1 ಯೋಹಾನನು 4 : 1 (IRVKN)
ಆತ್ಮಪ್ರೇರಿತ ನುಡಿಗಳು ಸತ್ಯವೋ ಅಸತ್ಯವೋ ಎಂದು ತಿಳಿದುಕೊಳ್ಳುವುದಕ್ಕಾಗಿ ಅವುಗಳನ್ನು ಪರೀಕ್ಷಿಸಿ ನೋಡಬೇಕು ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
1 ಯೋಹಾನನು 4 : 2 (IRVKN)
ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ.
1 ಯೋಹಾನನು 4 : 3 (IRVKN)
ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ * ಅಥವಾ, ಪ್ರೇರಿತವಾದದ್ದಲ್ಲ. ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ.
1 ಯೋಹಾನನು 4 : 4 (IRVKN)
ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
1 ಯೋಹಾನನು 4 : 5 (IRVKN)
ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
1 ಯೋಹಾನನು 4 : 6 (IRVKN)
ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.
1 ಯೋಹಾನನು 4 : 7 (IRVKN)
ದೇವರಿಂದ ಹುಟ್ಟಿದವರಲ್ಲಿ ಪ್ರೀತಿಸ್ವಭಾವವೇ ವಿಶೇಷ ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
1 ಯೋಹಾನನು 4 : 8 (IRVKN)
ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.
1 ಯೋಹಾನನು 4 : 9 (IRVKN)
ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.
1 ಯೋಹಾನನು 4 : 10 (IRVKN)
ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.
1 ಯೋಹಾನನು 4 : 11 (IRVKN)
ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
1 ಯೋಹಾನನು 4 : 12 (IRVKN)
ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.
1 ಯೋಹಾನನು 4 : 13 (IRVKN)
ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ.
1 ಯೋಹಾನನು 4 : 14 (IRVKN)
ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.
1 ಯೋಹಾನನು 4 : 15 (IRVKN)
ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
1 ಯೋಹಾನನು 4 : 16 (IRVKN)
ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
1 ಯೋಹಾನನು 4 : 17 (IRVKN)
ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.
1 ಯೋಹಾನನು 4 : 18 (IRVKN)
ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಶಿಕ್ಷೆಯ ಭಯವಿರುತ್ತದೆ. ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ‡ ಅಥವಾ, ಭಯಪಡುವವನು ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
1 ಯೋಹಾನನು 4 : 19 (IRVKN)
ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
1 ಯೋಹಾನನು 4 : 20 (IRVKN)
ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?
1 ಯೋಹಾನನು 4 : 21 (IRVKN)
ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.

1 2 3 4 5 6 7 8 9 10 11 12 13 14 15 16 17 18 19 20 21