1 ಕೊರಿಂಥದವರಿಗೆ 7 : 1 (IRVKN)
ಮದುವೆಯನ್ನು ಕುರಿತು ಬೋಧನೆ ನೀವು ಬರೆದು ಕಳುಹಿಸಿದ ವಿಷಯಗಳ ಬಗ್ಗೆ ನನ್ನ ಅಭಿಪ್ರಾಯವೇನೆಂದರೆ, ಸ್ತ್ರೀಯರ * 1 ಕೊರಿ 7:8, 26 ಶರೀರ ಸಂಪರ್ಕವಿಲ್ಲದೆ ಇರುವುದು ಪುರುಷನಿಗೆ ಒಳ್ಳೆಯದು;
1 ಕೊರಿಂಥದವರಿಗೆ 7 : 2 (IRVKN)
ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.
1 ಕೊರಿಂಥದವರಿಗೆ 7 : 3 (IRVKN)
ಗಂಡನು ಹೆಂಡತಿಗೆ, ಹಾಗೆಯೇ ಹೆಂಡತಿಯು ಗಂಡನಿಗೆ ಒಗೆತನವನ್ನು ಸಲ್ಲಿಸಲಿ
1 ಕೊರಿಂಥದವರಿಗೆ 7 : 4 (IRVKN)
ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು.
1 ಕೊರಿಂಥದವರಿಗೆ 7 : 5 (IRVKN)
ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.
1 ಕೊರಿಂಥದವರಿಗೆ 7 : 6 (IRVKN)
ನಾನು ಹೀಗೆ ಮಾಡಬಹುದೆಂದು ಹೇಳುತ್ತಿರುವುದು † 1 ಕೊರಿ 7:12, 25 ಆಜ್ಞೆಯಲ್ಲ, ನನ್ನ ಅಭಿಪ್ರಾಯವಷ್ಟೇ.
1 ಕೊರಿಂಥದವರಿಗೆ 7 : 7 (IRVKN)
ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ ಆದರೆ ‡ 1 ಕೊರಿ 12:4,11; ರೋಮಾ. 12:6 ಒಬ್ಬನು ಒಂದು ವಿಧವಾಗಿ ಮತ್ತೊಬ್ಬನು ಇನ್ನೊಂದು ವಿಧವಾಗಿ ದೇವರಿಂದ ವರವನ್ನು ಹೊಂದಿಕೊಂಡಿದ್ದಾರೆ.
1 ಕೊರಿಂಥದವರಿಗೆ 7 : 8 (IRVKN)
ಅವಿವಾಹಿತರನ್ನೂ ಮತ್ತು ವಿಧವೆಯರನ್ನೂ ಕುರಿತು ನಾನು ಹೇಳುವುದೇನಂದರೆ, ನಾನಿರುವಂತೆಯೆ ಇರುವುದು ಅವರಿಗೆ ಒಳ್ಳೆಯದು.
1 ಕೊರಿಂಥದವರಿಗೆ 7 : 9 (IRVKN)
ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ.
1 ಕೊರಿಂಥದವರಿಗೆ 7 : 10 (IRVKN)
ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಲ § 1 ಕೊರಿ 7:6 ಕರ್ತನ ಆಜ್ಞೆಯು ಏನೆಂದರೆ, * ಮತ್ತಾ 5:32; ಮಾರ್ಕ 10:9 ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು.
1 ಕೊರಿಂಥದವರಿಗೆ 7 : 11 (IRVKN)
ಒಂದು ವೇಳೆ ಅಗಲಿದರೂ † ಮಾರ್ಕ 10:12 ಮದುವೆಯಾಗದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಂಧಾನವಾಗಿರಬೇಕು ಮತ್ತು ಗಂಡನು ಹೆಂಡತಿಗೆ ವಿಚ್ಛೇದನ ನೀಡಬಾರದು.
