಯೆಹೋವನು ಇಂತೆನ್ನುತ್ತಾನೆ, “ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂಬುದಾಗಿ ದಾವೀದನಿಗೆ ಹೇಳು” ಎಂದನು.
1 ಪೂರ್ವಕಾಲವೃತ್ತಾ 21 : 11 (IRVKN)
ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ, “ಯೆಹೋವನು ಹೇಳುವುದೇನೆಂದರೆ,
1 ಪೂರ್ವಕಾಲವೃತ್ತಾ 21 : 12 (IRVKN)
‘ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಆರಿಸಿಕೊ’ ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು” ಎಂದು ಹೇಳಿದನು.
1 ಪೂರ್ವಕಾಲವೃತ್ತಾ 21 : 13 (IRVKN)
ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬೀಳುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬೀಳುವುದು ಮೇಲು. ಆತನು ಕೃಪಾಪೂರ್ಣನು” ಎಂದು ಹೇಳಿದನು.
1 ಪೂರ್ವಕಾಲವೃತ್ತಾ 21 : 14 (IRVKN)
ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
1 ಪೂರ್ವಕಾಲವೃತ್ತಾ 21 : 15 (IRVKN)
ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.
1 ಪೂರ್ವಕಾಲವೃತ್ತಾ 21 : 16 (IRVKN)
ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು.
1 ಪೂರ್ವಕಾಲವೃತ್ತಾ 21 : 17 (IRVKN)
ಮತ್ತು ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ. ಮಹಾಪಾಪಮಾಡಿದವನು ನಾನೇ. ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವುದಕ್ಕೆ ಅವರಿಗೆ ವಿರುದ್ಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರುದ್ಧವಾಗಿರಲಿ” ಎಂದು ಬೇಡಿಕೊಂಡನು.
1 ಪೂರ್ವಕಾಲವೃತ್ತಾ 21 : 18 (IRVKN)
ದಾವೀದನು ಯಜ್ಞವೇದಿಯನ್ನು ಕಟ್ಟಿಸಿದ್ದು ಆಗ ಯೆಹೋವನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವುದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು” ಎಂದು ಆಜ್ಞಾಪಿಸಿದನು.
1 ಪೂರ್ವಕಾಲವೃತ್ತಾ 21 : 19 (IRVKN)
ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.
1 ಪೂರ್ವಕಾಲವೃತ್ತಾ 21 : 20 (IRVKN)
ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನ ಜೊತೆಯಲ್ಲಿದ್ದ ಅವನ ನಾಲ್ಕು ಮಕ್ಕಳು ಅಡಗಿಕೊಂಡಿದ್ದರು.
1 ಪೂರ್ವಕಾಲವೃತ್ತಾ 21 : 21 (IRVKN)
ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡು ಕಣವನ್ನು ಬಿಟ್ಟು ಹೋಗಿ ಅವನಿಗೆ ಅಡ್ಡ ಬಿದ್ದನು.
1 ಪೂರ್ವಕಾಲವೃತ್ತಾ 21 : 22 (IRVKN)
ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು.
1 ಪೂರ್ವಕಾಲವೃತ್ತಾ 21 : 23 (IRVKN)
ಆಗ ಒರ್ನಾನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಯಜ್ಞಮಾಡೋಣವಾಗಲಿ. ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆಗಳೂ, ನೈವೇದ್ಯಕ್ಕೋಸ್ಕರ ಗೋದಿಯೂ ಇರುತ್ತವೆ. ಇವೆಲ್ಲವನ್ನೂ ಕೊಡುತ್ತೇನೆ” ಎಂದು ಹೇಳಿದನು.
1 ಪೂರ್ವಕಾಲವೃತ್ತಾ 21 : 24 (IRVKN)
ಅರಸನಾದ ದಾವೀದನು ಒರ್ನಾನನಿಗೆ “ಹಾಗಲ್ಲ ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ ನಿನಗೆ ಸೇರಿದ್ದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು.
1 ಪೂರ್ವಕಾಲವೃತ್ತಾ 21 : 25 (IRVKN)
ದಾವೀದನು ಆ ಭೂಮಿಗೋಸ್ಕರ ಅವನಿಗೆ ಆರುನೂರು ಶೆಕಲ್ ಬಂಗಾರವನ್ನು ಕೊಟ್ಟನು.
1 ಪೂರ್ವಕಾಲವೃತ್ತಾ 21 : 26 (IRVKN)
ಅಲ್ಲಿ ದಾವೀದನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿ, ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ, ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ,
1 ಪೂರ್ವಕಾಲವೃತ್ತಾ 21 : 27 (IRVKN)
ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು.
1 ಪೂರ್ವಕಾಲವೃತ್ತಾ 21 : 28 (IRVKN)
ದಾವೀದನು ದೇವಾಲಯಕ್ಕೋಸ್ಕರ ಸ್ಥಳವನ್ನು ಗೊತ್ತುಮಾಡಿದ್ದು ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರ ಮತ್ತು ಯಜ್ಞವೇದಿಯು ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು.
1 ಪೂರ್ವಕಾಲವೃತ್ತಾ 21 : 29 (IRVKN)
ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು.
1 ಪೂರ್ವಕಾಲವೃತ್ತಾ 21 : 30 (IRVKN)
ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರ ದೊರಕಿತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30