1 ಯೋಹಾನನು 5 : 1 (IRVKN)
ಕ್ರಿಸ್ತನಲ್ಲಿ ನಂಬಿಕೆಯಿಟ್ಟವರು ಲೋಕವನ್ನು ಜಯಿಸುತ್ತಾರೆ ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.
1 ಯೋಹಾನನು 5 : 2 (IRVKN)
ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
1 ಯೋಹಾನನು 5 : 3 (IRVKN)
ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ.
1 ಯೋಹಾನನು 5 : 4 (IRVKN)
ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ.
1 ಯೋಹಾನನು 5 : 5 (IRVKN)
ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?
1 ಯೋಹಾನನು 5 : 6 (IRVKN)
ಕ್ರಿಸ್ತನ ಮುಖಾಂತರ ನಿತ್ಯಜೀವ ದೊರೆಯುತ್ತದೆಂಬುದಕ್ಕೆ ಸಾಕ್ಷಿಗಳು ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.
1 ಯೋಹಾನನು 5 : 7 (IRVKN)
ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.
1 ಯೋಹಾನನು 5 : 8 (IRVKN)
ಆತ್ಮ, ನೀರು, ರಕ್ತ ಎಂಬ ಮೂರು ಸಾಕ್ಷಿಗಳುಂಟು. ಈ ಮೂರು ಒಂದೇ ಅಭಿಪ್ರಾಯವನ್ನು ಒಪ್ಪಿಕೊಳ್ಳುತ್ತವೆ.
1 ಯೋಹಾನನು 5 : 9 (IRVKN)
ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ.
1 ಯೋಹಾನನು 5 : 10 (IRVKN)
ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
1 ಯೋಹಾನನು 5 : 11 (IRVKN)
ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.
1 ಯೋಹಾನನು 5 : 12 (IRVKN)
ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ.
1 ಯೋಹಾನನು 5 : 13 (IRVKN)
ದೇವಕುಮಾರನಲ್ಲಿ ನಂಬಿಕೆಯಿಟ್ಟವರಿಗೆ ದೃಢನಿಶ್ಚಯವಿರುವುದು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ.
1 ಯೋಹಾನನು 5 : 14 (IRVKN)
ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.
1 ಯೋಹಾನನು 5 : 15 (IRVKN)
ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.
1 ಯೋಹಾನನು 5 : 16 (IRVKN)
ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.
1 ಯೋಹಾನನು 5 : 17 (IRVKN)
ನೀತಿಗೆ ವಿರುದ್ಧವಾದದ್ದೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.
1 ಯೋಹಾನನು 5 : 18 (IRVKN)
ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.
1 ಯೋಹಾನನು 5 : 19 (IRVKN)
ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.
1 ಯೋಹಾನನು 5 : 20 (IRVKN)
ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.
1 ಯೋಹಾನನು 5 : 21 (IRVKN)
ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.

1 2 3 4 5 6 7 8 9 10 11 12 13 14 15 16 17 18 19 20 21