1 ಕೊರಿಂಥದವರಿಗೆ 7 : 12 (IRVKN)
ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತಲ್ಲ ಆದರೆ ನಾನು ಹೇಳುವುದೇನಂದರೆ, ಒಬ್ಬ ಸಹೋದರನಿಗೆ ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆ ಅವನೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಅವನು ಆಕೆಯನ್ನು ಬಿಡಬಾರದು.
1 ಕೊರಿಂಥದವರಿಗೆ 7 : 13 (IRVKN)
ಹಾಗೆಯೇ ಒಬ್ಬ ಸ್ತ್ರೀಗೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡಬಾರದು.
1 ಕೊರಿಂಥದವರಿಗೆ 7 : 14 (IRVKN)
ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯ ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ಪವಿತ್ರರೇ ಆಗಿದ್ದಾರೆ.
1 ಕೊರಿಂಥದವರಿಗೆ 7 : 15 (IRVKN)
ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
1 ಕೊರಿಂಥದವರಿಗೆ 7 : 16 (IRVKN)
ಸ್ತ್ರೀಯೇ, ನೀನು ‡ 1 ಪೇತ್ರ 3:1 ನಿನ್ನ ಗಂಡನನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? ಪುರುಷನೇ, ನೀನು ನಿನ್ನ ಹೆಂಡತಿಯನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು?
1 ಕೊರಿಂಥದವರಿಗೆ 7 : 17 (IRVKN)
ಆದರೆ § ರೋಮಾ. 12:3 ಕರ್ತನು ಪ್ರತಿಯೊಬ್ಬನಿಗೆ ನೇಮಿಸಿರುವ ಜವಾಬ್ದಾರಿಗೂ ಹಾಗೂ ದೇವರು ಅವರನ್ನು ಯಾವುದಕ್ಕೆ ಕರೆದನೋ ಅದಕ್ಕೂ ಸರಿಯಾಗಿ ಜೀವಿಸಲಿ. * 1 ಕೊರಿ 4:17 ಹೀಗೆ ಎಲ್ಲಾ ಸಭೆಗಳಲ್ಲಿಯೂ ಅನುಸರಿಸಿಬೇಕೆಂದು ನಾನು ಅಜ್ಞಾಪಿಸುತ್ತೇನೆ.
1 ಕೊರಿಂಥದವರಿಗೆ 7 : 18 (IRVKN)
ದೇವರು ಕರೆದ ಕಾಲದಲ್ಲಿ ಯಾವನಾದರೂ ಸುನ್ನತಿಯುಳ್ಳವನಾಗಿದ್ದನೋ ಅವನು ಸುನ್ನತಿಯಿಲ್ಲದವನಂತಾಗಬಾರದು. ದೇವರು ಕರೆದಾಗ ಯಾವನಾದರೂ ಸುನ್ನತಿಯಿಲ್ಲದವನಾಗಿದ್ದಾನೋ ಅವನು ಸುನ್ನತಿಮಾಡಿಸಿಕೊಳ್ಳಬಾರದು.
1 ಕೊರಿಂಥದವರಿಗೆ 7 : 19 (IRVKN)
† ಅ. ಕೃ. 15:1, 5, 19, 24, 28; ಗಲಾ. 5:2 ಸುನ್ನತಿ ಇರುವುದೋ ‡ ಗಲಾ. 3:28; 5:6; 6:15 ಸುನ್ನತಿ ಇಲ್ಲದಿರುವುದೋ ಪ್ರಾಮುಖ್ಯವಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಮುಖ್ಯವಾಗಿದೆ.
1 ಕೊರಿಂಥದವರಿಗೆ 7 : 20 (IRVKN)
§ 1 ಕೊರಿ 7:24 ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.
1 ಕೊರಿಂಥದವರಿಗೆ 7 : 21 (IRVKN)
ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದರ ಕುರಿತು ಚಿಂತಿಸಬೇಡ ಆದರೆ ಬಿಡುಗಡೆ ಹೊಂದುವುದಕ್ಕೆ ಸಾಧ್ಯವಾಗುವುದಾದರೆ ನೀನು ಸ್ವತಂತ್ರನಾಗು.
