1 ಪೂರ್ವಕಾಲವೃತ್ತಾ 27 : 1 (IRVKN)
ಸೈನಿಕರ ವರ್ಗಗಳು ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.
1 ಪೂರ್ವಕಾಲವೃತ್ತಾ 27 : 2 (IRVKN)
ಪೆರೆಚನ ಸಂತಾನದವನೂ, ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕನು.
1 ಪೂರ್ವಕಾಲವೃತ್ತಾ 27 : 3 (IRVKN)
ಇವನು ಮೊದಲನೆಯ ತಿಂಗಳಿನ ಸೈನ್ಯಾಧಿಪತಿಯ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವೆ ಮಾಡತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.
1 ಪೂರ್ವಕಾಲವೃತ್ತಾ 27 : 4 (IRVKN)
ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ಆ ವರ್ಗದಲ್ಲಿ ಮಿಕ್ಲೋತನೆಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.
1 ಪೂರ್ವಕಾಲವೃತ್ತಾ 27 : 5 (IRVKN)
ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕನು. ಮೂರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
1 ಪೂರ್ವಕಾಲವೃತ್ತಾ 27 : 6 (IRVKN)
ಈ ಬೆನಾಯನು ಮೂವತ್ತು ಜನರಲ್ಲಿ ಪ್ರಸಿದ್ಧನಾದ ಯುದ್ಧವೀರನೂ ಅವರ ಮುಖ್ಯಸ್ಥನೂ ಆಗಿದ್ದನು. ಅವನ ವರ್ಗದಲ್ಲಿ ಅವನ ಮಗನಾದ ಅಮ್ಮೀಜಾಬಾದನು ಇದ್ದನು.
1 ಪೂರ್ವಕಾಲವೃತ್ತಾ 27 : 7 (IRVKN)
ಯೋವಾಬನ ತಮ್ಮನಾದ ಅಸಾಹೇಲನು. ಅವನು ಸತ್ತ ನಂತರ ಅವನ ಮಗನಾದ ಜೆಬದ್ಯನು ನಾಲ್ಕನೆಯ ವರ್ಗದ ನಾಯಕನು. ನಾಲ್ಕನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
1 ಪೂರ್ವಕಾಲವೃತ್ತಾ 27 : 8 (IRVKN)
ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕನು. ಐದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
1 ಪೂರ್ವಕಾಲವೃತ್ತಾ 27 : 9 (IRVKN)
ತೆಕೋವಿನ ಇಕ್ಕೇಷನ ಮಗನಾದ ಈರ ಎಂಬುವನು ಆರನೆಯ ವರ್ಗದ ನಾಯಕನು. ಆರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
1 ಪೂರ್ವಕಾಲವೃತ್ತಾ 27 : 10 (IRVKN)
ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು. ಏಳನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
1 ಪೂರ್ವಕಾಲವೃತ್ತಾ 27 : 11 (IRVKN)
ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕನು. ಎಂಟನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
1 ಪೂರ್ವಕಾಲವೃತ್ತಾ 27 : 12 (IRVKN)
ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬೀಯೆಜೆರನು ಒಂಬತ್ತನೆಯ ವರ್ಗದ ನಾಯಕನು. ಒಂಬತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
1 ಪೂರ್ವಕಾಲವೃತ್ತಾ 27 : 13 (IRVKN)
ನೆಟೋಫ ಊರಿನವನಾದ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು. ಹತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
1 ಪೂರ್ವಕಾಲವೃತ್ತಾ 27 : 14 (IRVKN)
ಎಫ್ರಾಯೀಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕನು. ಹನ್ನೊಂದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
1 ಪೂರ್ವಕಾಲವೃತ್ತಾ 27 : 15 (IRVKN)
ನೆಟೋಫ ಊರಿನವನಾದ ಒತ್ನೀಯೇಲನ ಸಂತಾನದವನಾದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕನು. ಹನ್ನೆರಡನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
1 ಪೂರ್ವಕಾಲವೃತ್ತಾ 27 : 16 (IRVKN)
ಕುಲ ಪ್ರಭುಗಳು ಇಸ್ರಾಯೇಲಿನ ಕುಲ ಪ್ರಭುಗಳು: ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರನು; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯನು;
1 ಪೂರ್ವಕಾಲವೃತ್ತಾ 27 : 17 (IRVKN)
ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ; ಆರೋನ್ಯರಲ್ಲಿ ಚಾದೋಕ್;
1 ಪೂರ್ವಕಾಲವೃತ್ತಾ 27 : 18 (IRVKN)
ಯೆಹೂದ್ಯರಲ್ಲಿ ದಾವೀದನ ಅಣ್ಣನಾದ ಎಲೀಹು; ಇಸ್ಸಾಕಾರ್ಯರಲ್ಲಿ ಮೀಕಾಯೇಲನ ಮಗನಾದ ಒಮ್ರಿ;
1 ಪೂರ್ವಕಾಲವೃತ್ತಾ 27 : 19 (IRVKN)
ಜೆಬುಲೂನ್ಯರಲ್ಲಿ ಓಬದ್ಯನ ಮಗನಾದ ಇಷ್ಮಾಯ; ನಫ್ತಾಲ್ಯರಲ್ಲಿ ಅಜ್ರೀಯೇಲನ ಮಗನಾದ ಯೆರೀಮೋತ್;
1 ಪೂರ್ವಕಾಲವೃತ್ತಾ 27 : 20 (IRVKN)
ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯ; ಮನಸ್ಸೆಯ ಅರ್ಧ ಕುಲದವರಲ್ಲಿ ಪೆದಾಯನ ಮಗನಾದ ಯೋವೇಲ್;
1 ಪೂರ್ವಕಾಲವೃತ್ತಾ 27 : 21 (IRVKN)
ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಕುಲದವರಲ್ಲಿ ಜೆಕರ್ಯಯನ ಮಗನಾದ ಇದ್ದೋ; ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗನಾದ ಯಗಸೀಯೇಲ್;
1 ಪೂರ್ವಕಾಲವೃತ್ತಾ 27 : 22 (IRVKN)
ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲನು ಇವರೇ.
