1 ಕೊರಿಂಥದವರಿಗೆ 8 : 1 (IRVKN)
ವಿಗ್ರಹಕ್ಕೆ ಅರ್ಪಿಸಿದ ಆಹಾರವನ್ನು ಕುರಿತು ಬೋಧನೆ * 1 ಕೊರಿ 8:4,7,10 ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ † 1 ಕೊರಿ 13:4-13 ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.
1 ಕೊರಿಂಥದವರಿಗೆ 8 : 2 (IRVKN)
ಒಬ್ಬನು ತಾನು ‡ ಗಲಾ. 6:3; 1 ಕೊರಿ 3:18 ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ § 1 ಕೊರಿ 13:8-12 ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.
1 ಕೊರಿಂಥದವರಿಗೆ 8 : 3 (IRVKN)
ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.
1 ಕೊರಿಂಥದವರಿಗೆ 8 : 4 (IRVKN)
ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, * 1 ಕೊರಿ 10:19; ಯೆಶಾ 41:24 “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು † 1 ಕೊರಿ 8:6; ಧರ್ಮೋ 4:35,39; 6:4 “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.
1 ಕೊರಿಂಥದವರಿಗೆ 8 : 5 (IRVKN)
ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ,
1 ಕೊರಿಂಥದವರಿಗೆ 8 : 6 (IRVKN)
‡ 1 ಕೊರಿ 8:4; ಎಫೆ 4:6 “ನಮಗಾದರೋ ಒಬ್ಬನೇ ತಂದೆಯಾದ ದೇವರು; § ರೋಮಾ. 11:36 ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, * ಎಫೆ 4:5 ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. † ಯೋಹಾ 1:3 ನಾವೂ ಆತನ ಮುಖಾಂತರ ಉಂಟಾದೆವು.”
1 ಕೊರಿಂಥದವರಿಗೆ 8 : 7 (IRVKN)
ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ‡ ರೋಮಾ. 14:14,22,23 ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.
1 ಕೊರಿಂಥದವರಿಗೆ 8 : 8 (IRVKN)
ಆದರೆ ನಾವು ತಿನ್ನುವ § ರೋಮಾ. 14:17 ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ.
1 ಕೊರಿಂಥದವರಿಗೆ 8 : 9 (IRVKN)
* 1 ಕೊರಿ 10:23; ರೋಮಾ. 14:21; ಗಲಾ. 5:13 ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.
1 ಕೊರಿಂಥದವರಿಗೆ 8 : 10 (IRVKN)
ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ.
1 ಕೊರಿಂಥದವರಿಗೆ 8 : 11 (IRVKN)
ಹೀಗೆ ಈ ನಿನ್ನ ಜ್ಞಾನದಿಂದ † ರೋಮಾ. 14:15,20 ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ.
1 ಕೊರಿಂಥದವರಿಗೆ 8 : 12 (IRVKN)
ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ‡ ಮತ್ತಾ 18:6 ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು § ಮತ್ತಾ 25:45 ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ.
1 ಕೊರಿಂಥದವರಿಗೆ 8 : 13 (IRVKN)
* ರೋಮಾ. 4:13,21 ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.
❮
❯
1
2
3
4
5
6
7
8
9
10
11
12
13