1 ಕೊರಿಂಥದವರಿಗೆ 7 : 22 (IRVKN)
ಯಾವನಾದರೂ ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು * ಕೊಲೊ 3:24; ಫಿಲೆ 16 ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನಾಗಿದ್ದಾನೆ. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದಾಗ ಕರೆಯಲ್ಪಟ್ಟಿರುವನೋ † ಎಫೆ 6:6 ಅವನು ಕ್ರಿಸ್ತನಿಗೆ ದಾಸನು.
1 ಕೊರಿಂಥದವರಿಗೆ 7 : 23 (IRVKN)
‡ 1 ಕೊರಿ 6:20 ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು. ಮನುಷ್ಯರಿಗೆ ದಾಸರಾಗಬೇಡಿರಿ.
1 ಕೊರಿಂಥದವರಿಗೆ 7 : 24 (IRVKN)
ಸಹೋದರರೇ, § 1 ಕೊರಿ 7:20 ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರ ಮುಂದೆ ನೆಲೆಗೊಂಡಿರಲಿ.
1 ಕೊರಿಂಥದವರಿಗೆ 7 : 25 (IRVKN)
ಅವಿವಾಹಿತರು ಮತ್ತು ವಿಧವೆಯರು ಅವಿವಾಹಿತರಾದ ಕನ್ಯೆಯರನ್ನು ಕುರಿತಂತೆ * 1 ಕೊರಿ 7:6 ಕರ್ತನಿಂದ ಬಂದ ಆಜ್ಞೆ ನನಗೆ ಯಾವುದೂ ಇಲ್ಲ. ಆದರೆ ನಾನು ನಂಬಿಗಸ್ತನಾಗಿರುವುದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.
1 ಕೊರಿಂಥದವರಿಗೆ 7 : 26 (IRVKN)
ಈಗಿನ ಕಷ್ಟ ಕಾಲದ ನಿಮಿತ್ತ † 1 ಕೊರಿ 7:1-8 ಇದ್ದ ಹಾಗೆಯೇ ಇರುವುದು ಒಳ್ಳೆಯದೆಂದು ನಾನು ಭಾವಿಸುತ್ತೇನೆ.
1 ಕೊರಿಂಥದವರಿಗೆ 7 : 27 (IRVKN)
ನೀನು ವಿವಾಹಿತನಾಗಿರುವುದಾದರೆ ಬಿಡುಗಡೆಯಾಗುವುದಕ್ಕೆ ಪ್ರಯತ್ನಿಸಬೇಡ. ನೀನು ಅವಿವಾಹಿತನಾಗಿರುವುದಾದರೆ ಹೆಂಡತಿಯನ್ನು ಪಡೆದುಕೊಳ್ಳುವುದಕ್ಕೆ ಪ್ರಯತ್ನಿಸಬೇಡ.
1 ಕೊರಿಂಥದವರಿಗೆ 7 : 28 (IRVKN)
ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಅದು ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಅನೇಕ ಕಷ್ಟಗಳು ಸಂಭವಿಸುವವು. ಇದು ನಿಮಗೆ ಉಂಟಾಗಬಾರದೆಂಬುದೇ ನನ್ನ ಅಪೇಕ್ಷೆಯಾಗಿದೆ.
1 ಕೊರಿಂಥದವರಿಗೆ 7 : 29 (IRVKN)
ಸಹೋದರರೇ, ನಾನು ಹೇಳುವುದೇನಂದರೆ, ‡ ರೋಮಾ. 13:11 ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ,
1 ಕೊರಿಂಥದವರಿಗೆ 7 : 30 (IRVKN)
ಅಳುವವರು ಅಳದಂತೆಯೂ, ಸಂತೋಷಪಡುವವರು ಸಂತೋಷಪಡದವರಂತೆಯೂ, ಕೊಂಡುಕೊಳ್ಳುವವರು ಏನೂ ಇಲ್ಲದವರಂತೆಯೂ,
1 ಕೊರಿಂಥದವರಿಗೆ 7 : 31 (IRVKN)
ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ § 1 ಪೇತ್ರ 1:24; 1 ಯೋಹಾ 2:17 ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ.
