1 ಪೂರ್ವಕಾಲವೃತ್ತಾ 3 : 1 (IRVKN)
ದಾವೀದನ ವಂಶಾವಳಿ ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು: ಚೊಚ್ಚಲಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು, ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು.
1 ಪೂರ್ವಕಾಲವೃತ್ತಾ 3 : 2 (IRVKN)
ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.
1 ಪೂರ್ವಕಾಲವೃತ್ತಾ 3 : 3 (IRVKN)
ಐದನೆಯವನು ಶೆಫಟ್ಯ, ಇವನು ಅಬೀಟಲಳ ಮಗನು. ಆರನೆಯವನು ಇತ್ರಾಮ್. ಇವನು ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದವನು.
1 ಪೂರ್ವಕಾಲವೃತ್ತಾ 3 : 4 (IRVKN)
ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಜನರು ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರ್ಷ ಆರು ತಿಂಗಳು ಆಡಳಿತ ನಡೆಸಿದನು ಮತ್ತು ಯೆರೂಸಲೇಮನ್ನು ಮೂವತ್ತಮೂರು ವರ್ಷ ಆಳಿದನು.
1 ಪೂರ್ವಕಾಲವೃತ್ತಾ 3 : 5 (IRVKN)
ಯೆರೂಸಲೇಮಿನಲ್ಲಿರುವಾಗ ಅವನಿಗೆ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಮಕ್ಕಳು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು.
1 ಪೂರ್ವಕಾಲವೃತ್ತಾ 3 : 6 (IRVKN)
ಇದಲ್ಲದೆ ಇಬ್ಹಾರ್, ಎಲೀಷಾಮ್, ಎಲೀಫೆಲೆಟ್,
1 ಪೂರ್ವಕಾಲವೃತ್ತಾ 3 : 7 (IRVKN)
ನೋಗ, ನೆಫೆಗ್, ಯಾಫೀಯ,
1 ಪೂರ್ವಕಾಲವೃತ್ತಾ 3 : 8 (IRVKN)
ಎಲೀಷಾಮ್, ಎಲ್ಯಾದ್, ಎಲೀಫೆಲೆಟ್ ಎಂಬ ಒಂಬತ್ತು ಮಕ್ಕಳು ಅವನಿಗೆ ಅಲ್ಲಿಯೇ ಹುಟ್ಟಿದರು.
1 ಪೂರ್ವಕಾಲವೃತ್ತಾ 3 : 9 (IRVKN)
ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು.
1 ಪೂರ್ವಕಾಲವೃತ್ತಾ 3 : 10 (IRVKN)
ಸೊಲೊಮೋನನ ವಂಶಜರು ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ;
1 ಪೂರ್ವಕಾಲವೃತ್ತಾ 3 : 11 (IRVKN)
ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು.
1 ಪೂರ್ವಕಾಲವೃತ್ತಾ 3 : 12 (IRVKN)
ಯೋವಾಷನ ಮಗ ಅಮಚ್ಯ. ಅಮಚ್ಯ ಮಗ ಅಜರ್ಯ; ಅಜರ್ಯನ ಮಗ ಯೋತಾಮ್.
1 ಪೂರ್ವಕಾಲವೃತ್ತಾ 3 : 13 (IRVKN)
ಯೋತಾಮನ ಮಗ ಆಹಾಜ; ಆಹಾಜನ ಮಗ ಹಿಜ್ಕೀಯನು. ಹಿಜ್ಕೀಯನ ಮಗ ಮನಸ್ಸೆಯು.
1 ಪೂರ್ವಕಾಲವೃತ್ತಾ 3 : 14 (IRVKN)
ಮನಸ್ಸೆಯ ಮಗ ಆಮೋನ್; ಆಮೋನನ ಮಗ ಯೋಷೀಯ.
1 ಪೂರ್ವಕಾಲವೃತ್ತಾ 3 : 15 (IRVKN)
ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿದ್ಕೀಯ, ನಾಲ್ಕನೆಯವನು ಶಲ್ಲೂಮ್.
1 ಪೂರ್ವಕಾಲವೃತ್ತಾ 3 : 16 (IRVKN)
ಯೆಹೋಯಾಕೀಮನ ಮಗ ಯೆಕೊನ್ಯನು; ಯೆಕೊನ್ಯನ ಮಗ ಚಿದ್ಕೀಯನು.
1 ಪೂರ್ವಕಾಲವೃತ್ತಾ 3 : 17 (IRVKN)
ಯೆಹೋಯಾಕೀಮನ ವಂಶಜರು ಬಾಬಿಲೋನಿಯರಿಂದ ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು ಶೆಯಲ್ತೀಯೇಲ್,
1 ಪೂರ್ವಕಾಲವೃತ್ತಾ 3 : 18 (IRVKN)
ಮಲ್ಕೀರಾಮ್, ಪೆದಾಯ್, ಶೆನಚ್ಚರ್, ಯೆಕಮ್ಯ, ಹೋಷಾಮ್ ಮತ್ತು ನೆದಬ್ಯ ಎಂಬ ಏಳು ಗಂಡುಮಕ್ಕಳು.
1 ಪೂರ್ವಕಾಲವೃತ್ತಾ 3 : 19 (IRVKN)
ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು.
1 ಪೂರ್ವಕಾಲವೃತ್ತಾ 3 : 20 (IRVKN)
ಇವರಲ್ಲದೆ ಪೆದಾಯನಿಗೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ ಹೆಸೆದ್ ಎಂಬ ಐದು ಗಂಡು ಮಕ್ಕಳಿದ್ದರು.
1 ಪೂರ್ವಕಾಲವೃತ್ತಾ 3 : 21 (IRVKN)
ಹನನ್ಯನ ಸಂತಾನದವರು: ಪೆಲಟ್ಯ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅರ್ನಾನ್, ಓಬದ್ಯ ಮತ್ತು ಶೇಕನ್ಯ.
1 ಪೂರ್ವಕಾಲವೃತ್ತಾ 3 : 22 (IRVKN)
ಶೆಕನ್ಯನ ಮಗ ಶೆಮಾಯ. ಶೆಮಾಯನಿಗೆ ಆರು ಗಂಡು ಮಕ್ಕಳು: ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.
1 ಪೂರ್ವಕಾಲವೃತ್ತಾ 3 : 23 (IRVKN)
ನೆಯರ್ಯನ ಮೂರು ಗಂಡು ಮಕ್ಕಳು: ಎಲ್ಯೋಗೆನೈ, ಹಿಜ್ಕೀಯ ಮತ್ತು ಅಜ್ರೀಕಾಮ್.
1 ಪೂರ್ವಕಾಲವೃತ್ತಾ 3 : 24 (IRVKN)
ಎಲ್ಯೋಗೆನೈಯನ ಏಳು ಗಂಡು ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ.

1 2 3 4 5 6 7 8 9 10 11 12 13 14 15 16 17 18 19 20 21 22 23 24