1 ಕೊರಿಂಥದವರಿಗೆ 16 : 1 (IRVKN)
{ಯೆರೂಸಲೇಮಿನಲ್ಲಿದ್ದ ಬಡ ಕ್ರೈಸ್ತರಿಗೋಸ್ಕರ ಧರ್ಮದ ಹಣ ಕೂಡಿಸುವುದನ್ನು ಕುರಿತದ್ದು} [PS] ಈಗ [* ಅ. ಕೃ. 24:17] ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ.
1 ಕೊರಿಂಥದವರಿಗೆ 16 : 2 (IRVKN)
ನಿಮ್ಮಲ್ಲಿ ಪ್ರತಿಯೊಬ್ಬನು [† 2 ಕೊರಿ 8:3-11] ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ [‡ 2 ಕೊರಿ 9:3] ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.
1 ಕೊರಿಂಥದವರಿಗೆ 16 : 3 (IRVKN)
ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.
1 ಕೊರಿಂಥದವರಿಗೆ 16 : 4 (IRVKN)
ಮತ್ತೆ ನಾನು ಸಹ ಹೋಗುವುದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಬರಬಹುದು.
1 ಕೊರಿಂಥದವರಿಗೆ 16 : 5 (IRVKN)
[§ ಅ. ಕೃ. 19:9] ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ [* 1 ಕೊರಿ 4:19] ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು.
1 ಕೊರಿಂಥದವರಿಗೆ 16 : 6 (IRVKN)
ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು.
1 ಕೊರಿಂಥದವರಿಗೆ 16 : 7 (IRVKN)
[† 2 ಕೊರಿ 1:15-16] ನಾನು ಹಾದುಹೋಗುವ ಈ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. [‡ 1 ಕೊರಿ 4:19; ಯಾಕೋಬ 4:15] ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ.
1 ಕೊರಿಂಥದವರಿಗೆ 16 : 8 (IRVKN)
ಪಂಚಾಶತ್ತಮ ದಿನ ಹಬ್ಬದ ತನಕ ಎಫೆಸದಲ್ಲಿರುವೆನು;
1 ಕೊರಿಂಥದವರಿಗೆ 16 : 9 (IRVKN)
ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ [§ ಅ. ಕೃ. 19:9] ವಿರೋಧಿಗಳೂ ಅನೇಕರಿದ್ದಾರೆ. [PE][PS]
1 ಕೊರಿಂಥದವರಿಗೆ 16 : 10 (IRVKN)
[* 1 ಕೊರಿ 4:17; 2 ಕೊರಿ 9:3] ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ [† ರೋಮಾ. 16:21; 1 ಥೆಸ. 3:2; ಫಿಲಿ. 2:20-22] ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ.
1 ಕೊರಿಂಥದವರಿಗೆ 16 : 11 (IRVKN)
[‡ 1 ತಿಮೊ. 4:12; ತೀತ 2:15] ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ.
1 ಕೊರಿಂಥದವರಿಗೆ 16 : 12 (IRVKN)
[§ ಅ. ಕೃ. 18:24] ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಸಿಕ್ಕಿದಾಗ ಬರುವನು. [PS]
1 ಕೊರಿಂಥದವರಿಗೆ 16 : 13 (IRVKN)
{ಕೊನೆಯ ಮಾತುಗಳು} [PS] ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ [* ಫಿಲಿ. 1:27; 4:1] ದೃಢವಾಗಿ ನಿಲ್ಲಿರಿ. [† 1 ಸಮು 4:9] ಧೈರ್ಯವಂತರಾಗಿರಿ, ಬಲಗೊಳ್ಳಿರಿ.
1 ಕೊರಿಂಥದವರಿಗೆ 16 : 14 (IRVKN)
[‡ 1 ಕೊರಿ 14:1] ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
1 ಕೊರಿಂಥದವರಿಗೆ 16 : 15 (IRVKN)
[§ 1 ಕೊರಿ 1:16] ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ.
1 ಕೊರಿಂಥದವರಿಗೆ 16 : 16 (IRVKN)
ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು.
1 ಕೊರಿಂಥದವರಿಗೆ 16 : 17 (IRVKN)
ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು.
1 ಕೊರಿಂಥದವರಿಗೆ 16 : 18 (IRVKN)
ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ [* 2 ಕೊರಿ 7:13] ಚೈತನ್ಯಗೊಳಿಸಿದರಲ್ಲ. ಹೀಗಿರುವುದರಿಂದ ಇಂಥವರನ್ನು ಸನ್ಮಾನಿಸಿರಿ.
1 ಕೊರಿಂಥದವರಿಗೆ 16 : 19 (IRVKN)
ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. [† ಅ. ಕೃ. 18:2] ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ [‡ ರೋಮಾ. 16:5] ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.
1 ಕೊರಿಂಥದವರಿಗೆ 16 : 20 (IRVKN)
ಸಹೋದರರೆಲ್ಲರೂ ನಿಮಗೆ ವಂದನೆ ಹೇಳುತ್ತಿದ್ದಾರೆ. [§ ರೋಮಾ. 16:16] ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
1 ಕೊರಿಂಥದವರಿಗೆ 16 : 21 (IRVKN)
[* ಕೊಲೊ 4:18; 2 ಥೆಸ. 3:17; ರೋಮಾ. 16:22; ಗಲಾ. 6:11; ಫಿಲೆ. 19] ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ.
1 ಕೊರಿಂಥದವರಿಗೆ 16 : 22 (IRVKN)
ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ [† ಫಿಲಿ. 4:5] ಕರ್ತನೇ ಬಾ!
1 ಕೊರಿಂಥದವರಿಗೆ 16 : 23 (IRVKN)
[‡ ರೋಮಾ. 16:20] ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ
1 ಕೊರಿಂಥದವರಿಗೆ 16 : 24 (IRVKN)
ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇರಲಿ. ಅಮೆನ್. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24

BG:

Opacity:

Color:


Size:


Font: