1 ಅರಸುಗಳು 10 : 1 (IRVKN)
ಶೆಬಾ ದೇಶದ ರಾಣಿಯು ಸೊಲೊಮೋನನ ದರ್ಶನಕ್ಕೆ ಬಂದದ್ದು ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.
1 ಅರಸುಗಳು 10 : 2 (IRVKN)
ಆಕೆಯು ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.
1 ಅರಸುಗಳು 10 : 3 (IRVKN)
ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೂ ಉತ್ತರಕೊಟ್ಟನು. ಅವುಗಳಲ್ಲಿ ಸೊಲೊಮೋನನಿಗೆ ತಿಳಿಯದಂಥದ್ದು ಅವುಗಳಲ್ಲಿ ಒಂದೂ ಇರಲಿಲ್ಲವಾದುದರಿಂದ ಅವನು ಅವೆಲ್ಲವುಗಳಿಗೆ ಉತ್ತರಕೊಟ್ಟನು.
1 ಅರಸುಗಳು 10 : 4 (IRVKN)
ಶೆಬೆದ ರಾಣಿಯು ಸೊಲೊಮೋನನ ಎಲ್ಲಾ ಜ್ಞಾನ, ಅವನು ಕಟ್ಟಿಸಿದ ಅರಮನೆ,
1 ಅರಸುಗಳು 10 : 5 (IRVKN)
ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.
1 ಅರಸುಗಳು 10 : 6 (IRVKN)
ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನು, ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.
1 ಅರಸುಗಳು 10 : 7 (IRVKN)
ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ. ಈಗ ಇಲ್ಲಿ ಬಂದು ನೋಡಿದರೆ ನಿನ್ನ ಜ್ಞಾನವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ. ಜನರು ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.
1 ಅರಸುಗಳು 10 : 8 (IRVKN)
ನಿನ್ನ ಪ್ರಜೆಗಳು ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರು ಧನ್ಯರು.
1 ಅರಸುಗಳು 10 : 9 (IRVKN)
ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.
1 ಅರಸುಗಳು 10 : 10 (IRVKN)
ಆಕೆಯು ಅರಸನಿಗೆ * 4,000 ಕ್ಕಿಂತಲೂ ಆಧಿಕ. ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧದ್ರವ್ಯವನ್ನೂ ಮತ್ತು ರತ್ನಗಳನ್ನೂ ಕೊಟ್ಟಳು. ಶೆಬೆದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ.
1 ಅರಸುಗಳು 10 : 11 (IRVKN)
ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ಮತ್ತು ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು.
1 ಅರಸುಗಳು 10 : 12 (IRVKN)
ಅರಸನು ಸುಗಂಧದ ಮರದಿಂದ ಯೆಹೋವನ ಆಲಯ ಮತ್ತು ಅರಮನೆ ಇವುಗಳಿಗೆ ಸ್ತಂಭಗಳನ್ನು, ಗಾಯಕರಿಗೋಸ್ಕರ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಆಗ ಬಂದಷ್ಟು ಸುಗಂಧದ ಮರವು ಇಂದಿನ ವರೆಗೂ ಆ ದೇಶಕ್ಕೆ ಬರಲಿಲ್ಲ ಮತ್ತು ಕಾಣಲಿಲ್ಲ.
1 ಅರಸುಗಳು 10 : 13 (IRVKN)
ಅರಸನಾದ ಸೊಲೊಮೋನನು ಶೆಬೆದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ ಆಕೆಯು ಕೇಳಿದವುಗಳೆಲ್ಲವನ್ನು ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದೊಡನೆ ಸ್ವದೇಶಕ್ಕೆ ಹೊರಟುಹೋದಳು.
1 ಅರಸುಗಳು 10 : 14 (IRVKN)
ಸೊಲೊಮೋನನ ವೈಭವ ಸೊಲೊಮೋನನಿಗೆ ಒಂದು ವರ್ಷದಲ್ಲಿ † ಸುಮಾರು 23,000 ಕಿಲೋಗ್ರಾಂ. ಆರುನೂರ ಅರುವತ್ತಾರು ತಲಾಂತು ಬಂಗಾರ ದೊರಕುತ್ತಿತ್ತು.
1 ಅರಸುಗಳು 10 : 15 (IRVKN)
ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.
1 ಅರಸುಗಳು 10 : 16 (IRVKN)
ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರ ಹಿಡಿಯಿತು.
1 ಅರಸುಗಳು 10 : 17 (IRVKN)
ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ‡ ಸುಮಾರು 2 ಕಿಲೋಗ್ರಾಂ. ನೂರೈವತ್ತು ತೊಲಾ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.
1 ಅರಸುಗಳು 10 : 18 (IRVKN)
ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದಕ್ಕೆ ಚೊಕ್ಕ ಬಂಗಾರದ ತಗಡನ್ನು ಹೊದಿಸಿದನು
1 ಅರಸುಗಳು 10 : 19 (IRVKN)
ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳು, ಅವುಗಳ ಹತ್ತಿರ ಎರಡು ಸಿಂಹಗಳು ಇದ್ದವು.
1 ಅರಸುಗಳು 10 : 20 (IRVKN)
ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
1 ಅರಸುಗಳು 10 : 21 (IRVKN)
ಅರಸನಾದ ಸೊಲೊಮೋನನ ಪಾನಪಾತ್ರೆಗಳು, ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿದ್ದ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆ ಇರಲಿಲ್ಲವಾದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.
1 ಅರಸುಗಳು 10 : 22 (IRVKN)
ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.
1 ಅರಸುಗಳು 10 : 23 (IRVKN)
ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.
1 ಅರಸುಗಳು 10 : 24 (IRVKN)
ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.
1 ಅರಸುಗಳು 10 : 25 (IRVKN)
ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.
1 ಅರಸುಗಳು 10 : 26 (IRVKN)
ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು.
1 ಅರಸುಗಳು 10 : 27 (IRVKN)
ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು.
1 ಅರಸುಗಳು 10 : 28 (IRVKN)
ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಲೆ ಕೊಂಡುಕೊಂಡು ಬರುತ್ತಿದ್ದರು.
1 ಅರಸುಗಳು 10 : 29 (IRVKN)
ಐಗುಪ್ತದೇಶದಿಂದ ರಥಗಳನ್ನೂ ಮತ್ತು ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ, ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಮಾರಾಟವಾಗುತ್ತಿದ್ದವು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29