1 ಕೊರಿಂಥದವರಿಗೆ 9 : 1 (IRVKN)
{ಅಪೊಸ್ತಲರ ಅಧಿಕಾರ} [PS] ನಾನು ಸ್ವತಂತ್ರನಲ್ಲವೋ? ನಾನು [* ಅ. ಕೃ. 14:14; 2 ಕೊರಿ 12:12; 1 ಥೆಸ. 2:6; 1 ತಿಮೊ. 2:7] ಅಪೊಸ್ತಲನಲ್ಲವೋ? [† 1 ಕೊರಿ 15:8; ಅ. ಕೃ. 9:17; 18:9; 22:18; 23:11 ] ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? [‡ 1 ಕೊರಿ 3:6] ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?
1 ಕೊರಿಂಥದವರಿಗೆ 9 : 2 (IRVKN)
ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ.
1 ಕೊರಿಂಥದವರಿಗೆ 9 : 3 (IRVKN)
ನನ್ನನ್ನು ವಿಮರ್ಶಿಸುವವರಿಗೆ ನನ್ನ ಪ್ರತ್ಯುತ್ತರವೇನೆಂದರೆ,
1 ಕೊರಿಂಥದವರಿಗೆ 9 : 4 (IRVKN)
ಅನ್ನ, ಪಾನಗಳಿಗೆ ನಮಗೆ ಹಕ್ಕಿಲ್ಲವೇ?
1 ಕೊರಿಂಥದವರಿಗೆ 9 : 5 (IRVKN)
ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ [§ ಮತ್ತಾ 12:46; 13:55; ಮಾರ್ಕ 6:3; ಯೋಹಾ 7:3,5,10; ಅ. ಕೃ. 1:14; ಗಲಾ. 1:19] ಸಹೋದರರಂತೆಯ, ಮತ್ತು [* ಮತ್ತಾ 8:14] ಕೇಫನಂತೆಯೂ ನಮಗೆ ಹಕ್ಕಿಲ್ಲವೇ?
1 ಕೊರಿಂಥದವರಿಗೆ 9 : 6 (IRVKN)
ಅಥವಾ, ದುಡಿಯದೆ ಜೀವಿಸುವುದಕ್ಕೆ ನನಗೂ ಬಾರ್ನಬನಿಗೂ ಹಕ್ಕಿಲ್ಲವೇ?
1 ಕೊರಿಂಥದವರಿಗೆ 9 : 7 (IRVKN)
[† 1 ತಿಮೊ. 1:18; 2 ತಿಮೊ. 2:3,4.] ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? [‡ 1 ಕೊರಿ 3:6-8; ಧರ್ಮೋ 20:6; ಜ್ಞಾ. 27:18] ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ?
1 ಕೊರಿಂಥದವರಿಗೆ 9 : 8 (IRVKN)
ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ?
1 ಕೊರಿಂಥದವರಿಗೆ 9 : 9 (IRVKN)
[§ ಧರ್ಮೋ 25:4; 1 ತಿಮೊ. 5:18] “ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ?
1 ಕೊರಿಂಥದವರಿಗೆ 9 : 10 (IRVKN)
ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, [* ರೋಮಾ. 3:24] ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು.
1 ಕೊರಿಂಥದವರಿಗೆ 9 : 11 (IRVKN)
[† ರೋಮಾ. 15:27; ಗಲಾ. 6:6] ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ?
1 ಕೊರಿಂಥದವರಿಗೆ 9 : 12 (IRVKN)
ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? [‡ 1 ಕೊರಿ 9:15,18; ಅ. ಕೃ. 20:33,34] ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು.
1 ಕೊರಿಂಥದವರಿಗೆ 9 : 13 (IRVKN)
[§ ಯಾಜ 6:16,26; ಅರಣ್ಯ 5:9,10; ಧರ್ಮೋ 18:1] ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?
1 ಕೊರಿಂಥದವರಿಗೆ 9 : 14 (IRVKN)
ಅದೇ ರೀತಿಯಾಗಿ ಕರ್ತನು ಸಹ [* 1 ಕೊರಿ 9:4; ಮತ್ತಾ 10:10; ಲೂಕ 10:7] ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ. [PE][PS]
1 ಕೊರಿಂಥದವರಿಗೆ 9 : 15 (IRVKN)
[† ಅ. ಕೃ. 18:3] ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು.
1 ಕೊರಿಂಥದವರಿಗೆ 9 : 16 (IRVKN)
ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; [‡ ಅ. ಕೃ. 4:20; ರೋಮಾ. 1:14] ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!
1 ಕೊರಿಂಥದವರಿಗೆ 9 : 17 (IRVKN)
ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ [§ 1 ಕೊರಿ 4:1; ಗಲಾ. 2:7] ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.
1 ಕೊರಿಂಥದವರಿಗೆ 9 : 18 (IRVKN)
ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು [* 2 ಕೊರಿ 11:7; 12:13] ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ. [PE][PS]
1 ಕೊರಿಂಥದವರಿಗೆ 9 : 19 (IRVKN)
ನಾನು ಎಲ್ಲಾ ವಿಷಯಗಳಲ್ಲಿ [† ವ. 1-23] ಸ್ವತಂತ್ರನಾಗಿದ್ದರೂ [‡ ಮತ್ತಾ 18:15; 1 ಪೇತ್ರ 3:1] ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು [§ 2 ಕೊರಿ 4:5] ನಾನು ಎಲ್ಲರಿಗೂ ದಾಸನಾದೆನು.
1 ಕೊರಿಂಥದವರಿಗೆ 9 : 20 (IRVKN)
ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ [* ಅ. ಕೃ. 16:3; 18:18; 21:23-26] ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು.
1 ಕೊರಿಂಥದವರಿಗೆ 9 : 21 (IRVKN)
ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ [† ರೋಮಾ. 14:1-23] ಧರ್ಮಶಾಸ್ತ್ರ ಬಾಹಿರನಂತಾದೆನು.
1 ಕೊರಿಂಥದವರಿಗೆ 9 : 22 (IRVKN)
[‡ 2 ಕೊರಿ 11:29] ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು [§ 1 ಕೊರಿ 10:33] ಎಲ್ಲರಿಗೂ ಎಲ್ಲರಂತಾದೆನು.
1 ಕೊರಿಂಥದವರಿಗೆ 9 : 23 (IRVKN)
ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ. [PE][PS]
1 ಕೊರಿಂಥದವರಿಗೆ 9 : 24 (IRVKN)
ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ [* ಗಲಾ. 2:2; 5:7; ಫಿಲಿ. 2:16; ಇಬ್ರಿ. 12:1] ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.
1 ಕೊರಿಂಥದವರಿಗೆ 9 : 25 (IRVKN)
ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; [† ಯಾಕೋಬ 1:12] ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.
1 ಕೊರಿಂಥದವರಿಗೆ 9 : 26 (IRVKN)
ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ.
1 ಕೊರಿಂಥದವರಿಗೆ 9 : 27 (IRVKN)
ಇತರರಿಗೆ ಬೋಧಿಸಿದ ಮೇಲೆ ನಾನೇ [‡ ಇಬ್ರಿ. 6:8] ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ [§ ರೋಮಾ. 6:19] ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27

BG:

Opacity:

Color:


Size:


Font: