1 ಪೂರ್ವಕಾಲವೃತ್ತಾ 9 : 1 (IRVKN)
ಸೆರೆವಾಸದಿಂದ ಹಿಂದಿರುಗಿದವರು ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬಿಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು.
1 ಪೂರ್ವಕಾಲವೃತ್ತಾ 9 : 2 (IRVKN)
ಆಗ ಅವರ ಪಟ್ಟಣಗಳನ್ನೂ, ಸ್ವಾಸ್ತ್ಯವನ್ನೂ ಮೊದಲು ಸ್ವಾಧೀನಮಾಡಿಕೊಂಡವರು ಇಸ್ರಾಯೇಲ್ಯರು, ಯಾಜಕರು ಲೇವಿಯರು ಮತ್ತು ದೇವಾಲಯದ ಸೇವಕರು ಇವರೇ.
1 ಪೂರ್ವಕಾಲವೃತ್ತಾ 9 : 3 (IRVKN)
ಯೆಹೂದ್ಯರು, ಬೆನ್ಯಾಮೀನ್ಯರು ಎಫ್ರಾಯೀಮ್ಯರು, ಮನಸ್ಸೆಯರು ಯೆರೂಸಲೇಮಿನಲ್ಲಿ ವಾಸವಾಗಿದ್ದವರು.
1 ಪೂರ್ವಕಾಲವೃತ್ತಾ 9 : 4 (IRVKN)
ಯೆಹೂದ ಕುಲದ ಊತೈ ಅಮ್ಮೀಹೂದನ ಮಗ. ಅಮ್ಮಿಹೂದನು ಒಮ್ರಿಯ ಮಗ. ಇವನು ಇಮ್ರಿಯ, ಮಗ. ಇವನು ಬಾನಿಯ ಮಗ. ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.
1 ಪೂರ್ವಕಾಲವೃತ್ತಾ 9 : 5 (IRVKN)
ಶೇಲಾಹನ ಸಂತಾನದ ಚೊಚ್ಚಲು ಮಗನಾದ ಅಸಾಯ ಮತ್ತು ಅವನ ಮಕ್ಕಳು.
1 ಪೂರ್ವಕಾಲವೃತ್ತಾ 9 : 6 (IRVKN)
ಯೆಯೂವೇಲ್ ಜೆರಹನ ಸಂತಾನದವನು. ಇವನೂ ಇವನ ಸಹೋದರರೂ ಒಟ್ಟು ಆರುನೂರ ತೊಂಬತ್ತು ಜನರು.
1 ಪೂರ್ವಕಾಲವೃತ್ತಾ 9 : 7 (IRVKN)
ಬೆನ್ಯಾಮೀನ್ಯ ಕುಲದವರಲ್ಲಿ ಮೆಷುಲ್ಲಾಮನ ಮಗನೂ, ಹೋದವ್ಯನ ಮೊಮ್ಮಗನೂ, ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲು ಪ್ರಮುಖನಾದವನು.
1 ಪೂರ್ವಕಾಲವೃತ್ತಾ 9 : 8 (IRVKN)
ಯೆರೋಹಾಮನ ಮಗನಾದ ಇಬ್ನೆಯಾಹ; ಉಜ್ಜಿಯನ ಮಗನೂ ಮಿಕ್ರೀರಿಯ ಮೊಮ್ಮಗನೂ ಆದ ಏಲಾ, ಶೆಫಟ್ಯನ ಮಗನೂ ರೆಯೂವೇಲನ ಮೊಮ್ಮಗನೂ ಇಬ್ನಿಯನ ಮರಿಮಗನೂ ಆದ ಮೆಷುಲ್ಲಾಮ್ ಇವರೂ ಮತ್ತು ಇವರ ಸಹೋದರರೂ,
1 ಪೂರ್ವಕಾಲವೃತ್ತಾ 9 : 9 (IRVKN)
ಒಟ್ಟಿಗೆ ಒಂಬೈನೂರ ಐವತ್ತಾರು ಜನರು. ಇವರೆಲ್ಲರೂ ತಮ್ಮ ಗೋತ್ರಗಳಲ್ಲಿ ಪ್ರಧಾನಪುರುಷರು.
1 ಪೂರ್ವಕಾಲವೃತ್ತಾ 9 : 10 (IRVKN)
ಯೆರೂಸಲೇಮಿನಲ್ಲಿ ನೆಲೆಸಿದ ಯಾಜಕರು ಯಾಜಕರಲ್ಲಿ ಯೆದಾಯ, ಯೆಹೋಯಾರೀಬ್, ಯಾಕೀನ್;
1 ಪೂರ್ವಕಾಲವೃತ್ತಾ 9 : 11 (IRVKN)
ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ.
1 ಪೂರ್ವಕಾಲವೃತ್ತಾ 9 : 12 (IRVKN)
ಯೆರೋಹಾಮನ ಮಗನಾದ ಅದಾಯ ಇವನೂ ಮತ್ತು ಇವನ ಸಹೋದರರೂ ಯೆರೋಹಾಮನು, ಪಶ್ಹೂರನ ಮಗ; ಇವನು ಮಲ್ಕೀಯನ ಮಗ, ಇವನು ಮಾಸೈಯನ ಮಗ. ಇವನು ಅದೀಯೇಲನ ಮಗ. ಇವನು ಯಹ್ಜೇರನ ಮಗ. ಇವನು ಮೆಷುಲ್ಲಾಮನ ಮಗ. ಇವನು ಮೆಷಿಲ್ಲೋಮೋತನ ಮಗ. ಇವನು ಇಮ್ಮೇರನ ಮಗ.
1 ಪೂರ್ವಕಾಲವೃತ್ತಾ 9 : 13 (IRVKN)
ಗೋತ್ರ ಪ್ರಧಾನರು ದೇವಾಲಯ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ, ಇವರ ಸಹೋದರರೂ ಒಟ್ಟು ಸಾವಿರದ ಏಳು ನೂರ ಅರವತ್ತು ಜನರು.
1 ಪೂರ್ವಕಾಲವೃತ್ತಾ 9 : 14 (IRVKN)
ಯೆರೂಸಲೇಮಿನಲ್ಲಿ ನೆಲೆಸಿದ ಲೇವಿಯರು ಲೇವಿಯರಲ್ಲಿ ಹಷಬ್ಯನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಮೆರಾರೀ ಗೋತ್ರದವನೂ ಆದ ಶೆಮಾಯ
1 ಪೂರ್ವಕಾಲವೃತ್ತಾ 9 : 15 (IRVKN)
ಬಕ್ಬಕ್ಕರ್, ಹೆರೆಷ್, ಗಾಲಾಲ್, ಮೀಕನ ಮಗನೂ ಜಿಕ್ರೀಯ ಮೊಮ್ಮಗನೂ ಆಸಾಫನ ಮರಿಮಗನೂ ಆದ ಮತ್ತನ್ಯನು.
1 ಪೂರ್ವಕಾಲವೃತ್ತಾ 9 : 16 (IRVKN)
ಶೆಮಾಯನ ಮಗನೂ ಯೆದೂತೂನನ ಮರಿಮಗನೂ ಆದ ಓಬದ್ಯ. ನೆಟೋಫಾತ್ಯರ ಗ್ರಾಮಗಳಲ್ಲಿ ವಾಸವಾಗಿದ್ದ ಎಲ್ಕಾನನ ಮೊಮ್ಮಗನೂ ಆಸನ ಮಗನೂ ಆದ ಬೆರೆಕ್ಯ ಇವರೇ.
1 ಪೂರ್ವಕಾಲವೃತ್ತಾ 9 : 17 (IRVKN)
ಯೆರೂಸಲೇಮಿನಲ್ಲಿ ನೆಲೆಸಿದ ದ್ವಾರಪಾಲಕರು ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್, ಇವರೂ ಮತ್ತು ಇವರ ಸಹೋದರರು. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು.
1 ಪೂರ್ವಕಾಲವೃತ್ತಾ 9 : 18 (IRVKN)
ಶಲ್ಲೂಮರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು.
1 ಪೂರ್ವಕಾಲವೃತ್ತಾ 9 : 19 (IRVKN)
ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ, ಅವನ ಗೋತ್ರ ಬಂಧುಗಳಾದ ಮಿಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕ ಸೇವೆಗೆ ನೇಮಿಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶ ದ್ವಾರವನ್ನು ಕಾಯುವವರಾಗಿದ್ದರು.
