1 ಪೂರ್ವಕಾಲವೃತ್ತಾ 7 : 1 (IRVKN)
ಇಸ್ಸಾಕಾರನ ಕುಲ ಇಸ್ಸಾಕಾರನ ಮಕ್ಕಳು: ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ಕು ಜನರು.
1 ಪೂರ್ವಕಾಲವೃತ್ತಾ 7 : 2 (IRVKN)
ತೋಲನ ಮಕ್ಕಳಾದ, ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರು ತೋಲನ ವಂಶದ ಕುಟುಂಬಗಳಲ್ಲಿ ಪ್ರಧಾನ ಪುರುಷರೂ, ರಣವೀರರೂ ಆಗಿದ್ದರು. ತೋಲ ವಂಶದವರ ಸಂಖ್ಯೆಯು ದಾವೀದನ ಕಾಲದಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು.
1 ಪೂರ್ವಕಾಲವೃತ್ತಾ 7 : 3 (IRVKN)
ಉಜ್ಜೀಯನ ಮಗ ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು ಮಿಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಇವರು ಈ ಕುಟುಂಬದ ಗೋತ್ರಪ್ರಧಾನರು.
1 ಪೂರ್ವಕಾಲವೃತ್ತಾ 7 : 4 (IRVKN)
ಇವರ ಹೆಂಡತಿ ಮಕ್ಕಳೂ, ಇವರ ಗೋತ್ರ ಕುಟುಂಬಗಳಿಗೆ ಸೇರುವ ಯುದ್ಧಭಟರು ಮತ್ತು ಹೆಂಡತಿ, ಮಕ್ಕಳು ಒಟ್ಟು ಮೂವತ್ತಾರು ಸಾವಿರ.
1 ಪೂರ್ವಕಾಲವೃತ್ತಾ 7 : 5 (IRVKN)
ಇವರ ಗೋತ್ರ ಸಂಬಂಧಿಗಳಾದ ಇಸ್ಸಾಕಾರ್ಯರೆಲ್ಲರೂ ರಣವೀರರು. ಈ ಕುಟುಂಬದ ಬಹುಪಾಲು ಪುರುಷರು ಸೈನ್ಯದಲ್ಲಿ ಸೇವೆಮಾಡಲು ಯೋಗ್ಯರಾಗಿದ್ದರೆಂದು ತಮ್ಮನ್ನು ಅರ್ಪಿಸಿಕೊಂಡರು, ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟವರು ಒಟ್ಟು ಎಂಭತ್ತೇಳು ಸಾವಿರ ಮಂದಿ.
1 ಪೂರ್ವಕಾಲವೃತ್ತಾ 7 : 6 (IRVKN)
ಬೆನ್ಯಾಮೀನ್ ಕುಲ ಬೆನ್ಯಾಮೀನನಿಗೆ ಬೆಳ, ಬೆಕೆರ್, ಯೆದೀಯಯೇಲ್ ಎಂಬ ಮೂರು ಮಕ್ಕಳಿದ್ದರು.
1 ಪೂರ್ವಕಾಲವೃತ್ತಾ 7 : 7 (IRVKN)
ಬೆಳನ ಮಕ್ಕಳು ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ ಎಂಬವರು. ಈ ಐದು ಜನರು ಗೋತ್ರ ಪ್ರಧಾನರು ರಣವೀರರೂ ಆಗಿದ್ದರು. ಅವರ ವಂಶಾವಳಿಯ ಪಟ್ಟಿಯಲ್ಲಿ ಇಪ್ಪತ್ತೆರಡು ಸಾವಿರದ ಮೂವತ್ತನಾಲ್ಕು ಜನರೆಂದು ಲೆಕ್ಕಿಸಲ್ಪಟ್ಟವರು.
1 ಪೂರ್ವಕಾಲವೃತ್ತಾ 7 : 8 (IRVKN)
ಬೆಕೆರನ ಮಕ್ಕಳು ಜೆಮೀರ್, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಆಲೆಮೆತ್ ಎಂಬವರು.
1 ಪೂರ್ವಕಾಲವೃತ್ತಾ 7 : 9 (IRVKN)
ರಣವೀರರಾದ ಈ ಗೋತ್ರಪ್ರಧಾನರ ವಂಶಾವಳಿಯ ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟ ಇಪ್ಪತ್ತು ಸಾವಿರದ ಇನ್ನೂರು ಯುದ್ಧ ಪರಾಕ್ರಮಶಾಲಿಗಳು.