1 ಕೊರಿಂಥದವರಿಗೆ 7 : 32 (IRVKN)
ಆದರೆ * ಮತ್ತಾ 6:25; ಲೂಕ 10:41 ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
1 ಕೊರಿಂಥದವರಿಗೆ 7 : 33 (IRVKN)
ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾನೆ ಅವನು ಆಸಕ್ತಿಗಳಲ್ಲಿ ಭಿನ್ನತೆಯುಳ್ಳವನಾಗಿದ್ದಾನೆ.
1 ಕೊರಿಂಥದವರಿಗೆ 7 : 34 (IRVKN)
ಅದರಂತೆ ಮುತೈದೆಗೂ, ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಹೇಗೆ ಪವಿತ್ರಳಾಗಿರಬೇಕೆಂದು ಕರ್ತನ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ.
1 ಕೊರಿಂಥದವರಿಗೆ 7 : 35 (IRVKN)
ನಾನು ನಿಮಗೆ ನಿರ್ಬಂಧ ಏರಬೇಕೆಂದು ಇದನ್ನು ಹೇಳುತ್ತಿಲ್ಲ. ನೀವು ಚಂಚಲ ಚಿತ್ತರಾಗದೆ ಕರ್ತನಿಗೆ ಮಾನ್ಯತೆಯುಳ್ಳವರಾಗಿ, ನಿಷ್ಠೆಯುಳ್ಳವರಾಗಿ ನಡೆದುಕೊಳ್ಳಬೇಕೆಂದು ನಿಮ್ಮ ಪ್ರಯೋಜನಕ್ಕೋಸ್ಕರವೇ ಹೇಳುತ್ತಿದ್ದೇನೆ.
1 ಕೊರಿಂಥದವರಿಗೆ 7 : 36 (IRVKN)
ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಯ ಪ್ರಾಯ ಕಳೆದುಹೋಗುತ್ತದಲ್ಲಾ ಮದುವೆಮಾಡುವುದು ಅವಶ್ಯವೆಂದು ಅವನಿಗೆ ತೋರಿದರೆ ತನ್ನಿಷ್ಟದಂತೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.
1 ಕೊರಿಂಥದವರಿಗೆ 7 : 37 (IRVKN)
ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿ ಕೊಂಡರೆ ಅವನು ಹಾಗೆಯೇ ಮಾಡುವುದು ಒಳ್ಳೆಯದು.
1 ಕೊರಿಂಥದವರಿಗೆ 7 : 38 (IRVKN)
ಹಾಗಾದರೆ † ಇಬ್ರಿ. 13:4 ತನ್ನ ಮಗಳನ್ನು ಮದುವೆಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ, ಮದುವೆಮಾಡಿಕೊಡದೆ ಇರುವವನು ಇನ್ನೂ ಒಳ್ಳೆಯದನ್ನು ಮಾಡುತ್ತಿದ್ದಾನೆ.
1 ಕೊರಿಂಥದವರಿಗೆ 7 : 39 (IRVKN)
‡ ರೋಮಾ. 7:2 ಮುತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಮರಣಹೊಂದಿದ್ದರೆ ಆಕೆಯು ಬೇಕಾದವನನ್ನು ಮದುವೆಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಕರ್ತನಲ್ಲಿ ವಿಶ್ವಾಸಿಯಾದವನನ್ನು ಮಾತ್ರ ಆಗಬೇಕು.
1 ಕೊರಿಂಥದವರಿಗೆ 7 : 40 (IRVKN)
ಆದರೂ ಮದುವೆಮಾಡಿಕೊಳ್ಳದೆ ಹಾಗೆ ಇರುವುದು ಆಕೆಗೆ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರ ಆತ್ಮವುಂಟೆಂದು ಭಾವಿಸುತ್ತೇನೆ.
❮
❯