1 ಕೊರಿಂಥದವರಿಗೆ 5 : 1 (IRVKN)
{ಸಭೆಯಲ್ಲಿ ನಡೆದಿದ್ದ ವಿಪರೀತ ಜಾರತ್ವವನ್ನು ಕುರಿತದ್ದು} [PS] ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. [* ಯಾಜ 18:8; ಧರ್ಮೋ 22:30; 27:20] ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.
1 ಕೊರಿಂಥದವರಿಗೆ 5 : 2 (IRVKN)
ಹೀಗಿದ್ದರೂ [† 2 ಕೊರಿ 7:7] ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.
1 ಕೊರಿಂಥದವರಿಗೆ 5 : 3 (IRVKN)
[‡ 2 ಕೊಲೊ 2:5] ನಾನಂತೂ ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ, ಆತ್ಮದಿಂದ ಹತ್ತಿರದಲ್ಲಿದ್ದು ಈ ಕಾರ್ಯ ಮಾಡಿದವನನ್ನು ಕುರಿತು ಆಗಲೇ ನಿಮ್ಮ ಹತ್ತಿರವಿದ್ದವನಂತೆ ತೀರ್ಪು ಮಾಡಿದ್ದೇನೆ.
1 ಕೊರಿಂಥದವರಿಗೆ 5 : 4 (IRVKN)
[§ 2 ಥೆಸ. 3:6; ಮತ್ತಾ 16:19; 18:18; ಯೋಹಾ 20:23; 2 ಕೊರಿ 13:10] ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು [* ಪೌಲನು ತನ್ನ ಯೋಚನೆ ಅಥವಾ ಅಭಿಪ್ರಾಯದ ಮೂಲಕ ಅವರೊಂದಿಗಿದ್ದಾನೆ. ] ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ
1 ಕೊರಿಂಥದವರಿಗೆ 5 : 5 (IRVKN)
ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ [† 1 ಕೊರಿ 1:8] ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.
1 ಕೊರಿಂಥದವರಿಗೆ 5 : 6 (IRVKN)
ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. [‡ ಗಲಾ. 5:9; 1 ಕೊರಿ 15:33] ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?
1 ಕೊರಿಂಥದವರಿಗೆ 5 : 7 (IRVKN)
ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.
1 ಕೊರಿಂಥದವರಿಗೆ 5 : 8 (IRVKN)
ಆದಕಾರಣ ನಾವು [§ ವಿಮೋ 12:15; 13:7; ಧರ್ಮೋ 16:3] ಹಳೇ ಹುಳಿಯನ್ನು [* ಮತ್ತಾ 16:6-12; ಮಾರ್ಕ 8:15; ಲೂಕ 12:1] ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ. [PE][PS]
1 ಕೊರಿಂಥದವರಿಗೆ 5 : 9 (IRVKN)
ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ.
1 ಕೊರಿಂಥದವರಿಗೆ 5 : 10 (IRVKN)
ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; [† ಯೋಹಾ 17:15] ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು.
1 ಕೊರಿಂಥದವರಿಗೆ 5 : 11 (IRVKN)
ಆದರೆ [‡ 2 ಥೆಸ. 3:6] ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.
1 ಕೊರಿಂಥದವರಿಗೆ 5 : 12 (IRVKN)
ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? [§ 1 ಕೊರಿ 6:1-4] ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ.
1 ಕೊರಿಂಥದವರಿಗೆ 5 : 13 (IRVKN)
ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ [* ಧರ್ಮೋ 13:5; 17:7; 12:22-24] ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.” [PE]

1 2 3 4 5 6 7 8 9 10 11 12 13

BG:

Opacity:

Color:


Size:


Font: