1 ಕೊರಿಂಥದವರಿಗೆ 10 : 1 (IRVKN)
{ಕ್ರೈಸ್ತರ ಎಚ್ಚರಿಕೆಗಾಗಿ ಪೌಲನು ಇಸ್ರಾಯೇಲ್ಯರ ದೃಷ್ಟಾಂತವನ್ನು ಸೂಚಿಸಿದ್ದು} [PS] ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ [* ವಿಮೋ 13:21] ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.
1 ಕೊರಿಂಥದವರಿಗೆ 10 : 2 (IRVKN)
[† ವಿಮೋ 14:22] ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.
1 ಕೊರಿಂಥದವರಿಗೆ 10 : 3 (IRVKN)
ಅವರೆಲ್ಲರೂ [‡ ಯೋಹಾ 6:31] ಆತ್ಮೀಕವಾದ [§ ವಿಮೋ 16:15,35] ಒಂದೇ ಆಹಾರವನ್ನು ತಿಂದರು.
1 ಕೊರಿಂಥದವರಿಗೆ 10 : 4 (IRVKN)
[* ವಿಮೋ 17:6 ] ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.
1 ಕೊರಿಂಥದವರಿಗೆ 10 : 5 (IRVKN)
ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. [† ಅರಣ್ಯ 14:16,19] ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.
1 ಕೊರಿಂಥದವರಿಗೆ 10 : 6 (IRVKN)
[‡ ಅರಣ್ಯ 11:4,33; ಕೀರ್ತ 106:14] ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.
1 ಕೊರಿಂಥದವರಿಗೆ 10 : 7 (IRVKN)
ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, [§ ವಿಮೋ 32:6] “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. [* 1 ಕೊರಿ 10:14] ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.
1 ಕೊರಿಂಥದವರಿಗೆ 10 : 8 (IRVKN)
[† ಅರಣ್ಯ 25:1-9] ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. [‡ 1 ಕೊರಿ 6:18] ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ.
1 ಕೊರಿಂಥದವರಿಗೆ 10 : 9 (IRVKN)
[§ ಅರಣ್ಯ 21:5,6] ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.
1 ಕೊರಿಂಥದವರಿಗೆ 10 : 10 (IRVKN)
[* ಅರಣ್ಯ 14:2, 29-37] ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.
1 ಕೊರಿಂಥದವರಿಗೆ 10 : 11 (IRVKN)
ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು [† ರೋಮಾ. 4:23,24] ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.
1 ಕೊರಿಂಥದವರಿಗೆ 10 : 12 (IRVKN)
[‡ ರೋಮಾ. 11:20] ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.
1 ಕೊರಿಂಥದವರಿಗೆ 10 : 13 (IRVKN)
ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. [§ 1 ಕೊರಿ 1:9] ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ [* 2 ಪೇತ್ರ. 2:9] ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು. [PS]
1 ಕೊರಿಂಥದವರಿಗೆ 10 : 14 (IRVKN)
{ಕ್ರಿಸ್ತ ಸೇವೆಗೂ ವಿಗ್ರಹಾರಾಧನೆಗೂ ಸಂಬಂಧವೇನೂ ಇರಬಾರದೆಂಬ ಬೋಧನೆ} [PS] ಆದ್ದರಿಂದ ಪ್ರಿಯರೇ, [† 1 ಕೊರಿ 10:7] ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ.
1 ಕೊರಿಂಥದವರಿಗೆ 10 : 15 (IRVKN)
ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.
1 ಕೊರಿಂಥದವರಿಗೆ 10 : 16 (IRVKN)
[‡ ಮತ್ತಾ 26:27,28] ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? [§ ಮತ್ತಾ 26:27; 1 ಕೊರಿ 11:23,24] ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?
1 ಕೊರಿಂಥದವರಿಗೆ 10 : 17 (IRVKN)
ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು [* 1 ಕೊರಿ 12:12,13; ರೋಮಾ. 12:5; ಕೊಲೊ 3:15] ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.
1 ಕೊರಿಂಥದವರಿಗೆ 10 : 18 (IRVKN)
ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. [† ಯಾಜ 3:7,15] ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.
1 ಕೊರಿಂಥದವರಿಗೆ 10 : 19 (IRVKN)
ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು [‡ ಅಥವಾ ವಿಶೇಷ] ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,
1 ಕೊರಿಂಥದವರಿಗೆ 10 : 20 (IRVKN)
ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, [§ ಧರ್ಮೋ 32:17, ಕೀರ್ತ 106:37] ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.
1 ಕೊರಿಂಥದವರಿಗೆ 10 : 21 (IRVKN)
[* 2 ಕೊರಿ 6:15,16] ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.
1 ಕೊರಿಂಥದವರಿಗೆ 10 : 22 (IRVKN)
[† ಧರ್ಮೋ 32:21] ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ? [PS]
1 ಕೊರಿಂಥದವರಿಗೆ 10 : 23 (IRVKN)
{ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನಬಹುದೋ ಬಾರದೋ ಎಂಬ ವಿಚಾರದಲ್ಲಿ ಪರರ ಹಿತವನ್ನು ಲಕ್ಷಿಸುವುದೇ ಮುಖ್ಯವಾದದ್ದು} [PS] [‡ 1 ಕೊರಿ 6:18; 8:9] “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.
1 ಕೊರಿಂಥದವರಿಗೆ 10 : 24 (IRVKN)
[§ ವ 33 ನೋಡಿರಿ] ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ.
1 ಕೊರಿಂಥದವರಿಗೆ 10 : 25 (IRVKN)
[* 1 ಕೊರಿ 8:7:] ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.
1 ಕೊರಿಂಥದವರಿಗೆ 10 : 26 (IRVKN)
[† ಕೀರ್ತ 24:1; ಕೀರ್ತ 50:12] “ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.”
1 ಕೊರಿಂಥದವರಿಗೆ 10 : 27 (IRVKN)
ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.
1 ಕೊರಿಂಥದವರಿಗೆ 10 : 28 (IRVKN)
ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.
1 ಕೊರಿಂಥದವರಿಗೆ 10 : 29 (IRVKN)
[‡ 1 ಕೊರಿ 8:9-12:] ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. [§ ರೋಮಾ. 14:16:] ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
1 ಕೊರಿಂಥದವರಿಗೆ 10 : 30 (IRVKN)
ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?
1 ಕೊರಿಂಥದವರಿಗೆ 10 : 31 (IRVKN)
ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ [* 1 ಕೊರಿ 9:22:] ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
1 ಕೊರಿಂಥದವರಿಗೆ 10 : 32 (IRVKN)
ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.
1 ಕೊರಿಂಥದವರಿಗೆ 10 : 33 (IRVKN)
ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: