1 ಕೊರಿಂಥದವರಿಗೆ 6 : 1 (IRVKN)
ಕ್ರೈಸ್ತರು ಕ್ರೈಸ್ತರಲ್ಲದವರ ಮುಂದೆ ವ್ಯಾಜ್ಯವಾಡಿದ್ದನ್ನು ಕುರಿತದ್ದು ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ಏನಾದರೂ ವಿವಾದವಿದ್ದರೆ ನ್ಯಾಯವಿಚಾರಣೆಗೆ * ಮತ್ತಾ 18:17 ದೇವಜನರೆದುರು ತೆಗೆದುಕೊಂಡು ಹೋಗದೇ ಅನ್ಯಜನರ ಮುಂದೆ ತೆಗೆದುಕೊಂಡು ಹೋಗುವಿರೋ?
1 ಕೊರಿಂಥದವರಿಗೆ 6 : 2 (IRVKN)
ದಾನಿ. 7:22; ಮತ್ತಾ 19:28 ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ?
1 ಕೊರಿಂಥದವರಿಗೆ 6 : 3 (IRVKN)
ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
1 ಕೊರಿಂಥದವರಿಗೆ 6 : 4 (IRVKN)
ಇಹಲೋಕ ಜೀವನಕ್ಕೆ ಸಂಬಂಧಪಟ್ಟ ವಿಷಯಗಳ ನ್ಯಾಯ ನಿರ್ಣಯಿಸುವುದಕ್ಕೆ ನಿಮ್ಮಲ್ಲಿದ್ದರೆ, ಇಂಥ ವಿಷಯಗಳನ್ನು ತೀರ್ಪು ಮಾಡುವುದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ಏಕೆ ನೇಮಿಸಿಕೊಳ್ಳುತ್ತೀರಿ?
1 ಕೊರಿಂಥದವರಿಗೆ 6 : 5 (IRVKN)
ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
1 ಕೊರಿಂಥದವರಿಗೆ 6 : 6 (IRVKN)
ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ?
1 ಕೊರಿಂಥದವರಿಗೆ 6 : 7 (IRVKN)
ನಿಮ್ಮಲ್ಲಿ ವಿವಾದಗಳಿರುವುದಾದರೆ ನೀವು ಸೋತವರೆಂಬುದಕ್ಕೆ ಇದೇ ಗುರುತಾಗಿದೆ, ಅದಕ್ಕಿಂತ ಅನ್ಯಾಯವನ್ನು ಸಹಿಸುವುದೇ ಮೇಲು; ಮೋಸವನ್ನು ಅದರಿಂದಾದ ಮತ್ತಾ 5:39,40 ನಷ್ಟವನ್ನು ಯಾಕೆ ತಾಳಬಾರದು?
1 ಕೊರಿಂಥದವರಿಗೆ 6 : 8 (IRVKN)
ಆದರೆ ನೀವು ನಿಮ್ಮ § 1 ಥೆಸ. 4:6 ಸ್ವಂತ ಸಹೋದರರಿಗೆ ಅನ್ಯಾಯವನ್ನು ಮತ್ತು ಮೋಸವನ್ನು ಮಾಡಿದ್ದೀರಿ.
1 ಕೊರಿಂಥದವರಿಗೆ 6 : 9 (IRVKN)
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
1 ಕೊರಿಂಥದವರಿಗೆ 6 : 10 (IRVKN)
ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು * 1 ಕೊರಿ 15:50; ಗಲಾ. 5:21; ಎಫೆ 5:5; ಇಬ್ರಿ. 12:14; ಪ್ರಕ 21:8; 22:15 ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
1 ಕೊರಿಂಥದವರಿಗೆ 6 : 11 (IRVKN)
1 ಕೊರಿ 12:2-3, 22; 5:8; ಕೊಲೊ 3:7; ತೀತ 3:3 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ‡ ಅ. ಕೃ. 22:16; ಇಬ್ರಿ. 10:22; ತೀತ 3:5 ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, § 1 ಕೊರಿ 1:2 ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ * ರೋಮಾ. 8:30 ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
1 ಕೊರಿಂಥದವರಿಗೆ 6 : 12 (IRVKN)
ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ 1 ಕೊರಿ 10:23 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ.
1 ಕೊರಿಂಥದವರಿಗೆ 6 : 13 (IRVKN)
ಮತ್ತಾ 19:5; ಮಾರ್ಕ 10:; ಎಫೆ 5:31 “ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. § 1 ಕೊರಿ 6:15-19 ಕರ್ತನಿಗೋಸ್ಕರ ಇರುವುದಾಗಿದೆ. * ಎಫೆ 5:23 ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.
1 ಕೊರಿಂಥದವರಿಗೆ 6 : 14 (IRVKN)
ಅ. ಕೃ. 2:24 ದೇವರು ಕರ್ತನನ್ನು ತನ್ನ ಶಕ್ತಿಯಿಂದ ಪುನರುತ್ಥಾನಗೊಳಿಸಿದ ಹಾಗೆಯೇ ‡ 1 ಕೊರಿ 15:22,23; ಯೋಹಾ 6:39, 40 ನಮ್ಮನ್ನೂ ತನ್ನ ಶಕ್ತಿಯಿಂದ ಎಬ್ಬಿಸುವನು.
1 ಕೊರಿಂಥದವರಿಗೆ 6 : 15 (IRVKN)
§ 1 ಕೊರಿ 6:13; ಎಫೆ 5:30; 1 ಕೊರಿ 12:27; ರೋಮಾ. 12:5 ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು
1 ಕೊರಿಂಥದವರಿಗೆ 6 : 16 (IRVKN)
ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? * ಆದಿ 2:24; ಮತ್ತಾ 19:5; ಮಾರ್ಕ 10:8; ಎಫೆ 5:31 “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.
1 ಕೊರಿಂಥದವರಿಗೆ 6 : 17 (IRVKN)
ಆದರೆ ಕರ್ತನೊಂದಿಗೆ ಸೇರಿಕೊಂಡವನು ಎಫೆ 4:4; ಯೋಹಾ 17:21-23 ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.
1 ಕೊರಿಂಥದವರಿಗೆ 6 : 18 (IRVKN)
ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
1 ಕೊರಿಂಥದವರಿಗೆ 6 : 19 (IRVKN)
ರೋಮಾ. 14:7 ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು § 1 ಕೊರಿ 3:16; ಯೋಹಾ 2:21 ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?
1 ಕೊರಿಂಥದವರಿಗೆ 6 : 20 (IRVKN)
* 1 ಕೊರಿ 7:23; ಅ. ಕೃ. 20:28 ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ † 1 ಕೊರಿ 12:4, 11; ರೋಮಾ. 12:6 ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.

1 2 3 4 5 6 7 8 9 10 11 12 13 14 15 16 17 18 19 20