1 ಪೂರ್ವಕಾಲವೃತ್ತಾ 24 : 1 (IRVKN)
ಯಾಜಕರ ಕರ್ತವ್ಯಗಳು ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.
1 ಪೂರ್ವಕಾಲವೃತ್ತಾ 24 : 2 (IRVKN)
ನಾದಾಬ್ ಮತ್ತು ಅಬೀಹೂ ಎಂಬುವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.
1 ಪೂರ್ವಕಾಲವೃತ್ತಾ 24 : 3 (IRVKN)
ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.
1 ಪೂರ್ವಕಾಲವೃತ್ತಾ 24 : 4 (IRVKN)
ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,
1 ಪೂರ್ವಕಾಲವೃತ್ತಾ 24 : 5 (IRVKN)
ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.
1 ಪೂರ್ವಕಾಲವೃತ್ತಾ 24 : 6 (IRVKN)
ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
1 ಪೂರ್ವಕಾಲವೃತ್ತಾ 24 : 7 (IRVKN)
ಮೊದಲನೆಯ ಚೀಟು ಯೆಹೋಯಾರೀಬನಿಗೆ, ಎರಡನೆಯದು ಯೆದಾಯನಿಗೆ,
1 ಪೂರ್ವಕಾಲವೃತ್ತಾ 24 : 8 (IRVKN)
ಮೂರನೆಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮನಿಗೆ,
1 ಪೂರ್ವಕಾಲವೃತ್ತಾ 24 : 9 (IRVKN)
ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾಮೀನನಿಗೆ,
1 ಪೂರ್ವಕಾಲವೃತ್ತಾ 24 : 10 (IRVKN)
ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,
1 ಪೂರ್ವಕಾಲವೃತ್ತಾ 24 : 11 (IRVKN)
ಒಂಬತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ,
1 ಪೂರ್ವಕಾಲವೃತ್ತಾ 24 : 12 (IRVKN)
ಹನ್ನೊಂದನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ,
1 ಪೂರ್ವಕಾಲವೃತ್ತಾ 24 : 13 (IRVKN)
ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಷೆಬಾಬನಿಗೆ,
1 ಪೂರ್ವಕಾಲವೃತ್ತಾ 24 : 14 (IRVKN)
ಹದಿನೈದನೆಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,
1 ಪೂರ್ವಕಾಲವೃತ್ತಾ 24 : 15 (IRVKN)
ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆಯದು ಹಪ್ಪಿಚ್ಚೇಚನಿಗೆ,
1 ಪೂರ್ವಕಾಲವೃತ್ತಾ 24 : 16 (IRVKN)
ಹತ್ತೊಂಬತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ,
1 ಪೂರ್ವಕಾಲವೃತ್ತಾ 24 : 17 (IRVKN)
ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆರಡನೆಯದು ಗಾಮೂಲನಿಗೆ,
1 ಪೂರ್ವಕಾಲವೃತ್ತಾ 24 : 18 (IRVKN)
ಇಪ್ಪತ್ತ ಮೂರನೆಯದು ದೆಲಾಯನಿಗೆ, ಇಪ್ಪತ್ತ ನಾಲ್ಕನೆಯದು ಮಾಜ್ಯನಿಗೆ ಬಿದ್ದಿತು.
1 ಪೂರ್ವಕಾಲವೃತ್ತಾ 24 : 19 (IRVKN)
ಆರೋನ್ಯರು ಈ ವರ್ಗ ಕ್ರಮದಿಂದ ಯೆಹೋವನ ಆಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು.
1 ಪೂರ್ವಕಾಲವೃತ್ತಾ 24 : 20 (IRVKN)
ಉಳಿದ ಲೇವಿಯರು ಉಳಿದ ಲೇವಿಯರ ಪಟ್ಟಿ. ಅಮ್ರಾಮನ ಸಂತಾನದವರಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು.
1 ಪೂರ್ವಕಾಲವೃತ್ತಾ 24 : 21 (IRVKN)
ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನೂ,
1 ಪೂರ್ವಕಾಲವೃತ್ತಾ 24 : 22 (IRVKN)
ಇಚ್ಹಾರನ ಸಂತಾನದ ಶೆಲೋಮೋತನ ಕುಟುಂಬದವರಲ್ಲಿ ಯಹತನೂ ಪ್ರಧಾನರು.
1 ಪೂರ್ವಕಾಲವೃತ್ತಾ 24 : 23 (IRVKN)
ಹೆಬ್ರೋನನ ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು, ಮೂರನೆಯವನು ಮತ್ತು ಯೆಕಮ್ಮಾಮನು ನಾಲ್ಕನೆಯವನು,
1 ಪೂರ್ವಕಾಲವೃತ್ತಾ 24 : 24 (IRVKN)
ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ,
1 ಪೂರ್ವಕಾಲವೃತ್ತಾ 24 : 25 (IRVKN)
ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನು ಪ್ರಧಾನರು.
1 ಪೂರ್ವಕಾಲವೃತ್ತಾ 24 : 26 (IRVKN)
ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವನು ಬೆನೋ.
1 ಪೂರ್ವಕಾಲವೃತ್ತಾ 24 : 27 (IRVKN)
ಮೆರಾರೀಯ ಸಂತಾನದವರಲ್ಲಿ ಯಾಜ್ಯ, ಬೆನೋ, ಶೋಹಮ್, ಜಕ್ಕೂರ್ ಮತ್ತು ಇಬ್ರೀ ಇವರೇ.
1 ಪೂರ್ವಕಾಲವೃತ್ತಾ 24 : 28 (IRVKN)
ಮಹ್ಲೀಯನ ಮಗನಾದ ಎಲ್ಲಾಜಾರನೂ ಮಕ್ಕಳಿಲ್ಲದೆ ಸತ್ತನು.
1 ಪೂರ್ವಕಾಲವೃತ್ತಾ 24 : 29 (IRVKN)
ಕೀಷನಿಂದ ಯೆರಹ್ಮೇಲನು ಹುಟ್ಟಿದನು.
1 ಪೂರ್ವಕಾಲವೃತ್ತಾ 24 : 30 (IRVKN)
ಮೂಷೀಯನ ಮಕ್ಕಳು ಮಹ್ಲೀ, ಏದೆರ್ ಮತ್ತು ಯೆರೀಮೋತ್ ಎಂಬುವವರು.
1 ಪೂರ್ವಕಾಲವೃತ್ತಾ 24 : 31 (IRVKN)
ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.
❮
❯