1 ಪೂರ್ವಕಾಲವೃತ್ತಾ 27 : 23 (IRVKN)
ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.
1 ಪೂರ್ವಕಾಲವೃತ್ತಾ 27 : 24 (IRVKN)
ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದ ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ಇತಿಹಾಸ ಗ್ರಂಥದಲ್ಲಿ ದಾಖಲಿಸಲಿಲ್ಲ.
1 ಪೂರ್ವಕಾಲವೃತ್ತಾ 27 : 25 (IRVKN)
ಅರಸನ ಆಸ್ತಿಯ ಮೇಲ್ವಿಚಾರಕರು ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳನ್ನು ಅದೀಯೇಲನ ಮಗನಾದ ಅಜ್ಮಾವೆತ್, ಹೊಲದಲ್ಲಿಯೂ ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆ ಇದ್ದ ಉಗ್ರಾಣಗಳನ್ನು ಉಜ್ಜೀಯನ ಮಗನಾದ ಯೋನಾತಾನನು ಇದ್ದನು.
1 ಪೂರ್ವಕಾಲವೃತ್ತಾ 27 : 26 (IRVKN)
ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಕೆಲೂಬನ ಮಗನಾದ ಎಜ್ರೀ ಇದ್ದನು.
1 ಪೂರ್ವಕಾಲವೃತ್ತಾ 27 : 27 (IRVKN)
ದ್ರಾಕ್ಷಿ ತೋಟಗಳ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳನ್ನು ಶಿಪ್ಮೀಯನಾದ ಜಬ್ದೀ ಇದ್ದನು.
1 ಪೂರ್ವಕಾಲವೃತ್ತಾ 27 : 28 (IRVKN)
ಎಣ್ಣೇ ಮರದ ತೋಪುಗಳನ್ನೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳನ್ನು ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳನ್ನು ನೋಡಿಕೊಳ್ಳಲು ಯೋವಾಷ್ ಇದ್ದನು.
1 ಪೂರ್ವಕಾಲವೃತ್ತಾ 27 : 29 (IRVKN)
ಶಾರೋನಿನಲ್ಲಿ ಮೇಯುವ ಹಸುಗಳನ್ನು ಶಾರೋನ್ಯನಾದ ಶಿಟ್ರೈ ಇದ್ದನು. ತಗ್ಗುಗಳಲ್ಲಿ ಮೇಯುವ ಹಸುಗಳನ್ನು ಅದ್ಲೈಯ ಮಗನಾದ ಶಾಫಾಟನು ಇದ್ದನು.
1 ಪೂರ್ವಕಾಲವೃತ್ತಾ 27 : 30 (IRVKN)
ಒಂಟೆಗಳನ್ನು ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳನ್ನು ಮೇರೊನೋತ್ಯನಾದ ಯೆಹ್ದೆಯ.
1 ಪೂರ್ವಕಾಲವೃತ್ತಾ 27 : 31 (IRVKN)
ಆಡುಕುರಿಗಳನ್ನು ಹಗ್ರೀಯನಾದ ಯಾಜೀಜ್ ನೋಡಿಕೊಳ್ಳುತ್ತಿದ್ದರು.
1 ಪೂರ್ವಕಾಲವೃತ್ತಾ 27 : 32 (IRVKN)
ವಿವೇಕಿಯೂ, ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು, ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು.
1 ಪೂರ್ವಕಾಲವೃತ್ತಾ 27 : 33 (IRVKN)
ಅಹೀತೋಫೆಲನು ಅರಸನ ಮಂತ್ರಿಯೂ, ಅರ್ಕೀಯನಾದ ಹೂಷೈಯು ಅರಸನ ಮಿತ್ರನಾಗಿದ್ದನು.
1 ಪೂರ್ವಕಾಲವೃತ್ತಾ 27 : 34 (IRVKN)
ಬೆನಾಯನ ಮಗನಾದ ಯೆಹೋಯಾದಾವನೂ, ಎಬ್ಯಾತಾರನೂ, ಅಹೀತೋಫೆಲನ ನಂತರದ ಉತ್ತರಾಧಿಕಾರಿಗಳು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34