1 ಪೂರ್ವಕಾಲವೃತ್ತಾ 7 : 10 (IRVKN)
ಯೆದೀಯಯೇಲನ ಮಗ ಬಿಲ್ಹಾನ್. ಬಿಲ್ಹಾನನ ಮಕ್ಕಳು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್, ಅಹೀಷೆಹರ್ ಎಂಬವರು.
1 ಪೂರ್ವಕಾಲವೃತ್ತಾ 7 : 11 (IRVKN)
ಈ ಗೋತ್ರ ಪ್ರಧಾನರಿಗೆ ಸೇರಿದವರೆಲ್ಲರೂ ಯೆದೀಯಯೇಲನ ಸಂತಾನದವರು. ಇವರಲ್ಲಿ ಹದಿನೇಳು ಸಾವಿರದ ಇನ್ನೂರು ಯುದ್ಧದಲ್ಲಿ ಹೋರಾಡತಕ್ಕ ಪರಾಕ್ರಮ ಶಾಲಿಗಳು.
1 ಪೂರ್ವಕಾಲವೃತ್ತಾ 7 : 12 (IRVKN)
1 ಪೂರ್ವಕಾಲವೃತ್ತಾ 7 : 13 (IRVKN)
ಶುಪ್ಪೀಮ್ ಮತ್ತು ಹುಪ್ಪೀಮರು ಈರನ ಮಕ್ಕಳು. ಹುಶೀಮನು ಅಹೇರನ ಮಗ. ನಫ್ತಾಲಿ ಕುಲ
1 ಪೂರ್ವಕಾಲವೃತ್ತಾ 7 : 14 (IRVKN)
ನಫ್ತಾಲಿಯ ಮಕ್ಕಳು ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಸಂತಾನದವರು. ಮನಸ್ಸೆ ಕುಲ ಮನಸ್ಸೆಯ ಸಂತಾನದವರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಷ್ರೀಯೇಲ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ.
1 ಪೂರ್ವಕಾಲವೃತ್ತಾ 7 : 15 (IRVKN)
ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮ್ಯರಿಂದ ಹೆಣ್ಣನ್ನು ತೆಗೆದುಕೊಂಡನು. ಅವನ ತಂಗಿಯ ಹೆಸರು ಮಾಕ. ಅವನ ತಮ್ಮನ ಹೆಸರು ಚೆಲೋಫಾದ್. ಚೆಲೋಫಾದನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು.
1 ಪೂರ್ವಕಾಲವೃತ್ತಾ 7 : 16 (IRVKN)
ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು, ಅವನಿಗೆ ಪೆರೇಷ್ ಎಂದು ಹೆಸರಿಟ್ಟಳು. ಇವನ ತಮ್ಮನ ಹೆಸರು ಶೆರೆಷ್. ಶೆರೆಷನ ಮಕ್ಕಳು ಊಲಾಮ್ ಮತ್ತು ರೆಕೆಮ್.
1 ಪೂರ್ವಕಾಲವೃತ್ತಾ 7 : 17 (IRVKN)
ಉಲಾಮನ ಮಗನು ಬೆದಾನ್. ಇವರು ಮನಸ್ಸೆಯ ಮೊಮ್ಮಗ ಹಾಗೂ ಮಾಕೀರನ ಮಗ. ಇವರು ಗಿಲ್ಯಾದನ ಸಂತಾನದವರು.
1 ಪೂರ್ವಕಾಲವೃತ್ತಾ 7 : 18 (IRVKN)
ಗಿಲ್ಯಾದನ ತಂಗಿಯಾದ ಹಮ್ಮೋಲೆಕೆತಳು ಈಷ್ಹೋದ್, ಅಬೀಯೆಜೆರ್, ಮಹ್ಲ ಎಂಬವರನ್ನು ಹೆತ್ತಳು.
1 ಪೂರ್ವಕಾಲವೃತ್ತಾ 7 : 19 (IRVKN)
ಶೆಮೀದನ ಮಕ್ಕಳು ಅಹ್ಯಾನ್, ಶೆಕೆಮ್, ಲಿಕ್ಹೀ, ಅನೀಯಾಮ್.
