1 ಕೊರಿಂಥದವರಿಗೆ 2 : 1 (IRVKN)
ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ * 1 ಕೊರಿ 2:4,13; 1:17 ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ.
1 ಕೊರಿಂಥದವರಿಗೆ 2 : 2 (IRVKN)
ಗಲಾ. 6:14 ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.
1 ಕೊರಿಂಥದವರಿಗೆ 2 : 3 (IRVKN)
ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ಅ. ಕೃ. 18:1; 6:12 ನಿಮ್ಮ ಬಳಿಯಲ್ಲಿ ಬಲಹೀನನೂ, ಭಯಪಡುವವನೂ, ಬಹು ನಡುಗುವವನೂ ಆಗಿದ್ದೆನು.
1 ಕೊರಿಂಥದವರಿಗೆ 2 : 4 (IRVKN)
(4-5)ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, § 1 ಕೊರಿ 1:21 ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
1 ಕೊರಿಂಥದವರಿಗೆ 2 : 5 (IRVKN)
1 ಕೊರಿಂಥದವರಿಗೆ 2 : 6 (IRVKN)
ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.
1 ಕೊರಿಂಥದವರಿಗೆ 2 : 7 (IRVKN)
ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ * ರೋಮಾ. 16:25,26; ಎಫೆ 3:5-9; ಕೊಲೊ 1:26 ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.
1 ಕೊರಿಂಥದವರಿಗೆ 2 : 8 (IRVKN)
ಅ. ಕೃ. 13:27 ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ‡ ಅ. ಕೃ. 3:17 ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;
1 ಕೊರಿಂಥದವರಿಗೆ 2 : 9 (IRVKN)
ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, § ಯೆಶಾ 64:4 “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”
1 ಕೊರಿಂಥದವರಿಗೆ 2 : 10 (IRVKN)
* ಮತ್ತಾ 16:17; ಗಲಾ. 1:12,16; ಎಫೆ 3:3-5 ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.
1 ಕೊರಿಂಥದವರಿಗೆ 2 : 11 (IRVKN)
ಮನುಷ್ಯನೊಳಗಿನ ಆಲೋಚನೆಗಳು ಜ್ಞಾ. 20:27 ಅವನಲ್ಲಿರುವ ಮನುಷ್ಯತ್ಮನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ.
1 ಕೊರಿಂಥದವರಿಗೆ 2 : 12 (IRVKN)
ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ.
1 ಕೊರಿಂಥದವರಿಗೆ 2 : 13 (IRVKN)
ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.
1 ಕೊರಿಂಥದವರಿಗೆ 2 : 14 (IRVKN)
ಪ್ರಾಪಂಚಿಕನು ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ § 1 ಕೊರಿ 1:18 ಹುಚ್ಚುಮಾತನಾಗಿ ತೋರುತ್ತವೆ; * ರೋಮಾ. 8:7 ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.
1 ಕೊರಿಂಥದವರಿಗೆ 2 : 15 (IRVKN)
ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.
1 ಕೊರಿಂಥದವರಿಗೆ 2 : 16 (IRVKN)
ಯೆಶಾ 40:13; ರೋಮಾ. 11:34 “ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.

1 2 3 4 5 6 7 8 9 10 11 12 13 14 15 16