1 ಕೊರಿಂಥದವರಿಗೆ 1 : 1 (IRVKN)
ಪೀಠಿಕೆ * 2 ಕೊರಿ 1:1; ಎಫೆ 1:1; ಕೊಲೊ 1:1; 2 ತಿಮೊ. 1:1 ದೇವರ ಚಿತ್ತದಂತೆ † ರೋಮಾ. 1:1 ಯೇಸು ಕ್ರಿಸ್ತನಿಂದ ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟ ಪೌಲನೂ ಮತ್ತು ನಮ್ಮ ಸಹೋದರನಾದ ‡ ಅ. ಕೃ. 18:17 ಸೊಸ್ಥೆನನೂ,
1 ಕೊರಿಂಥದವರಿಗೆ 1 : 2 (IRVKN)
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, § ಅವರಿಗೂ ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,
1 ಕೊರಿಂಥದವರಿಗೆ 1 : 3 (IRVKN)
* ರೋಮಾ. 1:7 ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ.
1 ಕೊರಿಂಥದವರಿಗೆ 1 : 4 (IRVKN)
ಪೌಲನು ಸಭೆಯವರ ವಿಷಯದಲ್ಲಿ ದೇವರಿಗೆ ಮಾಡಿದ ಕೃತಜ್ಞತಾಸ್ತುತಿ ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ರೋಮಾ. 1:8 ದೇವರನ್ನು ಕೊಂಡಾಡುತ್ತೇನೆ.
1 ಕೊರಿಂಥದವರಿಗೆ 1 : 5 (IRVKN)
ಆತನು ಎಲ್ಲಾ ರೀತಿಯಲ್ಲಿಯೂ, ಎಲ್ಲಾ ನುಡಿಗಳಲ್ಲಿಯೂ, ಎಲ್ಲಾ ತಿಳಿವಳಿಕೆಯಲ್ಲಿಯೂ, ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.
1 ಕೊರಿಂಥದವರಿಗೆ 1 : 6 (IRVKN)
ಕ್ರಿಸ್ತನ ಕುರಿತಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿರುವ ಹಾಗೆಯೇ ಆತನು ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.
1 ಕೊರಿಂಥದವರಿಗೆ 1 : 7 (IRVKN)
ರೋಮಾ. 8:19; ಫಿಲಿ. 3:20; ಇಬ್ರಿ. 9:28 ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,
1 ಕೊರಿಂಥದವರಿಗೆ 1 : 8 (IRVKN)
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು § ಫಿಲಿ. 1:6; 1 ಥೆಸ. 3:13 ಕಡೆಯವರೆಗೂ ದೃಢಪಡಿಸುವನು.
1 ಕೊರಿಂಥದವರಿಗೆ 1 : 9 (IRVKN)
* 1 ಯೋಹಾ 1:3 ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.
1 ಕೊರಿಂಥದವರಿಗೆ 1 : 10 (IRVKN)
ಕೊರಿಂಥ ಸಭೆಯಲ್ಲಿ ಉಂಟಾದ ಬೇಧಗಳು (1:10, 4:20) ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ 1 ಕೊರಿ 11:18 ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.
1 ಕೊರಿಂಥದವರಿಗೆ 1 : 11 (IRVKN)
ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು 1 ಕೊರಿ 3:3-4 ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು.
1 ಕೊರಿಂಥದವರಿಗೆ 1 : 12 (IRVKN)
ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
1 ಕೊರಿಂಥದವರಿಗೆ 1 : 13 (IRVKN)
ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ?
1 ಕೊರಿಂಥದವರಿಗೆ 1 : 14 (IRVKN)
ನಿಮ್ಮಲ್ಲಿ § ಅ. ಕೃ. 18:8 ಕ್ರಿಸ್ಪನಿಗೂ ಮತ್ತು * ರೋಮಾ. 16:23 ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ.
1 ಕೊರಿಂಥದವರಿಗೆ 1 : 15 (IRVKN)
ಆದ್ದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೆಂದು ಯಾರೂ ಹೇಳಲಾರರು. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರಮಾಡುತ್ತೇನೆ.
1 ಕೊರಿಂಥದವರಿಗೆ 1 : 16 (IRVKN)
ಇದಲ್ಲದೆ 1 ಕೊರಿ 16:15,17 ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದ್ದೇನೆ ಇದನ್ನು ಹೊರತು ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ತೋರುವುದಿಲ್ಲ.
1 ಕೊರಿಂಥದವರಿಗೆ 1 : 17 (IRVKN)
ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು 1 ಕೊರಿ 2:1,4,13 ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.
1 ಕೊರಿಂಥದವರಿಗೆ 1 : 18 (IRVKN)
ಕ್ರಿಸ್ತನ ಸುವಾರ್ತೆಯು ಮನುಷ್ಯಜ್ಞಾನಕ್ಕೆ ಅನುಸಾರವಾದದ್ದಲ್ಲ
1 ಕೊರಿಂಥದವರಿಗೆ 1 : 19 (IRVKN)
ಶಿಲುಬೆಯ ಸಂದೇಶವು § 2 ಕೊರಿ 2:15; ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು * ವ. 24; ರೋಮಾ. 1:16 ದೇವರ ಶಕ್ತಿಯಾಗಿದೆ. ಯೆಶಾ 29:14; ಮತ್ತಾ 11:25 “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.
1 ಕೊರಿಂಥದವರಿಗೆ 1 : 20 (IRVKN)
ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? 1 ಕೊರಿ 2:6; 3:19; 1:26 ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?
1 ಕೊರಿಂಥದವರಿಗೆ 1 : 21 (IRVKN)
ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.
1 ಕೊರಿಂಥದವರಿಗೆ 1 : 22 (IRVKN)
§ ಮತ್ತಾ 12:38 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
1 ಕೊರಿಂಥದವರಿಗೆ 1 : 23 (IRVKN)
ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು * ಗಲಾ. 5:11 ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.
1 ಕೊರಿಂಥದವರಿಗೆ 1 : 24 (IRVKN)
ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.
1 ಕೊರಿಂಥದವರಿಗೆ 1 : 25 (IRVKN)
ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ.
1 ಕೊರಿಂಥದವರಿಗೆ 1 : 26 (IRVKN)
ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, 1 ಕೊರಿ 2:8; ಯೋಹಾ 7:48 ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.
1 ಕೊರಿಂಥದವರಿಗೆ 1 : 27 (IRVKN)
ಯಾಕೋಬ 2:5 ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; § ಕೀರ್ತ 8:2 ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.
1 ಕೊರಿಂಥದವರಿಗೆ 1 : 28 (IRVKN)
ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ * ರೋಮಾ. 4:17 ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.
1 ಕೊರಿಂಥದವರಿಗೆ 1 : 29 (IRVKN)
ಎಫೆ 2:9 ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
1 ಕೊರಿಂಥದವರಿಗೆ 1 : 30 (IRVKN)
ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.
1 ಕೊರಿಂಥದವರಿಗೆ 1 : 31 (IRVKN)
ಯೆರೆ 9:2324; 2 ಕೊರಿ 10:17 “ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31