1 ಪೂರ್ವಕಾಲವೃತ್ತಾ 9 : 20 (IRVKN)
ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.
1 ಪೂರ್ವಕಾಲವೃತ್ತಾ 9 : 21 (IRVKN)
ಮೆಷೆಲೆಮ್ಯನ ಮಗನಾದ ಜೆಕರೀಯನು ದೇವದರ್ಶನದ ಗುಡಾರ ದ್ವಾರಪಾಲಕನಾಗಿದ್ದನು.
1 ಪೂರ್ವಕಾಲವೃತ್ತಾ 9 : 22 (IRVKN)
ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಜನರು. ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಯಲ್ಲಿ ದಾಖಲಾಗಿದ್ದವು. ದಾವೀದನೂ, ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೊಗಕ್ಕೆ ನೇಮಿಸಿದರು.
1 ಪೂರ್ವಕಾಲವೃತ್ತಾ 9 : 23 (IRVKN)
ಅವರೂ ಅವರ ಮಕ್ಕಳೂ ಯೆಹೋವನ ಆಲಯದ, ಗುಡಾರದ ಬಾಗಿಲುಗಳನ್ನು ಕಾಯುತ್ತಿದ್ದರು.
1 ಪೂರ್ವಕಾಲವೃತ್ತಾ 9 : 24 (IRVKN)
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಈ ದಿಕ್ಕುಗಳಲ್ಲಿರುವ ದೇವಾಲಯದ ಬಾಗಿಲುಗಳನ್ನು ಕಾಯುವವರಾಗಿದ್ದರು.
1 ಪೂರ್ವಕಾಲವೃತ್ತಾ 9 : 25 (IRVKN)
ಗ್ರಾಮಗಳಲ್ಲಿ ಇದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸ ಮಾಡುವುದಕ್ಕೊಸ್ಕರ ಸರದಿಯಂತೆ ಕ್ರಮದ ಪ್ರಕಾರವಾಗಿ ಮೇಲೆ ಏಳೇಳು ದಿನಗಳು ಬರಬೇಕಾಯಿತು.
1 ಪೂರ್ವಕಾಲವೃತ್ತಾ 9 : 26 (IRVKN)
ಲೇವಿಯರಾದ ಮೇಲ್ಕಂಡ ನಾಲ್ಕು ಜನರು ದ್ವಾರಪಾಲಕರ ಮುಖ್ಯಸ್ಥರಾಗಿ ದೇವಾಲಯದ ಕೋಣೆಗಳನ್ನೂ ಮತ್ತು ಭಂಡಾರಗಳನ್ನೂ ನೋಡಿಕೊಳ್ಳುವ ಜವಾಬ್ದಾರರಾಗಿದ್ದರು.
1 ಪೂರ್ವಕಾಲವೃತ್ತಾ 9 : 27 (IRVKN)
ಅವರು ರಾತ್ರಿಯಲ್ಲಿ ದೇವಾಲಯದ ಸುತ್ತಲೂ ಕಾವಲು ಕಾಯುತ್ತಿದ್ದರು. ಪ್ರತಿದಿನ ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯುತ್ತಿದ್ದರು.
1 ಪೂರ್ವಕಾಲವೃತ್ತಾ 9 : 28 (IRVKN)
ಇತರ ಲೇವಿಯರು ಇದಲ್ಲದೆ ಅವರಲ್ಲಿ ಕೆಲವರು ಪೂಜಾ ಸಾಮಗ್ರಿಗಳನ್ನು ನೋಡಿಕೊಳ್ಳುವವರಾಗಿದ್ದರು. ಅವುಗಳನ್ನು ಕೊಡುವಾಗಲೂ ತಿರುಗಿ ತೆಗೆದುಕೊಳ್ಳುವಾಗಲೂ ಲೆಕ್ಕವಿರಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು.
1 ಪೂರ್ವಕಾಲವೃತ್ತಾ 9 : 29 (IRVKN)
ಇನ್ನು ಕೆಲವರು ದೇವಾಲಯದ ಎಲ್ಲಾ ವಸ್ತುಗಳ ಮೇಲ್ವಿಚಾರಕರೂ, ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.