1 ಪೂರ್ವಕಾಲವೃತ್ತಾ 7 : 20 (IRVKN)
ಎಫ್ರಾಯೀಮ್ ಕುಲ ಎಫ್ರಾಯೀಮನ ಸಂತಾನದವರು: ಎಫ್ರಾಯೀಮನ ಮಗ ಶೂತೆಲಹ, ಇವನ ಮಗ ಬೆರೆದ್. ಬೆರೆದನ ಮಗ ತಹತ್; ಇವನ ಮಗ ಎಲ್ಲಾದ್. ಎಲ್ಲಾದನ ಮಗ ತಹತ್;
1 ಪೂರ್ವಕಾಲವೃತ್ತಾ 7 : 21 (IRVKN)
ತಹತನ ಮಗ ಜಾಬಾದ್, ಜಾಬಾದನ ಮಕ್ಕಳು ಶೂತೆಲಹ, ಏಜೆರ್ ಮತ್ತು ಎಲ್ಲಾದ್. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವುದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದುದರಿಂದ ಆ ದೇಶದ ಮೂಲ ನಿವಾಸಿಗಳು ಇವರನ್ನು ಕೊಂದುಹಾಕಿದರು.
1 ಪೂರ್ವಕಾಲವೃತ್ತಾ 7 : 22 (IRVKN)
ಆದುದರಿಂದ ಇವರ ತಂದೆಯಾದ ಎಫ್ರಾಯೀಮನು ಬಹುದಿನಗಳವರೆಗೂ ದುಃಖಪಡುತ್ತಿದ್ದನು. ಅವನ ಸಹೋದರರು ಅವನನ್ನು ಸಂತೈಸುವುದಕ್ಕೋಸ್ಕರ ಬಂದರು.
1 ಪೂರ್ವಕಾಲವೃತ್ತಾ 7 : 23 (IRVKN)
ಅವನು ತನ್ನ ಹೆಂಡತಿಯನ್ನು ಸಂಗಮಿಸಲು, ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಇದು ಅವನ ಕುಟುಂಬಕ್ಕೆ ಒದಗಿದ ಆಪತ್ತಿನಲ್ಲಿ ಸಂಭವಿಸಿದ್ದರಿಂದ ಆ ಮಗನಿಗೆ ಬೆರೀಯ ಎಂದು ಹೆಸರಿಟ್ಟನು.
1 ಪೂರ್ವಕಾಲವೃತ್ತಾ 7 : 24 (IRVKN)
ಶೇರ ಎಂಬವಳು ಅವನ ಮಗಳು. ಈಕೆಯು ಮೇಲಣ ಮತ್ತು ಕೆಳಗಣ ಬೇತ್ ಹೊರೋನ್ ಎಂಬ ಪಟ್ಟಣಗಳನ್ನು ಮತ್ತು ಉಜ್ಜೀನ್ ಶೇರ ಎಂಬ ಪಟ್ಟಣಗಳನ್ನೂ ಕಟ್ಟಿಸಿದಳು.
1 ಪೂರ್ವಕಾಲವೃತ್ತಾ 7 : 25 (IRVKN)
ಬೆರೀಯ ಮಗ ರೆಫಹ. ಇವನ ಮಗ ರೆಷೆಫ್, ಇವನ ಮಗ ತೆಲಹ, ಇವನ ಮಗ ತಹಾನ್.
1 ಪೂರ್ವಕಾಲವೃತ್ತಾ 7 : 26 (IRVKN)
ತಹಾನನ ಮಗ ಲದ್ದಾನ್, ಇವನ ಮಗ ಅಮ್ಮೀಹೂದ್, ಇವನ ಮಗ ಎಲೀಷಾಮ.
1 ಪೂರ್ವಕಾಲವೃತ್ತಾ 7 : 27 (IRVKN)
ಎಲೀಷಾಮ ಮಗ ನೋನ್, ಇವನ ಮಗ ಯೆಹೋಷುವ.
1 ಪೂರ್ವಕಾಲವೃತ್ತಾ 7 : 28 (IRVKN)
ಅವರು ವಾಸಿಸುವ ಸ್ವತ್ತಿನ ಮೇರೆಗಳು ದಕ್ಷಿಣ ದಿಕ್ಕಿನಲ್ಲಿ ಬೇತೇಲ್ ಪಟ್ಟಣ, ಅದರ ಗ್ರಾಮಗಳೂ ಪೂರ್ವ ದಿಕ್ಕಿನಲ್ಲಿ ನಾರಾನ್, ಪಶ್ಚಿಮ ದಿಕ್ಕಿನಲ್ಲಿ ಗೆಜೆರ್ ಪಟ್ಟಣವೂ ಅದರ ಗ್ರಾಮಗಳೂ; ಉತ್ತರ ದಿಕ್ಕಿನಲ್ಲಿ ಶೆಕೆಮ್ ಮತ್ತು ಆಯಾ ಪಟ್ಟಣಗಳೂ ಅವುಗಳ ಗ್ರಾಮಗಳು.