1 ಪೂರ್ವಕಾಲವೃತ್ತಾ 9 : 30 (IRVKN)
ಯಾಜಕ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲವನ್ನು ಮಾಡುತ್ತಿದ್ದರು.
1 ಪೂರ್ವಕಾಲವೃತ್ತಾ 9 : 31 (IRVKN)
ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.
1 ಪೂರ್ವಕಾಲವೃತ್ತಾ 9 : 32 (IRVKN)
ಅವನ ಸಹೋದರರಾದ ಮಿಕ್ಕ ಕೆಹಾತ್ಯರಲ್ಲಿ ಕೆಲವರು ಪ್ರತಿ ಸಬ್ಬತ್ತಿನಲ್ಲಿ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಕೆಲಸವಿತ್ತು.
1 ಪೂರ್ವಕಾಲವೃತ್ತಾ 9 : 33 (IRVKN)
ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.
1 ಪೂರ್ವಕಾಲವೃತ್ತಾ 9 : 34 (IRVKN)
ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರ ಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.
1 ಪೂರ್ವಕಾಲವೃತ್ತಾ 9 : 35 (IRVKN)
ಅರಸನಾದ ಸೌಲನ ವಂಶಾವಳಿ ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಯೂವೇಲನು ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.
1 ಪೂರ್ವಕಾಲವೃತ್ತಾ 9 : 36 (IRVKN)
ಅವನ ಚೊಚ್ಚಲ ಮಗ ಅಬ್ದೋನನು. ತರುವಾಯ ಹುಟ್ಟಿದವರು ಚೂರ್, ಕೀಷ್, ಬಾಳ್, ನೇರ್, ನಾದಾಬ್,
1 ಪೂರ್ವಕಾಲವೃತ್ತಾ 9 : 37 (IRVKN)
ಗೆದೋರ್, ಅಹ್ಯೋ, ಜೆಕರ್ಯ ಮತ್ತು ಮಿಕ್ಲೋತ್.
1 ಪೂರ್ವಕಾಲವೃತ್ತಾ 9 : 38 (IRVKN)
ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಂದ ಬೇರೆಯಾಗಿ ಯೆರೂಸಲೇಮಿನಲ್ಲಿರುವ ತಮ್ಮ ಕುಲಸಂಬಂಧಿಕರ ಜೊತೆಯಲ್ಲಿ ವಾಸಿಸುತ್ತಿದ್ದರು.
1 ಪೂರ್ವಕಾಲವೃತ್ತಾ 9 : 39 (IRVKN)
ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ಕೀಷೂವನನ್ನೂ, ಅಬೀನಾದಾಬನನ್ನೂ, ಎಷ್ಬಾಳನನ್ನು ಪಡೆದನು.
1 ಪೂರ್ವಕಾಲವೃತ್ತಾ 9 : 40 (IRVKN)
ಯೋನಾತಾನನು ಮೆರೀಬ್ಬಾಳನನ್ನು ಪಡೆದನು. ಮೆರೀಬ್ಬಾಳನು ಮೀಕನನ್ನು ಪಡೆದನು.
1 ಪೂರ್ವಕಾಲವೃತ್ತಾ 9 : 41 (IRVKN)
ಮೀಕನ ಮಕ್ಕಳು ಪೀತೋನ್, ಮೆಲೆಕ್, ತಹ್ರೇಯ ಮತ್ತು ಅಹಾಜ ಇವರೇ.
1 ಪೂರ್ವಕಾಲವೃತ್ತಾ 9 : 42 (IRVKN)
ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತ್, ಅಜ್ಮಾವೆತ್, ಜಿಮ್ರಿ ಇವರನ್ನು ಪಡೆದನು; ಜಿಮ್ರಿಯು ಮೋಚನನ್ನು ಪಡೆದನು.
1 ಪೂರ್ವಕಾಲವೃತ್ತಾ 9 : 43 (IRVKN)
ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯ; ಇವನ ಮಗ ಎಲ್ಲಾಸ; ಇವನ ಮಗ ಅಚೇಲ.
1 ಪೂರ್ವಕಾಲವೃತ್ತಾ 9 : 44 (IRVKN)
ಅಚೇಲನಿಗೆ ಆರು ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44