1 ಪೂರ್ವಕಾಲವೃತ್ತಾ 7 : 29 (IRVKN)
ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳೂ, ಅವುಗಳ ಗ್ರಾಮಗಳೂ ಮನಸ್ಸೆ ಕುಲದವರ ವಶದಲ್ಲಿದ್ದವು. ಈ ಊರುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸಿಸುತ್ತಿದ್ದರು.
1 ಪೂರ್ವಕಾಲವೃತ್ತಾ 7 : 30 (IRVKN)
ಅಶೇರ ಕುಲ ಅಶೇರನ ಸಂತಾನದವರು: ಇಮ್ನ, ಇಷ್ವ, ಇಷ್ವೀ, ಬೆರೀಯ ಎಂಬವರೂ ಸೆರಹಳೆಂಬ ಇವರ ತಂಗಿ.
1 ಪೂರ್ವಕಾಲವೃತ್ತಾ 7 : 31 (IRVKN)
ಬೆರೀಯನ ಮಕ್ಕಳು ಹೆಬೆರ್, ಬಿರ್ಜೈತ್ ಊರಿನವರ ಮೂಲಪುರುಷನಾದ ಮಲ್ಕೀಯೇಲ್.
1 ಪೂರ್ವಕಾಲವೃತ್ತಾ 7 : 32 (IRVKN)
ಹೆಬೆರನು ಯಫ್ಲೇಟ್, ಶೋಮೇರ್, ಹೋತಾಮ್ ಇವರನ್ನೂ ಇವರ ತಂಗಿಯಾದ ಶೂವಳನ್ನೂ ಪಡೆದನು.
1 ಪೂರ್ವಕಾಲವೃತ್ತಾ 7 : 33 (IRVKN)
ಪಾಸಕ್, ಬಿಮ್ಹಾಲ್, ಅಶ್ವಾತ್ ಇವರು ಯಫ್ಲೇಟನ ಮಕ್ಕಳು.
1 ಪೂರ್ವಕಾಲವೃತ್ತಾ 7 : 34 (IRVKN)
ಅಹೀ, ರೋಹ್ಗ, ಹುಬ್ಬ, ಅರಾಮ್ ಎಂಬುವವರು ಶಮೆರನ ಮಕ್ಕಳು.
1 ಪೂರ್ವಕಾಲವೃತ್ತಾ 7 : 35 (IRVKN)
ಇವನ ತಮ್ಮನಾದ ಹೆಲೆಮನ ಮಕ್ಕಳು, ಚೋಫಹ, ಇಮ್ನ, ಶೇಲೆಷ್, ಆಮಾಲ್ ಇವರೇ.
1 ಪೂರ್ವಕಾಲವೃತ್ತಾ 7 : 36 (IRVKN)
ಚೋಫಹನ ಮಕ್ಕಳು ಸೂಹ, ಹರ್ನೇಫೆರ್, ಶೂಗಾಲ್, ಬೇರೀ, ಇಮ್ರ,
1 ಪೂರ್ವಕಾಲವೃತ್ತಾ 7 : 37 (IRVKN)
ಬೆಚೆರ್, ಹೋದ್, ಶಮ್ಮ, ಶಿಲ್ಷನು, ಇತ್ರಾನ್, ಬೇರ.
1 ಪೂರ್ವಕಾಲವೃತ್ತಾ 7 : 38 (IRVKN)
ಯೆಫುನ್ನೆ, ಪಿಸ್ಪ, ಅರಾ ಎಂಬುವವರು ಯೆತೆರನ ಮಕ್ಕಳು.
1 ಪೂರ್ವಕಾಲವೃತ್ತಾ 7 : 39 (IRVKN)
ಆರಹ, ಹನ್ನಿಯೇಲ, ರಿಚ್ಯ ಇವರು ಉಲ್ಲನ ಮಕ್ಕಳು.
1 ಪೂರ್ವಕಾಲವೃತ್ತಾ 7 : 40 (IRVKN)
ಇವರೆಲ್ಲರು ಆಶೇರ್ಯರಲ್ಲಿ ಗೋತ್ರಪ್ರಧಾನರೂ, ಯುದ್ಧಪ್ರವೀಣರಾದ ರಣವೀರರೂ ಮತ್ತು ಶ್ರೇಷ್ಠ ನಾಯಕರೂ ಆಗಿದ್ದರು. ಇವರ ವಂಶಾವಳಿಯ ಪಟ್ಟಿಯ ಪ್ರಕಾರ ಯುದ್ಧ ಪ್ರವೀಣರಾದ ಭಟರ ಸಂಖ್ಯೆ ಇಪ್ಪತ್ತಾರು ಸಾವಿರ.
❮
❯